Breaking News

ಜನತಾ ಜೀವ ವೈವಿಧ್ಯತೆಯ ಸಂರಕ್ಷಣೆಯು ಪ್ರತಿಯೊಬ್ಬರ ಆದ್ಯಕರ್ತವ್ಯ.ಮುಖ್ಯಾಧಿಕಾರಿ ಸತೀಶ್ ಕುಮಾರ್.

  ಮಂಡ್ಯ :ರಾಜಪೇಟೆ ಪಟ್ಟಣದ ಸ್ವರ್ಣಜಯಂತಿ ಶಹರಿ ರೋಜ್ ಗಾರ್ ಯೋಜನಾ ಭವನದ ಸಭಾಂಗಣದಲ್ಲಿ ಜನತಾ ಜೀವವೈವಿದ್ಯ ದಾಖಲಾತಿ ನೋಂದಣಿ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮಾತನಾಡಿದರು. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಸೇರಿದಂತೆ ಸಂಪೂರ್ಣವಾಗಿ ಪರಿಸರವೇ ಮಾಲಿನ್ಯವಾಗುತ್ತಿರುವುದರಿಂದ ಅಪರೂಪದ ಜೀವಸಂಕುಲಗಳು ನಶಿಸಿಹೋಗುತ್ತಿವೆಯಲ್ಲದೇ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ …

Read More »

ಪಿಎಂ ಕೇರ್ಸ್ ಫಂಡ್ ಅನುಮಾನ ಮೂಡಿಸಿದೆ, ವೆಬ್‍ಸೈಟ್‍ನಲ್ಲಿ ಮಾಹಿತಿ ಪ್ರಕಟಿಸುವಂತೆ ಪಿಐಎಲ್ ಸಲ್ಲಿಕೆ

ನವದೆಹಲಿ: ಪಿಎಂ ಕೇರ್ಸ್ ಫಂಡ್ ಗೆ ಬರುತ್ತಿರುವ ದೇಣಿಗೆ ಮೂಲ ಮತ್ತು ಅದನ್ನು ಯಾವ ಉದ್ದೇಶಗಳಿಗೆ ಬಳಕೆ ಮಾಡಲಾಗಿದೆ ಎಂಬ ವಿವರವನ್ನು ವೆಬ್‍ಸೈಟ್ ನಲ್ಲಿ ಪ್ರಕಟಿಸಲು ಸೂಚಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಪಿಎಂ ಕೇರ್ಸ್ ಮಾಹಿತಿ ಕೋರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಳಿಕ ಡಾ.ಎಸ್.ಎಸ್ ಹೂಡಾ ಅವರು ವಕೀಲ ಆದಿತ್ಯ ಹೂಡಾ ಮೂಲಕ ಈ …

Read More »

ಗಣಿನಾಡಿನಲ್ಲಿ ಕೋವಿಡ್-19 ಗೆದ್ದ ಕೊರೊನಾ ವಾರಿಯರ್ ಸೇರಿ ಮೂವರು ಡಿಸ್ಚಾರ್ಜ್

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾದ ಮೂವರನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರ ಸಮಕ್ಷಮದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದ ಆ ಮೂವರನ್ನ ಚಪ್ಪಾಳೆ ತಟ್ಟುವ ಮೂಲಕ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಆತ್ಮೀಯವಾಗಿ ಬಿಡುಗಡೆಗೊಳಿಸಿದರು.   ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ವರ್ಷದ ಪುರುಷ, ರೋಗಿ ಸಂಖ್ಯೆ-2308 ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 44 ವರ್ಷದ, ರೋಗಿ ಸಂಖ್ಯೆ-2781 ಮಥುರಾದಿಂದ …

Read More »

ಆನ್‍ಲೈನ್ ಕ್ಲಾಸಿಗೆ ಹಾಜರಾಗಲು ಮನೆಯ ಹಂಚು ಏರಿದ ಬಿಎ ವಿದ್ಯಾರ್ಥಿನಿ…………

ತಿರುವನಂತಪುರಂ: ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಇದೀಗ ತಗರತಿಗಳೆಲ್ಲವೂ ಆನ್ ಲೈನ್ ನಲ್ಲೇ ನಡೆಯುತ್ತಿದೆ. ಆದರೆ ಇಲ್ಲಿ ಸಮಸ್ಯೆಯೆಂದರೆ ಕೆಲವರಿಗೆ ತರಗತಿಗೆ ಹಾಜರಾಗಲು ನೆಟ್ ವರ್ಕ್ ಇಲ್ಲದೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಪದವಿ ವಿದ್ಯಾರ್ಥಿನಿಯೊಬ್ಬಳು ಒಳ್ಳೆಯ ಉಪಾಯವೊಂದನ್ನು ಕಂಡುಕೊಂಡಿದ್ದಾಳೆ. ಹೌದು. ಕುಟ್ಟಿಪುರಂ ಕೆಎಂಸಿಟಿ ಆರ್ಟ್ಸ್ & ಸೈನ್ಸ್ ಕಾಲೇಜಿನ ವಿದ್ಯಾರ್ಥಿನಿ ನಮಿತಾ, ಮೊಬೈಲ್ ನೆಟ್‍ವರ್ಕ್ ಇಲ್ಲವೆಂದು ತನ್ನದೇ ಆದ ಐಡಿಯಾವೊಂದನ್ನು ಕಂಡುಕೊಂಡು ಇದೀಗ ಭಾರೀ ಸುದ್ದಿಯಾಗಿದ್ದಾಳೆ. ಕೊಟ್ಟಕಲ್ ಸಮೀಪದ ಅರೀಕ್ಕಲ್ …

Read More »

ಶಂಕರ ಬಿದರಿಗೆ ಪರಿಷತ್ ಟಿಕೆಟ್ ನೀಡಲು ಮನವಿ

ಬೆಂಗಳೂರು, ಜೂ.4- ನಿವೃತ್ತ ಡಿಜಿಪಿ ಶಂಕರ ಬಿದರಿ ಅವರನ್ನು ರಾಜ್ಯಸಭೆ ಹಾಗೂ ವಿಧಾನ ಪರಿಷತ್‍ಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವಂತೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ. ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಶಂಕರ ಬಿದರಿಯವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸುಮಾರು …

Read More »

ರಾಜ್ಯಸಭೆಗೆ ಚುನಾವಣೆ : ಈವರೆಗೂ ಸಲ್ಲಿಕೆಯಾಗಿಲ್ಲ ಯಾವುದೇ ನಾಮಪತ್ರ …………

ಬೆಂಗಳೂರು,ಜೂ.4-ರಾಜ್ಯ ವಿಧಾನಸಬೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಈವರೆಗೂ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿಲ್ಲ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. 10 ಜನ ಶಾಸಕರ ಸಹಿಯೊಂದಿಗೆ ಮೀಸಲಾತಿ ವ್ಯಾಪ್ತಿಯಡಿ ಬರುವ ಅಭ್ಯರ್ಥಿಗಳು 5 ಸಾವಿರ, ಸಾಮಾನ್ಯ ವರ್ಗದ ಅಭ್ಯರ್ಥಿಗಳು 10 ಸಾವಿರ ರೂ. ಠೇವಣಿಯೊಂದಿಗೆ ನಾಮಪತ್ರ ಸಲ್ಲಿಸಬಹುದು. ಆದರೆ ಈವರೆಗೂ ಯಾವ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ.   ಪ್ರತಿಯೊಬ್ಬ ಅಭ್ಯರ್ಥಿಯೂ ನಾಲ್ಕು 4 ನಾಮಪತ್ರಗಳನ್ನು …

Read More »

ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲಸಿದ್ದರಾಮಯ್ಯ

ಬೆಂಗಳೂರು,ಜೂ.4- ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಶಾಲೆಗಳನ್ನು ಜುಲೈ ತಿಂಗಳಿನಲ್ಲಿ ಪುನರಾರಂಭಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಪೋಷಕರು ಆತಂಕಕ್ಕೀಡಾಗಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸರ್ಕಾರ ಗಮನಿಸಬೇಕು ಎಂದು ಹೇಳಿದ್ದಾರೆಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ …

Read More »

ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ : ಸುರೇಶ್ ಕುಮಾರ್

ಬೆಂಗಳೂರು: ಸದ್ಯಕ್ಕೆ ನಾವು ಶಾಲೆ ಆರಂಭಿಸುವುದಿಲ್ಲ. ಪೋಷಕರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್‍ಬುಕ್‍ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೇ 30 ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು ಇದೇ ಜೂನ್ …

Read More »

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ತಾ ಇದ್ದನಾ?- ಎಸ್.ಟಿ.ಸೋಮಶೇಖರ್

ಮೈಸೂರು: ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ನುತ್ತಿದ್ದನಾ ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ನಾನು ಸಚಿವನಾಗಿ ಮೂರು ತಿಂಗಳು ಆಗಿದೆ. ಇದುವರೆಗೂ ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಆಡಳಿತ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಅಂತ ಸಿಎಂ ನಮಗೆ ಹೇಳಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿದ್ದಾಗ ಅವರ ಮಗ …

Read More »

ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್‌ಗೆ ಕೊರೊನಾ ಪಾಸಿಟಿವ್..!

ನವದೆಹಲಿ, ಜೂ.4- ಭಾರತದ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್‌ಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಜಯ್ ಕುಮಾರ್ ವರದಿ ನೆಗೆಟಿವ್ ಬರುವವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇದರ ಬಗ್ಗೆ ಮಾಹಿತಿ ನೀಡಿಲು ಕೇಂದ್ರ …

Read More »