ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಮೂರು ಲಕ್ಷ ದಾಟಿದ್ದು, ಈ ಹಿನ್ನೆಲೆ ಕೊರೊನಾ ನಿಯಂತ್ರಣ ಸಂಬಂಧ ಸಾರ್ವಜನಿಕರು ಸಲಹೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಮನವಿ ಮಾಡಿರುವ ಅವರು, ಜನರ ಉತ್ತಮ ಸಲಹೆಗಳನ್ನು ಜೂನ್ 28ರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಚರ್ಚಿಸಲು ಸಾಕಷ್ಟು ವಿಚಾರಗಳು ನಿಮ್ಮ ಬಳಿ ಇದೆ. ನಿಮ್ಮ ವಿಚಾರಗಳನ್ನು ಹಂಚಿಕೊಳ್ಳಿ, …
Read More »ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು.
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಕರುನಾಡಿಗೆ ರವಿವಾರ ಕಂಟಕವಾಗಿದೆ. ಇಪ್ಪತ್ತಾಲ್ಕು ಗಂಟೆಯಲ್ಲಿ 176 ಜನರಿಗೆ ಸೋಂಕು ತಗುಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಸಧ್ಯ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇಂದು 312 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ3955 …
Read More »ಅರಭಾವಿ ಶಾಸಕರ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿದ ನೂತನ ರಾಜ್ಯಸಭಾ ಸದಸ್ಯ
ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಂಡಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿರಿಯರ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಮೂರು ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ …
Read More »ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ
ಮುಂಬೈ: ಬಾಲಿವುಡ್ ನ ಖ್ಯಾತ ನಟ ಎಂ.ಎಸ್.ಧೋನಿ ಸಿನಿಮಾ ನಾಯಕ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈ ಬಾಂದ್ರಾ ತಮ್ಮ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಖಾಸಗಿ ವಾಹಿನಿಯ ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. ತದನಂತರ ಬಿಡುಗಡೆಯಾಗಿದ್ದ ‘ಶುದ್ಧ್ …
Read More »ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ 3000 ಚೆಕ್ ವಿತರಣೆ: ಶ್ರೀ ರಮೇಶ ಜಾರಕಿಹೊಳಿ
ಗೋಕಾಕ :ಗೋಕಾಕ ತಾಲೂಕಿನ ಸಹಕಾರ ಸಂಘಗಳು ಸೌಹಾರ್ದ ಸಹಕಾರಿಗಳು ಮತ್ತು ಬೆಳಗಾವಿ ಹಾಲು ಒಕ್ಕೂಟ ಬೆಳಗಾವಿ. ಇವರುಗಳು ಸಂಯುಕ್ತ ಆಶ್ರಯದಲ್ಲಿ ಕೋವಿಡ್ ೧೯ಮಾಹಾಮಾರಿ ವಿರುದ್ಧ ಹೋರಾಡುತ್ತಿರುವ “ಕೋರಾನ ವೈರಿರ್ಯಸಗೆ” ಹಾಗೂ ಆಶಾ ಕಾರ್ಯಕರ್ತೆಯಿರಿಗೆ. ತಲ್ಲಾ ೩೦೦೦ ರಂತೆ ಪ್ರೋತ್ಸಾಹ ಧನ ಸಹಾಯ ಚಕ್ ವಿತರಣಾ ಸಮಾರಂಭಕ್ಕೆ ಶ್ರೀ ಸನ್ಮಾನ ರಮೇಶ್ ಜಾರಕಿಹೂಳಿ ಜಲಸಂಪನ್ಮೂಲ ಸಚಿವರು ಚಾಲನೆ ನೀಡಿದರು. ಇದೆ ಸಮಯದಲ್ಲಿ ಎಲ್ಲಾ ಸಹಕಾರಿ ಸಂಘಗಳು ಕಾರ್ಯದರ್ಶಿಗಳು ಮತ್ತು ಹಾಲು ಉತ್ಪಾದಕರ …
Read More »ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗುತ್ತೇ?; ಕಲಬುರ್ಗಿಯಲ್ಲಿ ಸ್ಪಷ್ಟನೆ ನೀಡಿದ ಸಚಿವ ಕೆ. ಸುಧಾಕರ್
ಕಲಬುರ್ಗಿ (ಜೂ.14): ಜಿಲ್ಲೆಗೆ ಭೇಟಿ ನೀಡಿರುವ ವೈದ್ಯಕೀಯ ಸಚಿವ ಕೆ.ಸುಧಾಕರ್ ಟೆಂಪಲ್ ರನ್ ನಡೆಸಿದರು. ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಸುಧಾಕರ್ ಭೇಟಿ ನೀಡಿದರು. ರಾಜ್ಯ ಪ್ರವಾಸದಲ್ಲಿರುವ ಸುಧಾಕರ್ ಇಂದು ಬೆಳಿಗ್ಗೆಯೇ ದತ್ತಾತ್ರೇಯನ ಪಾದುಕೆ ದರ್ಶನ ಪಡೆದುಕೊಂಡಿದ್ದಾರೆ. ದತ್ತನ ಸನ್ನಿಧಿಯಲ್ಲಿ ಸಚಿವರಿಂದ ವಿಶೇಷ ಪೂಜೆ ನೆರವೇರಿಸಿ ವಿಶ್ವದಿಂದ ಕೊರೊನ ಹೆಮ್ಮಾರಿ ದೂರ ಆಗಲಿ, ಜನ ಈ ಸಂಕಷ್ಟದಿಂದ ದೂರ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವರು, …
Read More »ಕೊರೋನಾ,ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಾಗ ಯಾವ ರೀತಿಯ ಭಯ ಇತ್ತೋ ಆ ಭಯ ಈಗ ನಿರ್ಭಯವಾಗಿದೆ.
ಬೆಳಗಾವಿ :ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಕೊರೋನಾ,ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಾಗ ಯಾವ ರೀತಿಯ ಭಯ ಇತ್ತೋ ಆ ಭಯ ಈಗ ನಿರ್ಭಯವಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ,ಸೊಂಕಿತರ ಸಂಖ್ಯೆ 300 ಗಡಿ ದಾಟಿದರೂ ಜನ ನಿರ್ಭಿತರಾಗಿ ಓಡಾಡುತ್ತಿದ್ದಾರೆ. ಆರಂಭದಲ್ಲಿ,ಮಾಸ್ಕ್ ಹಾಕಿಕೊಂಡು,ಸೈನಿಟೈಸರ್ ಬಾಟಲಿಯನ್ನು ಜೇಬಿನಲ್ಲಿ ಇಟ್ಟು, ಸೋಶಿಯಲ್ ಡಿಸ್ಟನ್ಸ್ ಕಾಯ್ದುಕೊಂಡು, ಓಡಾಡಿದ್ದರು,ದಿನಕಳೆದಂತೆ ಸೊಂಕಿತರ ಸಂಖ್ಯೆ ಹೆಚ್ಚಾದರೂ ಜನರಲ್ಲಿದ್ದ ಭೀತಿ ಮಾತ್ರ ದೂರವಾಗಿದೆ. ಜನ ಆರಂಭದಲ್ಲಿ ಕೊರೋನಾ ಬಂದಿದೆ ಎಂದು ಹೆದರಿದ್ದರು,ಈಗ ಬೆಳಗಾವಿ ಜನರ ಓಡಾಟ,ಧೈರ್ಯ, …
Read More »ನೂತನ ಕೆಪಿಸಿಸಿ ಆಡಿಟೋರಿಯಂನಲ್ಲಿ ಡಿ.ಕೆ ಶಿವಕುಮಾರ್ರಿಂದ ವಿಶೇಷ ಹೋಮ-ಹವನ
ಬೆಂಗಳೂರು: ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಮುಂಜಾನೆ ನೂತನ ಕೆಪಿಸಿಸಿ ಆಡಿಟೋರಿಯಂನಲ್ಲಿ ವಿಶೇಷ ಹೋಮ-ಹವನ ನೆರವೇರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರೋ ಹಿನ್ನೆಲೆಯಲ್ಲಿ ಮುಂದೆ ಯಾವುದೇ ವಿಘ್ನಗಳು ಎದುರಾಗದಂತೆ ಜ್ಯೋತಿಷಿ ಡಾ. ನಾಗರಾಜ್ ಆರಾಧ್ಯ ಹಾಗೂ ಅರ್ಚಕ ಮಹಂತೇಶ್ ಭಟ್ ನೇತೃತ್ವದಲ್ಲಿ ಹೋಮ ನಡೆಸಲಾಗಿದೆ. ಹೋಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭಾಗಿಯಾಗಿದ್ದರು. ಗಣಪತಿ ಹೋಮ, ವಾಸ್ತು ಹೋಮ, ರಕ್ಷೋಜ್ಞ ಹೋಮ, ಭೂವರಹ ಹೋಮ, ನವಗ್ರಹ ಹೋಮ, …
Read More »ಬೆಂಗಳೂರು-ಬೆಳಗಾವಿ ರೈಲು ವೇಳಾಪಟ್ಟಿ ಬದಲಾವಣೆ
ಬೆಂಗಳೂರು: ಬೆಂಗಳೂರು-ಬೆಳಗಾವಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 13ರಿಂದಲೇ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ. ವಾರದಲ್ಲಿ ಮೂರು ದಿನ ಬೆಂಗಳೂರು-ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ರೈಲು ರೈಲು ಸಂಖ್ಯೆ 06598 ಬೆಳಗಾವಿಯಿಂದ ಬೆಳಗ್ಗೆ 8 ಗಂಟೆಗೆ ಪ್ರತಿ ಮಂಗಳವಾರ, ಗುರುವಾರ …
Read More »ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಹೊಸ ಆಶಾಕಿರಣ ಡಿ.ಕೆ.ಶಿವಕುಮಾರ ಪ್ರಮಾಣ ಎಂದು?
ಬೆಂಗಳೂರು – ಭರ್ಜರಿಯಾಗಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಉತ್ಸಾಹದಲ್ಲಿರುವ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ ಭಾನುವಾರ ಮೊದಲ ಹಂತದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಭಾನುವಾರ ಬೆಂಗಳೂರಿನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಹೋಮ, ಹವನ ನಡೆಯಲಿದೆ. ತಮ್ಮ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಗೆ ಯಾವುದೇ ರೀತಿಯ ವಿಘ್ನಗಳು ಎದುರಾಗದಿರಲಿ ಎಂದು ಮತ್ತು ಕಾಂಗ್ರೆಸ್ ಮತ್ತೊಮ್ಮೆ ಉಚ್ಛ್ರಾಯ ಸ್ಥಿತಿಗೆ ತಲುಪಲಿ ಎನ್ನುವ ಆಶಯದೊಂದಿಗೆ ಹೋಮ, ಹವನ ನಡೆಯಲಾಗುತ್ತಿದೆ. ಈಗಾಗಲೆ ಹೋಮ ಕುಂಡಗಳು …
Read More »