ಮೂಡಲಗಿ : ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಲ್ಲಿಗೆ ಸಮೀಪದ ಸುಣಧೋಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ನಬಾರ್ಡ ಯೋಜನೆಯಡಿ ನೂತನ ಶಾಲಾ ಕೊಠಡಿಗಳಿಗೆ 1.04 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗಾಗಿ …
Read More »ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752,ಬೆಳಗಾವಿ ಜಿಲ್ಲೆಯಲ್ಲಿ ಇಂದು 60
ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752. ಒಟ್ಟೂ ಮೃತರ ಸಂಖ್ಯೆ 98. 4776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 139571, ಗುಣಮುಖರಾದವರ ಸಂಖ್ಯೆ 62,500. ಒಟ್ಟೂ ಸಾವಿಗೀಡಾದವರ ಸಂಖ್ಯೆ 2594. ಬೆಂಗಳೂರಿನಲ್ಲಿ 1497 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಇಂದು 27 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೇವಲ 60 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ ಒಂದೇ …
Read More »ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿಎರಡು ಸಾವಿರ ಕೋಟಿಗೂ ಹೆಚ್ಚು ಹಣ ಲೂಟಿ
ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ಇವತ್ತು ಕರ್ನಾಟಕದ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣವನ್ನು ಲೂಟಿ ಹೊಡೆದಿದ್ದು, ಸತ್ಯಾಸತ್ಯತೆ ಪರಿಶೀಲನೆಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಖೆ ಮಾಡಿಸಬೇಕು ಹಾಗೂ ಇದರ ಬಗ್ಗೆ ಚರ್ಚಿಸಲು ಕೂಡಲೇ ವಿಧಾನಮಂಡಲದ ಅಧಿವೇಶನವನ್ನು ಕರೆಯಬೇಕು ಎನ್ನುವುದರ ಸಲುವಾಗಿ ಇವತ್ತು ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ …
Read More »ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?
ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ …
Read More »ಮತ್ತೆ 4ಸಾವಿರ ಕಿಟ್‌ಗಳ ಪೂರೈಕೆ
ಬೆಳಗಾವಿ: ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಹೊರತುಪಡಿಸಿ ಇತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ‍್ಯಾಪಿಡ್ ಆಂಟಿಜೆನ್ ಕಿಟ್‌ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ …
Read More »ತನ್ನ ಕೈಯಾರೆ ಶೌಚಾಲಯ ಕ್ಲೀನ್ ಮಾಡಿದ ಸಚಿವ
ಭೋಪಾಲ್: ತನ್ನ ಕೈಯಾರೆ ಶೌಚಾಲಯ ಶುಚಿಗೊಳಿಸುವ ಮೂಲಕ ಮಧ್ಯಪ್ರದೇಶದ ಸಚಿವ ಪ್ರಧುಮಾನ್ ಸಿಂಗ್ ತೋಮರ್ ಭಾರೀ ಸುದ್ದಿಯಾಗಿದ್ದು, ಸದ್ಯ ಅವರಿಗೆ ಪ್ರಶಂಸೆಗಳ ಸುರಿಮಳೆಯೇ ಬರುತ್ತಿದೆ. ಹೌದು. ಸಚಿವರಿಗೆ ಗ್ವಾಲಿಯರ್‍ನ ಆಯುಕ್ತರ ಕಚೇರಿಯ ಸಾರ್ವಜನಿಕ ಶೌಚಾಲಯ ದುರ್ನಾತ ಬೀರುತ್ತಿದೆ ಎಂದು ಕೆಲ ಮಹಿಳೆಯರು ದೂರು ನಿಡಿದ್ದರು. ಈ ಹಿನ್ನೆಲೆಯಲ್ಲಿ ಪರಶೀಲನೆ ನಡೆಸಲೆಂದು ಸಚಿವರು ತೆರಳಿದ್ದರು. ಈ ವೇಳೆ ಶೌಚಾಲಯ ಗಲೀಜಾಗಿರುವುದು ಕಂಡು ಬಂದಿದೆ.ಈ ವೇಳೆ ಸಮಯ ವ್ಯರ್ಥ ಮಾಡದ ಸಚಿವರು …
Read More »ಡಿಸಿಎಂ ಲಕ್ಷ್ಮಣ ಸವದಿ ನೂರಾರು ಜನರನ್ನ ಸೇರಿಸಿ ಆರ್‌ಟಿಓ ಕಚೇರಿ ಉದ್ಘಾಟಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.
ಚಿಕ್ಕೋಡಿ/ಬೆಳಗಾವಿ: ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸಚಿವರು ಹಾಗೂ ಅಧಿಕಾರಿಗಳು ಸೆಲ್ಫ್ ಕ್ವಾರಂಟೈನ್ ಆಗುತ್ತಿದ್ದಾರೆ. ಆದರೆ ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದ ಡಿಸಿಎಂ ಲಕ್ಷ್ಮಣ ಸವದಿ ನೂರಾರು ಜನರನ್ನ ಸೇರಿಸಿ ಆರ್‌ಟಿಓ ಕಚೇರಿ ಉದ್ಘಾಟಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಂಜೂರಾದ ನೂತನ ಆರ್‌ಟಿಓ ಕಚೇರಿ ಉದ್ಘಾಟನಾ ಸಮಾರಂಭ ನಡೆದಿದೆ. ಸಮಾರಂಭದಲ್ಲಿ 250ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ …
Read More »ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ :ರಮೇಶ ಜಾರಕಿಹೊಳಿ
ಗೋಕಾಕ: ಗೋಕಾಕ್ ನಗರದ ಸಚ್ಛಾರಿತ್ರ್ಯದ ರಾಜಕಾರಣಿಯಾಗಿದ್ದ ಗಿರೀಶ್ ಖೋತ್ ಅವರ ಅಕಾಲಿಕ ಮರಣದಿಂದ ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 3 ನೆಯ ಬಾರಿಗೆ ಗೋಕಾಕ್ ನಗರಸಭೆಗೆ ಆಯ್ಕೆಯಾಗಿದ್ದ ಖೋತ್ ಮಾದರಿ ಜನಪ್ರತಿನಿಧಿಯಾಗಿದ್ದರು. ಜನಾನುರಾಗಿ ಮತ್ತು ಸರಳ, ಸ್ನೇಹಜೀವಿಯಾಗಿದ್ದ ಇವರು ನನ್ನ ರಾಜಕಾರಣದ ಪ್ರತಿ ಹೆಜ್ಜೆಯಲ್ಲೂ ನನ್ನ ಜೊತೆಗಿದ್ದರು. ಇವರ ಹಠಾತ್ ಅಗಲಿಕೆ ನನ್ನ ಮನಸ್ಸಿಗೆ ತೀವ್ರ ನೋವನ್ನು …
Read More »ಮಹಾರಾಷ್ಟ್ರದ ಉದ್ಯಮಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಬಂದಾಗ ಅವರಿಗೆ ನಮ್ಮ ಜನರು ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಲ್ಲಿ ಅನ್ಯತ ಭಾವಿಸಬಾರದು.
ಅಥಣಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾದಿಂದ ಬೇಗ ಗುಣಮುಖರಾಗಲಿ. ದೇವರು ಆರೋಗ್ಯ ದಯಪಾಲಿಸಲಿ ಎಂದು ಬೇಡಿಕೊಳ್ಳುವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಅಥಣಿ ಆರ್ ಟಿ ಓ ಕಚೇರಿಯ ನೂತನವಾಗಿ ವಾಹನ ನೋಂದಣಿ ಕೊಠಡಿ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿಗಳು ಸ್ವತಃ ನನ್ನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರು ಕ್ವಾರೆಂಟೈನ್ ಆಗಿ ಅಂತ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾನು ಅವರನ್ನು ಭೇಟಿ ನೀಡಿಲ್ಲ. ದೆಹಲಿಗೆ ಹೋಗಿಬಂದ ವಿಚಾರವನ್ನು ಅವರಿಗೆ ಸಾಮಾಜಿಕ …
Read More »ಕೋವಿಡ್ ಸೋಂಕಿತ ಮೃತಪಟ್ಟು ಮೂರು ದಿನ ಕಳೆದರೂ ಮನೆಯವರಿಗೆ ಮಾಹಿತಿ ನೀಡಿಲ್ಲ
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿತ ಮೃತಪಟ್ಟು ಮೂರು ದಿನ ಕಳೆದರೂ ಮನೆಯವರಿಗೆ ಮಾಹಿತಿ ನೀಡಿಲ್ಲ ಅಂತ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರು ನಗರ ಕೆ.ಪಿ. ಆಗ್ರಹಾರದ 56 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆ ಜುಲೈ 30 ರ ಸಂಜೆ ಗುರುವಾರದಂದು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಶುಕ್ರವಾರ ಬೆಳಗಿನ ಜಾವ ಸೋಂಕಿತ ಮೃತಪಟ್ಟಿದ್ದಾರೆ. …
Read More »