Breaking News

ರಾಜ್ಯ ಸರ್ಕಾರದ ಬೊಕ್ಕಸದ ಲೆಕ್ಕ ಬಿಚ್ಚಿಟ್ಟ ಡಿಸಿಎಂ ಕಾರಜೋಳ…………

ಮಧುಗಿರಿ ,ಜೂ.6- ಲಾಕ್‍ಡೌನ್ ಹಿನ್ನಲೆಯಲ್ಲಿ ಸರಕಾರದ ಆದಾಯ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂದು ಉಪಮುಖ್ಯಮಂತ್ರಿ ಎಂ. ಗೋವಿಂದ ಕಾರಜೋಳ ತಿಳಿಸಿದರು. ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಬಿಜೆಪಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಪ್ರವಾಹದಿಂದ 35 ಸಾವಿರ ಕೋಟಿಗಳಷ್ಟು ನಷ್ಟವಾಗಿದ್ದು, ಇದೀಗ ಕೊರೊನಾ ಸಾಂಕ್ರಮಿಕ ರೋಗ ಹರಡದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗಿದೆ ಎಂದರು. ರಸ್ತೆ, ಸೇತುವೆಗಳ ತುರ್ತು …

Read More »

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆಯಲು ಅನುಮತಿ

ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆಯಲು ಅನುಮತಿ ನೀಡಾಗುತ್ತಿದೆ,  ಸರ್ಕಾರ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ  ಪಾಲಿಸುವಂತೆ  ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು. ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು. ಸರ್ಕಾರದ …

Read More »

ಜೂನ್ ಮಧ್ಯಭಾಗದ ವೇಳೆಗೆ ಪ್ರತಿ ನಿತ್ಯ 15,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಲಿದೆ ಎಂಬ ಆತಂಕಕಾರಿ ವರದಿ ಬಂದಿದೆ.

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಜೂನ್ ಮಧ್ಯಭಾಗದ ವೇಳೆಗೆ ಪ್ರತಿ ನಿತ್ಯ 15,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಲಿದೆ ಎಂಬ ಆತಂಕಕಾರಿ ವರದಿ ಬಂದಿದೆ. ಇತ್ತೀಚೆಗಷ್ಟೇ ದೆಹಲಿ ಸರ್ಕಾರ ತನ್ನ ಜಿಲ್ಲಾಡಳಿತಗಳಿಗೆ ಕೊರೋನಾ ಚಿಕಿತ್ಸೆಗೆ ಹೆಚ್ಚುವರಿ ಬೆಡ್ ಹುಡುಕಿ ಮತ್ತು ಕೊರೋನಾದಿಂದ ಸತ್ತವರ ಅಂತ್ಯ ಸಂಸ್ಕಾರಕ್ಕಾಗಿ ಸ್ಮಶಾನ ಗುರುತಿಸಿ ಎಂದು ಹೇಳಿತ್ತು. ಈ ನಡುವೆ ಪ್ರತಿನಿತ್ಯವೂ 15 ಸಾವಿರಕ್ಕೂ‌ಹೆಚ್ಚು ಪ್ರಕರಣಗಳು ಪತ್ತೆಯಾಗಲಿವೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಾಯುವ್ಯ ಚೀನಾದ …

Read More »

ಕಾಫಿನಾಡು ಚಿಕ್ಕಮಗಳೂರಿಗೆ ಶುಭ ಸುದ್ದಿ- ಜಿಲ್ಲೆ ಸದ್ಯ ಕೊರೊನಾ ಮುಕ್ತ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದರೂ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಜನರಿಗೆ ಗುಡ್‍ನ್ಯೂಸ್ ಸಿಕ್ಕಿದೆ. ಜಿಲ್ಲೆಯು ಸದ್ಯ ಕೊರೊನಾ ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಕೋವಿಡ್-19 ಸೋಂಕಿನಿಂದ ಆಸ್ಪತ್ರೆ ಸೇರಿದ್ದ ಎಲ್ಲಾ 16 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 16 ಮಂದಿಗೆ ಸೋಂಕು ಪತ್ತೆಯಾಗಿತ್ತು. ಅವರೆಲ್ಲರೂ ಇದೀಗ ಸಂಪೂರ್ಣ ಗುಣಮುಖತಾಗಿದ್ದು, ಜಿಲ್ಲಾಡಳಿತವು ಡಿಸ್ಚಾರ್ಜ್ ಗೂ ಮುನ್ನವೇ …

Read More »

ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ:

ಚಂಡೀಗಢ: ಬಿಜೆಪಿ ಮುಖಂಡೆ, ಟಿಕ್‍ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರು ಸರ್ಕಾರಿ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಫೋಗಟ್ ಶುಕ್ರವಾರ ಹಿಸಾರ್ ನ ಬಾಲ್ಸಮಂದ್ ಮಂಡಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹಿಸಾರ್ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಲ್ತಾನ್ ಸಿಂಗ್‍ರನ್ನು ಫೋಗಟ್ ಥಳಿಸಿದ್ದಾರೆ. ಕೆಲವು ರೈತರು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸುವ ವಿಚಾರದಲ್ಲಿ ಸಮಸ್ಯೆಗಳಿವೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಫೋಗಟ್ ಮಂಡಿಯ …

Read More »

ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲ ಕಿಡಿಗೇಡಿಗಳು  ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ.

ಬೆಳಗಾವಿ:  ಜಿಲ್ಲೆಯಿಂದ  ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಲ ಕಿಡಿಗೇಡಿಗಳು  ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಕರ್ಲೇ- ಬೆಳವಟ್ಟಿ ಗ್ರಾಮದ ಮಧ್ಯೆ ನಡೆದಿದೆ. ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು  ಕೆಲ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನಕ್ಕಗಿ ಕಾಯುತ್ತಾ ನಿಂತಿದ್ದರು.  ಕರ್ಲೇಯಿಂದ ಒಂದು ಕಿ.ಮೀ. ಅಂತರದಲ್ಲಿ ವಾಹನ ಬರುತ್ತಿದ್ದಂತೆ ತಡೆದು ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ. ವಾಹನದಲ್ಲಿ ಇದ್ದವರು ಓಡಿ ಹೋಗಿದ್ದಾರೆ. ಬೆಳವಟ್ಟಿ ಮಾರ್ಗದಿಂದ …

Read More »

ಮಾನವೀಯತೆ ಮರೆತ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ

ಬೆಂಗಳೂರು: ಹೊಟ್ಟೆನೋವು ಅಂತ ಆಸ್ಪತ್ರೆಗೆ ಬಂದ ರೋಗಿಗೆ ಚಿಕಿತ್ಸೆ ನೀಡದೇ ಆಸ್ಪತ್ರೆ ಸಿಬ್ಬಂದಿ ಕರ್ತವ್ಯದ ಜೊತೆ ಮಾನವೀಯತೆಯನ್ನು ಮರೆತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಳೆದ ರಾತ್ರಿ ಹೊಟ್ಟೆನೋವು ಅಂತ ಓರ್ವ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದಾನೆ. ಈ ವೇಳೆ ವೈದ್ಯರಿಲ್ಲ ಅಂತ ಹೇಳಿ ಸಿಬ್ಬಂದಿ ರೋಗಿಯನ್ನು ಆಸ್ಪತ್ರೆಯೊಳಗೆ ಸಹ ಕರೆದುಕೊಂಡಿಲ್ಲ. ಹೊರಗೆ ನಿಲ್ಲಿಸಿ ಖಾಸಗಿ ಆಸ್ವತ್ರೆಗೆ ಹೋಗಿ …

Read More »

ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮಂಗಳೂರಿಗೆ ಬಂದವರಿಗೆ ಕೊರೊನಾ

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮಂಗಳೂರಿಗೆ ಬಂದ ಏಳು ಮಂದಿ ಇತರ ಒಬ್ಬ ಸಹಿತ ಸೇರಿ ಒಟ್ಟು 8 ಮಂದಿಗೆ ಇಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದು ಉಡುಪಿಯಲ್ಲಿ 7 ಮಂದಿ ಕ್ವಾರೆಂಟೈನ್ ಆಗಿದ್ದರು. ಕ್ವಾರಂಟೈನ್ ಅವಶಿ ಮುಗಿದ ನಂತರ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಇದೀಗ ಮಂಗಳೂರಿನಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ಇರುವುದು ಪತ್ತೆಯಾಗಿದೆ. ಬಂಟ್ವಾಳದ 60 ವರ್ಷದ ವೃದ್ಧೆಗೂ ಸೋಂಕು ತಗುಲಿದ್ದು, ಮೂಲ ಪತ್ತೆಯಾಗಿಲ್ಲ. …

Read More »

ತಡರಾತ್ರಿವರೆಗೂ ಡಿಜೆ ಹಾಕಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕನ ಆಪ್ತ

ಚಿಕ್ಕೋಡಿ/ಬೆಳಗಾವಿ: ಡೆಡ್ಲಿ ಕೊರೊನಾ ಮಧ್ಯೆಯೂ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿ ಶಾಸಕನ ಆಪ್ತನೊಬ್ಬ ಡಿಜೆ ಹಾಕಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಲಜಿ ಗ್ರಾಮದಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಆಪ್ತ ಹಾಗೂ ಬಗರ ಹುಕುಂ ಸಮಿತಿ ಸದಸ್ಯ ನರಸು ತುಳಸಿಗೇರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಸಂಜೆ 7 ನಂತರ ನಿಷೇಧಾಜ್ಞೆ ಇದ್ದರೂ ತಡರಾತ್ರಿವರೆಗೂ ಲಾಕ್‍ಡೌನ್ ನಿಯಮಗಳನ್ನ ಗಾಳಿಗೆ ತೂರಿ ಕೊರೊನಾ ನಡುವೆಯೂ ಡಿಜೆ …

Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿಯ ನಿರೀಕ್ಷೆಯಲ್ಲಿದ್ದ ಬಸವವಿಧಿವಶವಾಗಿದೆ.

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿಯ ನಿರೀಕ್ಷೆಯಲ್ಲಿದ್ದ ಬಸವ ಇಂದು ವಿಧಿವಶವಾಗಿದೆ. ಮೈಸೂರು ಸಮೀಪದ ಕೆ.ಆರ್.ನಗರ ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಬಸವನ ಅನಾರೋಗ್ಯದಿಂದ ನರಳುತ್ತಿತ್ತು. ಬಸವ ಬೇಗ ಚೇತರಿಸಿಕೊಳ್ಳಲಿ ಎಂದು ಗ್ರಾಮಸ್ಥರು ನಿತ್ಯ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ. ಕಾಳಮ್ಮನಕೊಪ್ಪಲು ಗ್ರಾಮಸ್ಥರಿಗೆ ಊರ ದೈವವೇ ಆಗಿದ್ದ ಬಸವ ಅನಾರೋಗ್ಯಕ್ಕೆ ತುತ್ತಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಬಸವನನ್ನು ಭೇಟಿ ಮಾಡಿದ್ದರು. ಗ್ರಾಮಸ್ಥರೆಲ್ಲರೂ ದರ್ಶನ್ ಅವರು ಪುನಃ …

Read More »