ಬೆಳಗಾವಿ: ‘ಉತ್ತರ ಕರ್ನಾಟಕದ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕನ್ನಡ ವಿಷಯದ ಉತ್ತರಪತ್ರಿಕೆಗಳನ್ನು ಈ ಭಾಗದ ಶಿಕ್ಷಕರಿಂದಲೇ ಮೌಲ್ಯಮಾಪನ ಮಾಡಿಸಬೇಕು’ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸದಸ್ಯ ಇಬ್ರಾಹಿಂ ಎಂ. ಶಂಷೀರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವರು ಹಾಗೂ ಪರೀಕ್ಷಾ ಮಂಡಳಿ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ‘ವಿವಿಧ ಭಾಷಿಕರು ಇಲ್ಲಿದ್ದಾರೆ. ಹೀಗಾಗಿ, ಕನ್ನಡದಲ್ಲಿ ಶುದ್ಧ ವ್ಯಾಕರಣ ನಿರೀಕ್ಷಿಸಲಾಗುವುದಿಲ್ಲ. ಆದ್ದರಿಂದ ದಕ್ಷಿಣದವರನ್ನು ನಿಯೋಜಿಸಬಾರದು’ ಎಂದು ಕೋರಿದ್ದಾರೆ. ‘ಕೋವಿಡ್-19 ಸಂಕಷ್ಟ …
Read More »ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಭಕ್ತರ ಕಾತರ…?
ಸವದತ್ತಿ: ವರ್ಷದ 12 ತಿಂಗಳೂ ಭಕ್ತರು, ವ್ಯಾಪಾರಿಗಳಿಂದ ಗಿಜುಗುಡುತ್ತಿದ್ದ ತಾಲೂಕಿನ ಸುಕ್ಷೇತ್ರ ಯಲ್ಲಮ್ಮ ದೇವಿ ಸನ್ನಿಧಿಗೆ ಲಾಕ್‌ಡೌನ್ ಸಡಿಲಿಕೆಯಾದ ಬಳಿಕ ಮಂಗಳವಾರ ಮತ್ತು ಶುಕ್ರವಾರ ಬರುವ ಭಕ್ತರ ಸಂಖ್ಯೆ ಹೆಚ್ಚಿದೆ. ಇದರಿಂದ ತಾಲೂಕಿಗೆ ಅಲ್ಪ ಪ್ರಮಾಣದಲ್ಲಿದ್ದ ಕೋವಿಡ್ ಸೋಂಕು ಹರಡುವ ಸಾಧ್ಯತೆಗಳಿವೆ. ಈಗಾಗಲೇ ಸರಕಾರದ ಆದೇಶದನ್ವಯ ರಾಜ್ಯದ ಬಹುತೇಕ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಯಲ್ಲಮ್ಮ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿಂದ ಸರಕಾರ ಮತ್ತು ಜಿಲ್ಲಾಧಿಕಾರಿಗಳು …
Read More »ಇಂದಿನಿಂದ ಬಳ್ಳಾರಿಯಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್; ಮಧ್ಯಾಹ್ನ 3ರ ನಂತರ ಎಲ್ಲಾ ಬಂದ್….?
ಬಳ್ಳಾರಿ, : ಬಳ್ಳಾರಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಜಿಲ್ಲಾಧಿಕಾರಿ ನಕುಲ್ ಅವರು ನೀಡಿರುವ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ 1019 ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಾವಿನ ಪ್ರಮಾಣ ಎರಡಂಕಿ ದಾಟಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಇನ್ನಷ್ಟು ಕಠಿಣ ಸಮಯ ಎದುರಾಗಬಹುದು. ಇದಕ್ಕೆ ಬ್ರೇಕ್ ಹಾಕಲು ಜನರೇ ಮುಂದೆ ಬಂದಿದ್ದು, ಇಂದಿನಿಂದ ಒಂದು ವಾರಗಳ ಕಾಲ ಮಧ್ಯಾಹ್ನ ಮೂರು ಗಂಟೆ ನಂತರ ಸ್ವಯಂ …
Read More »ಕೆಲಸಕ್ಕೆ ಹೋಗಬೇಡ ಅಂತ ಬೈದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ
ಕೊರೊನಾ ಸೋಂಕು ಬರಬಹುದು ಕೆಲಸಕ್ಕೆ ಹೋಗಬೇಡ ಎಂದು ಅಣ್ಣ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾವಗಡ ಮೂಲದ ಸವಿತಾ (27) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ನಗರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಸವಿತಾ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನಿಂದ ದೂರವಾಗಿ, ಯಲಹಂಕದ ಮಾರುತಿ ನಗರದ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಬೇಡ …
Read More »ರೋಗಿ ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆಂಬುಲೆನ್ಸ್ ಹತ್ತಿಸಿಕೊಂಡ ಬಿಮ್ಸ್ ಬೆಳಗಾವಿ…?
ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆಯಂಬುಲೆನ್ಸ್ ಹತ್ತಿಸಿಕೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್ಗೆ ಶಿಫ್ಟ್ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ …
Read More »ಬೆಂಗಳೂರಿನಲ್ಲಿ ಆಸ್ಪತ್ರೆಗಳ ನಿರ್ಲಕ್ಷ್ಯ : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು
ಕಾಮಾಕ್ಷಿಪಾಳ್ಯದ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಪಾರ್ಕ್ ಗೆ ವಾಕಿಂಗ್ ಗೆ ತೆರಳಿದ್ದರು. ಈ ವೇೆಳೆ, ಏಕಾಏಕಿ ಹೃದಯಾಘಾತವಾಗಿದ್ದು, ಪಾರ್ಕ್ ನಲ್ಲೇ ಕುಸಿದುಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಕಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲೂ ದಾಖಲಿಸಿಕೊಂಡಿರಲಿಲ್ಲ. ಹೃದಯಾಘಾತವಾಗಿದ್ದ ಈ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಅವರು ಸಾವನ್ನಪ್ಪಿದರು. ಈಗ ಯಾವ ಆಸ್ಪತ್ರೆಯಲ್ಲೂ ಡೆತ್ ಸರ್ಟಿಫಿಕೇಟ್ ಕೂಡ ನೀಡುತ್ತಿಲ್ಲ. ಹೀಗಾಗಿ …
Read More »ಕೋಲಾರ: ವೈದ್ಯೆ ಸೇರಿ 10 ಮಂದಿಗೆ ಸೋಂಕು
ಕೋಲಾರ: ಜಿಲ್ಲೆಯಲ್ಲಿ ಗುರುವಾರ ವೈದ್ಯೆ ಸೇರಿದಂತೆ 10 ಮಂದಿಗೆ ಕೊರೊನಾ ಸೋಂಕು ಹರಡಿದ್ದು, ಸೋಂಕಿತರ ಸಂಖ್ಯೆ 86ಕ್ಕೆ ಏರಿದೆ. ಕೋಲಾರ ತಾಲ್ಲೂಕು ಒಂದರಲ್ಲೇ 5 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಜಿಲ್ಲಾ ಕೇಂದ್ರದ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕೋವಿಡ್-19 ವಾರ್ಡ್‌ನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ತಗುಲಿದೆ. ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ಕಾರಣಕ್ಕೆ ಈ ಇಬ್ಬರಿಗೆ ಸೋಂಕು ಹರಡಿರುವ …
Read More »ಶಾಕಿಂಗ್ ನ್ಯೂಸ್: 4 ಸಾವಿರ ರೂ. ಬಿಲ್ ಕಟ್ಟದ ಕಾರ್ಮಿಕನನ್ನು ಥಳಿಸಿ ಕೊಂದ ಆಸ್ಪತ್ರೆ ಸಿಬ್ಬಂದಿ..!
ಉತ್ತರಪ್ರದೇಶದ ಆಲಿಘರ್ ನಲ್ಲಿ ಗುರುವಾರ ನಡೆದ ಆಘಾತಕಾರಿ ಘಟನೆಯಲ್ಲಿ ಆಸ್ಪತ್ರೆಯ ಬಿಲ್ ಪಾವತಿಸದ 44 ವರ್ಷದ ಕಾರ್ಮಿಕನನ್ನು ಥಳಿಸಲಾಗಿದ್ದು, ತೀವ್ರ ಹಲ್ಲೆಗೊಳಗಾದ ಕಾರ್ಮಿಕ ಸಾವನ್ನಪ್ಪಿದ್ದಾನೆ. 44 ವರ್ಷದ ಸುಲ್ತಾನ್ ಖಾನ್ ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಮೂತ್ರ ವಿಸರ್ಜನೆ ತೊಂದರೆ ಕಾರಣಕ್ಕೆ ಆತ ಖಾಸಗಿ ಆಸ್ಪತ್ರೆಗೆ ಸೋದರಳಿಯನೊಂದಿಗೆ ಹೋಗಿದ್ದಾನೆ. ಮೊದಲಿಗೆ ಚಿಕಿತ್ಸೆಗೆ ಎಷ್ಟು ಆಗುತ್ತದೆ ಎಂದು ಕೇಳಿದ್ದು ವಿವಿಧ ಪರೀಕ್ಷೆಗಳಿಗೆ ಆರಂಭದಲ್ಲಿ 5000 ರೂ. ಪಾವತಿಸಬೇಕು ಎಂದು ಆಸ್ಪತ್ರೆ ವೈದ್ಯಾಧಿಕಾರಿಗಳು …
Read More »ಸುರಪುರ ನಗರದ ಜನತೆಗೆ ಕುಡಿಯುವ ನೀರಿನ ಅನುಕೂಲ ಸೇರಿ ಜನರಿಗಾಗಿ ಸುಮಾರು 300 ಕೋಟಿ ಅಂದಾಜು ಮೊತ್ತದಲ್ಲಿ ಬ್ರೀಜ್ ಕಮ್ ಬ್ಯಾರೇಜ್ ನಿರ್ಮಾಣ
ಸುರಪುರ: ಹೆಚ್.ವಿಶ್ವನಾಥ ಅವರ ರಾಜಕೀಯ ಭವಿಷ್ಯ ಮುಂದೆ ಉಜ್ವಲವಾಗಲಿದೆ. ವಿಶ್ವನಾಥ ಅವರಿಗಾಗಿ ನಾನು ಯಾವ ತ್ಯಾಗಕ್ಕೂ ಸಿದ್ಧ ಎಂದು ನೀರಾವರಿ ಮಂತ್ರಿ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಗರದ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಹೆಚ್.ವಿಶ್ವನಾಥ ಅವರು ಮುಂದೆ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ. ಅವರ ರಾಜಕೀಯ ಭವಿಷ್ಯ ಮುಂದೆ ಹೇಗಾಗಲಿದೆ ಎಂದು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದರು. ಸುರಪುರ ನಗರದ …
Read More »ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು ಬೆಳಗಾವಿ ಜಿಲ್ಲೆಯಲ್ಲಿ ನಡದ್ದಿದೆ
ಬೆಳಗಾವಿ :ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ, ತೀವ್ರ ಅನಾರೋಗ್ಯದಿಂದ ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ ಸೋಹಂ ಸುನೀಲ ಬೆನಕೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2 ತಿಂಗಳ ಹಿಂದೆ …
Read More »