Breaking News

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.74 ಕೋಟಿ ಮೌಲ್ಯದ 207 ಐಫೋನ್ ವಶ

ಬೆಂಗಳೂರು:ಯುಎಸ್ ದಂಪತಿಯಿಂದ ಅಪಾರ ಮೊತ್ತದ 207 ಐಫೋನ್ ಗಳನ್ನು ವಶಪಡಿಸಿಕೊಂಡಿರವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು. ಈವರೆಗೂ ವಶಪಡಿಸಿಕೊಂಡಿರುವ ಫೋನ್ ಸಂಬಂಧಿ ಪ್ರಕರಣಗಳಲ್ಲಿ ಇದು ಅತಿ ದೊಡ್ಡ ಪ್ರಕರಣ ಎಂದು ಪರಿಗಣಿಸಲಾಗಿದ್ದು, ಇದರಲ್ಲಿ ಫೋನ್ಗಳು ಐಫೋನ್ 12 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಮಾದರಿಗಳಾಗಿದ್ದವು ಮತ್ತು ಅವುಗಳ ಒಟ್ಟು ಮೌಲ್ಯ 2, 74,19,400 ರೂ. ಎಂದು ಹೇಳಲಾಗುತ್ತಿದೆ. ಅಷ್ಟು ಮಾತ್ರವಲ್ಲದೆ, ರಸ್ತೆ ಮೂಲಕ ಹೈದರಾಬಾದ್‌ಗೆ ಸಾಗಿಸಲು ವಿಮಾನ …

Read More »

ಯಾರಿಗೂ ವಂಚನೆ ಮಾಡಿಲ್ಲ – ಐ ವಿಲ್ ಕಮ್ ಬ್ಯಾಕ್ ಅಗೈನ್ – ಬಿ.ಆರ್ ಶೆಟ್ಟಿ

ಉಡುಪಿ ಮಾರ್ಚ್ 1: ಸಂಯುಕ್ತ ಅರಬ್‌ ಸಂಸ್ಥಾನದಲ್ಲಿ ಎನ್‌ಎಂಸಿ ಆರೋಗ್ಯ ಸೇವಾ ಸಂಸ್ಥೆಯ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್‌. ಶೆಟ್ಟಿ ಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್‌ನ ಕೋರ್ಟ್‌ ಆದೇಶ ನೀಡಿದ ನಂತರ ಮೊದಲ ಬಾರಿಗೆ ಬಿ.ಆರ್ ಶೆಟ್ಟಿ ಮಾಧ್ಯಮಗಳ ಮುಂದೆ ಬಂದಿದ್ದು, ಜನರ ಆಶಿರ್ವಾದದಿಂದ ನಾನು ಎಲ್ಲಾ ಸಮಸ್ಯೆಗಳಿಂದ ಹೊರ ಬರುತ್ತೆನೆ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವ್ಯವಹಾರದಲ್ಲಿ ನಾನು ಕೆಲವು …

Read More »

ಬನವಾಸಿಯ ಸೊಬಗನೊಮ್ಮೆ ನೋಡಿ ಬನ್ನಿ

ಗಂಧದಗುಡಿ ಎಂದೇ ಕರೆಯಲ್ಪಡುತ್ತಿದ್ದ ಕರ್ನಾಟಕದಲ್ಲಿ ಅನೇಕ ರಾಜಮನೆತನಗಳು ಆಳ್ವಿಕೆ ನಡೆಸಿವೆ. ಅದೇ ರೀತಿ ಕದಂಬ ರಾಜ್ಯವನ್ನು ಕರ್ನಾಟಕದ ಮೊದಲ ರಾಜ್ಯವೆಂದು, ಕದಂಬರನ್ನು ಮೊದಲ ಕನ್ನಡಿಗ ರಾಜರೆಂದು ಹೇಳಲಾಗುತ್ತದೆ. ಮಯೂರ ವರ್ಮ ಕದಂಬ ರಾಜ್ಯದ ಸಂಸ್ಥಾಪಕನಾಗಿದ್ದು, ಈತನ ರಾಜಧಾನಿ ಬನವಾಸಿಯಾಗಿತ್ತು. ಬನವಾಸಿ ಶಿರಸಿಯಿಂದ ಸೊರಬಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಸುಮಾರು 30 ಕಿಲೋ ಮೀಟರ್ ದೂರದಲ್ಲಿದೆ. ಅಶೋಕ ಚಕ್ರವರ್ತಿ ಬೌದ್ಧ ಧರ್ಮ ಪ್ರಸಾರಕ್ಕೆ ಕಳುಹಿಸಿದ್ದ ಬೌದ್ಧಭಿಕ್ಷು ಒಬ್ಬರು ಇಲ್ಲಿಗೆ ಭೇಟಿ ನೀಡಿದ್ದರೆಂದು ಮಹಾವಂಶ …

Read More »

100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಆಕ್ರೋಶ ಜಾಥಾ

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಮತ್ತು ಜನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದೆ ಎಂದುಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಅಮರನಾಥ್‌ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಹಿಳಾ ವಿಭಾಗದ ಪದಾಧಿಕಾರಿಗಳೊಂದಿಗೆ ಜನಧ್ವನಿ ಹೋರಾಟದ ಅಂಗವಾಗಿ ಆಯೋಜಿಸಿದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚುನಾವಣಾ ಪ್ರಣಾಳಿಕೆಯ ವಾಗ್ಧಾನಗಳನ್ನು ಈಡೇರಿಸ  ಬೇಕೆಂದು ಆಗ್ರಹಿಸಿ ಪ್ರಸಕ್ತ ಸಾಲಿನಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ …

Read More »

ಬಿಗ್ ನ್ಯೂಸ್: ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸಿಎಂ ಯಡಿಯೂರಪ್ಪರಿಗೆ ಸಿರಿಗೆರೆ ಶ್ರೀಗಳ ಪತ್ರ

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ ನಿಷೇಧಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿರಿಗೆರೆ ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದು ಒತ್ತಾಯಿಸಿದ್ದಾರೆ. ಮದ್ಯದ ದಾಸರಾಗಿ ರಾಜ್ಯದ ಗ್ರಾಮೀಣ ಪ್ರದೇಶದ ಬಡವರು, ದಲಿತರು, ಮಧ್ಯಮವರ್ಗದ ಕುಟುಂಬದವರು ನಿತ್ಯ ನರಕ ಅನುಭವಿಸುವಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸುವಂತೆ ಶ್ರೀಗಳು ಒತ್ತಾಯಿಸಿದ್ದಾರೆ. ಮದ್ಯಪಾನದಂತಹ ಅನಿಷ್ಟದಿಂದ ನಾಡಿನ ಪರಂಪರೆಗೆ ಪೆಟ್ಟು ಬೀಳುತ್ತಿದೆ. ಮದ್ಯವ್ಯಸನಿಗಳು ದುಡಿಯುವ ಶಕ್ತಿ ಕಳೆದುಕೊಂಡು ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಅನೇಕರು …

Read More »

ಕೋವಿಡ್ ಲಸಿಕೆ ಎಲ್ಲಿ ಸಿಗುತ್ತೆ..? ಬೆಲೆ ಎಷ್ಟು..? ಇಲ್ಲಿದೆ ಪೂರ್ಣ ಮಾಹಿತಿ

ಬೆಂಗಳೂರು, ಮಾ.1- ರಾಜ್ಯದಲ್ಲೂ ಮೂರನೆ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ ಆರಂಭವಾಗಿದ್ದು , 250ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಇಂದಿನಿಂದ ಲಸಿಕಾ ಅಭಿಯಾನ ಆರಂಭಗೊಂಡಿದೆ. ಬಿಬಿಎಂಪಿಯ ಆರೋಗ್ಯ ಕೇಂದ್ರಗಳು ಸೇರಿದಂತೆ ರಾಜ್ಯದ 250 ಆಸ್ಪತ್ರೆಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಇರುವ 45 ವರ್ಷ ಮೇಲ್ಪಟ್ಟ ಮಧ್ಯ ವಯಸ್ಕರಿಗೆ ಲಸಿಕೆ ಹಾಕಲಾಗುತ್ತಿದೆ. ಕೋ-ವಿನ್ 2.0 ಆ್ಯಪ್ ಮತ್ತು ಪೋರ್ಟಲ್‍ಗಳು ಬೆಳಗ್ಗೆ 9 ಗಂಟೆಯಿಂದ ಸಕ್ರಿಯವಾಗಿದ್ದು , ಲಸಿಕೆ …

Read More »

ಇಂದು ಮತ್ತೆ ಅಡುಗೆ ಅನಿಲ ದರದಲ್ಲಿ 25 ರೂ. ಏರಿಕೆ..!

ಬೆಂಗಳೂರು,ಮಾ.1-ಕಳೆದ ಎರಡು ತಿಂಗಳಿನಿಂದ ಸತತವಾಗಿ ಆರು ಬಾರಿ ಅಡುಗೆ ಅನಿಲ ದರ ಏರಿಕೆಯಾಗಿದೆ. ಇಂದು ಮತ್ತೆ 25 ರೂ. ದರ ಹೆಚ್ಚಳವಾಗಿದ್ದು ಇದರಿಂದ ಜನಸಾಮಾನ್ಯರು ತತ್ತರಿಸುವಂತಾಗಿದೆ. ಇಂದು ಬೆಳಗ್ಗೆ ದರ ಏರಿಕೆ ಬಳಿಕ 14.2 ಕೆಜಿ ಸಿಲಿಂಡರ್‍ನ ದರ 822 ರೂ.ಆಗಿದೆ. ಎಲ್‍ಪಿಜಿ ದರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಪೆಟ್ರೋಲ್ ಡೀಸೆಲ್ ದರದ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಗ್ಯಾಸ್ ಸಿಲಿಂಡರ್‍ನ ಬೆಲೆ ಏರಿಕೆ ತೀವ್ರ ಆಘಾತ ಮೂಡಿಸಿದೆ. ಅಡುಗೆ …

Read More »

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು,ಮಾ.1- ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳದ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸ್ಥಿತಿ ತೀವ್ರ ಸಂಕಷ್ಟದಲ್ಲಿದೆ. ಇವರಿಗೆ ಪಿಂಚಣಿ ಮತ್ತು ವೈದ್ಯಕೀಯ ಸವಲತ್ತನ್ನು ಕೂಡಲೇ ಜಾರಿಗೆ ತರಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿ.ಆರ್.ಶಿವಶಂಕರ್, ಬಿ.ನಾಗರತ್ನ ಒತ್ತಾಯಿಸಿದರು. ನಿವೃತ್ತ ಕಾರ್ಯಕರ್ತೆಯರಿಗೆ ಹಿಂದೆ ನೀಡುತ್ತಿದ್ದ ಇಡಿಗಂಟನ್ನು ನಿಲ್ಲಿಸಲಾಗಿದೆ. ಅವರಿಗೆ ನಿವೃತ್ತ ವೇತನವನ್ನೂ ನೀಡುತ್ತಿಲ್ಲ. ಈ ಕೂಡಲೇ ಕನಿಷ್ಠ ವೇತನ ನೀಡಬೇಕೆಂದು ಆಗ್ರಹಿಸಿದರು. …

Read More »

ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರುಳುಗಾರಿಕೆ.

ಕರೋಣದಿಂದಾಗಿ ಈ ಭಾರಿ ಜನರು ಜೀವ ಕಳೆದುಕೊಂಡು ಜೀವನ‌ ನರಕಯಾತನೆ ಅನುಭವಿಸುತ್ತಿದ್ದಾರೆ..ಮನೆ ಮಾಡಿಕೊಳ್ಳಲು ಮರಳು ಸಿಗದಂತಾ ಪರಿಸ್ಥಿತಿ ನಿರ್ಮಾಣವಾಗಿದೆ…ಆದ್ರೆ ಕೆಲವರು ಇದನ್ನೆ ಸದ್ಬಳಿಕೆ ಮಾಡಿಕೊಂಡು ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ.ಹೌದು ಅಕ್ರಮವಾಗಿ ಕೃತಕ ಮರಳು ತಯಾರಿಕೆಗಳನ್ನು ಮಾಡಿಕೊಂಡು ಜನರ ಫಲವತ್ತಾದ ಜಮೀನುಗಳನ್ನ ನಾಶಮಾಡುತ್ತಿರುವ ದೃಶ್ಯ ಕಂಡು ಬರೋದು ಬಾಗಲಕೋಟ ಜಿಲ್ಲೆಯ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನಾದ್ಯತ ನಡೆದಿದೆ.ಬನಹಟ್ಟಿ ತಾಲೂಕಿನ‌ ಬಂಡಿಗಣ್ಣಿ ಕ್ರಾಸ್ ಹತ್ತಿರ ಪ್ರಕಾಶ್ ಜಂಬಗಿ ಎಂಬಾತ ಹೊರವಲಯದ …

Read More »

ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವೋಮನ್ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಟಾಕ್‍ಫೈಟ್ ಮುಂದುವರಿದಿದೆ. ಲಕ್ಷ್ಮಿ ಹೆಬ್ಬಾಳ್ಕರ್‍ರನ್ಬು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗೆಲ್ಲಿಸಿದ್ದು ನಾನೇ ಎಂದು ಪದೇಪದೇ ಹೇಳುತ್ತಿದ್ದ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದ, ಲಕ್ಷ್ಮಿ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿಯನ್ನು ಮಂತ್ರಿ ಮಾಡಿಸಿದ್ದು ನಾನೇ ಅಂತಾ ಹೇಳಿದ್ದರು. ಈ ವಿಚಾರಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ ಲಕ್ಷ್ನೀ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ ಅಂತಾ ಲೇವಡಿ ಮಾಡಿದ್ರು. ಕೇಂದ್ರ ಸಚಿವ …

Read More »