ಮುಂಬೈ, ಸೆ.28- ಶಿವಸೇನೆ ನೇತೃತ್ವದ ಮಹಾರಾಷ್ಟ್ರದ ಮೈತ್ರಿಕೂಟ ಸರ್ಕಾರ ಸದ್ಯದಲ್ಲೇ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಭವಿಷ್ಯ ನುಡಿದಿದ್ದಾರೆ. ಶನಿವಾರವಷ್ಟೆ ಬಿಜೆಪಿ ಧುರೀಣ ಫಡ್ನವೀಸ್ ಮತ್ತು ಶಿವಸೇನೆ ಪ್ರಭಾವಿ ನಾಯಕ-ಸಂಸದ ಸಂಜಯ್ ರಾವತ್ ನಡುವೆ ನಡೆದ ಮಹತ್ವದ ಸಭೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿಗಳ ಈ ಹೇಳಿಕೆ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಎನ್‍ಸಿಪಿ ಒಗ್ಗೂಡಿ …
Read More »ರೈತ ವಿರೋಧಿ ಮಸೂದೆ ವಿರುದ್ಧ ಜೆಡಿಎಸ್ ಶಾಸಕ ಏಕಾಂಗಿ ಪ್ರತಿಭಟನೆ
ಹಾಸನ: ಸದಾ ಒಂದಿಲ್ಲೊಂದು ವಿಶೇಷ ಪ್ರತಿಭಟನೆಯಲ್ಲಿ ಭಾಗಿಯಾಗುವ ಶಾಸಕರಾದ ಎ.ಟಿ.ರಾಮಸ್ವಾಮಿ ಇಂದು ಅರಕಲಗೂಡು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ಕಾಯ್ದೆ ಜಾರಿ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದರು. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ ಶಾಸಕರು ತಮ್ಮದೇ ಆದ ರೀತಿಯಲ್ಲಿ ಬಂದ್‍ಗೆ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಹೆಸರನ್ನು ಹೊಂದಿರುವ ರಾಮಸ್ವಾಮಿಯವರು ಜೆಡಿಎಸ್ ಪಕ್ಷದ ನಿಷ್ಠಾವಂತ ರಾಜಕೀಯ ಮುಖಂಡರಲ್ಲಿ ಒಬ್ಬರು. ನೇರ ಮಾತುಗಾರಿಕೆಯಿಂದ …
Read More »ಚರ್ಚೆಗೆ ಗ್ರಾಸವಾಯ್ತು ದತ್ತಪೀಠದ ಗುಹೆಯೊಳಗಿನ ಸಿಟಿ ರವಿ ಫೋಟೋ
ಚಿಕ್ಕಮಗಳೂರು: ಜಿಲ್ಲೆಯ ವಿವಾದಿತ ಸ್ಥಳ ಇನಾಂ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿನ ನಿಷೇಧಿತ ಪ್ರದೇಶದಲ್ಲಿ ದತ್ತಾತ್ರೇಯ ಸ್ವಾಮಿಗೆ ಸಚಿವ ಸಿ.ಟಿ.ರವಿ ಕೈ ಮುಗಿಯುತ್ತಿರುವ ಫೋಟೋ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾಗಿರುವ ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಸೋಮವಾರ ದತ್ತಪೀಠಕ್ಕೆ ಭೇಟಿ ನೀಡಿ, ದತ್ತಪಾದುಕೆ ದರ್ಶನ ಪಡೆದರು. ಈ ವೇಳೆ ಸಚಿವ ಸಿ.ಟಿ.ರವಿ ಗುಹೆಯೊಳಗೆ ದೇವರಿಗೆ ಕೈಮುಗಿಯುತ್ತಿರುವ …
Read More »ಅಕ್ಟೋಬರ್‌ನಲ್ಲಿ ಥಿಯೇಟರ್ ಓಪನ್ ಆಗುತ್ತಾ?
ನವದೆಹಲಿ: ಕೊರೊನಾ ವಿಜೃಂಭಣೆ ನಡುವೆಯೂ ಹಳಿ ತಪ್ಪಿರುವ ಆರ್ಥಿಕ ಸ್ಥಿತಿ ಸರಿ ದಾರಿಗೆ ತರಲು ಕೇಂದ್ರ ಸರ್ಕಾರ, ಅನ್‍ಲಾಕ್ ರೂಪದಲ್ಲಿ ಪ್ರತಿ ತಿಂಗಳು ಶ್ರಮಿಸುತ್ತಿದೆ. ಈಗಾಗಲೇ ಜನಜೀವನ ಸಾಮಾನ್ಯ ಸ್ಥಿತಿಗೆ ಬರುತ್ತಿದೆ. ಅಕ್ಟೋಬರ್ 1ರಿಂದ ಅನ್‍ಲಾಕ್-05 ಜಾರಿ ಆಗಲಿದೆ. ಅನ್‍ಲಾಕ್-5 ಜಾರಿ ಸಂಬಂಧ ಕೇಂದ್ರ ಗೃಹ ಮಂತ್ರಾಲಯ ಮಾರ್ಗಸೂಚಿ ಪ್ರಕಟಿಸಲಿದೆ. ಸಿನಿಮಾ ಹಾಲ್, ಈಜುಕೊಳ, ಎಂಟರ್ ಟೈನ್ಮೆಂಟ್ ಪಾರ್ಕ್, ಪ್ರಾಥಮಿಕ ಶಾಲೆ ತೆರೆಯಲು ಅನುಮತಿ ನೀಡುತ್ತಾ? ಅಥವಾ ದಸರಾ-ದೀಪಾವಳಿ ಸನಿಹದಲ್ಲಿರುವ …
Read More »ನ್ಯಾಯಾಲಯ ಶುಲ್ಕ ಭರಿಸಲು ಒಡವೆ ಮಾರಿದೆ- ಲಂಡನ್ ಕೋರ್ಟ್‍ಗೆ ಅನಿಲ್ ಅಂಬಾನಿ ಹೇಳಿಕೆ
ಲಂಡನ್: ನ್ಯಾಯಾಲಯದ ಶುಲ್ಕ ಭರಿಸಲು ನನ್ನ ಬಳಿ ಇದ್ದ ಎಲ್ಲ ಆಭರಣಗಳನ್ನು ಮಾರಿದ್ದೇನೆ. ನನ್ನ ಖರ್ಚು ವೆಚ್ಚಗಳನ್ನು ಕುಟುಂಬಸ್ಥರು ನೋಡಿಕೊಳ್ಳುತ್ತಿದ್ದಾರೆ ಎಂದು ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಹೇಳಿದ್ದಾರೆ. ಲಂಡನ್ ಹೈಕೋರ್ಟ್‍ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಂಬಾನಿ ಹೇಳಿದ್ದಾರೆ. ಚೀನಾ ಮೂಲದ ಮೂರು ಬ್ಯಾಂಕ್‍ಗಳು ಲಂಡನ್‍ನಲ್ಲಿ ಅನಿಲ್ ಅಂಬಾನಿ ವಿರುದ್ಧ ಮೊಕದ್ದಮೆ ಹೂಡಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ ಹೈ ಕೋರ್ಟ್ ವಿಚಾರಣೆ ನಡೆಸಿತು. ಈ ಹಿನ್ನೆಲೆ ಏಷ್ಯಾದ …
Read More »ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು
ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‍ನ ಹಿರಿಯ ಮುಖಂಡ ಹೆಚ್‍ಕೆ ಪಾಟೀಲ್‍ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್‍ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸಚಿವರ …
Read More »ಸ್ಮಾರ್ಟ್ ಸಿಟಿ ಕಾಮಗಾರಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು
ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಯ ಹೊಂಡದಲ್ಲಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ನಡೆದಿದೆ. ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಸ್ಮಾಟ್ ಸಿಟಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕಾಮಗಾರಿಯ ಹೊಂಡದ ಪಕ್ಕದಲ್ಲೇ ಆಟವಾಡುತ್ತಿದ್ದ ಮೂವರು ಬಾಲಕರು ಹಾಗೂ ಬಾಲಕಿ ಹೊಂಡಕ್ಕೆ ಬಿಗಿದ್ದು, ಘಟನೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯನ್ನು ಹುಬ್ಬಳ್ಳಿಯ ಗಿರಣಿಚಾಳದ ತ್ರಿಶಾ ಎಂದು …
Read More »10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇನ್ನು ಎರಡ್ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಏನು ಸಮಸ್ಯೆ ಇಲ್ಲ. ಮೂರು ದಿನದಲ್ಲಿ ದೆಹಲಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ …
Read More »ಚಿನ್ನದ ನಿಕ್ಷೇಪ ವಿರುವುದು ಖಚಿತವಾದರೆ ಚಿನ್ನದ ಗಣಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ
ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ. ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ …
Read More »ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯ
ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು. 2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್‌ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ …
Read More »
Laxmi News 24×7