Breaking News

ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್

ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ಮಾಸ್ಕ್ ಕೊರತೆ ಉಂಟಾಗದಂತೆ ತಡೆಯಲು ಮತ್ತು ಅಗತ್ಯವಿರುವ ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕ್ಷೇತ್ರದ ಬಡ ಮಹಿಳೆಯರಿಗೆ ಸಂಸದರ ಅನುದಾನದಡಿ ವಿತರಿಸಿದ್ದ ಹೊಲಿಗೆ ಯಂತ್ರದ ಸಹಾಯದಿಂದ ಈಗಾಗಲೇ ಸಾವಿರಾರು ಮಾಸ್ಕ್ ಸಿದ್ಧಪಡಿಸಲಾಗಿದೆ. ಈಗ ವಿತರಿಸುವ ಮೂಲಕ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೋರಾಟಕ್ಕೆ ಕೈಜೋಡಿಸಿರುವ ಧಾರವಾಡದ ಲೋಕಸಭಾ …

Read More »

ಯಾದಗಿರಿ:ವಾರಿಯರ್ಸ್‍ಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ….

ಯಾದಗಿರಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಖಾಕಿ ಪಡೆಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಗೌರವ ಸೂಚಿಸಲಾಯಿತು. ನಗರದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಪದವಿ ಕಾಲೇಜ್ ಹತ್ತಿರ ಪೊಲೀಸರ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸರ ಕಾರ್ಯ ನೆನೆದು ಅವರಿಗೆ ಏಳನೀರು ಕೊಟ್ಟು …

Read More »

ಮೊಬೈಲಿನಿಂದ ಹರಡುತ್ತೆ ಕೊರೊನಾ – ವೈದ್ಯಕೀಯ ಸಿಬ್ಬಂದಿಗೆ ಫೋನ್ ಬಳಕೆಗೆ ನಿಷೇಧ

ಕೋಲ್ಕತ್ತಾ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಗಳು ಅನೇಕ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿವೆ. ಈ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿದೆ. ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‍ಒ)ಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಕೊರೊನಾ ವೈರಸ್ ಮೊಬೈಲ್ …

Read More »

ಹುಬ್ಬಳ್ಳಿ:ನೈಋತ್ಯ ರೈಲ್ವೇ ವಲಯದಿಂದ ಜ್ವರ ಚಿಕಿತ್ಸಾಲಯ ಪ್ರಾರಂಭ

ಹುಬ್ಬಳ್ಳಿ: ಸಾಮಾನ್ಯ ಜ್ವರ, ಕೆಮ್ಮು, ಶೀತದ ಚಿಕಿತ್ಸೆಗಾಗಿ ನೈಋತ್ಯ ರೈಲ್ವೇ ವಲಯ ಹುಬ್ಬಳ್ಳಿಯಲ್ಲಿ ಪ್ರತ್ಯೇಕವಾಗಿ ಜ್ವರ ಚಿಕಿತ್ಸಾಲಯಗಳನ್ನು ತೆರೆಯುವ ಮೂಲಕ ತನ್ನ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸಿದೆ. ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಎಸ್‍ಡಬ್ಲ್ಯುಆರ್ ನ ರೈಲ್ವೇ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಮತ್ತು ವೈಯಕ್ತಿಕ ರಕ್ಷಣಾ ಸಾಧನಗಳೊಂದಿಗೆ ಪ್ರತ್ಯೇಕ ತಂಡದೊಂದಿಗೆ ಪ್ರತ್ಯೇಕ ಕ್ಲಿನಿಕ್ ಸ್ಥಾಪಿಸಲಾಗಿದೆ. ಕೋವಿಡ್ -19 ರೋಗ ನಿಯಂತ್ರಣಕ್ಕಾಗಿ ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ …

Read More »

ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದವರರು ಅಂದರ್

ಬೆಂಗಳೂರು, ಏ.23- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ಲಕ್ಷ ಮೌಲ್ಯವಿರುವ ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಂದು ಎರಡು ತಲೆ ಹಾವು, ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹೊಸ ಗುರಪ್ಪನಪಾಳ್ಯದ ಮಹಮ್ಮದ್ ರಿಜ್ವಾನ್ (26) ಹಾಗೂ ಅಜರ್‍ಖಾನ್ (27) ಬಂಧಿತ ಆರೋಪಿಗಳು.ಆರೋಪಿಗಳು ಸಾರಕ್ಕಿ ಸರ್ಕಲ್‍ನ ಬಸಪ್ಪ ಗಾರ್ಡನ್‍ನಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಎರಡು ತಲೆ ಹಾವನ್ನು ಇಟ್ಟುಕೊಂಡು ನಿಂತಿರುವ …

Read More »

ಬ್ರೇಕಿಂಗ್ : ಬೆಂಗಳೂರಲ್ಲಿ ಕೊರೋನಾ ಶತಕ ಸಿಡಿಸಿದ ಬಿಹಾರಿ ಕಾರ್ಮಿಕ, ಇಂದು 16 ಮಂದಿಗೆ ಸೋಂಕು..!

ಬೆಂಗಳೂರು, ಏ.23- ಕಳೆದ ಮೂರು ದಿನಗಳಿಂದ ತಣ್ಣಗಿದ್ದ ಬೆಂಗಳೂರಿನಲ್ಲಿ ಇಂದು ಬಿಹಾರಿ ಕೊರೊನಾ ಬಾಂಬ್ ಸಿಡಿದಿದ್ದು, ಬಿಹಾರಿ ಮೂಲದ ಕಾರ್ಮಿಕನಿಂದ ಒಂದೇ ದಿನ 9 ಜನರಿಗೆ ಕೊರೊನಾ ಸೋಂಕು ತಗುಲುವ ಮೂಲಕ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು 443ಕ್ಕೆ ಏರಿದ್ದು, ಬೆಂಗಳೂರು ನಗರ-9, ಮಂಡ್ಯ-2 ವಿಜಯಪುರ-2, ಧಾರವಾಡ-2, ದಕ್ಷಿಣ ಕನ್ನಡ-1 ಸೇರಿದಂತೆ ಒಂದೇ ದಿನ 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ದಿನೇ …

Read More »

ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪ : ಜಮೀರ್, ಇಮ್ರಾನ್ ಪಾಷ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು, ಏ.23- ಹತ್ತೊಂಬತ್ತು ಮಂದಿ ವಿದೇಶಿ ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮ್ಮದ್ ಖಾನ್, ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಹಾಗೂ ಸುಬಾನಿಯಾ ಮಸೀದಿಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಅವರಿಗೆ ದೂರು ನೀಡಿದ್ದಾರೆ. ಪಾದರಾಯನಪುರ ವಾರ್ಡ್‍ನಲ್ಲಿರುವ ಸುಬಾನಿಯಾ ಮಸೀದಿಯಲ್ಲಿ ಇಂಡೋನೇಷ್ಯಾದ 10 ಮಂದಿ ಹಾಗೂ ಕಿರ್ಗಿಸ್ತಾನದ …

Read More »

ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನ

ಬೆಳಗಾವಿ –  – ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಈ ವಿಷಯ ತಿಳಿಸಿದ್ದಾರೆ. ಮಹಾರಾಷ್ಟ್ರ ಸಿಪಿಐ ಶಾಸಕನಿಂದ ಈ ದುಷ್ಕೃತ್ಯ ನಡೆದಿದ್ದು, ಆತನನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿರುವ ಅವರು, ಶ್ರೀರಾಮ ಸೇನೆಯ ಕಾರ್ಯಕರ್ತರು ರಾಜ್ಯದ್ಯಂತ ಮನೆಯಲ್ಲೇಯ ಸಾಧು ಸಂತರ ಫೋಟೋ ಇಟ್ಟು ಪ್ರತಿಭಟನೆ ನಡೆಸಿ, ಪ್ರಧಾನಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ …

Read More »

ಸಂಪರ್ಕಿತರ ಮೇಲೆ ನಿಗಾ ಇಡಲು ತಂತ್ರಜ್ಞಾನ ಬಳಸಿಕೊಳ್ಳಲು ಕರೆ:ಜಗದೀಶ್ ಶೆಟ್ಟರ್

ಬೆಳಗಾವಿ : ಕೋವಿಡ್-೧೯ ಪತ್ತೆ ಮತ್ತು ನಿಯಂತ್ರಣ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳಿಗಾಗಿ ಸ್ಥಾಪಿಸಲಾಗಿರುವ ಕೋವಿಡ್-೧೯ ವಾರ್ ರೂಮ್ ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು. ಇಲ್ಲಿನ ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಕೋವಿಡ್-೧೯ ವಾರ್ ರೂಮ್ ಆರಂಭಿಸಲಾಗಿರುತ್ತದೆ. ವಾರ್ ರೂಮ್ ಕಾರ್ಯಸ್ವರೂಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ …

Read More »

ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಬಸ್…..

ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಗುರುವಾರ (ಏ.೨೩) ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್ ಗಳನ್ನು ಅವರು ಹಸ್ತಾಂತರಿಸಿದರು. ಕೋವಿಡ್-೧೯ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್ ಗಳನ್ನು ಬಳಸಲಾಗುವುದು ಎಂದು …

Read More »