ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. …
Read More »ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ
ಬೆಂಗಳೂರು: ಅತಿವೃಷ್ಟಿಯಿಂದಾಗಿ ಇಡೀ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆದ್ರೆ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾದ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ವರ್ಷ ಅತಿವೃಷ್ಟಿ ಪರಿಹಾರದಲ್ಲಿ ಆದ ವೈಫಲ್ಯದಿಂದ ಈ ಬಾರಿ ಜನರ ಕಷ್ಟ ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ. ಅತಿವೃಷ್ಟಿಯಿಂದ ಕಂಗೆಟ್ಟ ಜನರಿಗೆ ಪರಿಹಾರ ಕೊಡುವ ಕೆಲಸ ಮಾಡುವ ಬದಲು ಕಂದಾಯ ಸಚಿವರು ಬೆಂಗಳೂರಿನಲ್ಲಿ ಕುಳಿತು ಕಾವಲಭೈರಸಂದ್ರ ಗಲಭೆ ಬಗ್ಗೆ …
Read More »ಸುಶಾಂತ್ ಸಿಂಗ್ ರಜಪೂತ್ ಅವರ ನಿಧನ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು:ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ಸಿಬಿಐ ತನಿಖೆಯನ್ನು ಆಗ್ರಹಿಸುತ್ತ ಬಂದಿದ್ದ ಸುಶಾಂತ್ ಕುಟುಂಬದವರ ಆಗ್ರಹಕ್ಕೆ ಮನ್ನಣೆ ಸಿಕ್ಕಂತಾಗಿದೆ. ಪ್ರಕರಣದ ವಿಚಾರಣೆಯನ್ನು ಪಟನಾದಿಂದ ಮುಂಬೈಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಪಿಟಿಷನ್ ನಲ್ಲಿ ಇದ್ದ ಅಂಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸುವ …
Read More »ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ: ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಳೆಯಿಂದಾಗಿ ನೆರೆಯ ಭೀತಿ ಅನುಭವಿಸುತ್ತಿರುವ ಘಟಪ್ರಭಾ ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮಂಗಳವಾರದಂದು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರಾಶ್ರಿತ ಕುಟುಂಬಗಳಿಗೆ ಗಂಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಿರುವುದಾಗಿ ಹೇಳಿದ್ದಾರೆ. ಅಡಿಬಟ್ಟಿ, ಮೆಳವಂಕಿ, ಉದಗಟ್ಟಿ, ಬಳೋಬಾಳ, ಬೀರನಗಡ್ಡಿ, ಮಸಗುಪ್ಪಿ, ವಡೇರಹಟ್ಟಿ, ಹುಣಶ್ಯಾಳ ಪಿಜಿ, …
Read More »ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.
ಬೆಳಗಾವಿ : ಗಣೇಶ ಹಬ್ಬಕ್ಕೆ ಕೊರೊನಾ ಕರಿನೆರಳು ಬಿದ್ದಿದ್ದು, ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ವಿಘ್ನಗಳ ವಿನಾಶಕನೇ ಗಣೇಶ ಎಂಬ ಕಾರಣ ಪ್ರತಿಯೊಂದು ಸಮಾರಂಭದಲ್ಲಿ ಗಜಾನನ ಪೂಜೆ ನಡೆಸಲಾಗುತ್ತದೆ. ಆದ್ರೆ ಈ ಬಾರಿ ಗಣೇಶ ಹಬ್ಬಕ್ಕೆ ಮೂರ್ತಿ ತಯಾರಿಕ ಕುಟುಂಬಕ್ಕೆ ಈ ಮಾತು ಅಕ್ಷರಶಃ ಸುಳ್ಳಾಗಿದೆ. ಅಥಣಿ ಪಟ್ಟನದಲ್ಲಿವಂಶ ಪಾರಂಪರಿಕವಾಗಿ ಗಣೇಶ ಮೂರ್ತಿ ತಯಾರಿಕೆ ಕಾಯಕದಲ್ಲಿ ತೊಡಗಿಕೊಂಡಿರುವ 15ಕ್ಕೂ ಹೆಚ್ಚು ಕುಟುಂಬಗಳು ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. …
Read More »ಮೂರ್ತಿ ಪ್ರತಿಷ್ಠಾಪನೆಗೆ ಹೋರಾಟ ನಡೆಸಿದ್ದೆವೆ. ಅಲ್ಲಿಯೇ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಿ:ರಾಯಣ್ಣ ಅಭಿಮಾನಿಗಳು,
ಬೆಳಗಾವಿ : ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರ ರಾಜ್ಯದ ಗಮನ ಸೆಳೆದಿದ್ದು, ಬುಧವಾರ ಪೊಲೀಸ ಅಧಿಕಾರಿಗಳು ರಾಯಣ್ಣ ಅಭಿಮಾನಿಗಳೊಂದಿಗೆ ನಡೆಸಿದ ಸಭೆ ಸಂಧಾನ ವಿಫಲವಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸಭೆ ನಡೆಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗುಂಟೆ ಜಾಗ ಕೊಡಿಸಲಾಗುತ್ತದೆ. ಆ ಸ್ಥಳದಲ್ಲಿ ಮೂರ್ತಿ ಸ್ಥಾಪನೆ ಮಾಡಿಕೊಳ್ಳಿ ಎಂದು ತಿಳಿಸಿದರು. ಆದರೆ …
Read More »ಉತ್ತರ ಕನಾ೯ಟಕದಲ್ಲಿ ಪ್ರವಾಹದಿಂದ ಎಷ್ಟೆಲ್ಲ ಹಾನಿಯಾಗಿದೆ ಗೊತ್ತಾ?
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಒಂದೆಡೆಯಾದರೆ, ಮಹಾರಾಷ್ಟ್ರದಲ್ಲಾಗುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ನೀರು ಕರ್ನಾಟಕಕ್ಕೆ ಹರಿದುಬರುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಕೃಷ್ಣೆ, ಮಲಪ್ರಭಾ, ಘಟಪ್ರಭಾ ನದಿಗಳ ಅಬ್ಬರ ಏರಿದೆ. ಕೊಯ್ನಾ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಹಾಪುರದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಆಗಸ್ಟ್ 22ರವರೆಗೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ …
Read More »8 ತಿಂಗಳಿನಿಂದ ಬಾರದ ಸಂಬಳ : ರಾಜ್ಯ ಸರ್ಕಾರಕ್ಕೆ ರಾತ್ರಿ ಹೊತ್ತು ಕಾವಲುಗಾರನಾಗಿ ಕೆಲಸ ಮಾಡಲು ಪತ್ರ ಬರೆದ ‘ಸರ್ಕಾರಿ ನೌಕರ’
ಬೆಂಗಳೂರು : ಮನೆಯಲ್ಲಿ ಗರ್ಭಿಣಿ ಪತ್ನಿಯಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪೋಷಕರು ಇದ್ದಾರೆ. ಅವರನ್ನು ಉಳಿಸಿಕೊಳ್ಳಲು ಕಚೇರಿ ಕರ್ತವ್ಯಕ್ಕೆ ಧಕ್ಕೆಯಾಗದಂತೆ ರಾತ್ರಿ ಪಾಳಿಯಲ್ಲಿ ಅಲ್ಪಾವಧಿ ಕೆಲಸ ಮಾಡಲು ಅನುಮತಿ ನೀಡುವಂತೆ ನೊಂದಣಿ ಮತ್ತು ಮುದ್ರಣಾಂಕ ಶಾಖೆಯ ಆಡಿಟ್ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರು ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪತ್ರದಿಂದಾಗಿ ರಾಜ್ಯ ಸರ್ಕಾರಿ ನೌಕರರ ಪರಿಸ್ಥಿತಿ ಮನ ಮಿಡಿಯುವಂತಾಗಿದೆ. ರಾಜ್ಯ …
Read More »ಆಗಲ್ಲ ಅಂದ್ರೆ ಇಬ್ರೂ ರಾಜೀನಾಮೆ ಕೊಡಿ : ಶಾಸಕ, ಸಂಸದರಿಗೆ ಎಚ್ಚರಿಕೆ
ಬೇಲೂರು : ತಾಲೂಕಿನ ಅಗಸರಹಳ್ಳು ಸೇತುವೆ ವಿಚಾರದಲ್ಲಿ ರಾಜಕೀಯ ಮುಖಂಡರು ಒಬ್ಬರಿಗೊಬ್ಬರು ದೂರು ಹೇಳುವುದನ್ನು ಬಿಟ್ಟು ಯಾವುದೇ ರಾಜಕೀಯ ಮಾಡದೆ ತಕ್ಷಣವೇ ನಮಗೆ ಸೇತುವೆ ಮಾಡಿಸಿಕೊಡಿ. ಇಲ್ಲದಿದ್ದರೆ ಶಾಸಕರು ಹಾಗೂ ಸಂಸದರು ಮತ್ತು ಸಂಬಂಧಪಟ್ಟಅಧಿಕಾರಿಗಳ ವಿರುದ್ಧ 10 ಗ್ರಾಮಸ್ಥರು ಒಟ್ಟುಗೂಡಿ ಉಗ್ರರೀತಿಯ ಪ್ರತಿಭಟನೆ ನಡೆಸುವುದಾಗಿ ಅಗಸರಹಳ್ಳಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಅಟ್ಟಾಡಿಸಿ ಹೊಡೆಸುತ್ತೇನೆ : ಅಧಿಕಾರಿಗಳಿಗೆ ಅವಾಜ್ ಹಾಕಿದ ಎಚ್.ಡಿ.ರೇವಣ್ಣ… ಗ್ರಾಮಸ್ಥರಾದ ಶ್ರೀನಿವಾಸ್ ಹಾಗೂ ನಾಗರಾಜ್ ಪಟ್ಟಣದಲ್ಲಿ ಸುದ್ದಿಗೊೂೕಷ್ಠಿಯಲ್ಲಿ ಮಾತನಾಡಿ, …
Read More »ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 10.3ರಿಂದ ಶೇಕಡಾ 7.72ಕ್ಕೆ ಇಳಿಕೆ
ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಆದರೂ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ಈ ಕುರಿತಂತೆ ಮಾತನಾಡಿದ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರತಿದಿನ 7ರಿಂದ 8 ಲಕ್ಷ ಕೊರೋನಾ ವೈರಸ್ ಪರೀಕ್ಷೆ ಮಾಡುತ್ತಿದ್ದರೂ ಕೂಡ ಪಾಸಿಟಿವ್ ರೋಗಿಗಳ ಸಂಖ್ಯೆ ಕಳೆದ ನಾಲ್ಕೈದು ದಿನಗಳಲ್ಲಿ ಶೇಕಡಾ 10.3ರಿಂದ ಶೇಕಡಾ …
Read More »