ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‍ನ ಇಬ್ಬರು, ಜೆಡಿಎಸ್‍ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ …
Read More »ಎತ್ತಿನ ಹೊಳೆ ಯೋಜನೆ : ಭೂ ಪರಿಹಾರ ದರ ನಿಗಧಿಗೆ ಸಿಎಂ ಜತೆ ಚರ್ಚೆ
ತುಮಕೂರು, – ಎತ್ತಿನ ಹೊಳೆಯ ಬೈರಗೊಂಡ್ಲು ಜಲಾಶಯದ ನಿರ್ಮಾಣಕ್ಕೆ ಭೂಸ್ವಾಧೀನಕ್ಕೊಳಪಡುವ ರೈತರ ಜಮೀನಿಗೆ ಸೂಕ್ತ ಪರಿಹಾರ ದರ ನಿಗಧಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬೈರಗೊಂಡ್ಲು ಜಲಾಶಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಕೊರಟಗೆರೆ …
Read More »ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!
ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …
Read More »20 ಯೋಧರ ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ: ರಾಜನಾಥ್‍ಸಿಂಗ್
ನವದೆಹಲಿ, ಜೂ.17- ಭಾರತದ ವಿರುದ್ಧ ಕಾಲುಕೆರೆದು ಸಂಘರ್ಷ ಉಂಟುಮಾಡಿದ್ದಲ್ಲದೆ 20 ಯೋಧರನ್ನು ಹತ್ಯೆ ಮಾಡಿರುವ ಪ್ರತೀಕಾರಕ್ಕೆ ಭಾರತ ಸನ್ನದ್ಧವಾಗಿದ್ದು, ಸೈನಿಕರ ತ್ಯಾಗವನ್ನು ಮರೆಯುವುದಿಲ್ಲ ಎನ್ನುವ ಮೂಲಕ ಚೀನಾಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. 20 ಯೋಧರ ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ. ಸೈನಿಕರ ಸಾವು ಅತ್ಯಂತ ನೋವು ತಂದಿದೆ. ಇದಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಪರೋಕ್ಷವಾಗಿ ಚೀನಾ ರಾಷ್ಟ್ರವನ್ನು ಉಲ್ಲೇಖಿಸದೆ ಭಾರತ ಸಮರಕ್ಕೆ ಸಿದ್ಧ …
Read More »ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………
ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …
Read More »ವಿಪರೀತ ಮಳೆ ಲಾರಿ ಪಲ್ಟಿ- 190 ಚೀಲ ಸಕ್ಕರೆ ಎಗರಿಸಿದ ಜನ………
ಬೆಳಗಾವಿ: ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯವಸ್ಥವಾಗಿದ್ದು, ನದಿಗಳ ಒಳಹರಿವು ಹೆಚ್ಚಾಗಿ ರಸ್ತೆಗಳು ಬಂದ್ ಆಗಿವೆ. ಇದರ ಮಧ್ಯೆಯೇ ಸಕ್ಕರೆ ಸಾಗಿಸುತ್ತಿದ್ದ ಲಾರಿ ಮೊಗಚಿ ಬಿದ್ದಿದೆ. ಬೆಳಗಾವಿ ತಾಲೂಕಿನ ಸುತಗತ್ತಿ ಗ್ರಾಮದ ಸಮೀಪ ತಡರಾತ್ರಿ ಘಟನೆ ನಡೆದಿದ್ದು, ಮಹಾರಾಷ್ಟ್ರದ ಓಲಂ ಸಕ್ಕರೆ ಕಾರ್ಖಾನೆಯಿಂದ 300 ಚೀಲ ಸಕ್ಕರೆ ಹೊತ್ತು ಲಾರಿ ರಾಜ್ಯಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. …
Read More »ನಮ್ಮ ತಾಳ್ಮೆಯನ್ನು ಕೆಣಕಬೇಡಿ -ವೈರಿ ಚೀನಾಗೆ ಮೋದಿ ಖಡಕ್ ಸಂದೇಶ…………..
ನವದೆಹಲಿ: ಚೀನಾ ಮತ್ತು ಭಾರತ ಗಡಿಯಲ್ಲಿ ಉಂಟಾಗಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ವೈರಿ ಚೀನಾಗೆ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಯ ಸಭೆಯ ಆರಂಭದಲ್ಲಿ ಚೀನಾ ಸಂಘರ್ಷದ ಕುರಿತು ಮಾತನಾಡಿದರು. ದೇಶವನ್ನು ರಕ್ಷಿಸಿಕೊಳ್ಳಲು ನಮ್ಮನ್ನು ಯಾರು ತಡೆಯುವರು ಇಲ್ಲ ಭಾರತ ಶಾಂತಿಯನ್ನು ಬಯಸುತ್ತೆ. ಆದ್ರೆ ನಮ್ಮನ್ನು ಪ್ರಚೋದಿಸುವ ಕೆಲಸ ಮಾಡಲಾಗುತ್ತಿದೆ. ನಮ್ಮ ಹುತಾತ್ಮ ಯೋಧರು ಕೊನೆಯವರೆಗೂ ಹೋರಾಡಿದ್ದಾರೆ. ಭಾರತಕ್ಕೆ ಶಾಂತಿ ಬೇಕು, ನಮ್ಮ ತಾಳ್ಮೆಯನ್ನು …
Read More »ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ
ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ …
Read More »ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.
ಬೆಳಗಾವಿ: ಕೊರೊನಾ ದಿಂದಾಗಿ ಸರ್ಕಾರ ಘೋಷಿಸಿದ ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು. ಇಲ್ಲಿನ ಅಲಾರವಾಡ ಸೇತುವೆಯ ಕೆಳಗಡೆ ಬುಧವಾರ ಹಿರಿಯ ಕನ್ನಡ ಹೋರಾಟಗಾರ ಮಲ್ಲಪ್ಪ ಅಕ್ಷರದ, ಗಜಾನನ ಗುಂಜೇರಿ, ರಾಜೂ ಟೋಪಗಿ, ಮ್ಯಾಗೋಟಿ ಆಯೋಜಿಸಿದ್ದರು. ಜನರಿಗೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಕಳೆದ ಮಾರ್ಚ 23 ರಂದು,ದಾನಿಗಳ ನೆರವಿನಿಂದ, ಆರಂಭಿಸಿದ ” ಹಸಿದವರತ್ತ ನಮ್ಮ ಚಿತ್ತ” …
Read More »ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ
ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ನಗರದ ತಾ. ಪಂ. ಕಚೇರಿಯಲ್ಲಿ …
Read More »