ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಸಂತೆಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ಸೋಮವಾರಪೇಟೆಯಲ್ಲಿ ಇಂದು ವ್ಯಾಪಾರಿಗಳು ಸಂತೆಯಲ್ಲಿ ಅಂಗಡಿ ಹಾಕಿದ್ದರು. ವಿಷಯ ತಿಳಿದ ಪೊಲೀಸರು ಅಂಗಡಿಗಳನ್ನು ತೆರವು ಮಾಡುವಂತೆ ಖಡಕ್ಕಾಗಿ ಹೇಳಿದರೂ, ಕ್ಯಾರೆ ಎನ್ನಲಿಲ್ಲ. ಆಗ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಎಷ್ಟೇ ಎಚ್ಚರಿಕೆ ನೀಡಿದರೂ ಕೇಳದ ಹಿನ್ನೆಲೆ ಪೊಲೀಸರಿಗೆ ಬೇರೆ ದಾರಿಯಿಲ್ಲದೆ ಲಾಠಿ ರುಚಿ ತೋರಿಸಿದರು. …
Read More »ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್‍ಡೌನ್ ಜಾರಿ ಇಲ್ಲ : ಸಿಎಂ
ಬೆಂಗಳೂರು,ಜು.27-ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಲಾಕ್‍ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೆ ಪುನರುಚ್ಚರಿಸಿದ್ದಾರೆ. ಇನ್ನು ಮುಂದೆ ಲಾಕ್‍ಡೌನ್ ಕುರಿತಂತೆ ನಾನು ಚರ್ಚೆಯನ್ನೇ ಮಾಡುವುದಿಲ್ಲ. ಈಗಾಗಲೇ 45 ದಿನ ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಪುನಃ ಅದರ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದರು. ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದ ಸವಾಲುಗಳ ವರ್ಷ, ಪರಿಹಾರದ …
Read More »ಐಶ್ವರ್ಯಾ ರೈ, ಪುತ್ರಿಗೆ ಕೊರೊನಾ ನೆಗೆಟಿವ್- ಆಸ್ಪತ್ರೆಯಿಂದ ಡಿಸ್ಚಾರ್ಜ್
ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತೀಚೆಗಷ್ಟೆ ನಟಿ ಐಶ್ವರ್ಯಾ ರೈ ಮತ್ತು ಆರಾಧ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಕೋವಿಡ್ ಡೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ನಿಮ್ಮ ನಿರಂತರ ಪ್ರಾರ್ಥನೆ …
Read More »ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ
ಬೆಳಗಾವಿ : ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ …
Read More »ಸರ್ಕಾರ ನಾಲ್ವರು ಶಾಸಕರ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದು ಆದೇಶ ಹೊರಡಿಸಿದೆ.
ಬೆಂಗಳೂರು: ಕೆಲ ಹಿರಿಯ ಶಾಸಕರು ನಿಗಮ ಸ್ಥಾನಕ್ಕೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಲ್ವರು ಶಾಸಕರ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದು ಆದೇಶ ಹೊರಡಿಸಿದೆ. ಶಾಸಕರಾದ ಜಿ.ಎಚ್. ತಿಪ್ಪಾರಡ್ಡಿ, ಲಾಲನ್ ಮಂಡೆನ್, ಬಸವರಾಜ ದಡೆಸಗೂರು, ಪರಣ್ಣ ಮುನವಳ್ಳಿ ಅವರಿಗೆ ನೀಡಲಾದ ನಿಗಮ ಮಂಡಳಿ ಸ್ಥಾನವನ್ನು ವಾಪಸ್ ಪಡೆಯಲಾಗಿದೆ. ಇಂದು ಮುಂಜಾನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದರು. ಸಚಿವ …
Read More »ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!
ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …
Read More »ಪಾಕ್ ಪರ ಘೋಷಣೆ ಪ್ರಕರಣ- ಆರೋಪಿಗಳಿಗೆ ಕಾಶ್ಮೀರಕ್ಕೆ ತೆರಳಲು ನ್ಯಾಯಾಲಯ ನಿರಾಕರಣೆ
ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ತಮ್ಮ ಮೂಲ ಸ್ಥಳಕ್ಕೆ ಹೋಗಲು ಅರ್ಜಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಅರ್ಜಿಯನ್ನು ಹುಬ್ಬಳ್ಳಿಯ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.ಫೆಬ್ರವರಿ 15 ರಂದು ಕೆಎಲ್‍ಇ ಕಾಲೇಜಿನಲ್ಲಿ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ವಿದ್ಯಾರ್ಥಿಗಳ ಜಾಮೀನಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ತಂಡ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿತ್ತು. ಈ ವೇಳೆ …
Read More »ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?
ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …
Read More »ಪೊಲೀಸರಿಂದ ತಪ್ಪಿಸಿಕೊಳ್ಳಲು ಪತ್ನಿಯ ಪೆಟಿಕೋಟನ್ನೇ ಮಾಸ್ಕ್ ಮಾಡ್ಕೊಂಡ!
ಭೋಪಾಲ್: ಚೀನಿ ವೈರಸ್ ಕೋವಿಡ್ 19 ನಮ್ಮ ದೇಶಕ್ಕೂ ಒಕ್ಕರಿಸಿದ ಬಳಿಕ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಕಾಲಿಟ್ಟರೆ ದಂಡ ಕೂಡ ಬೀಳುತ್ತದೆ. ಅಂತೆಯೇ ಮಾಸ್ಕ್ ಧರಿಸದೇ ಬಂದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ತನ್ನ ಪತ್ನಿಯ ಪೆಟಿಕೋಟನ್ನೇ ಮಾಸ್ಕ್ ಮಾಡಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಭಾನುವಾರ ಕಟ್ಟುನಿಟ್ಟಿನ ಲಾಕ್‍ಡೌನ್ ಹೇರಲಾಗಿತ್ತು. ಕೊರೊನಾ ಚೈನ್ ಬ್ರೇಕ್ ಮಾಡಲು ಲಾಕ್‍ಡೌನ್ ಒಂದೇ …
Read More »ಲಾಕ್‍ಡೌನ್ ಸಂಕಷ್ಟದಲ್ಲೂ ಸರ್ಕಾರಿ ನೌಕರರ ಹಿತ ಕಾದಿದೆ ಬಿಎಸ್‍ವೈ ಸರ್ಕಾರ: ಸವದಿ
ನವದೆಹಲಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲೂ ಸರ್ಕಾರಿ ಸೇರಿದಂತೆ ಸಾರಿಗೆ ನೌಕರರ ಹಿತ ಕಾಯುವ ಕೆಲಸವನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಢಿ ನಡೆಸಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಆರಂಭದಲ್ಲಿ ಅತಿವೃಷ್ಠಿ-ಅನಾವೃಷ್ಠಿ ಕಾಡಿದ್ದು, ರಾಜ್ಯದ 20 ಜಿಲ್ಲೆಗಳು ಸಂಕಷ್ಟದಲ್ಲಿದ್ದವು. ಅದೆಲ್ಲ ಸಮಸ್ಯೆ ನಿಭಾಯಿಸುವ …
Read More »