ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ -19 ಎರಡನೇ ಅಲೆ ಪ್ರಾರಂಭವಾಗಿರುವ ಲಕ್ಷಣಗಳು ಕಂಡು ಬಂದಿದೆ. ಗುರುವಾರ ಒಂದೇ ದಿನ 46 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 14,719 ಜನರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 14,403 ಜನ ಗುಣಮುಖವಾಗಿದ್ದಾರೆ. 206 ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಸದ್ಯ 110 ಸಕ್ರಿಯ ಪ್ರಕರಣಗಳು ಇವೆ. ಕಳೆದ ನಾಲ್ಕೈದು ತಿಂಗಳಿಂದ ಈಚೆಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪಾಸಿಟಿವ್ ಪ‍್ರಕರಣಗಳು …
Read More »ಪತ್ತೆಯಾಗದ ಸೋಂಕಿತರ ಸಂಪರ್ಕಿತರು; ಆರೋಗ್ಯ ಸಿಬ್ಬಂದಿಗೆ ಸವಾಲಾದ ಇಲಾಖೆ ಗುರಿ
ಬೆಂಗಳೂರು: ಪ್ರತಿಯೊಬ್ಬ ಕೋವಿಡ್ ಸೋಂಕಿತ ವ್ಯಕ್ತಿಯ ಜತೆ 20 ಮಂದಿ ನೇರ ಮತ್ತು ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲು ಸಾಧ್ಯವಾಗದೇ ಆರೋಗ್ಯ ಇಲಾಖೆ ಇಕ್ಕಟ್ಟಿಗೆ ಸಿಲುಕಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ 20 ಮಂದಿ ನೇರ ಮತ್ತು ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡುವ ಗುರಿಯನ್ನು ನಿಗದಿ ಮಾಡಿತ್ತು. ಆದರೆ, ಆರೋಗ್ಯ ಸಿಬ್ಬಂದಿಗೆ ಸೋಂಕಿತರ ಪ್ರಯಾಣದ ಇತಿಹಾಸ ಹಾಗೂ ಸಂಪರ್ಕದ ಜಾಡನ್ನು ಭೇದಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸದ್ಯ ಪ್ರತಿ ಕೋವಿಡ್ ಪೀಡಿತ …
Read More »ಕೆಎಸ್‌ಆರ್‌ಟಿಸಿ ಸಿಬ್ಬಂದಿ ತರಬೇತಿ ಅವಧಿ 2 ರಿಂದ ಒಂದು ವರ್ಷಕ್ಕೆ ಇಳಿಕೆ: ಲಕ್ಷ್ಮಣ ಸವದಿ
ಬೆಂಗಳೂರು: ರಾಜ್ಯದಲ್ಲಿ ಕೆಎಸ್‍ಆರ್ ಟಿಸಿ ಸಿಬ್ಬಂದಿ ತರಬೇತಿ ಅವಧಿಯನ್ನು ಎರಡರಿಂದ ಒಂದು ವರ್ಷಕ್ಕೆ ಕಡಿಮೆ ಮಾಡಬೇಕು ಎಂಬ ಸಾರಿಗೆ ಸಿಬ್ಬಂದಿಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ತರಬೇತಿ ಅವಧಿಯನ್ನು ಎರಡು ವರ್ಷದಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಗುರುವಾರ ಹೇಳಿದ್ದಾರೆ. ಇದು ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, …
Read More »ಖಜಾನೆಯಿಂದ ಹೊರಗುಳಿದ ₹ 17,000 ಕೋಟಿ: ಶ್ವೇತಪತ್ರ ಪ್ರಕಟಿಸಲು ಪಾಟೀಲ್ ಆಗ್ರಹ
ಬೆಂಗಳೂರು: ಅಧಿಕಾರಿಗಳ ವೈಯಕ್ತಿಕ ಠೇವಣಿ (ಪಿ.ಡಿ) ಖಾತೆಗಳು ಹಾಗೂ ವಿವಿಧ ಬ್ಯಾಂಕ್‌ಗಳಲ್ಲಿ ಇರಿಸಿರುವ ಪ್ರತ್ಯೇಕ ಠೇವಣಿಗಳು ಸೇರಿದಂತೆ ₹17,000 ಕೋಟಿ ಮೊತ್ತ ರಾಜ್ಯ ಸರ್ಕಾರದ ಖಜಾನೆಯಿಂದ ಹೊರಗಿದೆ. ಈ ಕುರಿತು ತಕ್ಷಣವೇ ಸರ್ಕಾರ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್‌ನ ಎಚ್.ಕೆ. ಪಾಟೀಲ ಗುರುವಾರ ವಿಧಾನಸಭೆಯಲ್ಲಿ ಆಗ್ರಹಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಾನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಈ ಕುರಿತು ಕೆಲವು ಮಾಹಿತಿ ಲಭಿಸಿತ್ತು. …
Read More »ಯಾರೋ ಹೇಳಿದಕ್ಕೆ ನಾನು ಆ ಅಸಯ್ಯದ ಕೆಲಸ ಮಾಡಿಬಿಟ್ಟೆ: ದಿನೇಶ್ ಕಲ್ಲಹಳ್ಳಿ
ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಸ್ಫೋಟ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ವನ್ನು ಎಸ್‌ಐಟಿಗೆ ನಾಲ್ಕು ಪುಟಗಳ ಹೇಳಿಕೆಯನ್ನು ಸಲ್ಲಿಸಿದ್ದಾರೆ. ಕೆಲ ವರ್ಷಗಳಿಂದ ಪರಿಚಯವಿದ್ದ ಯುವಕ ಸಿಡಿ ಕೊಟ್ಟಿದ್ದು, ದೂರು ಕೊಡುವ ನೆಪದಲ್ಲಿ ಸಿಡಿ ಸ್ಫೋಟಿಸಿದ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಯಾರೋ ಹೇಳಿದಕ್ಕೆ ನಾನು ಆ ಅಸಯ್ಯದ ಕೆಲಸ ಮಾಡಿಬಿಟ್ಟೆ ಮಾ. 2 ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ …
Read More »ಸಿ.ಡಿ ಪ್ರಕರಣ: ಶ್ರವಣ ತಂದೆಯಿಂದ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ
ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ಆರೋಪಿ ಎನ್ನಲಾದ ಶ್ರವಣಕುಮಾರ್ ಅವರ ತಂದೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಮತ್ತೊಬ್ಬ ಮಗ ಚೇತನ್ ಅವರನ್ನು ಎಸ್‌ಐಟಿ ಪೊಲೀಸರು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಪಿ.ಸೂರ್ಯಕುಮಾರ್ ದೂರಿದ್ದಾರೆ. ಗೃಹ ಇಲಾಖೆ ಕಾರ್ಯದರ್ಶಿ, ಎಸ್‌ಐಟಿ, ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರ ಪೊಲೀಸ್ ಠಾಣಾಧಿಕಾರಿಗಳನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ‘ಮಾ.13ರಂದು ಮನೆಗೆ ದಾಳಿ ಮಾಡಿದ್ದ ಎಸ್‌ಐಟಿ …
Read More »ಹಸು ಬಿಡಿ, ಹಸಿವಿನತ್ತ ನೋಡಿ: ರಮೇಶ್‌ಕುಮಾರ್
ಬೆಂಗಳೂರು: ‘ರಾಜ್ಯ ಸರ್ಕಾರ ಜಾನುವಾರು ಹತ್ಯೆ ನಿಷೇಧ ಕಾಯ್ದೆ ತಂದ ಮೇಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋವನ್ನು ಪೂಜಿಸುವುದು ತಪ್ಪಲ್ಲ. ಆದರೆ, ಹಸುವಿನ ಹೆಸರಿನಲ್ಲಿ ರಾಜಕಾರಣ ಮಾಡುವುದಕ್ಕಿಂತ ಹಸಿವು ಮುಕ್ತ ಮಾಡುವುದಕ್ಕೆ ಪೂರಕವಾದ ರಾಜಕೀಯ ಮಾಡೋಣ’ ಎಂದು ಕಾಂಗ್ರೆಸ್‌ನ ಕೆ.ಆರ್.ರಮೇಶ್ ಕುಮಾರ್ ಸಲಹೆ ನೀಡಿದರು. ವಿಧಾನಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ ಜಾರಿಗೆ ಬಂದ ಬಳಿಕ ಹೈನುಗಾರಿಕೆ ವೃತ್ತಿಯಲ್ಲಿರುವವರ …
Read More »ಲಂಚ ಪಡೆಯುತ್ತಿದ್ದಾಗ ಬೆಳಗಾವಿ ಸ್ಮಾರ್ಟ್ ಸಿಟಿ ಟೆಕ್ನಿಕಲ್ ಮ್ಯಾನೇಜರ್ ಸಿದ್ದನಾಯ್ಕ್ ದೊಡ್ಡಬಸಪ್ಪ ನಾಯ್ಕರ್ ಎಸಿಬಿ ಬಲೆಗೆ
ಬೆಳಗಾವಿ – ಬಿಲ್ ಪಾಸ್ ಮಾಡಲು 60 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಳಗಾವಿ ಸ್ಮಾರ್ಟ್ ಸಿಟಿ ಟೆಕ್ನಿಕಲ್ ಮ್ಯಾನೇಜರ್ ಸಿದ್ದನಾಯ್ಕ್ ದೊಡ್ಡಬಸಪ್ಪ ನಾಯ್ಕರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ಬೆಳಗಾವಿ ನಗರದಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿಯ ಬಿಲ್ ಪಾಸ್ ಮಾಡಲು ಶೇ.0.5ರಷ್ಟು ಅಂದರೆ, 60 ಸಾವಿರ ರೂ. ಲಂಚ ಕೇಳಿದ್ದರು. 60 ಸಾವಿರ ರೂಗಳನ್ನು ತಮ್ಮ ಮನೆಯಲ್ಲಿ ಸ್ವೀಕರಿಸುತ್ತಿದ್ದಾಗ ಗುರುವಾರ ಸಂಜೆ ಎಸಿಬಿ …
Read More »ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ ಋಣ ತೀರಿಸಿ-ಗುನ್ನಳ್ಳಿ ರಾಘವೇಂದ್ರ-
ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ ಋಣ ತೀರಿಸಿ-ಗುನ್ನಳ್ಳಿ ರಾಘವೇಂದ್ರ-ಸರ್ಕಾರಿ ನೌಕರರು ಸಾರ್ವಜನಿಕ ಕ್ಷೇತ್ರದಲ್ಲಿರುವವರು ಸಂಘಟನಾಕಾರರು ಹಾಗೂ ಜನಪ್ರತಿನಿಧಿಗಳು,ಮೊದಲು ಅವರ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕಿದೆ ಎಂದು ಎಸ್ಡಿ ಎಮ್ಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಮುಖಂಡ ಗುನ್ನಳ್ಳಿ ರಾಘವೇಂದ್ರ ಹೇಳಿದರು. ಅವರು ಪಟ್ಟಣದ ಆದರ್ಶ ಮಹಾವಿದ್ಯಾಲಯದಲ್ಲಿ,ಎಸ್ಡಿಎಮ್ಸಿ ಪದಾಧಿಕಾರಿಗಳ ಆಯ್ಕೆ ಸಭೆಯನ್ನುದ್ದೇಶಿಸಿ ಮಾತನಾಡಿದರು.ಸರ್ಕಾರಿ ನೌಕರರು ಮೊದಲು ಅವರ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲಿ,ಈ ಮೂಲಕ ಅವರು ಸರ್ಕಾರದ ಋಣ ತೀರಿಸಲಿ ರಾಜಕಾರಣಿಗಳು ಹಾಗೂ …
Read More »ಕಾನ್‍ಸ್ಟೆಬಲ್ ಹುದ್ದೆಗಳ ಭರ್ತಿ ನಂತರ ಪೊಲೀಸರಿಗೆ ಪಾಳಿ ಕರ್ತವ್ಯದ ವ್ಯವಸ್ಥೆ ಜಾರಿ : ಬೊಮ್ಮಾಯಿ
ಬೆಂಗಳೂರು, ಮಾ.18- ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ಬಳಿಕ ಪಾಳಿ ಕರ್ತವ್ಯದ ವ್ಯವಸ್ಥೆಯನ್ನು ಜಾರಿಗೆ ತರುವ ಕುರಿತು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು.ವಿಧಾನಪರಿಷತ್‍ನಲ್ಲಿ ಪ್ರಶ್ನೋತ್ತರದ ಅವಯಲ್ಲಿ ಸದಸ್ಯ ಎಸ್.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 2 ವರ್ಷಗಳಿಂದ ದೊಡ್ಡ ಪ್ರಮಾಣದಲ್ಲಿ ನೇಮಕಾತಿ ನಡೆದಿದೆ. ಪಿಎಸ್‍ಐನಿಂದ ಕಾನ್‍ಸ್ಟೆಬಲ್‍ವರೆಗೆ 15 ಸಾವಿರ ಹುದ್ದೆ ಭರ್ತಿ ಮಾಡಿಕೊಳ್ಳಲಾಗಿದೆ. ಇನ್ನು 23 ಸಾವಿರ ಹುದ್ದೆಗಳು ಖಾಲಿ …
Read More »
Laxmi News 24×7