Breaking News

ಧಾರವಾಡ; ಮಾಸ್ಕ್ ಹಾಕದಿದ್ದರೆ ಮತ್ತೆ ದಂಡ ಕಟ್ಟಲು ಸಿದ್ಧರಾಗಿ

ಧಾರವಾಡ, ಫೆಬ್ರವರಿ 25: “ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಿಂದ ರಸ್ತೆ, ರೈಲು ಮತ್ತು ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು” ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಕೊರೊನಾ ನಿಯಂತ್ರಣ, ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹ ಮತ್ತು ಮದುವೆ, ಸಭೆ, ಸಮಾರಂಭಗಳಿಗೆ ಮಾರ್ಷಲ್‍ಗಳ ನೇಮಕಾತಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿತ್ಯ ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಲಾರಿ ಮೂಲಕ ಹಾಗೂ …

Read More »

ಪೆಟ್ರೋಲ್‌ – ಡಿಸೇಲ್‌ – ಗ್ಯಾಸ್‌ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್

ಬೆಂಗಳೂರು: ಪೆಟ್ರೋಲ್-ಡೀಸೆಲ್, ಗ್ಯಾಸ್ ಸಿಲಿಂಡರ್ ದರ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ಮುಂದಾಗಿದೆ. ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದೆ ಪ್ರಸ್ತಾಪ ಇಡಲು ನಿರ್ಧರಿಸಿದೆ.   ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಸುಳಿವು ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಹಾಗಾಗಿ ಬಸ್ …

Read More »

‘ವಿಶ್ವದ ಅತಿ ಉದ್ದದ ಪ್ಲಾಟ್ಫಾರ್ಮ್’ ಹೆಗ್ಗಳಿಕೆಗೆ ಪಾತ್ರವಾಗಿದೆ ಶ್ರೀ ಸಿದ್ಧರೂಧ ಸ್ವಾಮಿ ರೈಲ್ವೆ ನಿಲ್ದಾಣ

ಹುಬ್ಬಳ್ಳಿ: ನೈರುತ್ಯ ರೈಲ್ವೆಯ (ಎಸ್‌ಡಬ್ಲ್ಯುಆರ್) ಶ್ರೀ ಸಿದ್ಧರೂಧ ಸ್ವಾಮಿ ರೈಲ್ವೆ ನಿಲ್ದಾಣವು ವಿಶ್ವದ ಅತಿ ಉದ್ದದ ವೇದಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ನಿಲ್ದಾಣವು ದವಾಂಗೆರೆ / ಬೆಂಗಳೂರು ಮತ್ತು ಗದಗ್‌ನಿಂದ ಒಂದು ಬದಿಯಲ್ಲಿ ಎರಡು ಮಾರ್ಗಗಳನ್ನು ಹೊಂದಿದೆ ಮತ್ತು ಇನ್ನೊಂದು ಬದಿಯಲ್ಲಿ ಲೋಂಡಾ ಕಡೆಗೆ ಒಂದು ಮಾರ್ಗವನ್ನು ಹೊಂದಿದೆ, ಅಲ್ಲಿ ರೈಲ್ವೆ ಮಾರ್ಗವು ಗೋವಾ ಮತ್ತು ಮಹಾರಾಷ್ಟ್ರದ ಕಡೆಗೆ ಶಾಖೆಗಳನ್ನು ಹೊಂದಿರುತ್ತದೆ. ಜಿಎಂ / ಎಸ್‌ಡಬ್ಲ್ಯುಆರ್ ಅಜಯ್ ಕುಮಾರ್ …

Read More »

ಬಿಎಂಟಿಸಿ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಬಂದಿದೆ: ಲಕ್ಷ್ಮಣ ಸವದಿ

ಬೆಂಗಳೂರು: ಬಿಎಂಟಿಸಿ ಪ್ರಯಾಣ ದರ ಏರಿಸುವ ಬಗ್ಗೆ ನಿಗಮದಿಂದ ಪ್ತಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ತಿಳಿಸಿದರು. ಉಳಿದ ನಿಗಮಗಳಲ್ಲಿ ಕಳೆದ ವರ್ಷವೇ ಶೇ 13 ರಷ್ಟು ಏರಿಕೆ ಮಾಡಲಾಗಿದೆ. ಬಿಎಂಟಿಸಿ ಶೇ 18 ರಿಂದ ಶೇ 20 ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟು ಪ್ರಮಾಣ ಏರಿಕೆ ಸಾಧ್ಯವಿಲ್ಲ. ಪ್ರಯಾಣಿಕರಿಗೆ ಹೊರೆ ಆಗದಂತೆ ಏರಿಕೆ ಗೆ ಮನವಿ ಮಾಡಲಾಗುವುದು. ಅಂತಿಮ ನಿರ್ಧಾರ …

Read More »

ಪರೀಕ್ಷೆ ಇಲ್ಲದೆ 9 ರಿಂದ 11ನೇ ತರಗತಿಯ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಸರ್ಕಾರ!

ಚೆನ್ನೈ : ಕೊರೊನಾ ಮಹಾಮಾರಿಯಿಂದಾಗಿ ಪ್ರಸಕ್ತ ಸಾಲಿನ 9, 10 ಹಾಗೂ ಪ್ರಥಮ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ, ಉತ್ತೀರ್ಣಗೊಳಿಸಿ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಅಲ್ಲಿನ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ವರ್ಷ ಶೈಕ್ಷಣಿಕ ಕ್ಷೇತ್ರದ ಮೇಲೆ ಮಹಾಮಾರಿ ತನ್ನ ಪರಿಣಾಮ ಬೀರಿದ್ದು, ವಿದ್ಯಾರ್ಥಿಗಳ, ಶಿಕ್ಷಕರ ಸಮಸ್ಯೆಗಳನ್ನು ಅರ್ಥೈಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಪಠ್ಯದಲ್ಲಿಯೂ ಕಡಿತಗೊಳಿಸಲಾಗಿದೆ. …

Read More »

ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ನವದೆಹಲಿ: ತೈಲ ಕಂಪೆನಿ ಇಂಡಿಯನ್ ಆಯಿಲ್ ಕಂಪೆನಿಯು ಫೆಬ್ರವರಿಯಲ್ಲಿ ಮೂರನೇ ಸಲ ಗ್ಯಾಸ್ ಸಿಲಿಂಡರ್ ಬೆಲೆಯ ಏರಿಕೆ ಮಾಡಿದೆ. ಪ್ರತೀ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 769ರಿಂದ 794ಕ್ಕೆ ಏರಿಕೆ ಮಾಡಿದೆ. ಇದಕ್ಕೆ ಮೊದಲು ಫೆಬ್ರವರಿ 4 ಮತ್ತು 14ರಂದು ಬೆಲೆ ಏರಿಕೆ ಮಾಡಲಾಗಿತ್ತು. ಡಿಸೆಂಬರ್ ನಲ್ಲಿ ಕೂಡ ಎರಡು ಸಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಂಡರ್ …

Read More »

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

ಕಲಬುರಗಿ: ಲಾರಿಯ ಟೈಯರ್ ಸ್ಫೋಟವಾಗಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ವಾಡಿ ಸಮೀಪದ ರೇವೂರ್ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ ಬಸ್ ನಲ್ಲಿದ್ದ ಏಳು ಜನರು ಗಾಯಗೊಂಡಿದ್ದಾರೆ. ನಗರ ಸಾರಿಗೆ ಬಸ್ ಜೇವರ್ಗಿಯಿಂದ ಚಿತ್ತಾಪುರ ಕಡೆಗೆ ಹೊರಟ್ಟಿತ್ತು. 25 ರಿಂದ 30 ಜನ ಬಸ್ ನಲ್ಲಿದ್ದರು ಎನ್ನಲಾಗಿದೆ. ಈ ವೇಳೆ ಎದುರುಗಡೆಯಿಂದ ಲಾರಿಯ ಟೈಯರ್ ಬ್ಲಾಸ್ಟ್ …

Read More »

ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್:‌ ʼಮೀಸಾಲಾತಿ ಸಾಧ್ಯವಿಲ್ಲʼ ಎಂದ ರಾಜ್ಯ ಸರ್ಕಾರ..!

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನ ಪ್ರವರ್ಗ 2ಎ ಸೇರಿಸಬೇಕು ಎಂದು ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿದೆ. ಈ ಮಧ್ಯೆ ರಾಜ್ಯ ಸರ್ಕಾರ ಶಾಕ್ ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್‌ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ. ಹೌದು, ಸರ್ಕಾರದ ನಿಲುವನ್ನ ಧರಣಿ ನಿರತ ಮುಖಂಡರಿಗೆ ತಿಳಿಸಿದ್ದು, ನೀವು ಪಟ್ಟು ಕದಿಲಿಸದೇ ಈ ರೀತಿ ಹೋರಾಟ ಮಾಡಿದ್ರೆ ಪ್ರಯೋಜನೆ ಇಲ್ಲ. ಹೋರಾಟ …

Read More »

ಭಾರತದಲ್ಲಿ ‘ವಾಟ್ಸ್ ಆಪ್’ ಬ್ಯಾನ್.?

ನವದೆಹಲಿ : ಕೇಂದ್ರ ಸರ್ಕಾರ ಗುರುವಾರ ಎಲ್ಲ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು 2021 ಅನ್ನು ಪ್ರಕಟಿಸಿದ್ದು, ಇದರಲ್ಲಿ ಮಧ್ಯವರ್ತಿ ಮಾರ್ಗದರ್ಶಿ ಸೂತ್ರಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ಯನ್ನು ಒಳಗೊಂಡಿದೆ. ಹೊಸ ನಿಯಮ ಜಾರಿಗೆ ಬರಲು ಸ್ವಲ್ಪ ಸಮಯ ಹಿಡಿಯಲಿದ್ದು, ಸಂದೇಶದ ಮೂಲವನ್ನು ಗುರುತಿಸುವ ದೃಢ ನಿಲುವನ್ನು ಸರ್ಕಾರ ಮುಂದಿಟ್ಟಿದೆ. ಅಂದರೆ ಸಂದೇಶಗಳಿಗೆ ಎಂಡ್ ಟು ಎಂಡ್ ಎನ್ ಕ್ರಿಪ್ಶನ್ ಬಳಸುವ ವಾಟ್ಸಾಪ್, ಸಿಗ್ನಲ್, ಟೆಲಿಗ್ರಾಂ ಮುಂತಾದ …

Read More »

1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ

ಗೋಕಾಕ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ ಅವರು, ಮನೆ ಮನೆಗೆ ಗಂಗೆ ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ಜಲಜೀವನ …

Read More »