Breaking News

ಸಿಎಂ ಆಗಲೇಬೇಕು ಎಂಬ ಹಠಕ್ಕೆ ಬಿದ್ದಂತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್………!

ಬೆಂಗಳೂರು: ಸಿಎಂ ಆಗಲೇಬೇಕು ಎಂಬ ಹಠಕ್ಕೆ ಬಿದ್ದಂತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜ್ಯೋತಿಷ್ಯದ ಮೊರೆ ಹೋಗಿದ್ದು, ಕಚೇರಿಯಲ್ಲಿ ಓಡಾಡಲು ಪ್ರತ್ಯೇಕ ಬಾಗಿಲನ್ನೇ ನಿರ್ಮಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಸಿಎಂ ಆಗಲು ಕಚೇರಿ ಹಾಗೂ ಅಧಿಕೃತ ನಿವಾಸ ಕಚೇರಿಯನ್ನು ಶ್ವೇತ ವರ್ಣಕ್ಕೆ ಬದಲಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯ ಪಟ್ಟಕ್ಕೇರಲು ಜ್ಯೋತಿಷಿಗಳ ಸಲಹೆಯಂತೆ ಕಾಂಗ್ರೆಸ್ ಕಚೇರಿಯಲ್ಲಿ ಓಡಾಡಲು ಕುಬೇರ ಮೂಲೆಯಲ್ಲಿ ಹೊಸ ಬಾಗಿಲನ್ನೇ …

Read More »

ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖ

ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಹಾಗೂ ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖವಗುತ್ತಿದ್ದು,  ನದಿ ತೀರದ ಗ್ರಾಮದ ಜನರು  ನಿರಾಳರಾಗಿದ್ದಾರೆ. ಆದ್ರೆ ಈ ಗ್ರಾಮದಲ್ಲಿ ಸಾಂಕ್ರಾಮಿಕ  ರೋಗದ ಭೀತಿ ಎದುರಾಗಿದೆ. ತಾಲೂಕಿನ ನದಿ ತೀರದ ಗ್ರಾಮಗಳಾದ ಝುಂಜರವಾಡ, ಶಿರಹಟ್ಟಿ, ಸವದಿ, ನದಿ ಇಂಗಳಗಾಂವ, ಜನವಾಡ, ಸಪ್ತಸಾಗರ, ದರೂರ, ಹಲ್ಯಾಳ, ಮಹಿಷವಾಡಗಿ, ಅವರಖೋಡ, ಖವಟಗೊಪ್ಪ, ಸೇರಿದಂತೆ ಇತರೆ ನದಿ ತೀರದ ಗ್ರಾಮಗಳಲ್ಲಿ  ಸೊಳ್ಳ, …

Read More »

ರಾಯಚೂರಿನ ಕೊರೊನಾ ಹಾಟ್‍ಸ್ಪಾಟ್ ಗ್ರಾಮ ಸಂಪೂರ್ಣ ಸೋಂಕು ಮುಕ್ತ

ರಾಯಚೂರು: ಜಿಲ್ಲೆಯ ತಲಮಾರಿ ಗ್ರಾಮದಲ್ಲಿ ಕಳೆದ ತಿಂಗಳು ಬರೋಬ್ಬರಿ 72 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು. ಇದರಿಂದಾಗಿ ಗ್ರಾಮದಲ್ಲಿ ಆತಂಕ ಸೃಷ್ಠಿಯಾಗಿತ್ತು, ಆದರೆ ಗ್ರಾಮಸ್ಥರು, ಜಿಲ್ಲಾಡಳಿತದ ದಿಟ್ಟ ಕ್ರಮದಿಂದಾಗಿ ಈ ಗ್ರಾಮದಲ್ಲಿ ಈಗ ಕೊರೊನಾ ದೂರವಾಗಿದ್ದು ಸೋಂಕು ಮುಕ್ತ ಗ್ರಾಮವಾಗಿದೆ.ಕೊರೊನಾದಿಂದ ಆಸ್ಪತ್ರೆ ಸೇರಿದವರು ಈಗ ಗುಣಮುಖರಾಗಿ ತಮ್ಮ ನಿತ್ಯ ಕೆಲಸದಲ್ಲಿ ತೊಡಗಿದ್ದಾರೆ. ಇಡೀ ಜಿಲ್ಲೆಗೆ ಕೊರೊನಾ ಹಾಟ್‍ಸ್ಪಾಟ್ ಆಗಿದ್ದ ಗ್ರಾಮ ಈಗ ಮಾದರಿಯಾಗಿದೆ. ಗ್ರಾಮದಲ್ಲಿ ನಡೆದ ಐದು ಮದುವೆಗಳಿಂದ ಹದಿನೈದು …

Read More »

ಇಂದು ರಾಜ್ಯದಲ್ಲಿ 8,580 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ ಮೂರು ಲಕ್ಷದ ಗಡಿ ದಾಟಿದೆ. ಇಂದು ರಾಜ್ಯದಲ್ಲಿ 8,580 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆಯಾಗಿದೆ. ಮರಣ ಕೇಕೆ ಮುಂದುವರಿಸಿರುವ ಕೊರೊನಾಗೆ ಇಂದು 133 ಸೋಂಕಿತರು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 5,091ಕ್ಕೆ ಏರಿಕೆ ಕಂಡಿದೆ. ಇಂದು 7,249 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ 83,608 ಸಕ್ರಿಯ ಪ್ರಕರಣಗಳಿವೆ. 760 ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ …

Read More »

ಸಭೆ ಮುಗಿಯುವವರೆಗೂ ಹೋರಾಟ ಹಿಂಪಡೆಯಿರಿ- ರಾಜೇಂದ್ರ ಸಣ್ಣಕ್ಕಿ ಮನವಿ

ಗೋಕಾಕ:  ಪೀರಣವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ನಾಳೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ  12 ಗಂಟೆಗೆ  ಜಿಲ್ಲಾ ಉಸ್ತುವಾರಿ  ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕುರುಬ ಸಮುದಾಯ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಕರ್ನಾಟಕ ಪ್ರದೇಶ  ಕುರುಬ ಸಂಘದ ರಾಜ್ಯಾಧ್ಯಕ್ಷ ರಾಜೇಂದ್ರ ಸಣ್ಣಕ್ಕಿ  ಹೇಳಿದ್ದಾರೆ. ಗೋಕಾಕ ನಗರದಲ್ಲಿ  ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಕುರುಬ ಸಂಘದ ಪದಾಧಿಕಾರಿಗಳ ನೇತೃತ್ವದ ನಿಯೋಗ  ಇಂದು ಜಿಲ್ಲಾ ಉಸ್ತುವಾರಿ ಸಚಿವರನ್ನು …

Read More »

D.C.P.ಸೀಮಾ ಲಾಟ್ಕರ್ ವರ್ಗಾವಣೆ ಬೆಂಗಳೂರಿಗೆ

ಬೆಳಗಾವಿ: ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೀಮಾ ಲಾಟ್ಕರ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿ, ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ನಗರದಲ್ಲಿ ಕೆಲ ವರ್ಷಗಳಿಂದ ಸೇವೆ ಸಲ್ಲಿಸಿದ್ದ ಇವರು, ಅಹಿತಕರ ಘಟನೆ, ಗಲಭೆಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದರು.

Read More »

ಜೂಜಾಡಲು ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಬಂಧನ

ಬೆಂಗಳೂರು: ಜೂಜಾಡುವ ಗೀಳಿಗೆ ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶಂಕರಪ್ಪ (40) ಎಂದು ಗುರುತಿಸಲಾಗಿದೆ. ಶಂಕರಪ್ಪ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಗಿರಿನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದನು. ಆದರೆ ಆರೋಪಿ ಜೂಜಾಡುವ ಚಟ ಹೊಂದಿದ್ದನು. ಒಂದು ದಿನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಮಾರು 15 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದನು. ನಂತರ ಬೆಂಗಳೂರಿನಲ್ಲಿ ಮನೆಗಳವು ಮಾಡಿದ …

Read More »

ಪ್ರೇಮ’ಪಾಶ’ಕ್ಕೆ ಕೊರಳೊಡ್ಡಿದ ಎಂಬಿಎ ಪದವೀಧರೆ

ಉಡುಪಿ: ಪ್ರೇಮ ಪಾಶಕ್ಕೆ ಸಿಲುಕಿ ಎಂಬಿಎ ಪದವೀಧರ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕು ಸಾಯ್ಬರಕಟ್ಟೆ ಸಮೀಪದ ಕಾಜ್ರಳ್ಳಿ ನಿವಾಸಿ ಅನಿಶಾ ಜಿ. ಪೂಜಾರಿ ಆತ್ಮಹತ್ಯೆಗೆ ಶರಣಾದ ಯುವತಿ. ಅನಿಶಾ ಮತ್ತು ಸತೀಶ್ ಶೆಟ್ಟಿ ಕಳೆದ ಐದಾರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಪ್ರೀತಿ ಮದುವೆಯ ಹಂತಕ್ಕೆ ಬಂದಾಗ ಸತೀಶ್ ಮದುವೆಗೆ ಒಪ್ಪಿಲ್ಲ. ಅನಿಶಾ ಪರಿಪರಿಯಾಗಿ ಬೇಡಿದರೂ ಮದುವೆಯಾಗುವ ಮನಸ್ಸು ಮಾಡಲಿಲ್ಲ. ಪ್ರಿಯತಮನಿಗೆ ಕರೆ ಮಾಡಿ ತಾನು ಆತ್ಮಹತ್ಯೆ …

Read More »

ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ದರೋಡೆ

ಬೆಂಗಳೂರು: ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಮರ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಹ್‍ಯಾ ಬಂಧಿತ ಆರೋಪಿಗಳಾಗಿದ್ದು, ಜಾಲಹಳ್ಳಿ ಕೆನರಾ ಬ್ಯಾಂಕ್ ಎಟಿಎಂ ನಿಂದ 27 ಲಕ್ಷ ಹಣ ದರೋಡೆ ಮಾಡಿದ್ದರು. ಆಗಸ್ಟ್ 10ರ ರಾತ್ರಿ ಎಟಿಎಂ ಕೇಂದ್ರ ಒಳಗಿದ್ದ ಮೂವರು ಆರೋಪಿಗಳು ಮೊದಲು ಸಿಸಿಟಿವಿ ಕ್ಯಾಮೆರಾಗೆ ಚೂಯಿಂಗ್ ಗಮ್ ಅಂಟಿಸಿ ಬಳಿಕ ವೈಯರ್ ಕಟ್ ಮಾಡಿ ಕೃತ್ಯ …

Read More »

ಬಂಗಾಳ ರಾಜಕೀಯದಲ್ಲಿ ದಾದಾಗಿರಿ ಆರಂಭ..?ಬಂಗಾಳ ಸಿಎಂ ಆಗ್ತಾರಾ ಗಂಗೂಲಿ..?

ನವದೆಹಲಿ, ಆ.26- ಭಾರತ ಕ್ರಿಕೆಟ್ ತಂಡದ ದಾದಾ ಎಂದೇ ಹೆಸರಾಗಿದ್ದ ಮಾಜಿ ಕ್ಯಾಪ್ಟನ್, ಬಿಸಿಸಿಐ ಅಧ್ಯಕ್ಷ ಸೌರವ್‍ಗಂಗೂಲಿ ಈಗ ರಾಜಕೀಯ ರಂಗದಲ್ಲೂ ತಮ್ಮ ದಾದಾಗಿರಿಯನ್ನು ಆರಂಭಿಸಲು ಹೊರಟಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹಬ್ಬುತ್ತಿದೆ. ಸೌರವ್‍ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಲು ಕೇಂದ್ರ ಗೃಹ ಮಂತ್ರಿ ಅಮಿತ್‍ಷಾ ಅವರೇ ಕಾರಣ ಎಂದು ಹೇಳಲಾಗುತ್ತಿದೆ, ಅಲ್ಲದೆ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜೈಷಾ, ಅಮಿತ್‍ಷಾರ ಪುತ್ರನಾಗಿದ್ದು, ಸೌರವ್ ಹಾಗೂ ಜೈಷಾ ನಡುವೆ ಉತ್ತಮ ಹೊಂದಾಣಿಕೆ ಇರುವುದರಿಂದ ಅವರ ಮೂಲಕವೇ …

Read More »