Breaking News

ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ,

  ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ …

Read More »

ಕೌಟುಂಬಿಕ ಕಲಹದ ಹಿನ್ನಲೆ ತಾಯಿ ಹಾಗೂ ಎರಡು ಮಕ್ಕಳ ಜೊತೆ ಕಾಲುವೆಗೆ ಹಾರಿದ ಘಟನೆ

ಹುಕ್ಕೇರಿ:ತಾಲೂಕಿನ ಅವರಗೊಳ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನಲೆ ತಾಯಿ ಹಾಗೂ ಎರಡು ಮಕ್ಕಳ ಜೊತೆ ಕಾಲುವೆಗೆ ಹಾರಿದ ಘಟನೆ ನಡೆದಿದೆ ಈ ಹಿಂದೆ ಪ್ರತಿದಿನ ಮನೆಯಲ್ಲಿ ಗಲಾಟೆ ಮಾಡಕೊಂಡಿದ್ದ ಪತಿರಾಯ ಕೊನೆಗೂ ಪತ್ನಿ ಗಲಾಟೆ ತೊಂದರೆ ಸಾಕಾಗಿ ಇಬ್ಬರೂ ಗಂಡು ಮಕ್ಕಳ ಜೊತೆಗೆ ಅವಳು ಕೂಡಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅವರಗೋಳ ಗ್ರಾಮದಲ್ಲಿ ನಡೆದಿದೆ ಮಾಲವ್ವಾ ಬಸವರಾಜ ಮರಬಸನ್ನವರ ವಯಸ್ಸು ೩೫ ಮಕ್ಕಳು ಸಿದ್ದಾರೂಡ ೧೨ ವರ್ಷದ …

Read More »

ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ

ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ ತಾಲೂಕು ಕಡೋಲಿ ಗ್ರಾಮದ ಕಿರಣ ಯಶವಂತ ಭಜಂತ್ರಿ(೨೦) ಮೃತ ಯುವಕ. ಬಂಬರಗೆ ಗ್ರಾಮದ ಅಶೋಕ ಸುರೇಶ ಮ್ಯಾಗೇರಿ ಗಾಯಗೊಂಡಿದ್ದಾನೆ. ಇವರು ಹತ್ತಿರಗಿ ಟೋಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಗುರುವಾರ ಬೆಳಗ್ಗೆ ಕೆಲಸಕ್ಕೆಂದು ಹೋಗುತ್ತಿದ್ದಾಗ ಬೈಕ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ …

Read More »

ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು.

ಬೆಳಗಾವಿ: ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು. ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರಾದ ಲಕ್ಷ್ಮಣ ಸವದಿ ಅವರು ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸಾವಯವ-ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಯವ-ಸಿರಿಧಾನ್ಯ ಕುರಿತು ಜಾಗೃತಿ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ …

Read More »

ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಮುಖ್ಯ ಅತಿಥಿ

ನವದೆಹಲಿ, ಜ.24-ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಲಿದ್ದಾರೆ. ಅವರು ಇಂದಿನಿಂದ ಇದೇ 27ರವರೆಗೆ ಭಾರತ ಪ್ರವಾಸ ಕೈಗೊಂಡಿದ್ದು, ದೆಹಲಿಯ ರಾಜ್‍ಪಥ್‍ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ. ಬೋಲ್ಸನಾರೊ ಅವರ ಜೊತೆಗೆ ಅವರ ಸಂಪುಟದ 8 ಸಚಿವರು, ಬ್ರೆಜಿಲ್ ಸಂಸತ್ತಿನ ನಾಲ್ವರು ಸದಸ್ಯರು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮಿಗಳ ನಿಯೋಗ ಭಾರತಕ್ಕೆ ಆಗಮಿಸಿದ್ದಾರೆ. ಬ್ರೆಜಿಲ್‍ನ ಅಧ್ಯಕ್ಷರು ಗಣರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಗಳಾಗುತ್ತಿರುವುದು ಇದು ಮೂರನೇ ಸಲ. …

Read More »

ಇರುವ 16 ಸ್ಥಾನಗಳಲ್ಲಿ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬುದು ಮುಖ್ಯಮಂತ್ರಿಗೆ ಸವಾಲಾಗಿದೆ.

ಬೆಂಗಳೂರು,ಜ.23-ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಉದ್ಯಮಿಗಳನ್ನು ಆಕರ್ಷಿಸಲು ಸ್ವಿಡ್ಜಲ್ರ್ಯಾಂಡ್‍ನ ದಾವೋಸ್‍ಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ನಾಳೆ ನಗರಕ್ಕೆ ಹಿಂದಿರುಗಲಿದೆ. ನಾಳೆ ಬೆಳಗ್ಗೆ ದಾವೋಸ್‍ನಿಂದ ರಸ್ತೆಮೂಲಕ ಜೂರಿಚ್‍ಗೆ ಆಗಮಿಸಿ ಅಲ್ಲಿಂದ ದುಬೈಗೆ ಬಂದು ಮಧ್ಯಾಹ್ನ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ವಿಶ್ವ ಆರ್ಥಿಕ ಶೃಂಗ ಸಮ್ಮೇಳನದ ಸಂದರ್ಭದಲ್ಲಿ ಈ ಬಾರಿ ರಾಜ್ಯ ನಿಯೋಗಕ್ಕೆ ಕೆಲವು ಉದ್ಯಮಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 2ನೇ …

Read More »

ಬೆಳಗಾವಿಯಲ್ಲಿ ಚಿತ್ರೀಕರಣಗೊಂಡಿರುವ ‘ಗಡಿನಾಡು’ ಬೆಳ್ಳಿ ಪರದೆಗೆ ………

ಬೆಳ್ಳಿ ಪರದೆ ಮೇಲೆ ಯುವ ತಂಡವು ಗಡಿನಾಡು ಚಿತ್ರದ ಮೂಲಕ ಸದ್ದು ಮಾಡಲು ಬರುತ್ತಿದ್ದಾರೆ. ಕರ್ನಾಟಕದ ಗಡಿ ಭಾಗವಾಗಿರುವ ಬೆಳಗಾವಿಯಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಗಡಿ ಸಮಸ್ಯೆ ಹಾಗೂ ನವೀರಾದ ಪ್ರೇಮ ಕಾವ್ಯವನ್ನು ತೆರದಿಡಲು ತಂಡ ಸಜ್ಜಾಗಿದೆ. ಈ ಚಿತ್ರ ಇದೇ ವಾರ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ನಾಗ್ ಹುಣಸೋಡ್ ನಿರ್ದೇಶನದ ಗಡಿನಾಡು ಚಿತ್ರ ನಿರ್ಮಾಪಕ ವಸಂತ್ ಮುರಾರಿ ದಳವಾಯಿ ಗಡಿನಾಡಿನಲ್ಲಿ ಗಮನಿಸಿದ ವಿಚಾರಗಳನ್ನು ಒಳಗೊಂಡಿದೆ. ಅಥಣಿ, …

Read More »

ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ

ಮೂಡಲಗಿ : ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಡಾ.ಬಿ. ಆರ್.ಅಂಬೇಡ್ಕರ ಸಮುದಾಯ ಭವನ ಗಂಗಾನಗರದಲ್ಲಿ ತಾತ್ಕಾಲಿಕವಾಗಿ ಕಛೇರಿ ಪ್ರಾರಂಭಿಸುವದಾಗಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದರು. ಅವರು ಬುಧವಾರ ಪಟ್ಟಣನದಲ್ಲಿ ನೂತನ ತಾಲೂಕು ಪಂಚಾಯತ ಕಾರ್ಯಾಲಯವನ್ನು ಪ್ರಾರಂಭಿಸುವ ಸಲುವಾಗಿ ಭೇಟಿ ನೀಡಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಉಪಸ್ಥಿತಿಯಲ್ಲಿ ಇದೇ ಭಾನುವಾರ …

Read More »

ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ದೊರಕಿಸಿಕೊಡುತ್ತೇನೆ ಎಂಬ ವೀರ ಸೇನಾನಿ ಸುಭಾಷ್‍ಚಂದ್ರ ಬೋಸ್ ಅವರ 124ನೆ ಜನ್ಮದಿನ

ನವದೆಹಲಿ, ಜ.23- ವೀರ ಸೇನಾನಿ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ 124ನೆ ಜನ್ಮದಿನವಿಂದು. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರು, ಡಾ.ಮನಮೋಹನ್‍ಸಿಂಗ್, ಕಾಂಗ್ರೆಸ್ ಮುಖಂಡರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಗುಲಾಮ್‍ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್‍ಸಿಂಗ್, ಪಶ್ಚಿಮ ಬಂಗಾಳ …

Read More »

ಸರ್ಕಾರಿ ಆಸ್ಪತ್ರೆಗಳ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು: ಡಿಸಿಎಂ ಅಶ್ವತ್ಥ ನಾರಾಯಣ್

  ಮೈಸೂರು, ಜ.23- ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಕಾತೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ನಗರದ ವೈದ್ಯಕೀಯ ಮಹಿಳಾ ಯುಜಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯ ಆವರಣದಲ್ಲಿಂದು ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ …

Read More »