ಬೆಂಗಳೂರು: ಇಂದು 204 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಕೊರೊನಾ ಮೂವರನ್ನು ಬಲಿ ಪಡೆದುಕೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 72ಕ್ಕೆ ಏರಿಕೆ ಆಗಿದೆ. 204ರಲ್ಲಿ ಅಂತರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ 157 ಪ್ರಕರಣಗಳಿವೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಯಾದಗಿರಿ 66, ಉಡುಪಿ 22, ಬೆಂಗಳೂರು 17, ಕಲಬುರಗಿ 16, ರಾಯಚೂರು 15, ಬೀದರ್ 14, ಶಿವಮೊಗ್ಗ 10, ದಾವಣಗೆರೆ 9, ಕೋಲಾರ 6, …
Read More »ಕಾಡು ಮೊಲ, ನವಿಲು ಹಿಡಿದು ಟಿಕ್ ಟಾಕ್- ಆರೋಪಿ ಅಂದರ್
ಬಾಗಲಕೋಟೆ: ಕಾಡು ಮೊಲ ಹಾಗೂ ನವಿಲು ಹಿಡಿದು ಟಿಕ್ ಟಾಕ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆ ನಡೆದಿದೆ. ಹುನಗುಂದ ತಾಲೂಕಿನ ಅಮೀನಗಡ ಬಳಿಯ ಮದಾಪುರ ಗ್ರಾಮದ ವಿಠ್ಠಲ್ ವಾಲಿಕಾರ ಬಂಧಿತ ಆರೋಪಿ. ವಿಠ್ಠಲ್ ರಾಷ್ಟ್ರಪಕ್ಷಿಯಾದ ನವಿಲು ಹಾಗೂ ಕಾಡು ಮೊಲವನ್ನು ಬೇಟೆಯಾಡುತ್ತಿದ್ದ. ಅಷ್ಟೇ ಅಲ್ಲದೆ ಅದನ್ನು ಹಿಡಿದು ವಿಡಿಯೋ ಮಾಡಿ ಟಿಕ್ ಟಾಕ್ನಲ್ಲಿ ಅಪ್ಲೋಡ್ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರ …
Read More »ಜಿಂದಾಲ್ನಲ್ಲಿ ಕೊರೊನಾ ರಣಕೇಕೆ- 86 ಮಂದಿ ನೌಕರರಿಗೆ ಸೋಂಕು………..
ಬಳ್ಳಾರಿ: ಮಹಾಮಾರಿ ಕೊರೊನಾ ರಣಕೇಕೆ ಬಳ್ಳಾರಿ ಜಿಲ್ಲೆಯಲ್ಲಿ ಮುಂದುವರೆದಿದ್ದು ಜಿಲ್ಲೆಗೆ ಜಿಂದಾಲ್ ಉಕ್ಕು ಕಂಪನಿ ಕಂಟಕವಾಗಿ ಪರಿಣಮಿಸಿದೆ. ಇಂದು ಒಂದೇ ದಿನ ಜಿಂದಾಲ್ ನಲ್ಲಿ 46 ಪ್ರಕರಣಗಳು ದಾಖಲಾಗುವ ಮೂಲಕ ಜಿಂದಾಲ್ ನೌಕರರಲ್ಲಿ ಈವರೆಗೂ ಕಾಣಿಸಿಕೊಂಡ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆ ಆಗಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ಇರುವ ಜಿಂದಾಲ್ ಸಮೂಹ ಸಂಸ್ಥೆಯಲ್ಲಿ 33 ಸಾವಿರಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಲಾಕ್ಡೌನ್ ಆರಂಭ ಆಗಿನಿಂದಲೂ ಜಿಂದಾಲ್ …
Read More »ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್ನ ಮಹಿಳಾ ಉದ್ಯೋಗಿಗೆ ಕೊರೊನಾ…..
ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಹರಡಿ ಆತಂಕವನ್ನು ಹೆಚ್ಚಿಸಿದೆ. ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ಅದರಲ್ಲೂ ಮಹಿಳೆ ಪ್ರಯಾಣದ ಹಿನ್ನೆಲೆ ಬೆಂಗಳೂರಿನ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸೋಂಕಿತ ಮಹಿಳೆಯು ಶಿವಾಜಿನಗರದ ನಿವಾಸಿಯಾಗಿದ್ದು ಕೊರೊನಾ ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆ ತಪಾಸಣೆ ಮಾಡಿಸಿಕೊಂಡಿದ್ದರು. ಸದ್ಯ ರಿಪೋರ್ಟ್ ಬಂದಿದ್ದು, ಸೋಂಕು ತಗುಲಿರುವುದು …
Read More »ಮಾಧುಸ್ವಾಮಿ ಮತ್ತೆ ಎಡವಟ್ಟು – 6, 7 ತರಗತಿಗೆ ಆನ್ಲೈನ್ ಶಿಕ್ಷಣ ಇದೆ
ಬೆಂಗಳೂರು: ಸುದ್ದಿಗೋಷ್ಠಿ ವೇಳೆ ಮಾಧುಸ್ವಾಮಿ ಮತ್ತೆ ಎಡವಟ್ಟು ಮಾಡಿಕೊಂಡಿದ್ದು, ಈಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿ 6 ಮತ್ತು 7ನೇ ತರಗತಿಗೆ ಆನ್ಲೈನ್ ಶಿಕ್ಷಣ ರದ್ದು ಸಂಬಧ ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸುರೇಶ್ ಕುಮಾರ್, ಕರ್ನಾಟಕ ಸರ್ಕಾರ ಎಲ್ಕೆಜಿ, ಯುಕೆಜಿ, 1 ರಿಂದ 5ನೇ ತರಗತಿಯವರೆಗಿನ ಆನ್ಲೈನ್ ಶಿಕ್ಷಣವನ್ನು ರದ್ಧು ಮಾಡಿದೆ. 6 ಮತ್ತು 7ನೇ ತರಗತಿಯವರೆಗಿನ ಆನ್ಲೈನ್ …
Read More »1 ರಿಂದ 7ನೇ ತರಗತಿಯವರೆಗೂ ಆನ್ಲೈನ್ ಶಿಕ್ಷಣ ಇರುವುದಿಲ್ಲ:ಜೆ.ಸಿ ಮಾಧುಸ್ವಾಮಿ……..
ಬೆಂಗಳೂರು: ರಾಜ್ಯದಲ್ಲಿ 1 ರಿಂದ 7ನೇ ತರಗತಿಯವರೆಗೂ ಆನ್ಲೈನ್ ಶಿಕ್ಷಣ ಇರುವುದಿಲ್ಲ. 8 ಹಾಗೂ 9ನೇ ತರಗತಿಗಳಿ ಆನ್ ಲೈನ್ ಶಿಕ್ಷಣದ ಬಗ್ಗೆ ಇನ್ನೂ ನಿರ್ಧರಿಸಬೇಕಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಮಾಧುಸ್ವಾಮಿ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡುವ ಸಂಬಂಧ ಪ್ರತಿಕ್ರಿಯಿಸಿದರು. 1-7ನೇ ತರಗತಿಯವರೆಗೂ ಮಕ್ಕಳಿಗೆ ಆನ್ಲೈನ್ ಎಜುಕೇಷನ್ ನೀಡದಿರಲು ಸಂಪಟುದಲ್ಲಿ ತೀರ್ಮಾನ ಮಾಡಲಾಗಿದೆ. ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್ಲೈನ್ ಶಿಕ್ಷಣ …
Read More »ಪರೀಕ್ಷೆ ನಡೆಸದೆ ಎಲ್ಲರನ್ನೂ ಪಾಸ್ ಮಾಡುವಂತೆ ವಾಟಾಳ್ ಪ್ರತಿಭಟನೆ …………
ಬೆಂಗಳೂರು, ಜೂ.11- ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಆನ್ಲೈನ್ ತರಗತಿಗಳು ಬೇಡ ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ವಿಧಾನಸೌಧದ ಎದುರು ಇಂದು ವಿನೂತನ ಚಳವಳಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಫಾರ್ಮಸಿ, ಎಂಜಿನಿಯರಿಂಗ್, …
Read More »ಅಧಿಕ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ಸುರೇಶ ಕುಮಾರ್ ವಾರ್ನಿಂಗ್………..
ಬೆಂಗಳೂರು, ಜೂ.11- ಯಾವುದೇ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಶುಲ್ಕ ಸಂಗ್ರಹ ಮಾಡಬಾರದು ಎಂದು ಶಿಕ್ಷಣ ಇಲಾಖೆ ಒಂದೂವರೆ ತಿಂಗಳ ಹಿಂದೆಯೇ ಆದೇಶ ಹೊರಡಿಸಿದೆ. ಈವರೆಗೂ ಯಾವ ಶಾಲೆಯ ವಿರುದ್ಧವೂ ಪೋಷಕರು ದೂರು ನೀಡಿಲ್ಲ. ಒಂದು ವೇಳೆ ದೂರು ಕೇಳಿ ಬಂದಿದ್ದೇಯಾದರೆ ಸರ್ಕಾರ …
Read More »9 ಪರಿಷತ್ ಸದಸ್ಯ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ನೂರಾರು ಆಕಾಂಕ್ಷಿಗಳ ಲಾಬಿ
ಬೆಂಗಳೂರು,ಜೂ.11- ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ ಬೆನ್ನಲ್ಲೇ ಪಕ್ಷದ ಕಚೇರಿ ಬಾಗಿಲು ತಟ್ಟುವವರ ಸಂಖ್ಯೆ ಹೆಚ್ಚಾಗಿದ್ದು, ಜೂ.29ರಂದು ನಡೆಯುವ ಪರಿಷತ್ ಚುನಾವಣೆಗೆ ಆಕಾಂಕ್ಷಿಗಳು ಮುಗಿಬೀಳುತ್ತಿದ್ದಾರೆ. ನಾಮನಿರ್ದೇ ಶನ ಸ್ಥಾನಗಳು ಸೇರಿ ವಿಧಾನಪರಿಷತ್ನ ಒಟ್ಟು 12 ಸದಸ್ಯ ಸ್ಥಾನಗಳು ತೆರವಾಗಲಿದ್ದು, ಬಿಜೆಪಿಗೆ ಸುಲಭವಾಗಿ 9 ಸ್ಥಾನಗಳು ದೊರೆಯಲಿವೆ. 9 ಸದಸ್ಯ ಸ್ಥಾನಕ್ಕಾಗಿ ಸುಮಾರು 100 ಆಕಾಂಕ್ಷಿಗಳು ಲಾಬಿ ನಡೆಸಿದ್ದಾರೆ. ವಿಧಾನಸಭೆಯಲ್ಲಿರುವ ಪಕ್ಷದ ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ …
Read More »ಗೂಗಲ್ ಮ್ಯಾಪ್ನಲ್ಲಿ ಬಿಗ್ಬಿ ಧ್ವನಿ …………..
ಮುಂಬೈ, ಜೂ.11- ಬಾಲಿವುಡ್ನ ಬಿಗ್ ಬಿ ವಾಯ್ಸ್ ಅವರ ಹೆಸರಿನಷ್ಟೇ ಜನಪ್ರಿಯವಾಗಿದ್ದು ಈಗ ಅವರ ಧ್ವನಿಯನ್ನು ಗೂಗಲ್ ಮ್ಯಾಪ್ನಲ್ಲಿ ಅಳವಡಿಸಿಕೊಳ್ಳಲು ಒಪ್ಪಂದಕ್ಕೆ ಮುಂದಾಗಿದೆ. ದೀವಾರ್, ಶೋಲೆ, ಅಮರ್ ಅಕ್ಬರ್ ಅಂಟೋನಿ ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗಳಲ್ಲಿ ನಟಿಸಿ ಬಿಗ್ಟೌನ್ ನಂಬರ್1 ನಟನಾಗಿ ಗುರುತಿಸಿಕೊಂಡಿರುವ ಅಮಿತಾಭ್ಬಚ್ಚನ್ ಅವರ ಧ್ವನಿಯು ಅವರ ಜನಪ್ರಿಯತೆಗೆ ಸಾಥ್ ನೀಡಿದ್ದಾರೆ. ನಟನೆ ಮಾತ್ರವಲ್ಲದೆ ಹಲವು ಸರ್ಕಾರಿ ಹಾಗೂ ಖಾಸಗಿ ಜಾಹೀರಾತಿನಲ್ಲೂ ಗುರುತಿಸಿಕೊಂಡಿರುವ ಅಮಿತಾಭ್ಬಚ್ಚನ್ರ ಧ್ವನಿಯಿಂದಲೇ ತಮ್ಮ ಕಂಪೆನಿಯ …
Read More »