ಬೆಳಗಾವಿ :ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಗೆ ಸೇರಿದ 110 ಆಸ್ತಿಗಳು,16 ಜನರ ಹೆಸರಿನಲ್ಲಿದ್ದು,ಈ ಆಸ್ತಿಗಳ ಹರಾಜಿಗೆ ಅನುಮತಿ ಕೋರಿ,ಬೆಳಗಾವಿ ಉಪವಿಭಾಗಾಧಿಕಾರಿಗಳು ಕೋರ್ಟ್ ಮೊರೆಹೋಗಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಈ ಕುರಿತು,ಪ್ರಕರಣ ದಾಖಲಾಗಿದ್ದು,ಸೊಸೈಟಿ ಆಸ್ತಿ ಹೊಂದಿದದವರ 16 ಜನರಿಗೆ ನೋಟೀಸ್ ಜಾರಿಯಾಗಿದೆ. ಸೊಸೈಟಿಯ ಒಟ್ಟು110 ಆಸ್ತಿಗಳು ಹದಿನಾರು ಜನರ ಹೆಸರಿನಲ್ಲಿವೆ, ಕೋಟ್ಯಾಂತರ ರೂ ಬೆಲೆಬಾಳುವ ಈ ಆಸ್ತಿಗಳ ಉತಾರದಲ್ಲಿ ಈಗಾಗಲೇ ಸರ್ಕಾರದ ಆಸ್ತಿ ಎಂದು ನಮೂದಿಸಲಾಗಿದೆ.ನ್ಯಾಯಾಲಯದ ಅನುಮತಿ ಪಡೆದು,ಕ್ರಮಬದ್ಧವಾಗಿ ಈ ಆಸ್ತಿಗಳನ್ನು …
Read More »ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಜೇವರ್ಗಿ: ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವರಾಧ್ಯ ಬಡಿಗೇರ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ವಿರೋಧವಾಗಿ ಕಾನೂನು ಜಾರಿಗೆ ತಂದಿರುವುದು ಅತ್ಯಂತ ಖಂಡನೀಯ. ಕಾರ್ಖಾನೆಗಳ ನೆಪದಲ್ಲಿ ಸರ್ಕಾರ ರೈತರ ಭೂಮಿಯನ್ನು ಕಸಿದುಕೊಳ್ಳಲು ಮುಂದಾಗಿದೆ. ಕೂಡಲೇ ಈ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಿಸಿದರು. …
Read More »ಮಲೆ ಮಹದೇಶ್ವರ ದೇವಾಲಯಕ್ಕೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಆದ್ರೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿಯಮ ಉಲ್ಲಂಘಿಸಿ ಇಂದು ಬೆಳಗ್ಗೆ ದೇವರ ದರ್ಶನ ಪಡೆದುಕೊಂಡಿದ್ದಾರೆ.
ಚಾಮರಾಜನಗರ: ಕರೊನಾ ಭೀತಿ ಹಿನ್ನೆಲೆಯಲ್ಲಿ ಜೂ.21ರವರೆಗೂ ಮಲೆ ಮಹದೇಶ್ವರ ದೇವಾಲಯಕ್ಕೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದ್ರೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿಯಮ ಉಲ್ಲಂಘಿಸಿ ಇಂದು ಬೆಳಗ್ಗೆ ದೇವರ ದರ್ಶನ ಪಡೆದುಕೊಂಡಿದ್ದಾರೆ. ಕೋವಿಡ್19 ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಲೆ ಮಹದೇಶ್ವರ ದೇವಾಲಯಕ್ಕೆ ಜೂ.19ರಿಂದ 21ರವರೆಗೆ ಸಾರ್ವಜನಿಕರು ಹಾಗೂ ಭಕ್ತರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವ ಕೆ.ಎಸ್. …
Read More »ಫಾರ್ಮಾಸಿಟಿಕಲ್ ಎಜೆನ್ಸಿಯ ಮಾಲೀಕರಾದ ಮಹಿಳೆಗೆ ಲಾಡ್ಜ್ ಬಾ ಹಾಗಾದ್ರೆ ಸಾಮಗ್ರಿಗಳ ಬಿಲ್ ಪಾವತಿ ಮಾಡುತ್ತೆನೆ ಎಂದು ಅಸಭ್ಯ ವಾಗಿ ವರ್ತಿಸಿದ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ: ಚಿಟಗುಪ್ಪಿ ಆಸ್ಪತ್ರೆಗೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿದ್ದ ಫಾರ್ಮಾಸಿಟಿಕಲ್ ಎಜೆನ್ಸಿಯ ಮಾಲೀಕರಾದ ಮಹಿಳೆಗೆ ಲಾಡ್ಜ್ ಬಾ ಹಾಗಾದ್ರೆ ಸಾಮಗ್ರಿಗಳ ಬಿಲ್ ಪಾವತಿ ಮಾಡುತ್ತೆನೆ ಎಂದು ಅಸಭ್ಯ ವಾಗಿ ವರ್ತಿಸಿದ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಪ್ರಭು ಬಿರಾದಾರ ಬಂಧಿತ ವೈದ್ಯ. ಪ್ರಭು ಆಸ್ಪತ್ರೆಗೆ ವೈದ್ಯಕೀಯ ಸಾಮಾಗ್ರಿಗಳನ್ನು ಪೂರೈಕೆ ಮಾಡಿದ್ದರು. ವಸ್ತುಗಳನ್ನು ಪಡೆದ ಪ್ರಭು ಹಣ ಪಾವತಿ ಮಾಡಿರಲಿಲ್ಲ. ಬಿಲ್ ಪಾವತಿ ಮಾಡಬೇಕಾದರೆ ಲಾಡ್ಜ್ ಗೆ ಬಾ …
Read More »ಸರ್ಕಾರ ನೇಕಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ನೇಕಾರ ಸಂಘಟನೆಯ ಒಕ್ಕೂಟದ ಅಧ್ಯಕ್ಷ ಗಜಾನನ ಗುಂಜೇರಿ ಒತ್ತಾಯಿಸಿದ್ದಾರೆ.
ಬೆಳಗಾವಿ: ಲಾಕ್ ಡೌನ್ ದಿಂದ ನೇಕಾರರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಇದರಿಂದ ಸರ್ಕಾರ ನೇಕಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ನೇಕಾರ ಸಂಘಟನೆಯ ಒಕ್ಕೂಟದ ಅಧ್ಯಕ್ಷ ಗಜಾನನ ಗುಂಜೇರಿ ಒತ್ತಾಯಿಸಿದ್ದಾರೆ. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರ ಪ್ರವಾಹ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಆದ್ರೆ ಅವು ಕೈ ಸೇರುವ ಮುನ್ನವೆ ಕೊರೊನಾ ಹಾವಳಿ ಹೆಚ್ಚಾಯಿತು. ಆದ ಕಾರಣ ಪ್ಯಾಕೇಜ್ ಕೈ ಸೇರಲಿಲ್ಲ ಎಂದರು. …
Read More »ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕನ್ನು ಹೋಗಲಾಡಿಸಲು ತಮ್ಮ ಜೀವವನ್ನು ಲೆಕ್ಕಿಸದೇ ಸೋಂಕಿತರನ್ನು ಪತ್ತೆಗಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದರು
ಸವಣೂರ: ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕನ್ನು ಹೋಗಲಾಡಿಸಲು ತಮ್ಮ ಜೀವವನ್ನು ಲೆಕ್ಕಿಸದೇ ಸೋಂಕಿತರನ್ನು ಪತ್ತೆಗಾಗಿ ಶ್ರಮಿಸುತ್ತಾ, ಸಾರ್ವಜನಿಕರಿಂದ ನಿಂದನೆಗೊಳಗಾದರೂ ಸಹ, ನಿರ್ಲಕ್ಷಿಸಿ ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಮುಂದಾದ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಿಜೆಪಿ ತಾಲೂಕಾಧ್ಯಕ್ಷ ಗಂಗಾಧರ ಬಾಣದ ಹೇಳಿದರು. ಕಂದಾಯ ಇಲಾಖೆಯ ಆವರಣದಲ್ಲಿ ಆಶಾ ಕಾರ್ಯಕರ್ತರಿಗೆ ಹಾಗೂ ಪುರಸಭೆ ನೀರು ನಿರ್ವಹಣಾ ಸಿಬ್ಬಂದಿಗಳಿಗೆ ಕ್ಷಮತಾ ಸೇವಾ ಸಂಘದ ವತಿಯಿಂದ ನೀಡಲ್ಪಟ್ಟ ಆಹಾರ ಧಾನ್ಯಗಳ ಕಿಟ್ ವಿತರಿಸಿ ಮಾತನಾಡಿದರು. …
Read More »ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ತಂದೆ- ತಾಯಿ ಸೇರಿ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ತಂದೆ- ತಾಯಿ ಸೇರಿ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೌರವ್ ಗಂಗೂಲಿ ಅವರ ತಂದೆ-ತಾಯಿ ಸಹೋದರ ಮತ್ತು ಅವರ ಪತ್ನಿಗೆ ಸೋಂಕು ಪತ್ತೆಯಾಗಿದೆ. ಗಂಗೂಲಿ ಸಹೋದರ, ಅವರ ಪತ್ನಿ ಹಾಗೂ ಗಂಗೂಲಿ ಪೋಷಕರಿಗೆ ಒಂದೇ ರೀತಿಯ ಅನಾರೋಗ್ಯ ಕಾಣಿಸಿಕೊಂಡಿತ್ತು. ಆದರೆ ಅವರ್ಯಾರೂ ಬೆಹಾಲಾದಲ್ಲಿರುವ ಗಂಗೂಲಿ ಅವರ ಮನೆಯಲ್ಲಿರಲಿಲ್ಲ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವಿವಿಧ ರೀತಿಯ ಪರೀಕ್ಷೆಗಳನ್ನು …
Read More »ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ’
2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …
Read More »ಸತತ 14ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ …………..
ನವದೆಹಲಿ,ಜೂ.20 – ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ. ಇಂದು ಪೆಟ್ರೋಲ್ ಲೀಟರ್‍ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಹೀಗಾಗಿ ಎರಡು ವಾರಗಳ ಅಂತರದಲ್ಲಿ ಪೆಟ್ರೋಲ್ ರೂ.5.88 ಹಾಗೂ ಡೀಸೆಲ್ ರೂ.6.50 ಏರಿಕೆಯಾದಂತಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶುಕ್ರವಾರ ಲೀಟರ್¿ಗೆ ರೂ. 81.42 ಹಾಗೂ ಡೀಸೆಲ್ ರೂ.73.89 ಆಗಿದೆ.ಅಂತರಾಷ್ಟ್ರೀಯ ಕಚ್ಚಾತೈಲ ದರಕ್ಕೆ ತಕ್ಕಂತೆ ತೈಲ …
Read More »ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ…..? ‘
2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …
Read More »