ಗೋಕಾಕ: ಕಬ್ಬು ತುಂಬಿದ ಟ್ರ್ಯಾಕ್ಟರ್, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 5 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಜತ್ತ ಜಾಂಬೋಟಿ ರಾಜ್ಯಹೆದ್ದಾರಿ ಸಂಗನಕೇರಿ ಬಳಿ ನಡೆದಿದೆ. ಮೃತರು ಹಿಡಕಲ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಹೆಸರು ಇನ್ನು ಪತ್ತೆಯಾಗಿಲ್ಲ. ಪತಿ, ಪತ್ನಿ ಮಗುವಿನೊಂದಿಗೆ ಗೋಕಾಕಗೆ ಬೈಕ್ ಮೇಲೆ ತೆರಳುತ್ತಿರುವಾಗ ಸಂಗನಕೇರಿ ಬಳಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ
ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ …
Read More »ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆಯವರ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಅವರು ಶುಭಕೋರಿದ್ದಾರೆ.
ಬೆಂಗಳೂರು: ಭಾರತ ಕ್ರಿಕೆಟ್ ಕಂಡ ಅದ್ಭುತ ನಾಯಕ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆಯವರ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಅವರು ಶುಭಕೋರಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ ಪಾಕಿಸ್ತಾನದ ವಿರುದ್ಧ 10 ವಿಕೆಟ್ ಪಡೆದು ಮಿಂಚಿದ್ದ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆಯವರು ಇಂದು 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಸದ್ಯ ಐಪಿಎಲ್ ನಿಮಿತ್ತ ಯುಎಇಯಲ್ಲಿರುವ ಕುಂಬ್ಳೆಯವರಿಗೆ ಸಾವಿರಾರು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ. ಅಂತೆಯೇ ಟ್ವಿಟ್ಟರ್ ಮೂಲಕ ಶುಭಕೋರಿರುವ …
Read More »ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ
ಬೆಂಗಳೂರು: ಸ್ಯಾಂಡಲ್ವುಡ್ ನಟ, ಯುವ ಸಾಮ್ರಾಟ ದಿವಂಗತ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬ ಇಂದು ಆಗಿದ್ದು, ಇದೇ ದಿನ ಸಹೋದರ ಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿರೋ ಗಣಪತಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ನೆರೆವೇರಿಸಿದ್ದಾರೆ. ಅಣ್ಣನ ಹುಟ್ಟಿದ ದಿನವನ್ನ ಧ್ರುವ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆಚರಿಸಿದ್ದಾರೆ. ಧ್ರುವ ಹೊಸ ಸಿನಿಮಾಗೆ ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಪೊಗರು ಚಿತ್ರದ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಶೀಘ್ರ ಚುನಾವಣೆ ನಡೆಸಲು ಕ್ರಮ
ಬೆಳಗಾವಿ: ದೂರು ದಾಖಲಿಸುವ ಅಭ್ಯರ್ಥಿಗಳ ಧ್ವನಿ ಅಡಗಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ ತಿರುಗೇಟು ನೀಡಿದ್ದು, ಡಿಕೆಶಿಯವರು ಹತಾಶರಾಗಿದ್ದಾರೆ ಎಂದಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದವೂ ದೂರು ದಾಖಲಾದ ಉದಾಹರಣೆಯಿದೆ. ಸಣ್ಣ ವಿಷಯ ದೊಡ್ಡದು ಮಾಡುವ ಅವಶ್ಯಕತೆ ಇಲ್ಲ, ಕಾನೂನು ಪ್ರಕಾರ ನಡೆಯತ್ತೆ …
Read More »ನಾಡದೇವತೆಗೆ ಪುಷ್ಪಾರ್ಚನೆ ಮಾಡಿ ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಿಎಂ ಬಿಎಸ್ವೈ
ಬೆಂಗಳೂರು,ಅ.17-ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಉತ್ತರ ಕರ್ನಾಟಕದ ಸಂತ್ರಸ್ತರ ರಕ್ಷಣೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಬದ್ದವಾಗಿದ್ದು, ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಯ ನೀಡಿದ್ದಾರೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ರಾಜ್ಯದ ನೆರೆ ಪರಿಸ್ಥಿತಿ ಕುರಿತಂತೆ ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕರ್ನಾಟಕ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಬದ್ದವಿದೆ ಎಂದು ಹೇಳಿದ್ದಾರೆ. ಹೀಗಾಗಿ ಯಾರೊಬ್ಬರೂ …
Read More »ಸಾಂಸ್ಕøತಿಕ ನಗರಿಯ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವು
ಬೆಂಗಳೂರು,ಅ.17-ಕೋವಿಡ್-19 ಹಿನ್ನೆಲೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಧಾರ್ಮಿಕ ಕೇಂದ್ರಗಳು, ಅಣೆಕಟ್ಟು, ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ವಿಧಿಸಲಾಗಿದ್ದ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿದೆ. ಮೈಸೂರಿನ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡಿನ ನಂಜುಂಡೇಶ್ವರ ದೇವಾಲಯ, ಕೆಆರ್ಎಸ್ ಅಣೆಕಟ್ಟು, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿಗಳ ಸೂಚನೆಯನ್ನು ಸಭೆಯಲ್ಲೇ …
Read More »-ದೇಶಾದ್ಯಂತ ನವರಾತ್ರಿ ಸಡಗರ ಸಂಭ್ರಮನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಬೆಂಗಳೂರು, ಅ.17-ದೇಶಾದ್ಯಂತ ನವರಾತ್ರಿ ಸಡಗರ ಸಂಭ್ರಮ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ, ಮಹಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ, ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ನಾಯಕರಾದ ರಾಹುಲ್ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿಂದಂತೆ ವಿವಿಧ ಪಕ್ಷಗಳ ಧುರೀಣರು ದೇಶದ ಜನತೆಗೆ ಶುಭ ಕೋರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, …
Read More »‘ಚಿರು ನನ್ನ ಮಗುವಾಗಿ ಯಾವಾಗ ಬರಬೇಕು ಅಂತಾರೋ ಆವಾಗ ಬರಲಿ’
ಚಿರು ಸರ್ಜಾ ಇಲ್ಲದ ಮೊದಲ ಹುಟ್ಟುಹಬ್ಬಕ್ಕೆ ಇಡೀ ಅಭಿಮಾನಿ ಬಳಗ ಕೊರಗುತ್ತಿದೆ. ಆದರೂ ಎಲ್ಲೆಡೆ ಚಿರುಗಾಗಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಒಂದೆಡೆ ಚಿರು ಹುಟ್ಟುಹಬ್ಬವಾದ್ರೆ, ಇನ್ನೊಂದೆಡೆ ಇಂದು ಚಿರು ಮತ್ತೆ ಹುಟ್ಟಿ ಬರ್ತಾರೆ ಅನ್ನೋ ಖುಷಿ, ಸಂಭ್ರಮ. ಇದರ ಜೊತೆಗೆ ಚಿರು ‘ಶಿವಾರ್ಜುನ’ ಸಿನಿಮಾ ಮತ್ತೆ ತೆರೆ ಕಂಡಿರೋದು ಮತ್ತೊಂದು ಖುಷಿ. ಸದ್ಯ, ಪತಿಯನ್ನ ನೋಡಲು ಮೇಘನಾ ರಾಜ್ ಸರ್ಜಾ ಚಿರು ಸಮಾಧಿ ಕಡೆ ಹೊರಟಿದ್ದಾರೆ. ಚಿರು ಸಮಾಧಿಗೆ ಪೂಜೆ ಸಲ್ಲಿಸೋದಾಗಿ …
Read More »ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ …
Read More »
Laxmi News 24×7