ಸಂತಾಪ ಸೂಚನೆಗಾಗಿ ಸಂಬಂಧಿಕರನ್ನ ಭೇಟಿಯಾಗಲು ಬಂದಿದ್ದ 45 ವರ್ಷದ ಮಹಿಳೆಯೊಬ್ಬರು ಎಟಿಎಂನಲ್ಲಿ ನಡೆಯುತ್ತಿದ್ದ ಕಳ್ಳತನವನ್ನ ತಪ್ಪಿಸಿದ ಘಟನೆ ಮಹಾರಾಷ್ಟ್ರದ ವಸೈನಲ್ಲಿ ನಡೆದಿದೆ. ಕಳ್ಳ ಎಟಿಎಂ ಕೇಂದ್ರದ ಒಳಗೆ ನುಗ್ಗಿದ್ದನ್ನ ಕಂಡ ಸುಕನ್ಯಾ ಪವಾರ್, ಕೂಡಲೇ ಶಟರ್ ಎಳೆದು ಬಳಿಕ ನೆರೆಹೊರೆಯವರನ್ನ ಎಚ್ಚರಿಸಿದ್ದಾರೆ. ಸಂಬಂಧಿಕರೊಬ್ಬರು ನಿಧನರಾದ ಹಿನ್ನೆಲೆ ಸಂತಾಪ ಸೂಚಿಸಲು ಸುಕನ್ಯಾ ವಸೈಗೆ ಆಗಮಿಸಿದ್ದರು. ಮುಂಜಾನೆ 2.30ರ ಸುಮಾರಿಗೆ ಧಾರ್ಮಿಕ ಗ್ರಂಥವನ್ನ ಪಠಿಸುತ್ತಾ ಕುಳಿತಿದ್ದ ವೇಳೆ ಸುಕನ್ಯಾಗೆ ಎಟಿಎಂ ಕೇಂದ್ರದ ಬಳಿ …
Read More »ವರ್ಚಸ್ಸಿಗೆ ಧಕ್ಕೆ ಆಗೋದಿಲ್ಲ,ನಮ್ಮವರು ನಮ್ಮ ಜೊತೆಗಿದ್ದಾರೆ.
ಬೆಳಗಾವಿ-ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ,ಎಸ್‌ಐಟಿ ಪ್ರಕರಣಕ್ಕೆ ತನಿಖೆ ಕೊಟ್ಟಿದ್ದು ಸದ್ಯದ ಮಟ್ಟಿಗೆ ಸ್ವಾಗತ ಮಾಡ್ತೇನೆ,ಎಂದು,ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಹಂತಕ್ಕೆ ತನಿಖೆ ಮಾಡ್ತಾರೆ ಏನ್ ಮಾಡ್ತಾರೆ ಕಾದು ನೋಡಬೇಕು, ನಾವು ಸದ್ಯಕ್ಕೆ ಎಸ್‌ಐಟಿ ತನಿಖೆ ಕೊಟ್ಟಿದ್ದು ಸ್ವಾಗತ ಮಾಡುತ್ತೇವೆ, ಹೇಗೆ ಇನ್ವೆಸ್ಟಿಗೇಷನ್ ಮಾಡ್ತಾರೆ ಅದರ ಮೇಲೆ ಅವಲಂಬಿತವಾಗಿದೆ. ಕೇಸ್ ದಾಖಲಾಗಿಲ್ಲ, ವಿಚಾರಣೆ ಮಾಡುವ ಅಧಿಕಾರ ಮಾತ್ರ ಕೊಟ್ಟಿದ್ದಾರೆ, ನಿನ್ನೆ …
Read More »ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ
ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
Read More »ಐಎಂಎ ವಂಚನೆ ಪ್ರಕರಣ: ಬಿಡಿಎ ಕುಮಾರ್ ವಿರುದ್ಧ ಆರೋಪಪಟ್ಟಿ
ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ₹ 5 ಕೋಟಿ ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಹಿಂದಿನ ಕಾರ್ಯನಿರ್ವಾಹಕ ಎಂಜಿನಿಯರ್ ಪಿ.ಡಿ. ಕುಮಾರ್ ಅಲಿಯಾಸ್ ಬಿಡಿಎ ಕುಮಾರ್ ಸೇರಿದಂತೆ ಆರು ಜನರ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಐಎಂಎ ಮುಖ್ಯ ಕಾನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಮನ್ಸೂರ್ ಖಾನ್, …
Read More »ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ.: ಬಾಲಚಂದ್ರ ಜಾರಕಿಹೊಳಿ,
ಬೆಂಗಳೂರು: ರಾಸಲೀಲೆ ಸಿಡಿ ಕೇಸ್ ನಲ್ಲಿ ಐವರನ್ನು ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದು, ಆದಷ್ಟು ಬೇಗನೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಸೋಮವಾರದ ನಂತರ ಇಬ್ಬರು ಇಲ್ಲವೇ ಮೂವರ ವಿರುದ್ಧ ದೂರು ನೀಡುತ್ತೇವೆ. ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ. ತಿಮಿಂಗಿಲಗಳಿಗೆ ಸಹಕಾರ ನೀಡಿದವರನ್ನು …
Read More »ಗೌರವಕ್ಕೆ ಧಕ್ಕೆಯಾಗಿರಬಹುದು, ನಮ್ಮೊಂದಿಗೆ ಬೆಂಬಲಿಗರಿದ್ದಾರೆ: ಸತೀಶ ಜಾರಕಿಹೊಳಿ
ಬೆಳಗಾವಿ: ‘ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್‌ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್‌ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಎಸ್‌ಐಟಿ ರಚನೆ ಬಗ್ಗೆ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ಮುಖಂಡರು ವ್ಯಕ್ತಪಡಿಸಿರುವ ಅಭಿಪ್ರಾಯ …
Read More »ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು: ಡಿ.ಕೆ.ಶಿವಕುಮಾರ್
ಬೆಂಗಳೂರು: ಎಸ್‌ಐಟಿ ತನಿಖೆಗೆ ವಹಿಸಿರುವ ಸಿಡಿ ಪ್ರಕರಣದ ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಡಿಯೋದಲ್ಲಿ ಯಾರಿದ್ದಾರೆ ಎನ್ನುವುದಕ್ಕಿಂತ ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು ಹಾಗೂ ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದು ಹೇಳಿರುವುದು ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು ಎಂದು …
Read More »ಆ. 1ರಂದು ನೀಟ್ ಪರೀಕ್ಷೆ : ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ
ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ(NEET) ದಿನಾಂಕ ಪ್ರಕಟಿಸಲಾಗಿದೆ. ಆಗಸ್ಟ್ 1 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಾಹಿತಿ ನೀಡಿದೆ. ಹಿಂದಿ, ಇಂಗ್ಲಿಷ್ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಬಿಬಿಎಸ್, ಬಿಎಎಂಎಸ್, ಬಿಡಿಎಸ್, ಬಿಎಂಎಸ್ ಸೇರಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆಸಲಾಗುವುದು.
Read More »ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?
ಬೆಂಗಳೂರು : ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ. ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ. ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್‌ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು
Read More »ಲಂಚ ಪಡೆಯುತ್ತಿದ್ದ ಚಳ್ಳಕೆರೆ ತಾ.ಪಂ ಇಒ ಎಸಿಬಿ ಬಲೆಗೆ
ಚಿತ್ರದುರ್ಗ: ಪಿಡಿಒ ಒಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಚಳ್ಳಕೆರೆ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶ್ರೀಧರ್ ಐ ಬಾರಿಕೇರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಬೆಳಗೆರೆ ಪಿಡಿಒ ಗುಂಡಪ್ಪ ಅವರಿಂದ ಕಾರ್ಯಯೋಜಿತ ಮಂಜೂರಾತಿಗಾಗಿ ತಾಲೂಕು ಪಂಚಾಯತಿ ಬಳಿ 20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಎಸಿಬಿ ಎಸ್ಪಿ ಜಯಪ್ರಕಾಶ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಡಿವೈಎಸ್ಪಿ ಬಸವರಾಜ್ ಮಗುದಮ್, ಪಿಐಗಳಾದ ಪ್ರವೀಣ್ …
Read More »
Laxmi News 24×7