Breaking News

ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು

ಡಿಸೆಂಬರ್​ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು (Death) ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಡಿ.24ರಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಪೂಜಾ ದಾಖಲಾಗಿದ್ದರು. ನಿನ್ನೆ ಮಧ್ಯಾಹ್ನ ಗಂಡು …

Read More »

ಹಣಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ!

ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್​ನೋಟ್​ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದೆ. ಡೆತ್​ ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ …

Read More »

ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡ ಸುತ್ತ-ಮುತ್ತ ಲೈಟಿಂಗ್ಸ್:

ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮುಖ್ಯ ದ್ವಾರಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.‌ ಈಗ ಶತಮಾನೋತ್ಸವಕ್ಕೆ ಬೆಳಕಿನ‌ ಸ್ವರ್ಗವೇ ಧರೆಗೆ ಇಳಿದಿದೆ.‌ ಈ ದೃಶ್ಯ ವೈಭವ ಕಣ್ತುಂಬಿಕೊಂಡು ಜನ‌ ಸಖತ್ ಎಂಜಾಯ್ ಮಾಡುತ್ತಿದ್ದಾರೆ. 1924 ಡಿ.26, 27ರಂದು ಬೆಳಗಾವಿ ಟಿಳಕವಾಡಿಯಲ್ಲಿ ಮಹಾತ್ಮ ಗಾಂಧೀಜಿ‌ ಅಧ್ಯಕ್ಷತೆಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ‌ ನಡೆದಿತ್ತು.‌ ಆ ವೇಳೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ವಿಜಯನಗರ ಸಾಮ್ರಾಜ್ಯ ಕುರುಹುವಿಗಾಗಿ “ವಿಜಯನಗರ” ಎಂದು ನಾಮಕರಣ ಮಾಡಲಾಗಿತ್ತು.‌ …

Read More »

ಬೆಳಗಾವಿಯ ಕಾಂಗ್ರೆಸ್​ ಬ್ಯಾನರ್​ ನಕ್ಷೆಯಿಂದ ಪಿಒಕೆ ಕಾಣೆ: ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಖಂಡನೆ

ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಅಧಿವೇಶನಕ್ಕಾಗಿ ನಗರದಲ್ಲಿ ಅಳವಡಿಸಲಾಗಿರುವ ಭಾರತದ ವಿವಾದಾತ್ಮಕ ನಕಾಶೆ ಹೊಂದಿರುವ ಬ್ಯಾನರ್​ಗಳ ವಿರುದ್ಧ ಬಿಜೆಪಿ ಕಿಡಿ ಕಾರಿದೆ. ಬೆಳಗಾವಿ ನಗರದ ಪ್ರವೇಶದ್ವಾರದ ಬಳಿ ಹಾಕಲಾಗಿರುವ ಸ್ವಾಗತ ಫ್ಲೆಕ್ಸ್​ಗಳಲ್ಲಿ ಮುದ್ರಿಸಲಾದ ಭಾರತದ ನಕಾಶೆಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಅಕ್ಸಾಯ್ ಚಿನ್ ಪ್ರದೇಶಗಳು ಇಲ್ಲದೆ ಇರುವುದು ಸದ್ಯ ವಿವಾದದ ಕೇಂದ್ರ ಬಿಂದುವಾಗಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಮತ್ತು ರಾಜ್ಯಸಭಾ …

Read More »

ಕರ್ನಾಟಕ ಸಿಂಹ ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಳಗಾವಿ : “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆ ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಿರ್ಮಿಸಿರುವ ಕರ್ನಾಟಕ ಸಿಂಹ ಗಂಗಾಧರ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಬೆಳಗಾವಿ ಕಾಂಗ್ರೆಸ್ ಅಧಿವೇಶನದ ರೂವಾರಿ ಆಗಿದ್ದ ಗಂಗಾಧರರಾವ್ ದೇಶಪಾಂಡೆ ಅವರ ಹೆಸರು ಅಜರಾಮರಗೊಳಿಸಲು 15 ಗುಂಟೆ ಜಾಗದಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, …

Read More »

ಕೆಎಂಎಫ್​ನ ಮತ್ತೊಂದು ಪ್ರಾಡಕ್ಟ್ ಸದ್ಯದಲ್ಲಿಯೇ ಮಾರುಕಟ್ಟೆಗೆ

ಕೆಎಂಎಫ್​ನ ಮತ್ತೊಂದು ಪ್ರಾಡಕ್ಟ್ ಸದ್ಯದಲ್ಲಿಯೇ ಮಾರುಕಟ್ಟೆಗೆ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯ ಈಗಾಗಲೇ ಸಿಎಂರಿಂದ ದೋಸೆ ಹಾಗೂ ಇಡ್ಲಿ ಹಿಟ್ಟು ಬಿಡುಗಡೆ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲು ಕ್ಷಣಗಣನೆ ಆರಂಭ ಅಗಿದೆ. ಪ್ರೋಟಿನ್​ಯುಕ್ತ ದೋಸೆ ಹಿಟ್ಟು ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ. ಇದೇ ವಿಚಾರವಾಗಿ ಮಾಹಿತಿ ನೀಡಲು ಇಂದು ಮಧ್ಯಾಹ್ನ 12 ಗಂಟೆಗೆ ಕೆಎಂಎಫ್​ನಲ್ಲಿ ಪ್ರೆಸ್​ಮೀಟ್ ನಡೆಯಲಿದೆ ನಿನ್ನೆ ವಿಧಾನಸೌಧದಲ್ಲಿ …

Read More »

ಹುಬ್ಬಳ್ಳಿ ಮತ್ತು ರಾಮೇಶ್ವರಂ ಮಧಗ್ಯದ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲು ಸಂಚಾರ ಅವಧಿಯನ್ನು ವಿಸ್ತರಿಸಿ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ.

ಹುಬ್ಬಳ್ಳಿ: ನಗರದ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಿಂದ ರಾಮೇಶ್ವರಂ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲುಗಳ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 07355: ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಮಧ್ಯದ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲು ಜನವರಿ 4 ರಿಂದ ಜೂನ್ 28, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 28, 2024ರ ವರೆಗೆ ಈ ರೈಲು ಓಡಿಸಲು ಸೂಚಿಸಲಾಗಿತ್ತು. ಇದೀಗ …

Read More »

ಸುವರ್ಣ ಸೌಧದ ಆವರಣದಲ್ಲಿನ “ವಿಜ್ಞಾನ ವನವನ್ನು” ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಳಗಾವಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಿರ್ಮಿಸಲಾಗಿರುವ ವಿಜ್ಞಾನ ವನವನ್ನು (Science Park) ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಇದೇ ವೇಳೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಸೇರಿ ನರೇಗಾ ಕಾರ್ಮಿಕರ ಕುಶಲೋಪರಿ ವಿಚಾರಿಸಿ, ಫೋಟೋ ತೆಗೆದುಕೊಂಡು ಖುಷಿ ಹಂಚಿಕೊಳ್ಳಲಾಯಿತು.

Read More »

ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ‌ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ‌ ನಿಂತಿದ್ದಾರೆ.

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ‌ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ‌ ನಿಂತಿದ್ದಾರೆ. ಇಡೀ ದೇಶದ ಚಿತ್ತ ಈಗ ಬೆಳಗಾವಿಯತ್ತ ನೆಟ್ಟಿದೆ. 1924, ಡಿ.26ರಂದು ಬಾಪೂಜಿ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆದಿದ್ದ ಅಂದಿನ ವಿಜಯ ನಗರದ, ಇಂದಿನ ಟಿಳಕವಾಡಿ ವೀರಸೌಧ ಮತ್ತೊಂದು ಐತಿಹಾಸಿಕ ಘಟನೆಗೆ …

Read More »

ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಇನ್ನೆರಡು ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದ ಚಿಕ್ಕೋಡಿ ಯೋಧ ಸಾವು

ಚಿಕ್ಕೋಡಿ: ಮಣಿಪುರದ ಬೊಂಬಾಲಾ ಕ್ಷೇತ್ರದಲ್ಲಿ ಸೇನಾ ವಾಹನ ಪಲ್ಟಿಯಾಗಿ ಚಿಕ್ಕೋಡಿ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪಾನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತಾ(42) ಸಾವನ್ನಪ್ಪಿದವರು. ಸೋಮವಾರ ಮಧ್ಯಾಹ್ನ ದಾರಿಮಧ್ಯೆ ಗುಡ್ಡ ಕುಸಿದ ಪರಿಣಾಮ ಸೇನೆಯ 2.5 ಡೈಟನ್ ವಾಹನ‌ ಪಲ್ಟಿಯಾಗಿತ್ತು. ಸೇನಾ ವಾಹನದಲ್ಲಿ ಒಟ್ಟು ಆರು ಜನ ಯೋಧರು ಪ್ರಯಾಣಿಸುತ್ತಿದ್ದರು. ಆರು ಯೋಧರ ಪೈಕಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವ …

Read More »