ಲಾಕ್‍ಡೌನ್ ನಿರ್ಧಾರದಿಂದ ಕೊರೊನಾ ನಿಯಂತ್ರಣವಾಗುತ್ತಾ? ಗ್ರಾಫ್ ಏನು ಹೇಳುತ್ತೆ?

ಬೆಂಗಳೂರು: 21 ದಿನಗಳ ಲಾಕ್‍ಡೌನ್ ನಿಂದ ಕೊರೊನಾ ನಿಯಂತ್ರಿಸಬಹುದೇ? ಕೊರೊನಾ ನಿಯಂತ್ರಣವಾಗದೇ ಇದ್ದರೆ ಮತ್ತೆ ಲಾಕ್‍ಡೌನ್ ಇರುತ್ತಾ ಈ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಣ್ಣ ಶುಭ ಸುದ್ದಿ ಸಿಕ್ಕಿದೆ. ಎರಡು ದಿನಗಳಿಂದ ಕೊರೊನಾ ಪ್ರಕರಣಗಳು ಕಡಿಮೆಯಾಗಿದೆ. ಸಾಧಾರಣವಾಗಿ ಕೊರೊನಾ ಕಂಡು ಬಂದ ಮೊದಲ ಎರಡು ವಾರದಲ್ಲಿ ಹರಡುವ ತೀವ್ರತೆ ಕಡಿಮೆ ಇರುತ್ತದೆ. ಮೂರು, ನಾಲ್ಕು ವಾರದಲ್ಲಿ ಸಂಖ್ಯೆ ದುಪ್ಪಟ್ಟು ಆಗುತ್ತದೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಏರುತ್ತಲೇ ಹೋಗುತ್ತದೆ. ಶುಭ …

Read More »

ಬೈಲಹೊಂಗಲ ತಾಲೂಕಿನಲ್ಲಿರುವ ಅಕ್ರಮ ಕಳ್ಳಭಟ್ಟಿ ಅಡ್ಡಾಗಳ ಮೇಲೆ ದಾಳಿ

ಬೈಲಹೊಂಗಲ ತಾಲೂಕಿನಲ್ಲಿರುವ ಅಕ್ರಮ ಕಳ್ಳಭಟ್ಟಿ ಅಡ್ಡಾಗಳ ಮೇಲೆ ದಾಳಿ ನೊವೆಲ್ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಿಂದ ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹಾಗೂ ಈ ಹಿಂದೆ ಇದ್ದ ಕಳ್ಳಭಟ್ಟಿ ಕೇಂದ್ರಗಳ ಅಡ್ಡಾಗಳಾದ ದೇಶನೂರ, ಹೊಗರ್ತಿ,ಕೊಳದೂರ, ಮೊಹರೆ,ಸುತಗಟ್ಟಿ ವಟಬಾಳ ಹಳ್ಳಿಗಳ ಮೇಲೆ ಮೇಲಿಂದ ಮೇಲೆ ದಾಳಿ ಮಾಡಲಾಗುತ್ತಿದೆ. ಎಂದು ಬೈಲಹೊಂಗಲ ಅಬಕಾರಿ ನೀರಿಕ್ಷಕರಾದ ರವಿ.ಎಂ ಮುರಗೋಡ ಇವರು ತಿಳಿಸಿದರು. ದಾಳಿಯ ವಿವರಣೆ:- ಮಾರ್ಚ್ ೨೪ ರಂದು ಹೊಗರ್ತಿ ಕ್ರಾಸ್ ಬಳಿ …

Read More »

ಓರ್ವನಿಂದ 9 ಮಂದಿಗೆ ಕೊರೊನಾ – ನಂಜನಗೂಡು ಸ್ತಬ್ಧ, ಮನೆಗಳಿಗೆ ಆಹಾರ ವಿತರಣೆ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12ಕ್ಕೆ ಏರಿದ್ದು, ಒಂದೇ ದಿನದಲ್ಲಿ 5 ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದ ಹಿನ್ನೆಲೆ ನಂಜನಗೂಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎರಡನೇ ದಿನವೂ ನಾಕಾಬಂದಿ ಮುಂದುವರೆದಿದೆ. ನಂಜನಗೂಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್ ಆಗಿವೆ. ಮೈಸೂರು-ಊಟಿ, ಕೇರಳ ಮತ್ತು ತಮಿಳುನಾಡು ಸಂಪರ್ಕ ಕಲ್ಪಿಸುವ ಹೆದ್ದಾರಿ ಸೇರಿದಂತೆ ಪಟ್ಟಣಕ್ಕೆ ನಾಲ್ಕು ಕಡೆಯಿಂದ ಸಂಪರ್ಕಿಸೋ ಎಲ್ಲಾ ಮುಖ್ಯ ರಸ್ತೆಗಳನ್ನು ಸಹ ಬಂದ್ ಮಾಡಲಾಗಿದೆ. ಪಾಸ್ ಹೊಂದಿರುವ …

Read More »

ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ

ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ

Read More »

ಪ್ರಧಾನಿ ಹೆಸರಲ್ಲಿ ನಕಲಿ ಖಾತೆ – ಕೊರೊನಾ ಸೋಂಕಿತರ ನೆರವಿಗೆ ಸ್ವೀಕರಿಸುತ್ತಿರೋ ದೇಣಿಗೆ ಲಪಟಾಯಿಸಲು ಯತ್ನ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಮುಂದಾಗಿತ್ತು. ಆದರೆ ಕೇಂದ್ರ ಸರ್ಕಾರದ ಮಾದರಿಯಲ್ಲೇ ನಕಲಿ ಖಾತೆ ಸೃಷ್ಟಿಸಿ ಹಣ ಕೊಳ್ಳೆ ಹೊಡೆಯಲು ಪ್ರಯತ್ನಿಸಿದ ಘಟನೆ ನಡೆದಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಕೊರೊನಾ ಸೋಂಕು ಪೀಡಿತರ ನೆರವುಗಾಗಿ ಸಾರ್ವಜನಿಕರು ದೇಣಿಗೆ ನೀಡುವಂತೆ …

Read More »

ನೀವು ಮನೆಯಲ್ಲೇ ಇದ್ದರೆ ಬೇಗ ಲಾಕ್‍ಡೌನ್ ಮುಗಿಯುತ್ತೆ: ಸಿಎಂ ಮನವಿ

ಬೆಂಗಳೂರು: ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಯಡಿಯೂರಪ್ಪ ಜನತೆಯಲ್ಲಿ ಮನವಿ ಮಾಡಿದ್ದರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಲಾಕ್‍ಡೌನ್ ಅವದಿ ಮುಂದುವರೆಯುವುದಿಲ್ಲ. ಅದೂ ನಾವು ಅದನ್ನು ಹೇಗೆ ಕಟ್ಟುನಿಟ್ಟಿನ ಪಾಲನೆ ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ನಾಡಿನ ಜನತೆ ಲಾಕ್‍ಡೌನ್ ಅನ್ನು ನಮ್ಮೆಲ್ಲರ ಒಳಿತಿಗಾಗಿ ಕಟ್ಟುನಿಟ್ಟಾಗಿ ಪಾಲನೆ ಮಾಡಿ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿರುತ್ತದೆ. ಕೊರೊನಾ …

Read More »

ರೈತರು ಬೆಳೆದಿರುವ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಿ: ಭೀಮಪ್ಪ ಗಡಾದ

ಮೂಡಲಗಿ: ರೈತರು ಬೆಳೆದಿರುವ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಿ ಖರೀದಿಸುವ ಸಲುವಾಗಿ, ಪ್ರತಿ ತಾಲೂಕು ಹೋಬಳಿ ಮಟ್ಟದಲ್ಲಿ ಸರ್ಕಾರದಿಂದಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವುದರ ಮೂಲಕ ಸಂಭವಿಸಬಹುದಾದ ರೈತರ ಆತ್ಮಹತ್ಯೆಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮೀತಿ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರವು ಲಾಕ್‍ಡೌನ್ ಜಾರಿಗೆ ಮಾಡಿದೆ. ಜಿಲ್ಲೆಯ …

Read More »

ಬೆಂಗಳೂರು: ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು.: ಬಸವರಾಜ್ ಬೊಮ್ಮಾಯಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಕ್ರಮವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು. ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು. ಯಾವುದೇ …

Read More »

ಉದ್ದೇಶಪೂರ್ವಕವಾಗಿ ಲಾಠಿ ಬೀಸಬಾರದು: ಮಹಾಂತೇಶ ಕವಟಗಿಮಠ

ಚಿಕ್ಕೋಡಿ : ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿಯೂ ಎಲ್ಲ ಜನರಿಗೂ ಮಾಸ್ಕ ವಿತರಿಸುವ ಮೂಲಕ ಸಾಮಾಜಿಕ ಅಂತರಕಾಯ್ದುಕೊಳ್ಳುವಂತೆ ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಧಿಕಾರಿಗಳು ಮಾಡಬೇಕು ಎಂದು ವಿಧಾನಪರಿಷತ್‍ನ ಸರಕಾರಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ಪಟ್ಟಣದ ಮಿನಿವಿಧಾನ ಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳಸಭೆಯಲ್ಲಿ ಮಾತನಾಡಿದ ಅವರು, ತರಕಾರಿ ಮಾರಾಟಕ್ಕೆ ಹೋಗುವವರು ಹಾಗೂ ಅಟೋದವರು ಕಡ್ಡಾಯವಾಗಿ ಮಾಸ್ಕ ಹಾಕಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು …

Read More »

ಹುಬ್ಬಳ್ಳಿ:ಮದ್ಯ ಸಿಗದೇ ಮತ್ತೊಬ್ಬ ವ್ಯಕ್ತಿ ನೇಣಿಗೆ ಶರಣು..!

ಹುಬ್ಬಳ್ಳಿ: ಮದ್ಯ ಸಿಗುತ್ತಿಲ್ಲಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊಸೂರಿನ ಗಣೇಶ ಪಾರ್ಕ್ ನಲ್ಲಿ ನಡೆದಿದೆ. ಧಾರವಾಡ ಮೂಲದ ಉಮೇಶ ಹಡಪದ (46) ಮೃತ ವ್ಯಕ್ತಿ. ಈತ 15 ದಿನಗಳ ಹಿಂದೆ ಗಣೇಶ ಪಾರ್ಕ್ನ ಮನೆಯೊಂದರಲ್ಲಿವಾಚ್ಮನ್‌ ಕೆಲಸಕ್ಕೆ ಸೇರಿಕೊಂಡಿದ್ದ. ಒಂದು ವಾರದಿಂದ ಮದ್ಯದಂಗಡಿ ಬಂದ್‌ ಆಗಿದ್ದು, 5 ದಿನದಿಂದ ಮದ್ಯ ಸಿಕ್ಕಿರಲಿಲ್ಲ. ಮದ್ಯ ಸಿಗದೇ ಕಂಗಾಲಾಗಿ ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. …

Read More »