ರಾಯಚೂರು: ದಿನಸಿ ತರಲು ತೆಲಂಗಾಣಕ್ಕೆ ತೆರಳಿದ್ದ ರಾಯಚೂರು ತಾಲೂಕಿನ ಕುರ್ವಕಲಾ ನಡುಗಡ್ಡೆ ಗ್ರಾಮದ 13 ಜನ ಮರಳಿ ಬರುವಾಗ ತೆಪ್ಪ ಮುಗುಚಿ ಬಿದ್ದು ನಾಲ್ವರು ನಾಪತ್ತೆಯಾಗಿದ್ದಾರೆ. ಕುರ್ವಾಕಲಾ ಗ್ರಾಮದ ಪಾರ್ವತಿ (55) ನರಸಮ್ಮ (36) ಸುಮಲತಾ (32) ಪೂಜಾ (10) ನಾಪತ್ತೆಯಾದವರು. ತೆಲಂಗಾಣದ ಪಂಚಪಾಡಕ್ಕೆ ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ಘಟನೆ ನಡೆದಿದೆ. 13 ಜನರಲ್ಲಿ 9 ಜನ ಈಜಿ ದಡ ಸೇರಲು ಹರಸಾಹಸ …
Read More »ಗುಟ್ಟು ಗುಟ್ಟಾಗಿ ಪರಿಹಾರ ಕೊಡಿ ಅನ್ನೋ ಪಕ್ಷದ ನಾಯಕರ ಮಾತಿಗೆ ಜಮೀರ್ ಅಹ್ಮದ್ ಗೊಂದಲದಲ್ಲಿ ಸಿಲುಕಿದ್ದಾರೆ
ಬೆಂಗಳೂರು: ಕೆಜಿ ಹಳ್ಳಿ ಗಲಾಟೆಯಲ್ಲಿ ಮೃತರಾದ ಮೂವರ ಕುಟುಂಬಕ್ಕೆ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ 5 ಲಕ್ಷ ರೂ. ಪರಿಹಾರ ನೀಡುವದಾಗಿ ಘೋಷಣೆ ಮಾಡಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ನೀಡಿರುವ ಎಚ್ಚರದ ಸಂದೇಶಕ್ಕೆ ಜಮೀರ್ ಅಹ್ಮದ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ …
Read More »ಕೊರೊನಾ ಸಂಕಷ್ಟದ ನಡುವೆ ಬಿಜೆಪಿ ನಾಯಕರಿಂದ ಸ್ಥಾನಮಾನಕ್ಕೆ ಲಾಬಿ
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ದೇಶದ್ಯಾಂತ ಲಾಕ್ಡೌನ್ ಮಾಡಲಾಗಿತ್ತು. ಲಾಕ್ಡೌನ್ ನಿಂದಾಗಿ ರಾಜ್ಯದಲ್ಲಿ ಅಲ್ಲ ಇಡೀ ದೇಶದ ರಾಜಕೀಯ ವಿದ್ಯಮಾನಗಳು ಸ್ತಬ್ಧವಾಗಿದ್ದವು. ಆದರೆ ಲಾಕ್ಡೌನ್ ಅನ್ಲಾಕ್ ಆಗ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಪುನಾರಂಭಗೊಂಡಿದೆ. ಸ್ಥಾನಮಾನದ ಲೆಕ್ಕಾಚಾರದಲ್ಲಿರುವ ಆಡಳಿತ ಪಕ್ಷದ ನಾಯಕರು ದೆಹಲಿ ದಂಡಯಾತ್ರೆ ಶುರು ಮಾಡಿದ್ದು ಹೈಕಮಾಂಡ್ ನಾಯಕರ ಮನ ಗೆಲಲ್ಲು ಪ್ರಯತ್ನ ಆರಂಭಿಸಿದ್ದಾರೆ. ಅನ್ಲಾಕ್ ಬಳಿಕ ನಾಲ್ಕನೇ ಬಾರಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ದೆಹಲಿ ದಂಡಯಾತ್ರೆ ಮಾಡುತ್ತಿದ್ದಾರೆ. …
Read More »ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ಗಳಿಗೆ ನೋಟಿಸ್
ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.ಶಾಸಕ ಅಖಂಡ ಶ್ರೀನಿವಾಸ್ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ …
Read More »ಘಟಪ್ರಭಾ ನದಿಗೆ 72800 ಕ್ಯೂಸೆಕ್ಸ್ ನೀರು ಹರಿವು: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ:ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸಂಜೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ …
Read More »ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವ್ರ ಲಿಸ್ಟ್ ಇದೆ: ಅಶೋಕ್
ಬೆಂಗಳೂರು: ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವರ ಲಿಸ್ಟ್ ಎಲ್ಲಾ ಇದೆ. ಯಾವ ಯಾವ ಕಾಂಗ್ರೆಸ್ ನಾಯಕರ ಕೈಲಿ ಕೊತ್ತಂಬರಿ, ಕರಿಬೇವಿನ ಸೊಪ್ಪು ಇದೆ ಅಂತ ಮಾಹಿತಿ ಇದೆ ಎಂದು ಕಂದಾಯ ಸಚಿವ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಅಖಂಡ ಶ್ರೀನಿವಾಸ ಮೂರ್ತಿಯವರನ್ನು ಸೆಳೆಯಲು ಬಿಜೆಪಿ ಒತ್ತಡ ಹಾಕ್ತಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅಖಂಡ ಶ್ರೀನಿವಾಸ ಮೂರ್ತಿಯವರನ್ನು ಬಿಜೆಪಿಗೆ ಕರೆಯೋದೇ ಇಲ್ಲ. …
Read More »ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ
ಬೈಂದೂರು: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮರವಂತೆಯ ಕಿಶನ್ ಖಾರ್ವಿ(17) ಮೃತಪಟ್ಟ ಬಾಲಕ. ಈತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಯಾಗಿದ್ದು, ಬೆಳಗ್ಗೆ ದ್ವಿತೀಯ ಪಿಯುಸಿ ಪ್ರವೇಶ ದಾಖಲಾತಿಗಾಗಿ ಕಾಲೇಜಿಗೆ ಬಂದಿದ್ದನು. ದಾಖಲಾತಿ ಪ್ರಕ್ರಿಯೆ ಮುಗಿಸಿ ವಾಪಸ್ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ …
Read More »ಕರದಂಟು ನಾಡಿನ ಪ್ರಸಿದ್ದ ಗೋಕಾಕ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಗೋಕಾಕ: ಪಶ್ಚಿಮಘಟ್ಟ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆ ಕರದಂಟು ನಾಡಿನ ಪ್ರಸಿದ್ದ ಗೋಕಾಕ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಭಾರತ ನಯಾನಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ ಫಾಲ್ಸ್, ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 40 ಸಾವಿರ ಸಾವಿರ ಕ್ಯೂಸೆಕ್ಸ್ ನೀರು ಹರಿ ಬಿಡಲಾಗಿದೆ. ಹೀಗಾಗಿ ಫಾಲ್ಸ್ ನೀರಿನ ಮಟ್ಟ ಹೆಚ್ಚಿದ್ದು, ಬಂಡೆಗಳ ಮೇಲಿಂದ ನೀರು ಧುಮುಕುವ ಮನೋಹರ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ. …
Read More »ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆಬೆಳಗಾವಿ ಸೇರಿ 6 ಜಿಲ್ಲೆಗಳಲ್ಲಿಮುನ್ನಚ್ಚರಿಕೆ
ಬೆಂಗಳೂರು: ಬೆಳಗಾವಿ, ಧಾರವಾಡ ಸೇರಿ ಕರಾವಳಿ ಭಾಗದಲ್ಲಿ ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಸುರಿಯಬಹುದು. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡುಗಳಲ್ಲಿ ಚದುರಿದಂತೆ ಇಂದು ಮತ್ತು ನಾಳೆ …
Read More »ಖಾನಾಪುರ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ
ಖಾನಾಪುರ: ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಸೇತುವೆಯೊಂದು ಜಲಾವೃತವಾದ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸಾತಾಳಿ ಗ್ರಾಮದ ತೂಗು ಸೇತುವೆ ಜಲಾವೃತವಾಗಿದೆ. ಈ ಸೇತುವೆ ಮೂಲಕ ಸಾತನಾಳಿ, ಮಾಚಾಳಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನದಿ ನೀರಿನ ಮಟ್ಟ ಹೆಚ್ಚಿ ಸೇತುವೆ ಜಲಾವೃತವಾದರಿಂದ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ
Read More »