Breaking News

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ – ಬುಧವಾರ ರಾತ್ರಿವರೆಗೂ ರೆಡ್ ಅಲರ್ಟ್

ಮಂಗಳೂರು: ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ನಾಳೆಯಿಂದ ಆಗಸ್ಟ್ 9ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು ಈ ಎಲ್ಲಾ ದಿನದಲ್ಲಿ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣವಾಗಿ ನಿಷೇಧಿಸಲು ಸೂಚಿಸಿದೆ. ಸಮುದ್ರ ಹಾಗೂ ನದಿ ತೀರದ …

Read More »

ಸೋಂಕಿತರ ಸಂಖ್ಯೆ ಇಳಿಮುಖ – ಗುಣಮುಖರ ಸಂಖ್ಯೆ ಹೆಚ್ಚಳ

ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 268 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 7,530ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ 268 ಮಂದಿಗೆ ಮಹಾಮಾರಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,530ಕ್ಕೇರಿಕೆಯಾಗಿದೆ. ಕಳೆದ ಒಂದು ವಾರಕ್ಕೆ ಹೋಲಿಕೆ ಮಾಡಿದರೆ ಎರಡು ದಿನಗಳಿಂದ ಸೋಂಕಿನ ಪ್ರಮಾಣದಲ್ಲಿ ಕಡಿಮೆ ಆಗಿದೆ.ಅಲ್ಲದೇ 4,022 ಮಂದಿ ಈವರೆಗೂ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೂ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ …

Read More »

ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲು

ಬೆಂಗಳೂರು: ಮಣಿಪಾಲ್ ಆಸ್ಪತ್ರೆ ರಾಜ್ಯ ರಾಜಕಾರಣದ ಕೇಂದ್ರ ಬಿಂದು ಆಗಿದೆ. 24 ಗಂಟೆಯ ಅಂತರದಲ್ಲಿ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಯಾಕಂದ್ರೆ ಇದೇ 24 ಗಂಟೆಯ ಅಂತರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಪ್ರಭಾವಿ ರಾಜಕೀಯ ನಾಯಕರು ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಷ್ಟೇ ಅಲ್ಲ ಒಂದೇ ಫ್ಲೋರ್​ನಲ್ಲಿದ್ದಾರೆ. ಅದ್ರಲ್ಲೂ ಒಂದೇ ಸಾಲಿನಲ್ಲಿರೋ ರೂಮ್ …

Read More »

ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲು

ಬೆಂಗಳೂರು: ಮಣಿಪಾಲ್ ಆಸ್ಪತ್ರೆ ರಾಜ್ಯ ರಾಜಕಾರಣದ ಕೇಂದ್ರ ಬಿಂದು ಆಗಿದೆ. 24 ಗಂಟೆಯ ಅಂತರದಲ್ಲಿ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಯಾಕಂದ್ರೆ ಇದೇ 24 ಗಂಟೆಯ ಅಂತರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಪ್ರಭಾವಿ ರಾಜಕೀಯ ನಾಯಕರು ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಷ್ಟೇ ಅಲ್ಲ ಒಂದೇ ಫ್ಲೋರ್​ನಲ್ಲಿದ್ದಾರೆ. ಅದ್ರಲ್ಲೂ ಒಂದೇ ಸಾಲಿನಲ್ಲಿರೋ ರೂಮ್ …

Read More »

ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ.

ಮುಂಬೈ: ರಾತ್ರಿಯಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಆಗಸ್ಟ್ 4 ಮತ್ತು 5 ದಿನ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಮಹಾನಗರ ಪಾಲಿಕೆ, ಎನ್‍ಡಿಆರ್‍ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಲರ್ಟ್ ಆಗಿರುವಂತೆ ಸರ್ಕಾರ ಸೂಚಿಸಿದೆ. ಮಂಗಳವಾರ ಬೆಳಗಿನ ಜಾವ ಮೂರು ಗಂಟೆಗೆ ಮುಂಬೈ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮಳೆ …

Read More »

ಬೆಳಗಾವಿ ಜಿಲ್ಲೆಯ ಚಾಲಕನ ಪುತ್ರನ ಸಾಧನೆ; UPSC ಪರೀಕ್ಷೆಯಲ್ಲಿ 440ನೇ ಸ್ಥಾನ!

ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ‌ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್‍ಯಾಂಕ್ ಪಡೆಯುವುದರ ಮೂಲಕ ರಾಜ್ಯದ …

Read More »

ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ: ಎಂದು  ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

ಹೊಸದಿಲ್ಲಿ: ಅಯ್ಯೋಧ್ಯೆಯ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ ಜತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು  ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ. ಅಯೋಧ್ಯೆಯಲ್ಲಿ ರಾಮಮಂದಿರ ದೇವಾಲಯದ ನಿರ್ಮಾಣವು ಟ್ರಸ್ಟ್ ನಿಂದ ಆಗಬೇಕೆಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದ ಕಾರಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ಸರ್ಕಾರದ ಉನ್ನತ …

Read More »

ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ

ಅಯೋಧ್ಯೆ: ಬುಧವಾರ ರಾಮ ದೇವಾಲಯದ ಭೂಮಿ ಪೂಜೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ ಮಾಡಲಿದ್ದಾರೆ. ಬುಧವಾರ ಬೆಳಗ್ಗೆ 11.15ಕ್ಕೆ ಸಾಕೇತ್ ಕಾಲೇಜ್‍ನ ಹೆಲಿಪ್ಯಾಡ್‍ಗೆ ಮೋದಿ ದೆಹಲಿಯಿಂದ ಆಗಮಿಸಲಿದ್ದಾರೆ. ಬಳಿಕ ಹೆಲಿಪ್ಯಾಡ್‍ನಿಂದ ನೇರವಾಗಿ ಹನುಮಂತ ದೇವಾಲಯಕ್ಕೆ ತೆರಳಲಿದ್ದಾರೆ. ಇಲ್ಲಿ 7 ನಿಮಿಷಗಳ ಕಾಲ ಪೂಜೆಯಲ್ಲಿ ಭಾಗಿಯಾದ ಬಳಿಕ ರಾಮಜನ್ಮಭೂಮಿಗೆ ಗೇಟ್ ನಂ.3ರ ಮೂಲಕ ಆಗಮಿಸಲಿದ್ದಾರೆ.ಕಾರ್ಯಕ್ರಮ ಆಯೋಜನೆಗೊಂಡಿರುವ ಸ್ಥಳಕ್ಕೆ ನೇರವಾಗಿ ಮೋದಿ ತೆರಳಬಹದುಲ್ಲವೇ ಎಂಬ …

Read More »

ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ

ಹಾವೇರಿ: ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ ನಡೆಸಿದ ಘಟನೆ ಜಿಲ್ಲಾಸ್ಪತ್ರೆ ಬಳಿ ಇರೋ ಕೋವಿಡ್ 19 ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಶಿವಬಸವ ನಗರದ ನಿವಾಸಿ 38 ವರ್ಷದ ವ್ಯಕ್ತಿ ಜ್ವರ, ಕೆಮ್ಮು ಮತ್ತು ನೆಗಡಿಯಿಂದ ಬಳಲ್ತಿದ್ದ ವ್ಯಕ್ತಿಗೆ ಚಿಕಿತ್ಸೆ ಪರದಾಡಿದ್ದಾನೆ. ಸೋಮವಾರ ಖಾಸಗಿ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಜಿಲ್ಲಾಸ್ಪತ್ರೆಗೆ ಹೆಸ್ಕಾಂ ಸಮುದಾಯ ಭವನದಲ್ಲಿನ ಕೋವಿಡ್ 19 ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಕಳಿಸಿದ್ದರು. ರಾತ್ರಿ ಹತ್ತು …

Read More »

ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ:ಸತೀಶ್ ಜಾರಕಿಹೊಳಿ

ಬೆಂಗಳೂರು: ಮಾಜಿ  ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾರೈಸಿದ್ದಾರೆ. ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬರದೆ ಇದ್ದರು. ಸೋಂಕು ದೃಢಪಟ್ಟಿದೆ. ಆದ ಕಾರಣ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ನಾಯಕ ಕೊರೊನಾ ಸೋಂಕಿನಿಂದ ಶೀಘ್ರದಲ್ಲೇ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ …

Read More »