ಬೆಂಗಳೂರು: ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು ಕೇಡರ್ ಮಟ್ಟದಿಂದಲೇ ಕಾರ್ಯಕರ್ತರನ್ನು ಸಜ್ಜುಗೊಳಿಸಲು …
Read More »ತನ್ನ ಮಗುವಿನೊಂದಿಗೆ ಕರ್ತವ್ಯಕ್ಕೆ ಹಾಜರಾದ ನರ್ಸ
ಧಾರವಾಡ(ಆ.03): ರಾಜ್ಯದಲ್ಲಿ ಕೊರೋನಾ ವೈರಸ್ನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಧಾರವಾಡ ಜಿಲ್ಲೆ ಸಹ ಹೊರತಾಗಿಲ್ಲ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇದರಿಂದ ಜಿಲ್ಲೆಯ ನಗರ ಪ್ರದೇಶದಲ್ಲಿ ಆ್ಯಂಟಿಜನ್ ಟೆಸ್ಟ್ ವಾಹನದ ಮೂಲಕ ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಈ ಆ್ಯಂಟಿಜನ್ ಟೆಸ್ಟ್ ಮಾಡಲು ನರ್ಸ್ ತನ್ನ ಪುಟ್ಟ ಮಗಳೊಂದಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾಳೆ. ಧಾರವಾಡ ನಗರದ ವಿವಿಧ …
Read More »ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ.
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು …
Read More »17 ಐಪಿಎಸ್ ಅಧಿಕಾರಿಗಳ ವರ್ಗಾವಣೆ………….
ಬೆಂಗಳೂರು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಲಾಗಿದ್ದು,17 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿಶೇಷ ಎಂದರೆ,ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹಲವರಿಗೆ ಕೊರೋನಾ ದೃಢಪಟ್ಟಿದ್ದು ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲೇ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗೃಹ ಇಲಾಖೆಯ ಕಾರ್ಯದರ್ಶಿ ಆಗಿದ್ದ ಎಡಿಜಿಪಿ ಉಮೇಶ್ಕುಮಾರ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಡಿ.ರೂಪಾ ಅವರು ವರ್ಗವಾಗಿದ್ದಾರೆ. ಕಲಬುರ್ಗಿ …
Read More »ವೀಕೆಂಡ್ ಬಂತು ಅಂದ್ರೆ ಈ ಏರಿಯಾದಲ್ಲಿ ನೈಟ್ ಪಾರ್ಟಿ; ನೈಜೀರಿಯಾ ಪ್ರಜೆಗಳಿಂದ ಬೇಸತ್ತು ಹೋಗಿರುವ ಜನ
ಬೆಂಗಳೂರು(): ವಿದೇಶಗಳಿಂದ ಭಾರತಕ್ಕೆ ಯಾರೇ ಬಂದ್ರೂ ಅತಿಥಿ ದೇವೋ ಭವ ಅಂತ ನಮ್ಮವರು ನಡೆಸಿಕೊಳ್ತಾರೆ. ಅದರಲ್ಲೂ ಕರ್ನಾಟಕದ ಮಂದಿ ಬಂದವರ ಜೊತೆ ಬೆರೆತು ಹೋಗ್ತಾರೆ. ಅಂತಹ ಕನ್ನಡಿಗರ ಕಣ್ಣಿಗೆ ಒಂದಷ್ಟು ವಿದೇಶಿಯರು ಈಗ ವಿಲನ್ಗಳಾಗಿದ್ದಾರೆ. ಅರೇ ಯಾರವರು ಅಂತೀರಾ ಸ್ಟೋರಿ ಓದಿ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಜಿರಿಯನ್ ಪ್ರಜೆಗಳ ಕಿರಿಕ್ ಇದೇನು ಮೊದಲೇನಲ್ಲ. ಸದಾ ಒಂದಿಲ್ಲೊಂದು ಕಿರಿಕ್ ಮಾಡ್ತಾನೆ ಇರ್ತಾರೆ. ಆದ್ರೆ ಇವ್ರ ಕಿರಿಕ್ ನ್ನು ಪದೇ ಪದೇ …
Read More »ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಸಿದ್ದರಾಮಯ್ಯ
ಬೆಂಗಳೂರು(ಆ. 04): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಕೋಶ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ 3:30ರ ಸುಮಾರಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. 15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ …
Read More »ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ. ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಸದ್ಯ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ವಾಹನ ಸವಾರರ ಆತಂಕ ಕೂಡ …
Read More »ಡ್ರೋನ್ ಪ್ರತಾಪ್ ಮೇಲೆ ಮತ್ತೊಂದು ಕೇಸ್ –
ಬೆಂಗಳೂರು: ಕ್ವಾರಂಟೈನ್ನಲ್ಲಿ ಇದ್ದರು ನಿಯಮ ಉಲ್ಲಂಘನೆ ಮಾಡಿದಕ್ಕೆ ಡ್ರೋನ್ ಪ್ರತಾಪನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ಅಶೋಕ ನಗರ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕ್ವಾರಂಟೈನ್ನಲ್ಲಿ ಇರಬೇಕು ಎಂದು ಅಧಿಕಾರಿಗಳು ಹೇಳಿದ್ದರು ಪ್ರತಾಪ್ ನಿಯಮ ಉಲ್ಲಂಘನೆ ಮಾಡಿದ್ದ. ಆದ್ದರಿಂದ ಆತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಆತನನ್ನು ವಶಕ್ಕೆ ಪಡೆದು ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಂದಿಗೆ ಪ್ರತಾಪ್ ಕ್ವಾರಂಟೈನ್ ಅವಧಿ …
Read More »ಬುದ್ಧಿ ಹೇಳೋಕೆ ಬಂದಿದ್ವಿ – ಆನಂದ್ ಪ್ರಸಾದ್ ಭೇಟಿ ಮಾಡಿದ ಹ್ಯಾರಿಸ್, ನಲ್ಪಾಡ್
ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಅರೆಸ್ಟ್ ಆಗಿರುವ ಕೆಪಿಸಿಸಿ ಸೋಶಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ನನ್ನು ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮಹಮ್ಮದ್ ನಲ್ಪಾಡ್ ಅವರು ಭೇಟಿಯಾಗಿದ್ದಾರೆ. ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದರು. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ …
Read More »ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಮೂಡಲಗಿ : ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಲ್ಲಿಗೆ ಸಮೀಪದ ಸುಣಧೋಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ನಬಾರ್ಡ ಯೋಜನೆಯಡಿ ನೂತನ ಶಾಲಾ ಕೊಠಡಿಗಳಿಗೆ 1.04 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗಾಗಿ …
Read More »