ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ …
Read More »ಕೋಟಿ ಕೋಟಿ ಸುರಿದು ರೆಡಿಮಾಡಿದ ಕೋವಿಡ್ ಸೆಂಟರ್ಗಳತ್ತ ತಲೆ ಹಾಕದ ಸೋಂಕಿತರು..!
ಬೆಂಗಳೂರು, : ಕೊರೊನಾ ಸೋಂಕಿ ತರಿಗೆ ಹೋಂ ಐಸೊಲೇಷನ್ ವ್ಯವಸ್ಥೆಯನ್ನು ಜಾರಿಗೆ ತಂದ ನಂತರ ಬಿಬಿಎಂಪಿ ಕೋಟ್ಯಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್ಗಳತ್ತ ಜನ ಮುಖ ಹಾಕುತ್ತಿಲ್ಲ. ನಗರದಲ್ಲಿ 12 ಕೋವಿಡ್ ಕೇರ್ ಸೆಂಟರ್ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಬಿಐಇಸಿನಲ್ಲಿ 10 ಸಾವಿರ ಹಾಸಿಗೆಗಳ ಸೆಂಟರ್ ನಿರ್ಮಿಸಲಾಗಿದ್ದು, 6 ಸಾವಿರ ಹಾಸಿಗೆ ಸಿದ್ಧವಿದೆ. ಆದರೆ, ಇಲ್ಲಿ ಕೇವಲ 700 ರಿಂದ 800 ಮಂದಿ ರೋಗಿಗಳು ದಾಖಲಾಗಿದ್ದಾರೆ. ಇದೇ …
Read More »ಪೊಲೀಸ್ ಠಾಣೆಯಿಂದ ಸಿನಿಮಾ ಸ್ಟೈಲಲ್ಲಿ ಎಸ್ಕೇಪ್ ಆಗಿದ್ದ ಸರಗಳ್ಳ ಕೊನೆಗೂ ಲಾಕ್..!
ತುಮಕೂರು, ಆ20- ಕೋರಾ ಠಾಣೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸಿನಿಮೀಯ ರೀತಿಯಲ್ಲಿ ಪರಾರಿ ಯಾಗಿದ್ದ ಖತರ್ನಾಕ್ ಸರಗಳ್ಳ ಮತ್ತೆ ಸಿಕ್ಕಿಬಿದ್ದಿದ್ದಾನೆ. ಮಧುಗಿರಿ ತಾಲ್ಲೂಕಿನ ಕಾಟ ಗೊಂಡನಹಳ್ಳಿ ನಿವಾಸಿ ರಂಗಪ್ಪ ರಾಜ ಪ್ರತಾಪ ಪ್ರಭು (38) ಸಿಕ್ಕಿಬಿದ್ದ ಸರಗಳ್ಳ. ಕೊರೊನಾ ಭೀತಿಯ ಹಿನ್ನೆಲೆ ಯಲ್ಲಿ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸುವ ವೇಳೆ ಊಟದ ಎಲೆ ಎಸೆಯುವ ನೆಪದಲ್ಲಿ ರಂಗಪ್ಪ ಸಿನಿಮೀಯ ರೀತಿಯಲ್ಲಿ ಕೋರಾ ಠಾಣೆಯಿಂದ ಪರಾರಿಯಾಗಿದ್ದ.ಘಟನೆ ಹಿನ್ನೆಲೆಯಲ್ಲಿ ಕೋರಾ …
Read More »ನೆರೆ ಹಾಗೂ ಅತಿವೃಷ್ಟಿಯ ಪರಿಣಾಮ, 43,300 ಹೆಕ್ಟೇರ್ ಬೆಳೆ ‘ಆಹುತಿ’
ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಮಂಗಳವಾರದವರೆಗೆ 43,300 ಹೆಕ್ಟೇರ್ ಬೆಳೆಗಳು ಮುಳುಗಿವೆ. 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ, ದೂಧ್ಗಂಗಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ಮಲಪ್ರಭಾ ನದಿಗಳಲ್ಲಿ ಮಹಾಪೂರ ಉಂಟಾಗಿದೆ. ತೀರಕ್ಕೆ ಹೊಂದಿಕೊಂಡಿರುವ ಜಮೀನುಗಳಿಗೆ ನೀರು ವ್ಯಾಪಿಸಿದೆ. ಇದರೊಂದಿಗೆ ಬೆಳಗಾವಿ ತಾಲ್ಲೂಕಿನಲ್ಲಿ ಬಳ್ಳಾರಿ ನಾಲಾ ಪ್ರವಾಹವೂ ಉಂಟಾಗಿದೆ. ಇದರಿಂದಲೂ ಸಾವಿರಾರು ಎಕರೆ ವಿವಿಧ ಬೆಳೆಗಳು ಜಲಾವೃತವಾಗಿವೆ. ಅಲ್ಲಲ್ಲಿ ಮಳೆ ಹಾಗೂ ಪ್ರವಾಹದ ಪರಿಸ್ಥಿತಿ ಮುಂದುವರಿದಿದ್ದು, ಬೆಳೆಗಳ ಹಾನಿ …
Read More »ಬೆಳಗಾವಿ: 379 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 379 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪುರುಷ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ. 267 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
Read More »ಸಂಗೊಳ್ಳಿರಾಯಣ್ಣ ಸೊಸೈಟಿ ವಂಚನೆ ಪ್ರಕರಣ: ದೋಷಾರೋಪಣಾ ಪಟ್ಟಿ ಸಲ್ಲಿಕೆ
ಬೆಳಗಾವಿ: ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ನೇತೃತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 2,063 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಇಲ್ಲಿನ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿದೆ. ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಸರ್ಕಾರಿ ಅಭಿಯೋಜಕ ಮುರಳೀಧರ ಕುಲಕರ್ಣಿ, ‘ಈ …
Read More »ಕೇವಲ 5 ದಿನದಲ್ಲಿ 228 ಮಂದಿ ಬಲಿ ಪಡೆದ ಮಹಾಮಾರಿ ಕೊರೋನಾ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಬುಧವಾರ 56 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದು ಆಗಸ್ಟ್ ತಿಂಗಳಿನಲ್ಲಿ ಒಂದೇ ದಿನ ದಾಖಲಾದ ಅತಿ ಹೆಚ್ಚಿನ ಸಾವಿನ ಸಂಖ್ಯೆಯಾಗಿದೆ. ಕಳೆದ ಐದು ದಿನಗಳಿಂದ ನಗರದಲ್ಲಿ ಕೊರೋನಾ ಸೋಂಕಿಗೆ 228 ಮಂದಿ ಸಾವನ್ನಪ್ಪಿದ್ದಾರೆ. ಆ.16 ಮತ್ತು 18 ರಂದು ತಲಾ 49 ಮಂದಿ ಸೋಂಕಿನಿಂದ ಮೃತಪಟ್ಟಿದ್ದು ಅತಿ ಹೆಚ್ಚಿನ ಸಾವಿನ ಸಂಖ್ಯೆಯಾಗಿತ್ತು. ಆದರೆ, ಬುಧವಾರ 56 …
Read More »ಒಂದು ವರ್ಷದಲ್ಲಿ ಎಮ್ಮೆ ಕಾಂತಣ್ಣ ಒಟ್ಟು ಏಳು ಹಸುಗಳನ್ನು ಕಳೆದುಕೊಂಡಿದ್ದಾರೆ.
ಚಿಕ್ಕಮಗಳೂರು: ಕಳೆದ ಹತ್ತು ತಿಂಗಳಲ್ಲಿ ಏಳು ಹಸುಗಳನ್ನು ಕಳೆದುಕೊಂಡಿದ್ದೇನೆ. ದನಗಳ್ಳರನ್ನು ಹಿಡಿದುಕೊಟ್ಟರೆ ನಿಂತ ಜಾಗದಲ್ಲಿ ನಾನೇ ಅವರಿಗೆ 50 ಸಾವಿರ ಹಣ ಕೊಡುತ್ತೇನೆ ಎಂದು ಚಿಕ್ಕಮಗಳೂರು ತಾಲೂಕಿನ ತೇಗೂರಿನ ರೈತ ಕಾಂತರಾಜ್ ಆಫರ್ ಕೊಟ್ಟಿದ್ದಾರೆ. ದನಗಳ್ಳರನ್ನು ಯಾರೇ ಹಿಡಿದುಕೊಟ್ಟರು ಅವರಿಗೆ ಹಣ ಕೊಡುತ್ತೇನೆ ಎಂದು ಘೋಷಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ರೈತ ಕಾಂತರಾಜು ಅಲಿಯಾಸ್ ಎಮ್ಮೆ ಕಾಂತಣ್ಣರವರ ಎಂಟೂವರೆ ತಿಂಗಳ ಗರ್ಭಿಣಿ ಹಸುವನ್ನು ದನಗಳ್ಳರು ಸ್ಕಾರ್ಪಿಯೋ ಕಾರಿನಲ್ಲಿ ತುಂಬಿಕೊಂಡು …
Read More »ಗೌರಿ-ಗಣೇಶ ಹಬ್ಬಕ್ಕೆ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಗಿಫ್ಟ್: ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆ ಹೆಚ್ಚಳ
ನವದೆಹಲಿ ; ಮುಂದಿನ ಮಾರುಕಟ್ಟೆ ವರ್ಷದಲ್ಲಿ ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್ಗೆ 10 ರೂ.ದಿಂದ 285 ರೂ.ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಕಬ್ಬಿನ ಎಫ್ಆರ್ಪಿಯನ್ನು ಕ್ವಿಂಟಲ್ಗೆ 10 ರೂ. ಹೆಚ್ಚಿಸುವ ಆಹಾರ ಸಚಿವಾಲಯದ ಪ್ರಸ್ತಾವವನ್ನು ಸಿಸಿಇಎ ಅಂಗೀಕರಿಸಿದೆ. ಇದು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸಿಗೆ …
Read More »ಗೋಕಾಕ್ನ ಉಪ್ಪಾರಗಲ್ಲಿ, ಹಳೆದನದಪೇಟೆ, ಕುಂಬಾರಗಲ್ಲಿ, ಮಟನ್ ಮಾರ್ಕೆಟ್ ಮತ್ತು ಮಹಾಲಿಂಗೇಶ್ವರ ನಗರ ಜಲಾವೃತ
ಬೆಂಗಳೂರು: ಮಳೆಯಬ್ಬರ ತಗ್ಗಿದ್ದು, ಉತ್ತರ ಕರ್ನಾಟಕದಲ್ಲೂ ಪ್ರವಾಹ ಇಳಿಮುಖವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕೇವಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಬರಬಹುದು. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.ಕಳೆದ ಆರೇಳು ದಿನಗಳಿಂದ ಆಗುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಡ್ಯಾಂಗಳು ಬಹುತೇಕ …
Read More »