ಬೆಂಗಳೂರು: ದೇಶದ ಇತಿಹಾಸದಲ್ಲಿ ದಾಖಲಾದ ವಿಚಾರವನ್ನ ಬಿಎಸ್ವೈ ಸರ್ಕಾರ ಶಾಲಾ ಪಠ್ಯಗಳಿಂದ ಕೈಬಿಡಲು ಹೊರಟಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿರುವ ಡಿಕೆಶಿ, ಪಠ್ಯಪುಸ್ತಕದಿಂದ ಕೈ ಬಿಟ್ಟ ವಿಚಾರ ಸಂಬಂಧ ಸಂಶೋಧಕರು, ಶಿಕ್ಷಣ ತಜ್ಞರೊಂದಿಗೂ ಚರ್ಚಿಸಲಾಗುವುದು. ಇತಿಹಾಸ ತಿರುಚುವ ಮೂಲಕ ಜನರ ದಾರಿ ತಪ್ಪಿಸುತ್ತಿರುವುದನ್ನು ವಿರೋಧಿಸಬೇಕಿದೆ. ಯಾವುದೇ ಕಾರಣಕ್ಕೂ ಇತಿಹಾಸ ಮರೆಮಾಚಲು ಬಿಡುವುದಿಲ್ಲ ಎಂದು ಆಗ್ರಹಿಸಿದ್ದಾರೆ. ಟಿಪ್ಪು ಜಯಂತಿ ಆಚರಿಸುವುದು ಬಿಎಸ್ವೈ ಸರ್ಕಾರಕ್ಕೆ …
Read More »ಭೂಮಿ ಪೂಜೆಗೆ ಮೋದಿ ಹಾಜರಾಗುವುದು ಸಾಂವಿಧಾನಿಕ ಪ್ರಮಾಣವನ್ನು ಉಲ್ಲಂಘಿಸಿದಂತೆ – ಓವೈಸಿ
ಹೈದರಾಬಾದ್: ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಜರಾಗುವುದು ಸಾಂವಿಧಾನಿಕ ಪ್ರಮಾಣವನ್ನು ಉಲ್ಲಂಘಿಸಿದಂತೆ ಎಂದು ಅಖಿಲ ಭಾರತ ಮಜ್ಲಿಸ್-ಇ-ಇಥೆಹಾದುಲ್ ಮುಸ್ಮಿಮಿನ್ (ಎಐಎಂಐಎಂ) ಪಕ್ಷದ ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ವರದಿ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಓವೈಸಿ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. “ಕರ್ತವ್ಯದಲ್ಲಿದ್ದಾಗ …
Read More »ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ
ಬೆಳಗಾವಿ: ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ. ಆದ್ದರಿಂದ ಮೂರು ದಿನಗಳಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇಯ ಸಭಾಂಗಣದಲ್ಲಿ ಮಂಗಳವಾರ (ಜುಲೈ 28) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಆರಂಭಗೊಂಡಿರುವುದರಿಂದ ಪ್ರವಾಹ, ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ …
Read More »ಬೆಳಗಾವಿ ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ದರ್ಶನ ಎಚ್.ವಿ.
ಬೆಳಗಾವಿ: ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ದರ್ಶನ ಎಚ್.ವಿ. ಅವರನ್ನು ನೇಮಕಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ದರ್ಶನ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯಿತಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಳಗಾವಿ ಜಿಪಂ ಸಿಇಒ ಆಗಿದ್ದ ಡಾ. ಕೆ.ವಿ ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಡಾ. ಕೆ.ವಿ ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ …
Read More »ಶೀಘ್ರದಲ್ಲಿಯೇ ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆಯ ಘಟಕ ಆರಂಭ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೊರೊನಾ ಸೋಂಕಿನ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪುತ್ತಿರುವದರಿಂದ ಇದನ್ನು ಹೋಗಲಾಡಿಸಲು ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೇಂದ್ರೀಕೃತ ಆಮ್ಲಜನಕ ಪೂರೈಕೆಯ ಘಟಕವನ್ನು ಪ್ರಾರಂಭಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಕಿಟ್ಗಳನ್ನು ಹಸ್ತಾಂತರಿಸುವ ಮುನ್ನ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ದೂರವಾಣಿ ಮೂಲಕ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಕೊರೊನಾ ರೋಗಿಗಳಿಗೆ ಸಮರ್ಪಕ ಆಕ್ಸಿಜನ್ ವ್ಯವಸ್ಥೆ ಇಲ್ಲದ್ದರಿಂದ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಗೋಕಾಕ ಮತ್ತು ಮೂಡಲಗಿ …
Read More »ಕೊರೊನಾ ಸೋಂಕಿತ ಮಹಿಳೆಯರ ಮೇಲೂ ಕಾಮುಕರ ಕಣ್ಣು.!
ನೋಯ್ಡಾ(ಉ.ಪ್ರ.),ಜು.28- ಡೆಡ್ಲಿ ಕೊರೊನಾ ಸೋಂಕಿನಿಂದ ನರಳುತ್ತಾ ಆಸ್ಪತ್ರೆಗಳ ಪ್ರತ್ಯೇಕ ಕೊಠಡಿಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯರ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದೇಶದ ಕೆಲವಡೆ ವರದಿಯಾಗುತ್ತಿದೆ. ಕಳೆದ ವಾರ ದೆಹಲಿಯಲ್ಲಿ ಅಪ್ರಾಪ್ತೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ವರದಿಯಾಗಿದೆ. ನೋಯ್ಡಾದ ಖಾಸಗಿ ಅಸ್ಪತ್ರೆಯೊಂದರ ಐಸೋಲೇಷನ್ ವಾರ್ಡ್ನಲ್ಲಿ ಕೋವಿಡ್-19 ವೈರಾಣು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 20 …
Read More »ಕೊರೊನಾ ಕಾಲದಲ್ಲಿ ಶಾಲೆ ತೆರೆಯಲು ಅವಸರವಿಲ್ಲ: ಸುರೇಶ್ ಕುಮಾರ್
ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಪ್ರಸರಣದ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಮಾತನಾಡಿದ ಅವರು, ಈ ಸಾಮಾಜಿಕ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ …
Read More »ಕೆಲಸ ಕಳ್ಕೊಂಡು ತರಕಾರಿ ಮಾರಾಟ ಮಾಡ್ತಿದ್ದ ಟೆಕ್ಕಿಗೆ ಸೋನು ಸೂದ್ ಸಹಾಯ
ಹೈದರಾಬಾದ್: ಕೊರೊನಾ ಲಾಕ್ಡೌನ್ ಶುರುವಾದಗಿನಿಂದ ಬಾಲಿವುಡ್ ನಟ ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ. ಇದೀಗ ಕೋವಿಡ್ನಿಂದ ಕೆಲಸ ಕಳೆದುಕೊಂಡು ತರಕಾರಿ ಮಾರಾಟ ಮಾಡುತ್ತಿದ್ದ ಮಹಿಳಾ ಟೆಕ್ಕಿ ನೆರವಿಗೆ ಸೋನು ಸೂದ್ ಧಾವಿಸಿದ್ದಾರೆ. ಹೈದರಾಬಾದ್ನ ಟೆಕ್ಕಿ ಉಂಡಾಡಿ ಶಾರದಾ ಕೊರೊನಾದಿಂದ ಕೆಲಸ ಕಳೆದುಕೊಂಡು ಶ್ರೀನಗರ ಕಾಲೋನಿಯಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದರು. ಈ ಬಗ್ಗೆ ತಿಳಿದು ಸೋನು ಸೂದ್ ಮಹಿಳಾ ಟೆಕ್ಕಿಗೆ ಉದ್ಯೋಗವನ್ನು ಕೊಡಿಸಿದ್ದಾರೆ. ಟೆಕ್ಕಿ ಶಾರದಾ ಬಗ್ಗೆ ರಿಚ್ಚಿ …
Read More »ಈ ವರ್ಷ ರಸ್ತೆಯಲ್ಲಿ ಗಣಪತಿ ಕೂರಿಸುವಂತಿಲ್ಲ………..
ಬೆಂಗಳೂರು: ಈ ವರ್ಷ ಬೆಂಗಳೂರಿನ ರಸ್ತೆಯಲ್ಲಿ ಗಣಪತಿ ಕೂರಿಸುವಂತಿಲ್ಲ ಎಂದು ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಕೊರೊನಾನಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಗಣೇಶ ಹಬ್ಬ ಮನೆಯಲ್ಲೇ ಮಾಡಿ. ಕೊರೊನಾ ವಿರುದ್ಧ ಹೋರಾಟ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಗಣಪತಿ ಕೂರಿಸಲು ಅವಕಾಶವೇ ಇಲ್ಲ. ಈ ಮೂಲಕ ಹಬ್ಬಗಳನ್ನ ಮನೆಯಲ್ಲಿ ಮಾಡಬೇಕು ಎಂದು ಪಬ್ಲಿಕ್ ಟಿವಿಗೆ ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಹಬ್ಬದ ಶಾಪಿಂಗ್ ನೆಪದಲ್ಲಿ ನಿಯಮಗಳನ್ನು ಮೀರಿದರೆ ದಂಡ ವಿಧಿಸಲಾಗುತ್ತಿದೆ. …
Read More »ವಿಶ್ವನಾಥ್, ಎಂಟಿಬಿಗೆ ಸಚಿವ ಸ್ಥಾನ ಸಿಕ್ಕರೆ ಒಳ್ಳೆಯದು: ಶ್ರೀಮಂತ ಪಾಟೀಲ್
ಧಾರವಾಡ: ಹೆಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ತ್ಯಾಗ ಮಾಡಿ ಬಂದವರು. ಈ ಸರ್ಕಾರ ರಚನೆಗೆ ಅವರ ಸಹಕಾರ ಬಹಳ ಸಿಕ್ಕಿದೆ. ಅವರಿಗೆ ಸಚಿವ ಸ್ಥಾನ ಸಿಕ್ಕರೆ ಒಳ್ಳೆಯದು ಎಂದು ಅಲ್ಪ ಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮ ಪಕ್ಷದ ಮುಖಂಡರು ಎಲ್ಲ ಸರಿ ಪಡಿಸ್ತಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ತಾರೆ ಎಂದು ಹೇಳಿದರು. ನಿಗಮ …
Read More »