ಗದಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದಾಗ ಅಪಘಾತವಾಗಿ ಆಸ್ಪತ್ರೆಗೆ ಸೇರಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುಂಡರಗಿ ತಾಲೂಕಿನ ಕಲಕೇರಿ ಪರೀಕ್ಷಾ ಕೇಂದ್ರದಿಂದ ಜೂನ್ 25ರಂದು ಮೊದಲ ಪರೀಕ್ಷೆ ಮುಗಿಸಿ ಬೈಕ್ನಲ್ಲಿ ಮೂವರು ವಿದ್ಯಾರ್ಥಿಗಳು ಬಾಗೇವಾಡಿ ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ದಾರಿ ನಡುವೆ ಲಾರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಸ್ಥಳಲ್ಲೇ ಓರ್ವ ಮೃತಪಟ್ಟಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಗದಗ ಜಿಮ್ಸ್ …
Read More »ಕಾಂಗ್ರೆಸ್ ಮುಖಂಡನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಕಾಂಗ್ರೆಸ್ ವಲಯದಲ್ಲೂ ಆತಂಕ ಹೆಚ್ಚಾಗಿದೆ.
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಂಗ್ರೆಸ್ ಮುಖಂಡನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಕಾಂಗ್ರೆಸ್ ವಲಯದಲ್ಲೂ ಆತಂಕ ಹೆಚ್ಚಾಗಿದೆ. ಕಲ್ಯಾಣ ನಗರದಲ್ಲಿ ವಾಸವಿರುವ 37 ವರ್ಷದ ಕಾಂಗ್ರೆಸ್ ಮುಖಂಡನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇವರು ಬೆಂಗಳೂರಿಗೆ ಹೋಗಿ ಬಂದಿದ್ದರು ಎಂದು ಹೇಳಲಾಗುತ್ತಿದೆ. ಜಿಲ್ಲಾಡಳಿತ ಈಗಾಗಲೇ ಕಾಂಗ್ರೆಸ್ ಮುಖಂಡನನ್ನ ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಿದೆ. ಕಾಂಗ್ರೆಸ್ ಮುಖಂಡ ಬೆಂಗಳೂರಿಗೆ ಪ್ರಯಾಣ ಮಾಡಿದ್ದರು ಎಂದು ತಿಳಿದುಬಂದಿದ್ದು, ಜಿಲ್ಲಾಡಳಿತ ಇವರ ಟ್ರಾವೆಲ್ ಹಿಸ್ಟರಿ ಪ್ ತ್ತೆ ಹಚ್ಚಲು ಮುಂದಾಗಿದೆ. …
Read More »ಸ್ಎಸ್ಎಲ್ಸಿ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ…………ಮರು ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳ ಪೋಷಕರು ಒತ್ತಾಯ
ರಾಯಚೂರು: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ ಉಂಟಾಗಿದ್ದು, ಮರು ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳ ಪೋಷಕರು ಒತ್ತಾಯ ಮಾಡಿದ್ದಾರೆ. ಸಿಂಧನೂರಿನ ಶ್ರೀಕೃಷ್ಣದೇವರಾಯ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಯಿಂದಾಗಿ ಈ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದ 1,2,3ನೇ ಕೊಠಡಿಯ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ವಿತರಣೆ ಮಾಡಲಾಗಿದ್ದು, ಹಳೆಯ ಪಠ್ಯ ಕ್ರಮದ ಪ್ರಶ್ನೆ ಪತ್ರಿಕೆಯಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದರು. ಪರೀಕ್ಷೆ ಆರಂಭವಾಗಿ ಅರ್ಧಗಂಟೆ ಬಳಿಕ ಪ್ರಶ್ನೆ ಪತ್ರಿಕೆ …
Read More »ಆ ದಿನಗಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವೆ:ಕಿಚ್ಚ ಸುದೀಪ್…………
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಬಾಲ್ಯದಲ್ಲಿ ಕುಟುಂಬದ ಜೊತೆಗೆ ತೆಗೆಸಿಕೊಂಡ ಫೋಟೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಜೊತೆಗೆ ಆ ದಿನಗಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವೆ ಎಂದು ಹೇಳಿದ್ದಾರೆ. ಸುದೀಪ್ ತಮ್ಮ ತಾಯಿ ಸರೋಜಾ, ಸಹೋದರಿಯರಾದ ಸುರೇಖಾ ಹಾಗೂ ಸುಜಾತಾ ಅವರೊಂದಿಗೆ ತೆಗೆಸಿಕೊಂಡ ಬ್ಲ್ಯಾಕ್ ಅಂಡ್ ವೈಟ್ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. “ಈಗಿನ ದಿನಗಳಲ್ಲಿ ಕುಟುಂಬದ ಜೊತೆಗೆ ಇಂತಹ ಅಪರೂಪದ ಫೋಟೋಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಕಷ್ಟವಾಗುತ್ತಿದೆ. ಆ ಗಳಿಗೆಯನ್ನು ನಾನು …
Read More »ಜುಲೈ 26 ರವರೆಗೆ 144 ಸೆಕ್ಷನ್ ಜಾರಿಗರಿಷ್ಟ 20 ಮಂದಿಗೆ ಮಾತ್ರ ಅವಕಾಶ:ಭಾಸ್ಕರ್ ರಾವ್ ಆದೇಶ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವಾಗುತ್ತಿದ್ದಂತೆ ಮತ್ತೆ ಒಂದು ತಿಂಗಳು ಬೆಂಗಳೂರಿನಲ್ಲಿ 144 ಸೆಕ್ಷನ್ ಮುಂದುವರಿಕೆ ಮಾಡಲಾಗಿದೆ. ಜುಲೈ 26 ರವರೆಗೆ 144 ಸೆಕ್ಷನ್ ಜಾರಿ ಮಾಡಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತೆ ಕಟ್ಟುನಿಟ್ಟಾಗಿ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. 1. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿ ವ್ಯಕ್ತಿಯು ಕಡ್ಡಾಯವಾಗಿ ಮಾಸ್ಕ್ ಧರಿಸುವುದು 2. ಸಾರ್ವಜನಿಕ ಸ್ಥಳದಲ್ಲಿ …
Read More »ಕಾಡಿನ ಮಧ್ಯೆ ನಿಗೂಢ ಕ್ಯಾಮೆರಾ ಪತ್ತೆ.,ಮಾಧ್ಯಮಗಳಿಗೆ ತಿಳಿಯುತ್ತಿದ್ದಂತೆ ಸ್ಥಳದಿಂದ ಕ್ಯಾಮೆರಾ ನಾಪತ್ತೆ
ಚಿಕ್ಕಮಗಳೂರು: ಮೀಸಲು ಅರಣ್ಯದಲ್ಲಿ ಎನ್ಜಿಓ ಹೆಸರಲ್ಲಿ ಖಾಸಗಿ ವ್ಯಕ್ತಿಗಳು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಕಾಡಿನ ಮಧ್ಯೆ ಟ್ರ್ಯಾಪಿಂಗ್ ಕ್ಯಾಮೆರಾ ಅಳವಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ವ್ಯಾಪ್ತಿಯ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಈ ಕ್ಯಾಮರಾಗಳು ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕಳೆದೊಂದು ವಾರದಿಂದ ಚುರ್ಚೆಗುಡ್ಡದ ಶ್ರೀಗಂಧದ ರಸ್ತೆ ಮಾರ್ಗದ ಒಂದೆರಡು ಕಿ.ಮೀ. ದೂರದಲ್ಲಿ ಕಾಡು ಪ್ರಾಣಿಗಳು ಬಾಯಾರಿಕೆ ನೀಗಿಸಿಕೊಳ್ಳಲು ಬರುವ ನೀರುಗುಂಡಿಯ ಬಳಿಯ ಮರಕ್ಕೆ ಕ್ಯಾಮರಾಗಳನ್ನು …
Read More »ಬೈಕ್ ಕದ್ದು ಹುಚ್ಚನಂತೆ ನಟಿಸಿ ತಪ್ಪಿಸಿಕೊಳ್ಳುತ್ತಿದ್ದಕುಖ್ಯಾತ ಬೈಕ್ ಕಳ್ಳ
ರಾಯಚೂರು: ಬೈಕ್ ಕದ್ದು ಹುಚ್ಚನಂತೆ ನಟಿಸಿ ತಪ್ಪಿಸಿಕೊಳ್ಳುತ್ತಿದ್ದ ವಿಲಕ್ಷಣ ವರ್ತನೆಯ ಕುಖ್ಯಾತ ಬೈಕ್ ಕಳ್ಳನನ್ನು ನಗರದ ನೇತಾಜಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 3.40 ಲಕ್ಷ ರೂ. ಬೆಲೆ ಬಾಳುವ 15 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಮಾನ್ವಿ ತಾಲೂಕಿನ ಹರವಿ ಗ್ರಾಮದ ತಾಯಪ್ಪ ಬಂಧಿತ ಆರೋಪಿ. ನೇತಾಜಿ ನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬೈಕ್ ಕದಿಯುವ ವೇಳೆ ಹುಚ್ಚನ ರೀತಿಯಲ್ಲಿ ವರ್ತನೆ …
Read More »ನಾನು ಬಾಯ್ಸ್ ರೀತಿಯ ಹೇರ್ ಕಟ್ ಮಾಡಿಸಿದ್ದೇನೆ ಹೊರತು ಖಿನ್ನತೆ ಒಳಗಾಗಿ ಕೂದಲನ್ನು ಕತ್ತರಿಸಿಕೊಂಡಿಲ್ಲ :ಸಿಂಧು ಲೋಕನಾಥ್
ಬೆಂಗಳೂರು: ನಾನು ಬಾಯ್ಸ್ ರೀತಿಯ ಹೇರ್ ಕಟ್ ಮಾಡಿಸಿದ್ದೇನೆ ಹೊರತು ಖಿನ್ನತೆ ಒಳಗಾಗಿ ಕೂದಲನ್ನು ಕತ್ತರಿಸಿಕೊಂಡಿಲ್ಲ ಎಂದು ನಟಿ ಸಿಂಧು ಲೋಕನಾಥ್ ಅವರು ಹೇಳಿದ್ದಾರೆ. ಇತ್ತೀಚೆಗೆ ಸಿಂಧು ಲೋಕನಾಥ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬಾಯ್ ಹೇರ್ ಕಟ್ ಮಾಡಿಸಿಕೊಂಡಿರುವ ಫೋಟೋ ಹಾಕಿ ಕೆಲ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದರು. ಇದನ್ನು ನೋಡಿದ ಕೆಲವರು ಸಿಂಧು ಖಿನ್ನತೆಗೆ ಒಳಗಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಈಗ ಈ ವಿಚಾರವಾಗಿ …
Read More »ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಬಿಟ್ಟು ಬಿಡದೆ ಸುರಿಯುತ್ತಿರೋ ಮಳೆ
ಬೀದರ್: ಕಲಬುರಗಿ, ದಕ್ಷಿಣ ಕನ್ನಡ ಮತ್ತು ಗಡಿ ಜಿಲ್ಲೆ ಬೀದರ್ ಸೇರಿದಂತೆ ಅನೇಕ ಕಡೆ ಬೆಳಗ್ಗೆಯಿಂದ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ ತಡರಾತ್ರಿ ಕೂಡ ಜಿಲ್ಲೆಯ ಹಲವು ಕಡೆ ಮಳೆಯಾಗಿದ್ದು, ಇಂದು ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸುವ ಸಾಧ್ಯತೆ ಇದೆ. ರೈತರು ಬಿತ್ತನೆಗಾಗಿ ಬೀಜಗಳನ್ನು ಸಿದ್ಧ ಮಾಡಿಕೊಂಡು ಮಳೆಯಾಗಿ ಕಾದುಕುಳಿತ್ತಿದ್ದರು. ಹೀಗಾಗಿ ಇಂದು ವರುಣ ದೇವ ಕೃಪೆ ತೋರಿದ್ದಾನೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಮಳೆ ಸುರಿಯುತ್ತಿರುವ ಕಾರಣ ರೈತರ …
Read More »ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿ
ಧಾರವಾಡ: ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ಹಾಗೂ ಅಧಿಕಾರಿಗಳು ಮನವೊಲಿಸಿ, ಪರೀಕ್ಷೆ ಬರೆಸಿದ್ದಾರೆ. ಧಾರವಾಡದ ಅಳ್ನಾವರ ತಾಲೂಕಿನ ವಿದ್ಯಾರ್ಥಿನಿ ನಿರೀಕ್ಷಾ(ಹೆಸರು ಬದಲಿಸಲಾಗಿದೆ) ಕೊರೊನಾ ಭಯದಿಂದ ದ್ವಿತೀಯ ಭಾಷೆ ಪರೀಕ್ಷೆಗೆ ಗೈರಾಗಿದ್ದಳು. ಪಾಲಕರು ಸಹ ಏನೂ ಮಾತನಾಡಿರಲಿಲ್ಲ. ಆದರೆ ಪರೀಕ್ಷೆಗೆ ಗೈರಾಗಿದ್ದನ್ನು ಗಮನಿಸಿದ ಶಿಕ್ಷಕರು ಹಾಗೂ ಅಧಿಕಾರಿಗಳು, ಇಂದು ಬಾಲಕಿ ಮನೆಗೆ ತೆರಳಿ ವಿದ್ಯಾರ್ಥಿನಿ ಹಾಗೂ ಪೋಷಕರನ್ನು ಮನವೊಲಿಸಿದ್ದಾರೆ. ಅಧಿಕಾರಿಗಳ ಮನವೊಲಿಕೆ ಬಳಿಕ ಅಳ್ನಾವರದ ಕಸ್ತೂರಬಾ …
Read More »