Breaking News

ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ

ಬೆಂಗಳೂರು/ಮೈಸೂರು: ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ಸದ್ಯ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದೆ. ಕೋವಿಡ್ ವಾರಿಯರ್ಸ್ ಮೇಲಿನ ಒತ್ತಡ ನಿವಾರಣೆಗೆ ಸರ್ಕಾರ ದೂರು ಪೆಟ್ಟಿಗೆ ವ್ಯವಸ್ಥೆ ಏರ್ಪಡಿಸುವ ಚಿಂತನೆಯಲ್ಲಿದೆ. ಕೊರೊನಾ ವಾರಿಯರ್ಸ್ ಮೇಲಿನ ಒತ್ತಡ ನಿವಾರಣೆಗೆ ಸರ್ಕಾರದ ಕಂಪ್ಲೆಂಟ್ ಬಾಕ್ಸ್ ವ್ಯವಸ್ಥೆ ಮಾಡುವ ಕುರಿತು ಚರ್ಚೆ ನಡೆಸುತ್ತಿದೆ. ಕೊರೊನಾ ಸೇವೆ ನಿರ್ವಹಿಸುತ್ತಿರುವ ಇಲಾಖೆ, ಕಚೇರಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ದೂರು ಪೆಟ್ಟಿಗೆ ಏರ್ಪಡಿಸಿ …

Read More »

ಡಾಕ್ಟರ್ ನಿವೇದಿತಾ ಮತ್ತು ಡಾಕ್ಟರ್ ಸವಿತಾ ಅವರು ಹಾಸನ ರಕ್ತನಿಧಿಗೆ ಬಂದು ಬಿ – ನೆಗೆಟಿವ್ ರಕ್ತವನ್ನು ರಕ್ತದಾನ ಮಾಡಿ ಜೀವ ಉಳಿಸುವ ಕೆಲಸ ಮಾಡಿದ್ದಾರೆ .

ಹಾಸನ: ಇಂದು ಹಾಸನದ ಎಸ್.ಡಿ.ಎಂ.ಎ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಶಂಕ್ರಪ್ಪ ಎಂಬುವರಿಗೆ ರಕ್ತದ ಅಂಶ ಕಡಿಮೆ ಇರುವ ಕಾರಣ ಬಿ – ನೆಗೆಟಿವ್ ರಕ್ತ ಅವಶ್ಯಕತೆ ಇದೆ ಎಂದು ಹಾಸನದಲ್ಲಿ ಇರುವ ಎಲ್ಲಾ ರಕ್ತ ನಿಧಿಗಳಿಗೆ ಭೇಟಿ ನೀಡಿದರು ಕೂಡ ಬಿ – ನೆಗೆಟಿವ್ ರಕ್ತ ದೊರೆಯಲಿಲ್ಲ. ಹಾಗೂ ಶಂಕ್ರಪ್ಪ ಅವರು ಬೆಂಗಳೂರಿನವರಾಗಿದ್ದಾರೆ ಅವರ ಸಂಬಂಧಿಕರು ಕೂಡ ಬೇಗ ಮುಂದೆ ಬರಲು ಆಗದ ಕಾರಣ , ಅಲ್ಲೇ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ಸ್ …

Read More »

ನಾನು ಅಸ್ಸಾಂನ ಬಿಜೆಪಿ ಸಿಎಂ ಅಭ್ಯರ್ಥಿಯಲ್ಲ: ರಂಜನ್ ಗೊಗೊಯ್

ನವದೆಹಲಿ: ನಾನು ಅಸ್ಸಾಂನ ಬಿಜೆಪಿ ಪಕ್ಷದ ಸಿಎಂ ಅಭ್ಯರ್ಥಿಯಲ್ಲ ಎಂದು ಸುಪ್ರೀಂ ಕೋರ್ಟ್‍ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಂದಿನ ವರ್ಷ ಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗುವ ಅವಕಾಶವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ತರುಣ್ ಗೊಗೊಯಿ ಶನಿವಾರ ಬೆಳಗ್ಗೆ ಹೇಳಿದ್ದರು. ಈ ವಿಚಾರವಾಗಿ ಇಂದು ಮಾತನಾಡಿರುವ …

Read More »

ಯಾರು ಆಗ್ತಾರೆ ಕಾಂಗ್ರೆಸ್‍ ನೂತನ ಸಾರಥಿ?

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ನೀಡಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆಗುತ್ತಿರುವ ಹೊತ್ತಲ್ಲೇ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ಇದಕ್ಕೂ ಮುನ್ನವೇ ಹೊಸ ಅಧ್ಯಕ್ಷರನ್ನು ಒಗ್ಗಟ್ಟಾಗಿ ಆಯ್ಕೆ ಮಾಡಿ ಎಂದು ಸೋನಿಯಾ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷವನ್ನು …

Read More »

‘ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ. ಧನ್ಯವಾದ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡಾಲಿ ಎಂದೇ ಖ್ಯಾತಿಯಾಗಿರುವ ನಟ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟಾರ್ ನಟರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಕೊರೊನಾ ಕಾರಣದಿಂದ ಧನಂಜಯ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಅದರಂತೆಯೇ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ನೆಚ್ಚಿನ ನಟನಿಗೆ ಶುಭಾಶಯ …

Read More »

ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಕಾಂಪ್ಲೆಕ್ಸ್ ನಲ್ಲಿದ್ದ ಅಂಗಡಿಗಳ ಬೀಗ ಮುರಿದು ಕಳ್ಳತನ

ಕೋಲಾರ: ನಗರದಲ್ಲಿ ಕೊರೊನಾ ಆತಂಕದ ಮಧ್ಯೆ ಕಳ್ಳರ ಕೈಚಳಕ ಆರಂಭವಾಗಿದ್ದು, ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಕೋಲಾರ ನಗರದ ಅರ್ಬನ್ ಬ್ಯಾಂಕ್ ಕಾಂಪ್ಲೆಕ್ಸ್ ನಲ್ಲಿ ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಕಾಂಪ್ಲೆಕ್ಸ್ ನಲ್ಲಿದ್ದ ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಅದೃಷ್ಟವಶಾತ್ ಅರ್ಬನ್ ಬ್ಯಾಂಕ್ ಹೊರತುಪಡಿಸಿ ಉಳಿದಂತೆ ಮೆಡಿಕಲ್ ಸ್ಟೋರ್, ಡೆಂಟಲ್ ಕ್ಲಿನಿಕ್, ಟೈಲರ್ ಅಂಗಡಿ, ಫೈನಾನ್ಸ್ ಆಫೀಸ್ ಸೇರಿದಂತೆ ಎಂಟು ಅಂಗಡಿಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಅಂಗಡಿಗಳಲ್ಲಿ …

Read More »

ರೈತನ ಮಗನ ಓದಿಸುವ ಜವಾಬ್ದಾರಿಯನ್ನು ವಹಿಸಿಕೊಂಡ ಸುಧಾ ಮೂರ್ತಿಯವರು

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕಿ ಸುಧಾ ಮೂರ್ತಿಯವರು ಜಮಖಂಡಿಯ ಪ್ರತಿಭಾನ್ವಿತ ರೈತನ ಮಗನ ಓದಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಸುಧಾ ಮೂರ್ತಿಯವರು ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಪ್ರವಾಹದಲ್ಲಿ ಸಿಲುಕಿ ನಲುಗಿದ್ದ ಉತ್ತರ ಕರ್ನಾಟಕ ಜನರಿಗೆ ಸಹಾಯ ಮಾಡಿದ್ದರು. ಈಗ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಬಡ ವಿದ್ಯಾರ್ಥಿಗಳ ನೆರವಿಗೆ ನಿಂತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸವಲಗಿ ಗ್ರಾಮದ ರೈತನ ಮಗ ಸಂಜು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ …

Read More »

ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ

ಚೆನ್ನೈ: ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಗೀತಾ ಸಾಹಿತಿ ಕೆ ಕಲ್ಯಾಣ್ ತಿಳಿಸಿದ್ದಾರೆ. ಈ ಸಂಬಂಧ  ಮಾತನಾಡಿದ ಅವರು, ಎಸ್‍ಪಿಬಿ ಬಾಲ್ಯದ ಸ್ನೇಹಿತ ಒಬಯ್ಯ ಅವರ ಜೊತೆ ನಾನು ಮಾತನಾಡಿದೆ. ಎರಡು ಬಾರಿ ಕರೆ ಮಾಡಿ ಮಾಹಿತಿಯನ್ನು ಖಚಿತ ಪಡಿಸಿದೆ. ವರದಿ ನೆಗೆಟಿವ್ ಬಂದಿದೆ ಎಂಬದುನ್ನು ತಿಳಿಸಿದರು ಎಂದು ಮಾಹಿತಿ ನೀಡಿದರು. ಎಸ್‍ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ …

Read More »

ಮುಷ್ಕರ ಹಿಂಪಡೆದ ವೈದ್ಯರಿಗೆ ಸಚಿವರಿಂದ ಧನ್ಯವಾದ

ಬೆಂಗಳೂರು: ಸಿಎಂ ಮನವೊಲಿಕೆ ಹಿನ್ನೆಲೆ ನಂಜನಗೂಡು ಟಿಹೆಚ್‍ಒ ಆತ್ಮಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಮೈಸೂರಿನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯಾಧಿಕಾರಿಗಳು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ. ಸಚಿವ ಡಾ. ಸುಧಾಕರ್, ಶ್ರೀರಾಮುಲು ಮತ್ತು ಸಿಎಂ ಪುತ್ರ ವಿಜಯೇಂದ್ರ ಪ್ರತಿಭಟನೆ ಹಿಂಪಡೆದಿದ್ದಕ್ಕೆ ವೈದ್ಯರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು …

Read More »

ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಗೆ ಪತ್ರ

ಬೆಂಗಳೂರು: ಮಲಪ್ರಭಾ ನದಿ ಪಾತ್ರದಲ್ಲಿ ವ್ಯಾಪಕ ಒತ್ತುವರಿಯಾಗಿದ್ದು, ತೆರವುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದ ಮಲಪ್ರಭಾ ನದಿ ತೀರದಲ್ಲಿ ಮಾನವರ ದುರಾಸೆಯಿಂದ ಹೆಚ್ಚು ಒತ್ತುವರಿಯಾಗಿದೆ. ಇದರ ಪರಿಣಾಮ ಮಲಪ್ರಭಾ ನದಿಯಲ್ಲಿ ಭಾರೀ ಪ್ರವಾಹ ಉಂಟಾಗುತ್ತಿದೆ. ಇದರಿಂದಾಗಿ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಒಟ್ಟು ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗುತ್ತಿದೆ. ಹೀಗಾಗಿ ಮಲಪ್ರಭಾ …

Read More »