ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್, ಸುನಿಲ್ ವಲ್ಯಾಪುರೆ, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್ ಮತ್ತು ನಸೀರ್ ಅಹ್ಮದ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಾಲ್ವರು ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದರು. ಬಳಿಕ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಲ್ವರೂ ನಾಮಪತ್ರ …
Read More »ವಿಶ್ವನಾಥ್ ತಾಳ್ಮೆಯಿಂದ ಇದ್ದರೆ ಮುಂದೆ ಒಳ್ಳೆಯ ಭವಿಷ್ಯವಿದೆ: ನಾಗೇಶ್
ಕೋಲಾರ: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಶ್ವನಾಥ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿರುವುದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂದ ಅಧಿಕಾರಿಗಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುತ್ತವೆ. ಅದು …
Read More »‘ಚೀನಾ ಭಾರತವನ್ನು ನಾಶ ಮಾಡಲಿ’ – ಗದಗ್ ಯುವಕನ ಪೋಸ್ಟ್
ಗದಗ: ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು …
Read More »ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು
ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ. ಮೊಳೆಗಳಿರುವ ಕಬ್ಬಿಣದ ರಾಡ್‌ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್ ಅನ್ನು ಭಾರತದ ನೆಲೆಗೆ …
Read More »ದೇಶಾದ್ಯಂತ ಶುರುವಾಯ್ತು ಚೀನಿ ಉತ್ಪನ್ನ ಬಹಿಷ್ಕಾರ ಅಭಿಮಾನ…!
ನಮ್ಮ ಉತ್ಪನ್ನ ನಮ್ಮ ಅಭಿಮಾನ ಎಂಬ ಘೋಷವಾಕ್ಯದೊಂದಿಗೆ ಇಂದಿನಿಂದ ದೇಶಾದ್ಯಂತ ಆರಂಭವಾಗಿರುವ ಚೀನಿ ಉತ್ಪನ್ನ ಬಹಿಷ್ಕಾರ ಜನಾಂದೋಲನಕ್ಕೆ ಹಾಲಿವುಡ್ ನಟ-ನಟಿಯರು, ವಿವಿಧ ಕ್ಷೇತ್ರಗಳ ಖ್ಯಾತನಾಮರು, ರಾಜಕೀಯ ಮುಖಂಡರು, ಉದ್ಯಮಿಗಳು, ಅಸಂಖ್ಯಾತ ಸಂಘ-ಸಂಸ್ಥೆಗಳು, ಕ್ರೀಡಾಪಟುಗಳು ಸಹ ಕೈ ಜೋಡಿಸಿದ್ದು, ಭಾರೀ ಬೆಂಬಲ ವ್ಯಕ್ತವಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ ಚೀನಾಗೆ ಮತ್ತೊಂದು ಶಾಕ್ ನೀಡಿದೆ. 4ಜಿ ಮೇಲ್ದರ್ಜೆಗಾಗಿ ಯಾವುದೇ ಕಾರಣಕ್ಕೂ ಚೀನಾದ ಉಪಕರಣಗಳನ್ನು ಬಳಸದಂತೆ ದೂರ ಸಂಪರ್ಕ …
Read More »ಬೆಳಗಾವಿಯಲ್ಲಿ ಮಾಸ್ಕ್ ಡೇ ಆಚರಣೆ
ಮಾಸ್ಕ್ ಧರಿಸಿ ಕರೋನಾದಿಂದ ದೂರವಿರಿ! ಇಂದು ಬೆಳಗಾವಿಯ ಅಶೋಕ ಸರ್ಕಲ್ ನಿಂದ ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಕೊವಿಡ್ 19 ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಜನರಿಗೆ ಮಾಸ್ಕ್ ವಿತರಿಸಲಾಯಿತು. ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿನ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ! ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ, ಕೊವಿಡ್ 19 ವಿಶೇಷ …
Read More »ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…
; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …
Read More »ಜಿಂದಾಲ್ ಕಾರ್ಖಾನೆಯಲ್ಲಿ ಕೊರೊನಾ ರಣಕೇಕೆ – ಸೋಂಕು ತಡೆಗೆ ಸಪ್ತ ಸೂತ್ರ………
ಬಳ್ಳಾರಿ: ಜಿಂದಾಲ್ ಉಕ್ಕು ಕಾರ್ಖಾನೆ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗ್ತಿದೆ. ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಗ್ರಾಮಗಳಲ್ಲೂ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಜಿಂದಾಲ್ ಕಾರ್ಖಾನೆ ಹೋದ್ರೆ 5,000 ರೂ. ದಂಡ ವಿಧಿಸೋದಾಗಿ ಡಂಗೂರ ಸಾರಿ ಎಚ್ಚರಿಸಲಾಗುತ್ತಿದೆ. ಆದರೆ ಜಿಂದಾಲ್ ಅಧಿಕಾರಿಗಳು ಮಾತ್ರ ಕೆಲಸಕ್ಕೆ ಬರೆದಿದ್ರೆ ಚೆನ್ನಾಗಿ ಇರಲ್ಲಾ ಎಂದು ಆವಾಜ್ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬುಧವಾರ ಒಂದೇ ದಿನ ಜಿಂದಾಲ್ ವ್ಯಾಪ್ತಿಯಲ್ಲೇ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. …
Read More »Complete unlock – ರಾಜ್ಯದಲ್ಲಿ ಚಿತ್ರಮಂದಿರ, ಜಿಮ್, ಮೆಟ್ರೋ, ಈಜು ಇತ್ಯಾದಿ ಕ್ಷೇತ್ರಗಳಿಗೂ ಸಡಿಲಿಕೆ ಸಾಧ್ಯತೆ
ಬೆಂಗಳೂರು(ಜೂನ್ 17): ಸಿನಿಮಾ ಥಿಯೇಟರ್, ಪಬ್, ರೆಸ್ಟೋರೆಂಟ್, ಮೆಟ್ರೋ ಸಂಚಾರ, ವಿದೇಶಿ ರಫ್ತು, ಸ್ವಿಮ್ಮಿಂಗ್ ಫುಲ್ ಹಾಗೂ ಜಿಮ್…. ಹೀಗೆ ಕೊರೋನಾ ಲಾಕ್ ಡೌನ್ನಿಂದ ಅನ್ ಲಾಕ್ಗೆ ಎದುರು ನೋಡ್ತಿರುವ ಈ ಕ್ಷೇತ್ರಗಳಿಗೆ ವಿನಾಯಿತಿ ಸಿಗಬಹುದು ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗುವ ಸಾಧ್ಯತೆ ಇಲ್ಲ. ಈ ಕ್ಷೇತ್ರಗಳಿಗೆ ವಿನಾಯಿತಿ ಕೊಡಲು ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ.. ಇಂದು ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆದ …
Read More »ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………
ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ. ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ …
Read More »