ಸಮಾನತೆಯ ಹಾದಿಯಲ್ಲಿ ದೇಶವು ಸಾಗಬೇಕಾದ ದಾರಿ ಇನ್ನೂ ಇದೆಯಾದರೂ ಈ ನಿಟ್ಟಿನಲ್ಲಿ ಒಂದು ರಾಷ್ಟ್ರವಾಗಿ, ಸಮಾಜವಾಗಿ ನಾವು ಕೆಲವು ವರ್ಷಗಳಿಂದ ಗಮನಾರ್ಹ ಹೆಜ್ಜೆಗಳನ್ನು ಇಡುತ್ತಾ ಸಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ ಈಗ ಸುಪ್ರೀಂ ಕೋರ್ಟ್ ನೀಡಿರುವ ಆದೇಶವೊ ಒಂದೆನ್ನಬಹುದು. ಹಿಂದೂ ಅವಿಭಜಿತ ಕುಟುಂಬದಲ್ಲಿ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಗಳಿಗೆ ತಂದೆಯ ಪಿತ್ರಾರ್ಜಿತ ಆಸ್ತಿಯ ಮೇಲೆ ಸಮಾನ ಹಕ್ಕಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದಷ್ಟೇ ಅಲ್ಲದೇ …
Read More »ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್‌ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ …
Read More »ಲಡಾಖ್ನಲ್ಲಿ ಹಾರಲು ಸಿದ್ಧವಾಗ್ತಿದೆ ವಿಶೇಷ ರಾಷ್ಟ್ರಧ್ವಜ
ಬಳ್ಳಾರಿ: ರಾಜ್ಯದಲ್ಲಿ ತಯಾರಾಗುವ ರಾಷ್ಟ್ರ ಧ್ವಜಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಧಾರವಾಡ ಗರಗದಲ್ಲಿ ತಯಾರಾಗುವ ರಾಷ್ಟ್ರ ಧ್ವಜಗಳು ದೇಶದ ಮೂಲೆ ಮೂಲೆಗಳಲ್ಲಿ ಹಾರಾಡುತ್ತವೆ. ಗಣಿಜಿಲ್ಲೆಯಲ್ಲಿ ತಯಾರಾಗುತ್ತಿರುವ ರಾಷ್ಟ್ರಧ್ವಜ ಲಡಾಖ್ ನಲ್ಲಿ ಹಾರಲಿದೆ. ಈ ರಾಷ್ಟ್ರ ಧ್ವಜ ಸಾಮಾನ್ಯವಾದುದಲ್ಲಾ ರಾಜ್ಯದ ಪ್ರತಿ ಜಿಲ್ಲೆ ತಾಲೂಕು ಕೇಂದ್ರದಿಂದ ಜನರು ಹೊಲಿಗೆ ಹಾಕಿ ತಯಾರಿಸಲಾಗುತ್ತಿದೆ. ರಾಷ್ಟ್ರ ಧ್ವಜ ಅಂದ್ರೆ ಸಾಕು ನಮಗೆ ನೆನಪಿಗೆ ಬರುವುದು ಧಾರವಾಡದ ಗರಗ, ದೆಹಲಿಯ ಕೆಂಪು …
Read More »ಜನರ ಬಳಿ ಕ್ಷಮೆ ಕೇಳಿದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ
ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತನ್ನ ಕ್ಷೇತ್ರದ ಜನರ ಬಳಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಇಂದು ಪುಂಡರ ಕೃತ್ಯಕ್ಕೆ ಬಲಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಯನ್ನು ಮಹಜರ್ ಮಾಡಲು ಪೊಲೀಸರು ಆಗಮಿಸಿದ್ದರು. ಜೊತೆಗೆ ಸುಟ್ಟ ವಾಹನಗಳು ಹಾನಿಯಾಗಿರುವ ಸಾರ್ವಜನಿಕ ಆಸ್ತಿಪಾಸ್ತಿಗಳ ವೀಕ್ಷಣೆ ಮಾಡಿದರು. ಈ ವೇಳೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಖಂಡ ಶ್ರೀನಿವಾಸ್ ಅವರು ಮನೆ ನೋಡಲು ಬಂದಿದ್ದರು. ಈ ವೇಳೆ …
Read More »ಗಲಭೆಯ 7ನೇ ಆರೋಪಿ ಸಚಿವ ಕೆಜೆ ಜಾರ್ಜ್ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯ
ಬೆಂಗಳೂರು: ಎಫ್‌ಬಿ ಪೋಸ್ಟ್‌ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ ಕೆಜೆ ಜಾರ್ಜ್ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯವಾಗಿದೆ.ಹೌದು. ನಾಗವಾರ ವಾರ್ಡ್‌ನ ಕಾಂಗ್ರೆಸ್ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಬೆಂಗಳೂರು ಗಲಭೆಯ 7ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ರಾತ್ರಿ ಈತನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಈತ ಮನೆಯಲ್ಲಿ ಇರಲಿಲ್ಲ. ಆದರೆ ಖಲೀಂ ಜಾರ್ಜ್ ಜೊತೆ …
Read More »ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ.. ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ …
Read More »ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು
ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿಯೇ ಸುದ್ದಿಯಾಗಿದ್ದ ಮಣಗುತ್ತಿ ಗ್ರಾಮದಲ್ಲಿಯೇ ಪಿಡಿಒಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಇವರು ಈ ಹಿಂದೆ ವಂಟಮೂರಿ ಗ್ರಾಮ ಪಂಚಾಯಿತಿ ಕಾರ್ಯ ನಿರ್ವಹಿಸುತ್ತದ್ದ ಸಂದರ್ಭದಲ್ಲಿ ಕೊರೊನಾ ಸೋಂಕಿತ ಕುಟುಂಬದವರು ಹಲ್ಲೆ ಮಾಡಿದ್ದರು. ಇವರು ತಿಂಗಳ ಹಿಂದಷ್ಟೇ ಮಣಗುತ್ತಿ ಪಂಚಾಯಿತಿಗೆ ವರ್ಗಾವಣೆಗೊಂಡಿದ್ದರು. ಸೋಂಕಿತ ಪಿಡಿಒ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ
ಬೆಂಗಳೂರು: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶುಭ ಕೋರಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ , ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಗೋಪಾಲಯ್ಯ ಸೇರಿದಂತೆ ಇತರರು ಇದ್ದರು.
Read More »ವಿದ್ಯಾರ್ಥಿಗಳ ಆನ್‍ಲೈನ್ ಕ್ಲಾಸ್ಪ ಪವರ್ ಹಾಗೂ ಟವರ್ ಎರಡರದ್ದು ಸಮಸ್ಯೆ
ಶಿವಮೊಗ್ಗ : ಆನ್‍ಲೈನ್ ಶಿಕ್ಷಣಕ್ಕೆ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಸಮಸ್ಯೆ ಎದುರಾಗಿದೆ. ಆನ್‍ಲೈನ್ ಶಿಕ್ಷಣಕ್ಕೆ ಪವರ್ ಹಾಗೂ ಟವರ್ ಈ ಎರಡೂ ಅತೀ ಮುಖ್ಯವಾಗಿದೆ. ಆದ್ರೆ ಮಲೆನಾಡಿನಲ್ಲಿ ಪವರ್ ಹಾಗೂ ಟವರ್ ಎರಡರದ್ದು ಸಮಸ್ಯೆ ಇದೆ. ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಬಗ್ಗೆ ಒಲವು ತೋರುತ್ತಿಲ್ಲ. ನೆಟ್ ವರ್ಕ್ ಸಿಗಬೇಕು ಅಂದ್ರೆ ಊರಿಂದ ಆಚೆ ಹೋಗಬೇಕಿದೆ. ದೇಶದೆಲ್ಲೆಡೆ ಕೊರೊನಾ ಮಹಾಮಾರಿ ಎಲ್ಲಾ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಈ ಮಹಾಮಾರಿಯಿಂದ …
Read More »ಪ್ರೀತಿಸಿದ ಯುವತಿಯನ್ನು ಹಾಡಹಗಲೇಸಿನಿಮಾ ಸ್ಟೈಲ್ ನಲ್ಲಿ ಕಿಡ್ನಾಪ್
ಕೋಲಾರ: ಪ್ರೀತಿಸಿದ ಯುವತಿಯನ್ನು ಹಾಡಹಗಲೇ ನಡುರಸ್ತೆಯಲ್ಲಿ ಯುವಕ ಅಪಹರಿಸಿದ ಘಟನೆ ಇಂದು ಕೋಲಾರದಲ್ಲಿ ನಡೆದಿದೆ.ಶಿವ ಯುವತಿಯನ್ನು ಅಪಹರಿಸಿದ ಯುವಕ. ಪ್ರೀತಿಸಿ ಇನ್ನೇನು ಮದುವೆಯಾಗಬೇಕು ಎಂದುಕೊಂಡಿದ್ದ ವೇಳೆ ಯುವತಿಯ ಕುಟುಂಬಸ್ಥರು ನಿರಾಕರಿಸಿದ್ದರು. ಈ ಹಿನ್ನೆಲೆ ಸಿನಿಮಾ ಸ್ಟೈಲ್‍ನಲ್ಲಿ ಪ್ರಿಯಕರ ತನ್ನ ಪ್ರಿಯತಮೆಯನ್ನ ಕಿಡ್ನಾಪ್ ಮಾಡಿದ್ದಾನೆ. ಜನ ನಿಬಿಡ ಪ್ರದೇಶದಲ್ಲಿ ಹಾಡ ಹಗಲೆ ಪ್ರೀತಿಸಿದ ಯುವತಿಯನ್ನ ಕಿಡ್ನಾಪ್ ಮಾಡಿದ ಯುವಕನ ಕೈ ಚಳಕಕ್ಕೆ ಈಡೀ ಕೋಲಾರ ನಗರ ಬೆಚ್ಚಿ ಬಿದ್ದಿದೆ. ಕೋಲಾರ ನಗರದ …
Read More »