ಬೆಂಗಳೂರು : ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ವಂಚನೆ ಮಾಡಿದ ಆರೋಪದ ಹಿನ್ನೆಲೆ ಐಶ್ವರ್ಯ ಗೌಡ ವಿರುದ್ಧ ಮಾಜಿ ಸಂಸದ ಡಿ. ಕೆ ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಇಂದು ದೂರು ನೀಡಿದ್ದಾರೆ. ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ. ಕೆ ಸುರೇಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. …
Read More »ದಾಬಸ್ ಪೇಟೆ ಬಳಿ ಸರಣಿ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ
ನೆಲಮಂಗಲ: ಇಲ್ಲಿಯ ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಂಬೆಳಗ್ಗೆ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ವೀರಣ್ಣ(55) ಮೃತ ದುರ್ದೈವಿ. ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಇಂದು ಬೆಳಗ್ಗೆ ಈ ಸರಣಿ ಅಪಘಾತ ಸಂಭವಿದೆ. ಕೈಗಾರಿಕಾ ಪ್ರದೇಶದ ಹೆಬ್ಬಾಗಿಲು ಮುಂಭಾಗದಲ್ಲಿ ಪ್ಯಾಸೆಂಜರ್ ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ಘಟನೆಯಲ್ಲಿ ವೀರಣ್ಣ ಸ್ಥಳದಲ್ಲೇ ಮೃತಪಟ್ಟರೆ, ಎಂಬಿಬಿಎಸ್ ಓದುತ್ತಿದ್ದ …
Read More »ತಮ್ಮ ಆರೋಗ್ಯದ ಬಗ್ಗೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ
ದಾವಣಗೆರೆ: ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ದಾವಣಗೆರೆ ದಕ್ಷಿಣ ಮತ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ, ಡಾ.ಶಾಮನೂರು ಶಿವಶಂಕರಪ್ಪ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ. ಆರೋಗ್ಯ ತಪಾಸಣೆಗೆ ಎಂದು ಬೆಂಗಳೂರಿಗೆ ತೆರಳಿದ್ದ ಶಾಮನೂರು ಶಿವಶಂಕರಪ್ಪ ಅವರು ಮತದಾರರು, ಅಭಿಮಾನಿಗಳಿಗೆ ವಿಡಿಯೋ ಮೂಲಕ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ನಾಡಿನ ಜನತೆಗೆ 2025ನೇ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ವಿಡಿಯೊದಲ್ಲಿ ಮಾತನಾಡಿರುವ ಅವರು, ಮತದಾರರ ಆಶೀರ್ವಾದದಿಂದ ನಾನು …
Read More »ಗೃಹಿಣಿ ಆತ್ಮಹತ್ಯೆಗೆ ಶರಣು, ಪತಿ ವಿರುದ್ಧ ಕೊಲೆ ಆರೋಪ
ಬೆಳಗಾವಿ: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮತ್ತು ಅವರ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕಿರುಕುಳಕ್ಕೆ ಬೇಸತ್ತು ತಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಸಾಂಬ್ರಾ ಗ್ರಾಮದ ಸವಿತಾ ಮಾರುತಿ ಜೋಗಾನಿ(32) ಮೃತ ಮಹಿಳೆ. ಶನಿವಾರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018ರಲ್ಲಿ ಸಾಂಬ್ರಾದ ಮಾರುತಿ ಜೋಗಾನಿ ಜೊತೆಗೆ ರಾಕಸಕೊಪ್ಪ …
Read More »ರೈತ ಉತ್ಪಾದಕ ಸಂಸ್ಥೆಯಿಂದ ಮಿಶ್ರ ಬೇಸಾಯವಾದ ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಹಾಗೂ ಹಸು ಸಾಕಾಣಿಕೆಯ ಕುರಿತು ತರಬೇತಿ
ಹಾವೇರಿ : ವರ್ಷದಿಂದ ವರ್ಷಕ್ಕೆ ರೈತರ ಆತ್ಮಹತ್ಯೆಗಳ ಪ್ರಕರಣಗಳು ಅಧಿಕವಾಗುತ್ತಿವೆ. ಸರಿಯಾದ ಬೆಲೆ, ಸರಿಯಾದ ಇಳುವರಿ, ಸಮರ್ಪಕ ಗೊಬ್ಬರ, ಬಿತ್ತನೆ ಬೀಜ ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಅತಿಯಾದ ಮಳೆ, ಬರ ಸೇರಿದಂತೆ ಪ್ರಕೃತಿಯ ಹಲವು ವಿಕೋಪಗಳಿಂದ ಸಹ ರೈತರು ಸಾಲದ ಸುಳಿಗೆ ಸಿಲುಕಿ ನಲುಗುತ್ತಿದ್ದಾರೆ. ಆದರೆ ರೈತರು ಪರ್ಯಾಯ ಕೃಷಿಯಾದ ಮಿಶ್ರ ಬೇಸಾಯದ ಮೂಲಕ ಈ ರೀತಿಯ ಸಂಕಷ್ಟಗಳಿಂದ ಪಾರಾಗಬಹುದು ಎನ್ನುತ್ತಿದೆ ಹಾವೇರಿಯ ಗ್ರೀನ್ಚಿಕ್ ರೈತರ ಉತ್ಪಾದಕರ ಕಂಪನಿ. ಈ …
Read More »ಕಾರವಾರದಲ್ಲೊಂದು ರಂಗೋಲಿ ಜಾತ್ರೆ
ಕಾರವಾರ(ಉತ್ತರ ಕನ್ನಡ): ಜಾತ್ರೆ ಅಂದಾಕ್ಷಣ ನಮಗೆ ನೆನಪಾಗೋದು ಅಲ್ಲಿನ ತಿಂಡಿ ತಿನಿಸುಗಳು, ಹೂವು, ಹಣ್ಣು ಕಾಯಿ, ಮಕ್ಕಳ ಆಟದ ಸಾಮಾನುಗಳು. ಆದರೆ, ಕಾರವಾರ ನಗರದಲ್ಲಿ ನಡೆದ ಜಾತ್ರೆಯೊಂದು ನಾವು ಅಂದುಕೊಳ್ಳುವುದಕ್ಕಿಂತ ವಿಭಿನ್ನವಾಗಿತ್ತು. ಜಾತ್ರೆಗೆ ಆಗಮಿಸಿದ ಸಾವಿರಾರು ಜನರು ದೇವರ ದರ್ಶನ ಪಡೆದುಕೊಳ್ಳುವುದಕ್ಕಿಂತ ಹೆಚ್ಚಾಗಿ ಜಾತ್ರೆ ನಡೆಯುವ ಸ್ಥಳದಲ್ಲಿನ ಮನೆಗಳ ಮುಂದೆ ಹಾಕಿರುವ ರಂಗೋಲಿ ನೋಡುವುದರಲ್ಲಿಯೇ ಮೈಮರೆತಿದ್ದರು. ಈ ಸ್ಪೆಷಲ್ ರಂಗೋಲಿ ಜಾತ್ರೆ ಕುರಿತಾದ ವರದಿ ಇಲ್ಲಿದೆ. ರಂಗೋಲಿ ಜಾತ್ರೆ ಖ್ಯಾತಿಯ ಕಾರವಾರ …
Read More »ವೀರಶೈವ ಧರ್ಮದ ಮೂಲ ಸಿದ್ಧಾಂತ ಅರಿತರೆ ಧರ್ಮದಲ್ಲಿ ಸವಾಲುಗಳನ್ನು ಎದುರಿಸಬಹುದು: ರಂಭಾಪುರಿ ಶ್ರೀ
ತುಮಕೂರು: ಜಗದ್ಗುರು ಶ್ರೀ ರೇಣುಕಾಚಾರ್ಯರು ನಡೆಸಿಕೊಂಡು ಬಂದ ವೀರಶೈವ ಪರಂಪರೆಯಲ್ಲಿ ವೀರಶೈವ ಧರ್ಮದ ಮೂಲ ಸಿದ್ಧಾಂತವನ್ನು ಬಹಳಷ್ಟು ಜನ ತಿಳಿದುಕೊಂಡಿಲ್ಲ. ತಿಳಿದುಕೊಳ್ಳುವ ಪ್ರಾಮಾಣಿಕ ಪ್ರಯತ್ನವೂ ಮಾಡುತ್ತಿಲ್ಲ. ಹೀಗಾಗಿ ಧರ್ಮದಲ್ಲಿ ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಕಾಣುವಂತಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ತುಮಕೂರು ನಗರದಲ್ಲಿ ನಾಲ್ಕು ದಿನಗಳ ಕಾಲ ನಡೆದ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ …
Read More »ಜ.15ರಂದು ಸಿಎಂ ಜೊತೆ ಸಭೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ: ಮುಷ್ಕರ ಕೈಬಿಟ್ಟ ಸಾರಿಗೆ ನೌಕರರ ಒಕ್ಕೂಟ
ಬೆಂಗಳೂರು: ಜನವರಿ 15ರಂದು ಸಿಎಂ ಸಿದ್ದರಾಮಯ್ಯ ರಸ್ತೆ ಸಾರಿಗೆ ನೌಕರರ ಜೊತೆ ಸಭೆ ನಡೆಸುವ ಭರವಸೆ ನೀಡಿದ್ದು, ಡಿ.31ರಿಂದ ಮಾಡಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯಲು ಕೆಎಸ್ಆರ್ಟಿಸಿ ನೌಕರರ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದ ಬೆನ್ನಲ್ಲೇ ಕ್ರಿಯಾ ಸಮಿತಿ ಮುಷ್ಕರದಿಂದ ಹಿಂದೆ ಸರಿಯಲು ತೀರ್ಮಾನಿಸಿದೆ. ಸಭೆಯಲ್ಲಿ ಮಕರ ಸಂಕ್ರಾಂತಿಯಂದು ಸಭೆ ನಡೆಸಿ …
Read More »ರಾಜ್ಯದಲ್ಲಿ ಅರಾಜಕಥೆ ಸೃಷ್ಟಿಯಾಗಿದೆ. ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು.
ದಾವಣಗೆರೆ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ವಿಚಾರವಾಗಿ ಸಂಸದ ಜಗದೀಶ್ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೊನ್ನೆ ಬೆಳಗಾವಿಯಲ್ಲಿ ಹೆಬ್ಬಾಳ್ಕರ್ ಪಿಎ ಕಿರುಕುಳದಿಂದ ಎಸ್ಡಿಎ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ ಸಾಯುವ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ ಹೆಸರು ಬರೆದಿಟ್ಟಿದ್ದ. ಆದರೂ ಅವರ ಪಿಎ ಬಂಧನ ಆಗದೆ ಬೇಲ್ ಪಡೆದು ಆಚೆ ಓಡಾಡುತ್ತಿದ್ದಾರೆ. ಈಗ ಕಲಬುರಗಿಯಲ್ಲಿ …
Read More »ಬೆಳಗಾವಿ: ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಯುವಕ ಸಾವು
ಬೆಳಗಾವಿ: ಪಾರ್ಟಿ ಮಾಡಲು ಹೋಗಿದ್ದಾಗ ಈಜುಕೊಳದಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ಭಾನುವಾರ ನಡೆದಿದೆ. ಬೆಳಗಾವಿಯ ಖಾಸಬಾಗ ನಿವಾಸಿ ಮಹಾಂತೇಶ ಗುಂಜೀಕರ (26) ಮೃತ ಯುವಕ. ಎಲ್‌ಜಿ ಕಂಪನಿಯಲ್ಲಿ ಮಹಾಂತೇಶ ಉದ್ಯೋಗಿಯಾಗಿದ್ದ. ಕಂಪನಿಯ ಬೆಳಗಾವಿ ಶಾಖೆಯ 22 ಜನ ಸಿಬ್ಬಂದಿ ನಿನ್ನೆ ಸಂಜೆ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್‌ಗೆ ತೆರಳಿದ್ದರು. ಇಂದು ಇವರೆಲ್ಲಾ ಮನೆಗೆ ಮರಳಬೇಕಿತ್ತು. ಭಾನುವಾರ ಬೆಳಗ್ಗೆ ರೆಸಾರ್ಟ್ನ ಈಜುಕೊಳದಲ್ಲಿ …
Read More »