ನವದೆಹಲಿ: ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 61 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 2,864ಕ್ಕೆ ಏರಿಕೆಯಾಗಿದೆ. ಈ ನಡುವೆ ನಿನ್ನೆ ಒಂದೇ ದಿನ 3,015 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಂತೆ …
Read More »ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ
ಸುರಪುರ: ತಾಲೂಕಿನ ಅಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃಷ್ಣಾ ನದಿಯಲ್ಲಿ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣದ ಕುರಿತು ಹಿಂದೆ ಬಜೆಟ್ನಲ್ಲಿಯೆ ಅನುದಾನ ಘೋಷಿಸಲಾಗಿದೆ.ಅದರಂತೆ ಈಗ ಸ್ಥಳ ಪರಿಶೀಲನೆ ನಡೆಸಲಾಗುತ್ತಿದ್ದು,ಎರಡು ಮೂರು ಕಡೆಗಳಲ್ಲಿ ಸ್ಥಳ ಗುರುತಿಸಲಾಗುತ್ತಿದೆ. ಸೂಕ್ತ ಸ್ಥಳದಲ್ಲಿ ಸುಮಾರು 300 ಕೋಟಿ ಅಂದಾಜು ವೆಚ್ಚದಲ್ಲಿ ಬ್ರೀಜ್ ಕಮ್ ಬ್ಯಾರೆಜ್ …
Read More »ಗೋಕಾಕ: ಗೋಕಾಕನಗರದಲ್ಲಿ ಮೊಟ್ಟಮೊದಲ ಬಾರಿ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ.
ಗೋಕಾಕ :ಇಂದು ಗೋಕಾಕ ನಗರದ ಎಂಟು ವರ್ಷದ ಓರ್ವ ಬಾಲಕಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಗೋಕಾಕ ನಗರದ ಭಜಂತ್ರಿ ಗಲ್ಲಿಯ ಕೊಳಚೆ ಪ್ರದೇಶದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದಾಗ ಈ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.ಯಾವುದೇ ಟ್ರಾವೆಲ್ಲಿಂಗ್ ಹಿಸ್ಟರಿ ಇಲ್ಲ, ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೂ ಬಂದಿರುವುದಿಲ್ಲಾ. ಈ ಬಾಲಕಿಯು ಭಜಂತ್ರಿ ತೋಟ ಕೌಜಲಗಿ ಗ್ರಾಮಕ್ಕೆ ಹೋಗಿದ್ದಾಳೆ ಈಗ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆ ಬೆಳಗಾವಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ.ಭಜಂತ್ರಿ …
Read More »ಪರೀಕ್ಷೆ ಬರೆಯುವ ಮೂಲಕ ಭವ್ಯ ಪ್ರಜೆಗಳಾಗಿ ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು.
ಮೂಡಲಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಿಯಮಾನುಸಾರ ನಡಿಯುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿ ಪರೀಕ್ಷೆ ಬರೆಯುವ ಮೂಲಕ ಭವ್ಯ ಪ್ರಜೆಗಳಾಗಿ ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು. ಶಿವಾಪೂರ (ಹ), ಖಾನಟ್ಟಿ, ಪಟಗುಂದಿ, ಮೂಡಲಗಿಯಲ್ಲಿ ಗುರುವಾರ ಜರುಗಿದ ಎಸ್.ಎಸ್.ಎಲ್.ಸಿಯ ಕನ್ನಡ ಭಾಷಾ ಪರೀಕ್ಷೆಯ ಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದರು. ಮೂಡಲಗಿ ತಾಲೂಕಿನಲ್ಲಿ ಪರೀಕ್ಷೆಗಳಲ್ಲಿ ಸರ್ಕಾರದ ನಿಯಮ ಪಾಲಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ದೈಹಿಕ ಅಂತರ, ಸ್ಕ್ರಿನಿಂಗ್, ಮಾಸ್ಕ್, ಸಿಸಿ …
Read More »ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.
ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು. ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.
Read More »ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.
ಬೆಂಗಳೂರು: ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ. ಗುರುವಾರ ನಗರದಲ್ಲಿ ನಡೆದ ಕೆಪಿಸಿಸಿ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶೇಷವಾಗಿ ಮುಂಬೈ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಬೇಕು ಎಂದು ವೇದಿಕೆ ಮೇಲಿಂದಲೇ ಮನವಿ ಮಾಡಿದ ಅವರು ರಾಜ್ಯದ ಮೂಲೆ ಮೂಲೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದರು. ಉತ್ತಮ ಅವಕಾಶ ಸಿಕ್ಕಿದೆ. …
Read More »ಉಡುಪಿಯಲ್ಲಿ ಭಾರೀ ಮಳೆಯ ಮುನ್ಸೂಚನೆ – ಹೈ ಅಲರ್ಟ್
ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಐದರವರೆಗೆ ಉಡುಪಿಯಲ್ಲಿ ಧಾರಾಕಾರ ಮಳೆ ಸಾಧ್ಯತೆ ಇದೆ. ಜುಲೈ ನಾಲ್ಕಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 24 ಗಂಟೆಯ ಉಡುಪಿ ಮಳೆ ವರದಿ ಬಿಡುಗಡೆ ಮಾಡಿರುವ ಇಲಾಖೆ, ಉಡುಪಿಯಲ್ಲಿ 34 ಮಿಲಿ ಮೀಟರ್, ಕುಂದಾಪುರದಲ್ಲಿ 17 ಮಿಲಿ ಮೀಟರ್, …
Read More »ಚೀನಾದ 59 ಅಪ್ಲಿಕೇಶನ್ಗಳು ನಿಷೇಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದ ಬಳಿಕ ಮೊದಲ ಬಾರಿಗೆ ಗೂಗಲ್ ಪ್ರತಿಕ್ರಿಯೆ ನೀಡಿದೆ.
ವದೆಹಲಿ: ಚೀನಾದ 59 ಅಪ್ಲಿಕೇಶನ್ಗಳು ನಿಷೇಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದ ಬಳಿಕ ಮೊದಲ ಬಾರಿಗೆ ಗೂಗಲ್ ಪ್ರತಿಕ್ರಿಯೆ ನೀಡಿದೆ. ಭಾರತ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಡೆವಲಪರ್ಗಳಿಗೆ ಮಾಹಿತಿ ನೀಡಿದ್ದು, ಈ ಅಪ್ಲಿಕೇಶನ್ಗಳನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿದ್ದೇವೆ ಎಂದು ಗೂಗಲ್ ವಕ್ತಾರರು ತಿಳಿಸಿದ್ದಾರೆ. ಗೂಗಲ್ ವಕ್ತಾರರು ಎಷ್ಟು ಅಪ್ಲಿಕೇಶನ್ ಬ್ಲಾಕ್ ಮಾಡಲಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಆದರೆ ಡೆವಲಪರ್ಗಳೇ ಕೆಲ ಅಪ್ಲಿಕೇಶನ್ಗಳನ್ನೆ ಪ್ಲೇ ಸ್ಟೋರ್ನಿಂದ ತೆಗೆದಿದ್ದಾರೆ ಎಂದು …
Read More »ವ್ಯಕ್ತಿ ಪೂಜೆ ಬೇಡ . ಪಕ್ಷ ಪೂಜೆ ಮಾಡೋಣ:ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಬೆಂಗಳೂರು: ವ್ಯಕ್ತಿ ಪೂಜೆಯೂ ಬೇಡ . ಪಕ್ಷ ಪೂಜೆ ಮಾಡೋಣ. ಈ ಮೂಲಕ ಪಕ್ಷವನ್ನು ಕಟ್ಟೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಹಿಂಬಾಲಕರು ಬೇಡ. ನನಗೆ ಯಾವುದೇ ಗುಂಪು ಜಾತಿ, ಧರ್ಮದಲ್ಲಿ ನಂಬಿಕೆ ಇಲ್ಲ. ನಮ್ಮದು ಕಾಂಗ್ರೆಸ್ ಗುಂಪು, ಕಾಂಗ್ರೆಸ್ ಧರ್ಮ, ಕಾಂಗ್ರೆಸ್ ಜಾತಿ ಎಂದು ತಿಳಿಸಿದರು. ಕೇರಳ ಮಾದರಿಯಲ್ಲಿ ಎಲ್ಲಾ ನಾಯಕರು ಮೊದಲು …
Read More »ನರಗುಂದದಲ್ಲಿ 20 ಅಡಿಯಷ್ಟು ಭೂಮಿ ಕುಸಿತ- ಜನರಲ್ಲಿ ಆತಂಕ
ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮನೆಯ ಮುಂದೆ ಭೂ ಕುಸಿತವಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಭೂ ಕುಸಿತ ಸಂಭವಿಸಿದೆ. ಜಿಲ್ಲೆಯ ನರಗುಂದದ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆಯವರ ಮನೆ ಮುಂದೆ ಭೂಮಿ ಕುಸಿದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ಬಾರಿ ಅನಾಹುತ ತಪ್ಪಿದೆ. ಸುಮಾರು 20 ಅಡಿಯಷ್ಟು ಭೂಮಿ ಕುಸಿತವಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅಂತರ್ಜಲ ಹೆಚ್ಚಳ, ನರಗುಂದ …
Read More »