Breaking News

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ, ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ, ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಜೂನ್ 7ರ ಮಧ್ಯರಾತ್ರಿ ಕರೆ ಮಾಡಿದ ಅಪರಿಚಿತ, ಜೀವ ಬೆದರಿಕೆ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪೊಲೀಸ್ ಮಹಾ ನಿರ್ದೆಶಕ ಪ್ರವೀಣ್ ಸೂದ್ ಅವರಿಗೆ ದೂರು ಸಲ್ಲಿಸಿದ್ದಾರೆ. ಅಪರಿಚಿತ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಿ …

Read More »

ಜ್ಯೋತಿರಾದಿತ್ಯ ಸಿಂಧಿಯಾ, ತಾಯಿ ಮಾಧವಿ ರಾಜೇಗೆ ಕೊರೊನಾ ಸೋಂಕು…….

ಭೋಪಾಲ್: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಸಿಂಧಿಯಾರ ಪತ್ನಿ, ಮಗ ಮತ್ತು ಮಗಳ ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸಿಂಧಿಯಾ ತಮ್ಮ ತಾಯಿಯ ಜೊತೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಐದು ದಿನಗಳ ಹಿಂದೆ ಗ್ವಾಲಿಯರ್ ನಲ್ಲಿ ಸಿಂಧಿಯಾ, ತಾಯಿ ಮಾಧವಿ ರಾಜೇ, ಪತ್ನಿ ಪ್ರಿಯದರ್ಶಿನಿ, ಮಗಳು ಅನನ್ಯಾ …

Read More »

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಸರ್ಕಾರದಿಂದ ಅನುಮತಿ ನಿರಾಕರಣೆ……….

ಬೆಂಗಳೂರು: ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೊರೊನಾ ಲಾಕ್‍ಡೌನ್ ಕಾರಣ ನೀಡಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ. ಜೂನ್ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ 150 ನಾಯಕರ ಸಮ್ಮುಖದಲ್ಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ಡಿಕೆ ಶಿವಕುಮಾರ್ ಮುಂದಾಗಿದ್ದರು. ಈ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರದ ಅನುಮತಿ ಕೇಳಿತ್ತು. ಡಿಕೆ ಶಿವಕುಮಾರ್ ಅವರೇ ಸಿಎಂ ಯಡಿಯೂರಪ್ಪನವರ ಬಳಿ ಅನುಮತಿ ಕೇಳಿದ್ದರು. ಜೂನ್ …

Read More »

ಜೂನ್ 10 ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಾರಂಭ……

ಧಾರವಾಡ: ಜೂನ್ 10 ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಾರಂಭದ ದಿನವಾದ್ದರಿಂದ ಆ ದಿನ ದೇಶದ ಎಲ್ಲ ಹಿಂದೂ ಧರ್ಮದವರು ದೇವಸ್ಥಾನಗಳಲ್ಲಿ 500 ಬಾರಿ ಶ್ರೀರಾಮ ಜಯ ರಾಮ, ಜೈ ಜೈ ರಾಮ್ ಎಂಬ ಮಂತ್ರವನ್ನು ಜಪಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.   ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಸುಮಾರು 500 ವರ್ಷಗಳ ನಂತರ ಶ್ರೀರಾಮನ ಮಂದಿರ ತನ್ನ ಮೂಲ ಸ್ಥಳದಲ್ಲಿ …

Read More »

ಬೆಳಗಾವಿ -:ಪ್ರವಾಸಿಮಂದಿರದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವರಿಂದ ಸಭೆ

ಬೆಳಗಾವಿ -: ಕೋವಿಡ್-೧೯ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೇಕಾರ ಕುಟುಂಬಗಳಿಂದ ನೇರವಾಗಿ ಸೀರೆ ಖರೀದಿಸುವುದು ಹಾಗೂ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ ಭರವಸೆ ನೀಡಿದರು. ಪ್ರವಾಸಿಮಂದಿರದಲ್ಲಿ ಮಂಗಳವಾರ (ಜೂ.9) ನಡೆದ ನೇಕಾರರ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಲಿಗೆ ಯಂತ್ರ ಖರೀದಿ, ವಿದ್ಯುತ್ ಮಗ್ಗಗಳ ಅಳವಡಿಕೆ …

Read More »

ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸರಕಾರಕ್ಕೆ ಮನವಿ………….

ಚಿಕ್ಕೋಡಿ:  ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸುಪ್ರಿಂಕೋರ್ಟ್ ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸಲು ಸರಕಾರ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ನೀಡುವಂತೆ ಒತ್ತಾಯಿಸಿ ಮಂಗಳವಾರ ಮೂಲ ಪರಿಶಿಷ್ಟ ಜಾತಿಗಳ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಲಂಬಾಣಿ(ಬಂಜಾರ), ಭೋವಿ, ಕೊರಚ ಕೊರಮ ಮುಂತಾದ ಸಮುದಾಯದ ಜನರನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆಯಲು ಸುಪ್ರಿಂಕೋರ್ಟ್ ಆದೇಶ ಮಾಡಿರುತ್ತದೆ. ಆದ್ದರಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಸುಪ್ರಿಂಕೋರ್ಟ್ ಆದೇಶ ಅನುಷ್ಠಾನಗೊಳಿಸಲು ಸೂಚನೆ ನೀಡಬೇಕು.ಸುಪ್ರಿಂಕೋರ್ಟಿಗೆ ಅನುಪಾಲನ …

Read More »

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.  ರಾಜ್ಯಸಭೆ ಟಿಕೇಟ್ ವಿಚಾರವಾಗಿ ನಡೆದ ಬೆಳಗಾವಿ ಜಿಲ್ಲೆಯ ನಾಯಕರ ಗುದ್ದಾಟ ರಾಜ್ಯ ರಾಜಕೀಯವನ್ನೆ ತಲ್ಲಣಗೊಳಿಸುವ ಮಟ್ಟಿಗೆ ಬಂದಿತ್ತು. ಅಂತಿಮವಾಗಿ ಇಬ್ಬರ ಜಗಳಗಳಲ್ಲಿ ಮೂರನೇಯವರು ಟಿಕೆಟ್ ಗಿಟ್ಟಿಸಿಕೊಂಡಿದ್ದು ಆಯಿತು.  ಈಗ ರಾಜ್ಯಸಭೆ ಟಿಕೇಟ್ ವಂಚಿತರಾಗಿರುವ ರಮೇಶ ಕತ್ತಿ ಮತ್ತು ಅವರಿಗಾಗಿ ತೀವ್ರ ಲಾಬಿ ನಡೆಸಿದ್ದ ಸಹೋದರ ಉಮೇಶ ಕತ್ತಿ ಅವರಿಗೆ ಇಂದು ನಳೀನ್ …

Read More »

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಈರಣ್ಣಾ ಕಡಾಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. 

ಬೆಂಗಳೂರು: ಜೂ. 19 ರಂದು ನಡೆಯಲಿರುವ  ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಈರಣ್ಣಾ ಕಡಾಡಿ ಅವರು ಇಂದು ನಾಮಪತ್ರ ಸಲ್ಲಿಸಿದರು.  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ , ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಸಮ್ಮುಖದಲ್ಲಿ ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ  ಎಂ. ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.   ಇದೇ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ …

Read More »

15 ದಿನದಲ್ಲಿ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸಿಕೊಡಿ : ಸುಪ್ರೀಂ ಆದೇಶ

ನವದೆಹಲಿ,ಜೂ.9- ದೇಶಾದ್ಯಂತ ಲಾಕ್‍ಡೌನ್ ಜಾರಿಯಾದ ಪರಿಣಾಮ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ 15 ದಿನದಲ್ಲಿ ಕಳುಹಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಲಸೆ ಕಾರ್ಮಿಕರಿಗೆ ಉದ್ಯೋಗ ಯೋಜನೆ ಹಾಗೂ ನಿರಾಶ್ರಿತರ ತಾಣಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್‍ಕೃಷ್ಣ ಕೌಲ್ ಮತ್ತು ಎಂ.ಆರ್.ಷಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ …

Read More »

ಮುಂಬೈಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡಲು ಸಿಎಂ ಗಮನಕ್ಕೆ ತರುತ್ತೇವೆ: ಸಚಿವ ಗೋಪಾಲಯ್ಯ

ಹಾಸನ: ಬಾಂಬೆಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಹೊರರಾಜ್ಯದಿಂದ ಬಂದವರ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಮುಂಬೈಯಿಂದ ಬಂದವರನ್ನು ಕ್ವಾರಂಟೈನ್‍ನಲ್ಲಿ ಇಟ್ಟು ನೆಗೆಟಿವ್ ವರದಿ ಬಂದ ನಂತರವೇ ಮನೆಗೆ ಕಳುಹಿಸಲಾಗುವುದು. ಹೊರರಾಜ್ಯದಿಂದ ಬಂದವರನ್ನು ಈಗ ಏಳು ದಿನ ಕ್ವಾರಂಟೈನ್ ಮಾಡಲಾಗುತ್ತಿದೆ. …

Read More »