ಹೊಸದಿಲ್ಲಿ: ದಿಲ್ಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಜನರನ್ನ ಕೊಲೆಗೈದ ಆರೋಪದಲ್ಲಿ ಆಯುರ್ವೇದ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಆಲಿಘರ್ ನಿವಾಸಿಯಾಗಿದ್ದ ದೇವೇಂದರ್ ಶರ್ಮಾ(62) ಬಂಧಿತ. ಹಲವು ಅಪಹರಣ ಮತ್ತು ಕೊಲೆ ಪ್ರಕರಣಗಳಲ್ಲಿ ದೋಷಿ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಕಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದದ್ದಕ್ಕಾಗಿ ಬಂಧಿಸಲಾಗಿತ್ತು . ಕಿಡ್ನಿ ದಂಧೆ ಪ್ರಕರಣದಲ್ಲಿ ಜೈಪುರದ ಸೆಂಟ್ರಲ್ ಜೈಲಿನಲ್ಲಿ ಆತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಬಳಿ ತಪ್ಪಿಸಿಕೊಂಡಿದ್ದನು …
Read More »ಬಕ್ರೀದ್ ಸಂಭ್ರಮಕ್ಕೆ ಕೊರೊನಾ ಅಡ್ಡಗಾಲು – ಬೆಳಗಾವಿ ಕುರಿಗಾಹಿಗಳಿಗೆ ಉಡುಪಿಯಲ್ಲಿ ಟೆನ್ಶನ್
ಉಡುಪಿ: ಜಿಲ್ಲೆಯ ಬಕ್ರೀದ್ ಆಚರಣೆಗೆ ಕೊರೊನ ಮಹಾಮಾರಿ ಅಡ್ಡಗಾಲು ಇಟ್ಟಿದೆ. ಮುಸಲ್ಮಾನರ ಪವಿತ್ರ ಮತ್ತು ಅದ್ಧೂರಿ ಹಬ್ಬ ಬಕ್ರೀದ್ ಈ ಬಾರಿ ಕಳೆ ಕಟ್ಟಿಲ್ಲ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮುಸಲ್ಮಾನರು ಈ ಬಾರಿ ಸರಳವಾಗಿ ಬಕ್ರೀದ್ ಆಚರಿಸಲು ನಿರ್ಧಾರ ಮಾಡಿದಂತಿದೆ. ಪ್ರತಿ ವರ್ಷ ಬಕ್ರೀದ್ ಬಂದಾಗ ಉಡುಪಿ ನಗರದ ಬೀಡಿನಗುಡ್ಡೆ ಮೈದಾನದಲ್ಲಿ ನಾಲ್ಕು ದಿನದಲ್ಲಿ ಸಾವಿರದ ಇನ್ನೂರು ಆಡು ಮತ್ತು ಕುರಿ ವ್ಯಾಪಾರ ಆಗುತ್ತಿತ್ತು. ಈ ಬಾರಿ ಕೇವಲ 250 ರಿಂದ …
Read More »ಆ್ಯಂಟಿಜೆನ್ ಟೆಸ್ಟ್ಗೆ ಹೆದರಿ ಮಾರುಕಟ್ಟೆಯನ್ನೇ ಬಂದ್ ಮಾಡಿದ ವ್ಯಾಪಾರಸ್ಥರು!
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಹಾವಳಿ ಜೋರಾಗುತ್ತಿದಂತೆ ಜಿಲ್ಲಾಡಳಿತ ಆ್ಯಂಟಿಜೆನ್ ಟೆಸ್ಟ್ಗೆ ಮುಂದಾಗಿದೆ. ನಗರದ ಜನನಿಬಿಡ ಪ್ರದೇಶ, ಮಾರುಕಟ್ಟೆಗಳಲ್ಲಿ ಆ್ಯಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಈ ಟೆಸ್ಟ್ ಗೆ ಹೆದರಿ ಹುಬ್ಬಳ್ಳಿಯಲ್ಲಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನ ಬಂದ್ ಮಾಡಿದ್ದಾರೆ. ಹುಬ್ಬಳ್ಳಿಯ ದುರ್ಗದ ಬೈಲ್ ಸೇರಿದಂತೆ ಅವಳಿನಗರದ 15 ಕಡೆಗಳಲ್ಲಿ ಧಾರವಾಡ ಜಿಲ್ಲಾಡಳಿತ ಇಂದಿನಿಂದ ರ್ಯಾಪಿಡ್ ಟೆಸ್ಟ್ ಆರಂಭಿಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹುಬ್ಬಳ್ಳಿಯ ದುರ್ಗದ ಬೈಲ್ ಗೆ ಭೇಟಿ …
Read More »ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರೊನಾ ಆತಂಕದ ಮಧ್ಯೆಯೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಧೈರ್ಯ ದಿಂದ ಗುರುವಾರ ಸಿಇಟಿ ಪರೀಕ್ಷೆ ಬರೆದರು.
ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರೊನಾ ಆತಂಕದ ಮಧ್ಯೆಯೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಧೈರ್ಯ ದಿಂದ ಗುರುವಾರ ಸಿಇಟಿ ಪರೀಕ್ಷೆ ಬರೆದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಚಿಕ್ಕೋಡಿ- 6, ಗೋಕಾಕ-4. ಅಥಣೀ-3, ರಾಯಬಾಗ-1,ಮತ್ತು ಹುಕ್ಕೇರಿ-1 ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 15 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳಳಾಗಿತ್ತು. ಒಟ್ಟು 6247 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಅವರಲ್ಲಿ 690 ಗೈರು ಹಾಜರಾಗಿದ್ದು, 5557 ವಿದ್ಯಾರ್ಥಿಗಳು ಪರೀಕ್ಷೆ ಬರೆದರು …
Read More »ಜಯಲಲಿತಾ ನಿವಾಸದಲ್ಲಿ 4 ಕೆಜಿ ಚಿನ್ನ 601 ಕೆಜಿ ಬೆಳ್ಳಿ ಪತ್ತೆ..!
ಚೆನ್ನೈ,ಜು.30- ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿವಾಸದಲ್ಲಿ 4 ಕೆಜಿ ಚಿನ್ನ, 601 ಕೆಜಿ ಬೆಳ್ಳಿ ಸಿಕ್ಕಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಜಯಲಲಿತಾ ವಾಸವಿದ್ದ ವೇದ ನಿಲಯಂ ನಿವಾಸವನ್ನು ಸ್ಮಾರಕವನ್ನಾಗಿ ರೂಪಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ವೇದ ನಿಲಯಂನಲ್ಲಿರುವ ಸ್ಥಿರ ಮತ್ತು ಚರ ಸ್ವತ್ತನ್ನು ತಮಿಳುನಾಡು ಸರ್ಕಾರ ಪುರಚ್ಚಿ ತಲೈವಿ ಡಾ.ಜಯಲಲಿತಾ ಮೆಮೋರಿಯಲ್ ಫೌಂಡೇಷನ್ಗೆ ಕಳುಹಿಸಿಕೊಡುತ್ತಿದೆ. ಸರ್ಕಾರ ನಿವಾಸದಲ್ಲಿರುವ ವಸ್ತುಗಳನ್ನು ಪಟ್ಟಿಮಾಡಿದ್ದು, ಪೀಠೋಪಕರಣಗಳು, ಪುಸ್ತಕಗಳು, ಆಭರಣಗಳು …
Read More »ಕುಮಾರಸ್ವಾಮಿ ಅವರೀಗೇ ಬಿಜೆಪಿ ಮೇಲೆ ಸ್ವಲ್ಪ ಲವ್ ಆಗಿದೆ.:ಹೊರಟ್ಟಿ
ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿಕೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ. ಈ ಕುರಿತು ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರು ಸಭೆ ಕರೆದು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. , ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರ ಮೇಲೆ ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ. ಆದರೆ ಅವರು …
Read More »ಕೊರೊನಾ ವೈರಸ್ 40 ರಿಂದ 70 ವರ್ಷಗಳ ಹಿಂದೆ ಬಾವಲಿಗಳಲ್ಲಿ ಕಂಡುಬಂದಿದೆ – ಪ್ರೊ. ಡೇವಿಡ್ ರಾಬರ್ಟ್ಸ್ನ್
ನವದೆಹಲಿ: ಇಡೀ ವಿಶ್ವವವನ್ನು ಬೆಚ್ಚಿ ಬೀಳಿಸಿದ ಕೊರೊನಾ ಸೋಂಕು ಮಾನವರಿಗೆ ತಗುಲುವ ಮುನ್ನ ದಶಕಗಳಿಂದ ಬಾವಲಿಗಳ ದೇಹದಲ್ಲಿತ್ತು. ಆದರೆ ಅದನ್ನು ಕಂಡುಹಿಡಿಯಲಾಗಲಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ವೈರಸ್ಗೆ 40 ರಿಂದ 70 ವರ್ಷಗಳ ಮೊದಲು ಬಾವಲಿಗಳಲ್ಲಿ ಕಂಡುಬಂದಿದೆ ಎಂದು ಇತ್ತೀಚಿನ ಸಂಶೋಧನೆಯೊಂದು ಬಹಿರಂಗಪಡಿಸಿದೆ. ಬಹುಶಃ ಈ ವೈರಸ್ ಈಗ ಮನುಷ್ಯರನ್ನು ತಲುಪಿರಬಹುದು ಎಂದು ಸಂಶೋಧಕರು ಹೇಳಿದ್ದಾರೆ. ನೇಚರ್ ಮೈಕ್ರೋ ಬಯಾಲಜಿ ಜರ್ನಲ್ ನಲ್ಲಿ ಪ್ರಕಟವಾದ ಹೊಸ ಸಂಶೋಧನೆಯೊಂದರಲ್ಲಿ ಕೆಲಸ ಮಾಡಿದ …
Read More »ಕೊರೊನಾ ಭೀತಿ ನಡುವೆಯೂ ಜನ ಸಾಮಾಜಿಕ ಅಂತರ ಮರೆತು ವ್ಯಾಪಾರ ಜೋರಾಗಿ ನಡೆಸಿದ್ದಾರೆ.
ರಾಯಚೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ರಾಯಚೂರಿನಲ್ಲಿ ಹಣ್ಣು, ಹೂ ವ್ಯಾಪಾರ ಜೋರಾಗಿದೆ. ಕೊರೊನಾ ಭೀತಿ ನಡುವೆಯೂ ಜನ ಸಾಮಾಜಿಕ ಅಂತರ ಮರೆತು ವ್ಯಾಪಾರ ಜೋರಾಗಿ ನಡೆಸಿದ್ದಾರೆ. ಮಾಸ್ಕ್ ಸಹ ಧರಿಸದೆ ಜನ ಬಾಳೆದಿಂಡು, ಹಸಿರು ಬಳೆ, ಹಣ್ಣು ಖರೀದಿ ಮಾಡುತ್ತಿದ್ದಾರೆ. ಮಾರ್ಕೆಟ್ ತುಂಬಾ ಮಹಿಳೆಯರೇ ವ್ಯಾಪಾರ ನಡೆಸಿದ್ದು ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಆದ್ರೆ ವ್ಯಾಪಾರಿಗಳು ಮಾತ್ರ ಈ ವರ್ಷ ವ್ಯಾಪಾರವೇ ಇಲ್ಲಾ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಬೆಲೆಯಲ್ಲೂ ವ್ಯತ್ಯಾಸವಾಗಿದ್ದು ಮಳೆ …
Read More »ಆಗಸ್ಟ್ 31ರ ವರೆಗೆಮಹಾರಾಷ್ಟ್ರ ಸರ್ಕಾರ ರಾಜ್ಯಾದ್ಯಂತ ಲಾಕ್ಡೌನ್ಘೋಷಿಸಿದೆ.
ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಕೊರೋನಾ ಪ್ರಕರಣಗಳು ಊಹೆಗೂ ನಿಲುಕದಷ್ಟು ಏರುತ್ತಲೇ ಇದೆ. ಎಷ್ಟೇ ಪ್ರಯತ್ನಿಸಿದರೂ ಸೋಂಕು ಹರಡದಂತೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಅಸಾಧ್ಯವಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಆಗಸ್ಟ್ 31ರ ವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಅನ್ನು ವಿಸ್ತರಿಸುತ್ತಿರುವುದಾಗಿ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 4 ಲಕ್ಷ ಸೋಂಕಿತರಿದ್ದು ಭಾರತದಲ್ಲೇ ಅತ್ಯಧಿಕ ಸೋಂಕಿತರನ್ನು ಹೊಂದಿರುವ ರಾಜ್ಯ ಎಂಬ ಕುಖ್ಯಾತಿಗೆ ಒಳಗಾಗಿದೆ.ಈ ಕುರಿತು ಸ್ಪಷ್ಟನೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್, …
Read More »ಮಾಸ್ಕ್ ಹಾಕಿಕೊಂಡು ಕೊರೊನಾ ವೈರಸ್ನಿಂದ ದೂರ ಇರಿ ಎಂದು ಕೆಜಿಎಫ್ ಚಿತ್ರದಲ್ಲಿ ಬರುವ ಖಳನಾಯಕ ಅಧೀರ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ.
ಬೆಂಗಳೂರು: ಮಾಸ್ಕ್ ಹಾಕಿಕೊಂಡು ಕೊರೊನಾ ವೈರಸ್ನಿಂದ ದೂರ ಇರಿ ಎಂದು ಕೆಜಿಎಫ್ ಚಿತ್ರದಲ್ಲಿ ಬರುವ ಖಳನಾಯಕ ಅಧೀರ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ. ಅಧೀರನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಂಜಯ್ ದತ್ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಕನ್ಫ್ಯೂಸ್ ಆಗಬೇಡಿ. ಬೊಮ್ಮನಹಳ್ಳಿಯ ಬಿಬಿಎಂಪಿಯವರು ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಆಧೀರನನ್ನು ಬಳಸಿದ್ದಾರೆ. ಕೆಜಿಎಫ್ ಚಿತ್ರದ ಅಧೀರ ರುಮಾಲಿನ ಬಟ್ಟೆಯಿಂದ ಬಾಯಿ ಮುಚ್ಚಿಕೊಂಡಿರುವ ಫೋಟೋ ಹಾಕಿ, ಮಾಸ್ಕ್ ಹಾಕಿಕೊಳ್ಳಿ, ನಿಮ್ಮನ್ನು ನೀವು ಕಾಪಾಡಿಕೊಳ್ಳಿ. ನೋಡಿ …
Read More »