Breaking News

ಎಲ್ಲಾ ವಲಯಗಳಿಗೆ ನ್ಯಾಯ ದೊರಕುವ ಜನಪರ ಬಜೆಟ್

ಎಲ್ಲಾ ವಲಯಗಳಿಗೆ ನ್ಯಾಯ ದೊರಕುವ ಜನಪರ ಬಜೆಟ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಲ್ಲ ವಲಯಗಳನ್ನು ಒಗ್ಗೂಡಿಸಿ, ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಜನಪರ ಬಜೆಟ್ ಮಂಡಿಸಿದ್ದಾರೆ. ಉಚಿತ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಮೀಸಲಾಗಿರುವುದರಿಂದ, ಉಳಿದ ಭಾಗದಲ್ಲಿ ಸಮತೋಲನ ಕಾಯ್ದುಕೊಂಡು ಎಲ್ಲ ವರ್ಗಗಳಿಗೂ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಒಳಗೊಂಡ ಬೆಳಗಾವಿ ಜಿಲ್ಲೆಯ ಅಭಿವೃದ್ದಿಗೆ ವಿಶೇಷ ಒತ್ತು: ನೀರಾವರಿ ಮತ್ತು ಜಲ ಸಂರಕ್ಷಣೆ ಯೋಜನೆಗಳಿಗೆ ವಿಶೇಷ ಅನುದಾನ …

Read More »

ಶ್ರೀ ಮಹಾಲಕ್ಷ್ಮೀ ದೇವಿಯ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ, ವಾಸ್ತುಶಾಂತಿ,

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಅತ್ತಿಹಾಳ‌ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿಯ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ, ವಾಸ್ತುಶಾಂತಿ, ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದೆ. ಈ ವೇಳೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಭೇಟಿಯನ್ನು ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿದ.

Read More »

೧೬ನೇ ಬಜೆಟ್ ಸಮತೋಲನದಿಂದ ಕೂಡಿದ್ದು, ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ: ಚನ್ನರಾಜ್ ಹಟ್ಟಿಹೊಳಿ

ಸಮತೋಲನದಿಂದ ಕೂಡಿರುವ ಬಜೆಟ್: ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ* ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿದ ದಾಖಲೆಯ ೧೬ನೇ ಬಜೆಟ್ ಸಮತೋಲನದಿಂದ ಕೂಡಿದ್ದು, ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ. ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಎಲ್ಲ ಕ್ಷೇತ್ರಗಳನ್ನೂ ಸಮನಾಗಿ ನೋಡಲಾಗಿದೆ. ಇದೊಂದು ಅಪರೂಪದ ಬಜೆಟ್ ಆಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ …

Read More »

ಶಿವಶ್ರೀ ಕೈಹಿಡಿದ ಸಂಸದ ತೇಜಸ್ವಿ

ಬೆಂಗಳೂರು: ಬಿಜೆಪಿ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಮತ್ತು ಪ್ರಸಿದ್ಧ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಅವರ ವಿವಾಹ ಅದ್ಧೂರಿಯಾಗಿ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಗುರುವಾರ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಜೋಡಿ ಸಪ್ತಪದಿ ತುಳಿಯಿತು. ಇಂದು ಬೆಳಗ್ಗೆ 10.45ರ ತುಲಾ ಲಗ್ನದಲ್ಲಿ ಶಿವಶ್ರಿ ಅವರ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯ ಧಾರಣೆ ಮಾಡುವ ಮೂಲಕ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು.ವಿಜೃಂಭಣೆಯ ಮದುವೆ ಸಮಾರಂಭಕ್ಕೆ …

Read More »

ಕಾರವಾರ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆಶರಣಪ್ರಕಾಶ್ ಪಾಟೀಲ್:

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದರು. ಗುರುವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್‌ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಇಬ್ಬರು ವೈದ್ಯರು ಮಾತ್ರ …

Read More »

ಪ್ರಸಕ್ತ ವರ್ಷದ ರಾಜ್ಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಹುಬ್ಬಳ್ಳಿ ಕೆಎಂಸಿಆರ್​ಐ?

ಹುಬ್ಬಳ್ಳಿ: ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್‌ಐ) ಉತ್ತರ ಕರ್ನಾಟಕ ಭಾಗದ ಸಂಜೀವಿನಿ. ಎಂಟತ್ತು ಜಿಲ್ಲೆಗಳ ರೋಗಿಗಳು ಹೆಚ್ಚಿನ ಚಿಕಿತ್ಸೆಗೆ ಕೆಎಂಸಿಆರ್​ಐಯನ್ನು ಆಶ್ರಯಿಸಿದ್ದಾರೆ. ಆದರೆ, ಸರ್ಕಾರದಿಂದ ಸಿಗಬೇಕಾದ ಅನುದಾನದ ಕೊರತೆ ಸಂಸ್ಥೆಗೆ ಕಾಡುತ್ತಿದೆ. ಹೀಗಾಗಿ ಪ್ರಸಕ್ತ ವರ್ಷದ ರಾಜ್ಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, 515 ಕೋಟಿ ರೂ. ಅಗತ್ಯ ಆರ್ಥಿಕತೆಯ ಬೇಡಿಕೆ ಮಂಡಿಸಿದೆ. ರಾಜ್ಯ ಸರ್ಕಾರಕ್ಕೆ ಅನುದಾನ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ರವಾನಿಸಿದ್ದು, …

Read More »

ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟದೇ ಇರುವುದಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯ ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿ ಆಹ್ವಾನದ ಮೇರೆಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ, ಅಹಿಂದ ಹೆಸರಿನೊಂದಿಗೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ …

Read More »

ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಬಗ್ಗೆ ವಿಡಿಯೋ: ಯೂಟ್ಯೂಬರ್ ಸಮೀರ್​ಗೆ ಜಾರಿಯಾಗಿದ್ದ ನೋಟಿಸ್​ಗೆ ತಡೆ

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಯೂಟ್ಯೂಬ್​​ನಲ್ಲಿ ವಿಡಿಯೋ ಪೋಸ್ಟ್​ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್​ ಸಮೀರ್ ಎಂ.ಡಿ.​ ಎಂಬವರಿಗೆ ಪೊಲೀಸರು ಜಾರಿ ಮಾಡಿದ್ದ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಎಫ್​ಐಆರ್​ ನೀಡದೆಯೂ ವಿಚಾರಣೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್​ ಪ್ರಶ್ನಿಸಿ ಸಮೀರ್​ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. …

Read More »

ಸಬ್ ರಿಜಿಸ್ಟ್ರಾರ್​ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

ದೊಡ್ಡಬಳ್ಳಾಪುರ (ಬೆಂಗಳೂರು) : ಸರ್ಕಾರಿ ಕಚೇರಿಗಳಲ್ಲಿ ಆನ್​​ಲೈನ್ ಸೇವೆಯ ನಂತರ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆಯೇ? ಎಂಬ ಬಗ್ಗೆ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ, ರಾಜ್ಯದ 25ಕ್ಕೂ ಹೆಚ್ಚು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಇಂದು ಮಧ್ಯಾಹ್ನ 3 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಂತರ ದಾಖಲೆಗಳ ಪರಿಶೀಲನೆಗೆ ಮುಂದಾಗಿದೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವಿಚಾರದ ಬಗ್ಗೆ …

Read More »

ಮಚ್ಚು ಹಿಡಿದು ಅಡುಗೆ ಭಟ್ಟನನ್ನ ಅಟ್ಟಾಡಿಸಿದ ಹೊಟೇಲ್ ಮ್ಯಾನೇಜರ್

ಬೆಂಗಳೂರು, ಮಾರ್ಚ್​ 06: ಹೋಟೆಲ್​​ನಲ್ಲಿ ಮಚ್ಚು ಹಿಡಿದು ಅಡಿಗೆ ಭಟ್ಟನನ್ನ ಮ್ಯಾನೇಜರ್ (manager)​ ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ  (Attack) ಮಾಡಿರುವಂತಹ ಘಟನೆ ಆರ್​​ಟಿ ನಗರದ 80 ಅಡಿ ರಸ್ತೆಯಲ್ಲಿನ ಹೋಟೆಲ್ ಒಂದರಲ್ಲಿ ನಡೆದಿದೆ. ಮಟನ್ ಕಡಿಯುವ ಮಚ್ಚಿನಿಂದ ಸಿಬ್ಬಂದಿ ಅಡುಗೆ ಭಟ್ಟನ ಗುರುಮೂರ್ತಿ ಮೇಲೆ ಮ್ಯಾನೇಜರ್ ಶಜಾದ್ ಅಲಿ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ. ಸದ್ಯ ಘಟನೆ ಬಗ್ಗೆ ಪೊಲೀಸರು (police) ಮಾಹಿತಿ ಪಡೆದುಕೊಂಡಿದ್ದಾರೆ. ಹುಡುಗಿ ವಿಚಾರಕ್ಕೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರ್​​ಟಿ ನಗರ ಠಾಣೆಯಲ್ಲಿ …

Read More »