ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿರುವ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ ನಡೆಸಿದೆ ಎನ್ನಲಾಗಿದೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಇಂದು ಬೆಳ್ಳಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ …
Read More »ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಓ ಚಂದಾ ಕೋಚ ಜಾರಿ ನಿರ್ದೇಶನಾಲಯ ಬಂಧಿಸಿದೆ .
ನವದೆಹಲಿ: ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಓ ಚಂದಾ ಕೋಚರ್ ಪತಿ, ಉದ್ಯಮಿ ದೀಪಕ್ ಕೊಚರ್ ಅವರ ಜಾರಿ ನಿರ್ದೇಶನಾಲಯ ಬಂಧಿಸಿದೆ . ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಅವರ ಬಂಧನವಾಗಿದೆ.ಬ್ಯಾಂಕ್ ಮತ್ತು ವಿಡಿಯೋಕಾನ್ ಗ್ರೂಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಕೋಚರ್ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಹೆಚ್ಚಿನ ವಿಚಾರಣೆ ಹಿನ್ನೆಲೆ ದೀಪಕ್ ಕೋಚರ್ ಅವರನ್ನ ಇಡಿ ಬಂಧಿಸಿದೆ. ಕಳೆದ …
Read More »ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ
ಬೆಂಗಳೂರು: ಸೆಪ್ಟಂಬರ್ 21 ರಿಂದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಡ್ರಗ್ಸ್ ಮಾಫಿಯದ ವಿರುದ್ಧ ಧ್ವನಿ ಎತ್ತೋಣ. ಡ್ರಗ್ಸ್ ಮಾಫಿಯದ ಬಗ್ಗೆಯೇ ಮೊದಲ ದಿನ ಸದನದಲ್ಲಿ ಚರ್ಚೆ ಮಾಡೋಣ. ಆನಂತರ ಬೇರೆ ವಿಷಯ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಇಂದು ಪಕ್ಷದ ಎಂಎಲ್‍ಎ, ಎಂಎಲ್‍ಸಿಗಳ ಜೊತೆಗೆ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧಾನಮಂಡಲ ಅಧಿವೇಶನದ …
Read More »ಈ ಬಾರಿಯ ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 8,071 ಕೋಟಿ ರೂ.ಗಳಷ್ಟು ನಷ್ಟ:B.S.Y.
ಬೆಂಗಳೂರು: ಪ್ರವಾಹದಿಂದಾಗಿ ಈ ಬಾರಿ ಸಹ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, 8,071 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರವಾಹದ ಹಾನಿಯ ಸಮೀಕ್ಷೆಗೆ ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ನೇತೃತ್ವದ ತಂಡ ಆಗಮಿಸಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ತಂಡ ಭೇಟಿ ಮಾಡಿ ವಿವರ ಪಡೆಯಿತು. ಈ ವೇಳೆ ರಾಜ್ಯದಲ್ಲಿ ಹಾನಿಯಾಗಿರುವ ಕುರಿತು ಸಿಎಂ ವಿವರಿಸಿದರು. ಈ …
Read More »ಛೋಟಾ ಮುಂಬೈ ಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ.
ಹುಬ್ಬಳ್ಳಿ: ಛೋಟಾ ಮುಂಬೈ ಎಂದು ಹೆಸರುವಾಸಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ. ಸೋಮವಾರ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ, 14 ಸಾವಿರಕ್ಕೂ ಹೆಚ್ಚಿನ ಮೊತ್ತದ ಒಂದು ಕೆಜಿಗೂ ಹೆಚ್ಚಿನ ಗಾಂಜಾ ವಶಕ್ಕೆ ಪಡೆದಿದ್ದಾರೆ. ಕೇಶ್ವಾಪುರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೇ ಪ್ಲೈ ಓವರ್ ಬ್ರಿಡ್ಜ್ ಬಳಿ ಮೂವರನ್ನು ಬಂಧಿಸಿ, 6 ಸಾವಿರ ಮೌಲ್ಯದ 600 …
Read More »Davanagere ನಟ, ನಟಿಯರು ಮಾತ್ರವಲ್ಲ ಯುವ ಪೀಳಿಗೆಯೂ ಡ್ರಗ್ಸ್ ಮಾಫಿಯಾದಲ್ಲಿದೆ: ಶ್ರೀರಾಮುಲು
ದಾವಣಗೆರೆ: ಡ್ರಗ್ಸ್ ಮಾಫಿಯಾದಲ್ಲಿ ಕೇವಲ ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರವಲ್ಲ ಯುವ ಪೀಳಿಯೇ ಇದೆ. ಈ ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರ ಡ್ರಗ್ಸ್ ಮಾಫಿಯಾದಲ್ಲಿಲ್ಲ. ಯುವ ಪೀಳಿಗೆಯೂ ಇದೆ. ನಮ್ಮ ಸರ್ಕಾರದ ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕಲಿದೆ. …
Read More »ಸೋದರಿ ಜೊತೆ ಅನುಚಿತವಾಗಿ ವರ್ತಿಸಬೇಡ ಅಂದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ
ಗದಗ: ತನ್ನ ಸಹೋದರಿ ಜೊತೆಗೆ ಮಾತನಾಡುವುದು, ಭೇಟಿ ಮಾಡಿ ಅನುಚಿತವಾಗಿ ವರ್ತಿಸಬೇಡಿ ಅಂದಿದ್ದಕ್ಕೆ ಸಹೋದರರಿಬ್ಬರು ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಮುಸ್ತಾಕ್ ಅಲಿ ನದಾಫ್ ಕೊಲೆಯಾದ ಯುವಕ. ದಾವಲ್ ಸಾಬ್ ಮಲ್ಲಾಡದ ಹಾಗೂ ಮಹ್ಮದ್ ಅಲಿ ಮಲ್ಲಾಡದ ಎಂಬ ಸಹೋದರರು ಒಟ್ಟಾಗಿ ಮುಸ್ತಾಕ್ ಅಲಿ ಜೊತೆ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದ ವೇಳೆ …
Read More »ಸೋತು ಎರಡು ವರ್ಷದ ಬಳಿಕ ಕ್ಷೇತ್ರಕ್ಕೆ ಕಾಲಿಟ್ಟ ಸಂತೋಷ್ ಲಾಡ್
ಹುಬ್ಬಳ್ಳಿ: ಕಲಘಟಗಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಆತ್ಮಾವಲೋಕನ ಮಾಡಿಕೊಳ್ಳಲು ನನಗೆ ಸ್ವಲ್ಪ ಸಮಯ ಬೇಕಿತ್ತು. ಹೀಗಾಗಿ ಎರಡು ವರ್ಷ ಬಂದಿರಲಿಲ್ಲ. ಆದರೆ ಈ ಕ್ಷೇತ್ರದ ಜನರನ್ನು ಯಾವತ್ತೂ ಮರೆತಿಲ್ಲ. ಮರೆಯೋದು ಇಲ್ಲ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು. ತಾಲೂಕಿನ ಮಡಕಿಹೊನ್ನಿಹಳ್ಳಿಯ ತಮ್ಮ ಅಮೃತ ನಿವಾಸದಲ್ಲಿ ನಡೆದ ಕಾರ್ಯಕರ್ತ ಸಭೆ ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. …
Read More »ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ
ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದಲ್ಲಿ ನಡೆದಿದೆ. ಗೋಂಕರು ಕಪ್ಪೆ ಸಂಶೋಧಕರು ಹೇಳುವಂತೆ ಸುಮಾರು ಏಳು ಕೆಜಿ ತೂಕದ ವರೆಗೆ ದೂಡ್ಡ ಗಾತ್ರದಲ್ಲಿ ಬೆಳೆಯುತ್ತವೆ. ಈ ಕಪ್ಪೆಗಳು ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಹೆಚ್ಚು ಕಾಣಸಿಗುತ್ತವೆ. …
Read More »ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರ ದಾಳಿ
ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ದಾಳಿ ಮಾಡಿದ್ದಾರೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ ಸಿಸಿಬಿ ಬಂಧಿಸಿತ್ತು. ಕಳೆದ ವಾರವೇ ಸಂಜನಾ …
Read More »