Breaking News

ಹೊಟ್ಟೆನೋವೆಂದು ಆಸ್ಪತ್ರೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಹಾವೇರಿ, ಡಿಸೆಂಬರ್​ 27: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ (death) ಘಟನೆ ನಗರದ ವೀರಾಪುರ ಆಸ್ಪತ್ರೆಯಲ್ಲಿ ನಡೆದಿದೆ. ಬ್ಯಾಡಗಿ ಪಟ್ಟಣದ ಶಮಿನಾ ಬಾನು ಅರಳಿಕಟ್ಟಿ(23) ಮೃತ ಮಹಿಳೆ. ಮೆಡಿಸಿನ್ ಓವರ್​ಡೋಸ್​ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಮಹಿಳಾ ಪೋಷಕರಿಂದ ಪ್ರತಿಭಟನೆ ಮಾಡಲಾಗಿದೆ. ಬ್ಯಾಡಗಿಯ 23 ವರ್ಷದ ಮಹಿಳೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಹಾವೇರಿಯ ವೀರಾಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಆಸ್ಪತ್ರೆ …

Read More »

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆಯಾಗಿದ್ದಾರೆ. ರಾಜ್ಯ ಖಜಾಂಚಿಯಾಗಿ ಶಿವರುದ್ರಯ್ಯ ಗೆದ್ದರು. 2024-29ನೇ ಅವಧಿಯ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಇಂದು ಕಬ್ಬನ್‌ ಪಾರ್ಕ್‌ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಿತು. ಬಳಿಕ ನಡೆದ ಮತ ಎಣಿಕೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್​.ಷಡಕ್ಷರಿ 507 ಮತ ಪಡೆಯುವ ಮೂಲಕ ತಮ್ಮ …

Read More »

ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ. ನ.16ರಂದು ಶಾಂತಕುಮಾರಿ ಎಂಬವರು ತಾವು ಬೆಂಗಳೂರಿಗೆ ಹೋಗಲು ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡೆಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಡಿ.6ರಂದು ರತ್ನಮ್ಮ ಎಂಬವರು ತಾವು ಬೆಂಗಳೂರಿಗೆ ಹೋಗಲು ಬಸ್ ಹತ್ತುವಾಗ ಬ್ಯಾಗ್​ನಲ್ಲಿದ್ದ …

Read More »

ಬೈಕ್ ವ್ಹೀಲಿಂಗ್ ವೇಳೆ ಅಪಘಾತವಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ದೇವನಹಳ್ಳಿ: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಹರ್ಭಾಜ್ (19) ಮೃತರು. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್​ ವ್ಹೀಲಿಂಗ್​ ಮಾಡುತ್ತಿದ್ದರು. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ತೀವ್ರ …

Read More »

ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ.

ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ. ಗೋಕಾಕ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಅವರು ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಭಾರತದ ಹಿರಿಯ ಮುತ್ಸದ್ದಿಯನ್ನು ಕಳೆದುಕೊಂಡಿದೆ. ಮೃದು ಸ್ವಭಾವದ ಅರ್ಥಿಕ …

Read More »

ಭಕ್ತಿಭಾವದಲ್ಲಿ ನಡೆದ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ

ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಉತ್ಸಾಹದಲ್ಲಿ ನಡೆದ ಉಡಿ ತುಂಬುವ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮ ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಇಂದು ಶುಕ್ರವಾರದಂದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಈ ನಿಮಿತ್ಯ ದೇವಿಯ ಉಡಿ ತುಂಬು ಕಾರ್ಯಕ್ರಮ ನಡೆಯಿತು. ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳು ಆರಂಭಗೊಂಡವು. ಗ್ರಾಮದಲ್ಲಿ ವಾದ್ಯಗಳ ಮೇಳದೊಂದಿಗೆ ಭಂಡಾರ …

Read More »

ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್

ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್ ಅರ್ಥಶಾಸ್ತ್ರದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಮಾಜಿ ಪಿಎಂ ಡಾ. ಮನಮೋಹನ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರವನ್ನು ಕಲಿಯುವ ವಿದ್ಯಾರ್ಥಿಗಳಿಗಾಗಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕೆಂದರು. ಪ್ರಧಾನಿ ಡಾ. ಮನಮೋಹನ ಸಿಂಗ್ ಇನ್ನಿಲ್ಲ. …

Read More »

ಬೆಳಗಾವಿಯಲ್ಲಿ ಸ್ಟೇಡಿಯಂ ನಿರ್ಮಿಸಬೇಕೆಂದು ಆಗ್ರಹಿಸಿದ ದಕ್ಷಿಣ ಶಾಸಕ ಅಭಯ ಪಾಟೀಲ್ಅಭಿನಂದಿಸಲಾಯಿತು.

ಸದನದಲ್ಲಿ ಕ್ರೀಡಾಳುಗಳ ಕುರಿತು ಚರ್ಚಿಸಿ ಶಾಸಕ ಅಭಯ ಪಾಟೀಲ್; ಸ್ಕೇಟಿಂಗ್ ತರಬೇತುದಾರರಿಂದ ಸನ್ಮಾನ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿಯ ಕ್ರೀಡಾಳುಗಳ ಸಮಸ್ಯೆಯ ಕುರಿತು ಧ್ವನಿ ಎತ್ತಿ, ಬೆಳಗಾವಿಯಲ್ಲಿ ಸ್ಟೇಡಿಯಂ ನಿರ್ಮಿಸಬೇಕೆಂದು ಆಗ್ರಹಿಸಿದ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರನ್ನು ಬೆಲಗಾಮ್ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮತ್ತು ಆಭಾ ಸ್ಫೋರ್ಟ್ಸ್ ಕ್ಲಬನ ವತಿಯಿಂದ ಸತ್ಮರಿಸಿ ಅಭಿನಂದಿಸಲಾಯಿತು. ಇದು ವರೆಗೂ ನಡೆದ ಅಧಿವೇಶನದಲ್ಲಿ ಕ್ರೀಡೆ ಮತ್ತು ಕ್ರೀಡಾಳುಗಳ ಕುರಿತು ಯಾವ ಶಾಸಕರು …

Read More »

ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲು ಸೇವೆ ಆರಂಭ

ಹುಬ್ಬಳ್ಳಿ: ಕ್ರಿಸ್ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಪೂರೈಸಲು ನೈಋತ್ಯ ರೈಲ್ವೆ, ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತೀ ದಿಕ್ಕಿನಲ್ಲಿ 3 ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 07367/07368 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್​ಪ್ರೆಸ್​ ವಿಶೇಷ (3 ಟ್ರಿಪ್​​ಗಳು) ರೈಲು ಸಂಖ್ಯೆ 07367 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ಎಕ್ಸ್​ಪ್ರೆಸ್​ ವಿಶೇಷ ರೈಲು ಡಿಸೆಂಬರ್ 30, ಜನವರಿ 6 ಮತ್ತು 13, 2025ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ …

Read More »

ವಕ್ಫ್ ಇಲಾಖೆಯಲ್ಲಿ ವ್ಯಾಪಕ ಪೆಟ್ರೋಲ್ ದುರ್ಬಳಕೆ ಪತ್ರ ಬರೆದ ಯತ್ನಾಳ್

ವಿಜಯಪುರ, ಡಿಸೆಂಬರ್​ 27: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್​​​ ಇಲಾಖೆಯಲ್ಲಿ (Waqf Board) ಮನಬಂದಂತೆ ಪೆಟ್ರೋಲ್ ಇಂಡೆಂಟ್​ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್​ಗಳು ದೊಡ್ಡ ಭ್ರಷ್ಟಾಚಾರವನ್ನು ಎಸಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ (Basangouda Patil Yatnal) ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸರ್ಕಾರದ ಎಲ್ಲ ಇಲಾಖೆಗಳಿಗೂ ಇಂಧನ ಮಿತಿ ಮಾರ್ಗಸೂಚಿ ಹೊರಡಿಸುವಂತೆ ಮನವಿ ಮಾಡಿದ್ದಾರೆ. …

Read More »