Breaking News

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

ಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಐತಿಹಾಸಿಕ ಲಾಲ್‌ಬಾಗ್‌  ಮೇಲೂ ಸರ್ಕಾರದ ಕಣ್ಣು ಬಿದ್ದಿದೆ ಎಂದು ಆರೋಪಿಸಿ ನಾಗರಿಕರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ‘WALK IN LALBAGH, WALK FOR LALBAGH’ ಎಂಬ ಘೋಷಣೆಯೊಂದಿಗೆ ಇಂದು ಲಾಲ್‌ಬಾಗ್‌ನಲ್ಲಿ ಬೃಹತ್ ವಾಕಿಂಗ್‌ ಅಭಿಯಾನ ನಡೆಯುತ್ತಿದೆ. ಪರಿಸರವಾದಿ ಯಲ್ಲಪ್ಪ ರೆಡ್ಡಿ ಹಾಗೂ ಸಂಸದ ತೇಜಸ್ವಿ ಸೂರ್ಯ (Tejasvi …

Read More »

KPSC ಬಗ್ಗೆ ಸಾರ್ವಜನಿಕರಿಗೆ ಅಸಹ್ಯಕರ ಭಾವನೆ ಮೂಡಿದೆ: ಹೆಚ್‌ಡಿಕೆ

ಬೆಂಗಳೂರು: ಕೆಪಿಎಸ್‌ಸಿ  ಬಗ್ಗೆ ಸಾರ್ವಜನಿಕರಿಗೆ ಅಸಹ್ಯಕರ ಭಾವನೆ ಮೂಡಿದೆ, ಈ ಸಂಸ್ಥೆ ಬೇಕಾ ಎಂದು ಜನ ಕೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಕಿಡಿಕಾರಿದ್ದಾರೆ. ಕೆಪಿಎಸ್‌ಸಿ ಎಇಇ ನೇಮಕಾತಿ ಅಕ್ರಮ ಬಗ್ಗೆ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಸಂಪೂರ್ಣ ಅಧಿಕಾರ ಸಿಕ್ಕರೆ ಕೆಪಿಎಸ್‌ಸಿ ರದ್ದು ಮಾಡುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಈಗ ಅಧಿಕಾರ ಸಿಕ್ಕಿದೆಯಲ್ಲ ಮಾಡಿ, ಗೃಹ ಸಚಿವರಾಗಿ ನೀವೇನು ಮಾಡಿದ್ದೀರಿ ಹೇಳಿ? …

Read More »

ಪ್ರಮೋಷನ್ ನೀಡುವುದಾಗಿ 50 ಸಾವಿರ ರೂ. ಲಂಚ – ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ

ದಾವಣಗೆರೆ: ಪ್ರಮೋಷನ್  ನೀಡುವುದಾಗಿ 50 ಸಾವಿರ ರೂ. ಲಂಚ ಪಡೆದು ಪ್ರಮೋಷನ್ ನೀಡದ ಹಿನ್ನೆಲೆ ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ  ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾದನಬಾವಿ ಗ್ರಾಮದ ಬಳಿ ನಡೆದಿದೆ. ಮೋಹನ್ ಕುಮಾರ್ ಮೃತ ಬ್ಯಾಂಕ್ ಸಿಬ್ಬಂದಿ. ಮೋಹನ್ ಐಡಿಎಫ್‌ಸಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದು, ಪ್ರಮೋಷನ್ ನೀಡುವುದಾಗಿ ಹೇಳಿ ಅಧಿಕಾರಿಗಳು ಮೋಹನ್ ಬಳಿ ನಕಲಿ ಅಂಕಪಟ್ಟಿಗೆ 50 ಸಾವಿರ ಲಂಚ ಪಡೆದಿದ್ದರು. ಮೋಹನ್ …

Read More »

ಜೈಲಿನೊಳಗೆ ಕೈದಿಗಳ ನಡುವೆ ಮಾರಾಮಾರಿ; ಜಗಳ ಬಿಡಿಸಲು ಹೋದ ಸಿಬ್ಬಂದಿ ಮೇಲೆಯೇ ಹಲ್ಲೆ

ಹಾಸನ: ಜೈಲಿನೊಳಗೇ ವಿಚಾರಣಾಧೀನ ಕೈದಿಗಳ ನಡುವೆ  ಮಾರಾಮಾರಿ ನಡೆದಿದ್ದು, ಜಗಳ ಬಿಡಿಸಲು ಹೋದ ಜೈಲು ಸಿಬ್ಬಂದಿ ಮೇಲೂ ಹಲ್ಲೆ ನಡೆಸಿರುವ ಘಟನೆ ಹಾಸನ ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಫೋನ್ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ವಿಚಾರಣಾಧೀನ ಕೈದಿಗಳಾದ ಮೋಹನಕುಮಾರ ಹಾಗೂ ರಂಗಸ್ವಾಮಿ ನಡುವೆ ಮೊದಲು ಫೋನ್ ಕರೆ ಮಾಡುವ ವಿಚಾರಕ್ಕೆ ಜಗಳ ಶುರುವಾಗಿದೆ. ಬಳಿಕ ಜಗಳ ತಾರಕಕ್ಕೇರಿ ಇಬ್ಬರೂ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಜೈಲು ಮುಖ್ಯ …

Read More »

ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ನನ್ನು ಕೆಪಿಎಸ್‌ಸಿಗೆ ನೇಮಕ ಮಾಡಿದ್ದು ಬಿಜೆಪಿ: ಬಿಕೆ ಹರಿಪ್ರಸಾದ್

ಬೀದರ್: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ನನ್ನು  ಕೆಪಿಎಸ್‌ಸಿಗೆ ನೇಮಕ ಮಾಡಿದ್ದು ಯಾರು? ಇಂಥವರನ್ನು ನೇಮಕ ಮಾಡಿದ್ದೆ ಬಿಜೆಪಿಯ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಅಧ್ಯಕ್ಷ ಬಿವೈ ವಿಜಯೇಂದ್ರ 20 ಕೋಟಿ ಲಂಚ ಹಗರಣದಲ್ಲಿ ಸ್ವಂತ ತಂದೆಯನ್ನೇ ಜೈಲಿಗೆ ಕಳುಹಿಸಿದರು. ಇವರು ನಮಗೆ ಲಂಚದ ಬಗ್ಗೆ ಪಾಠದ ನೈತಿಕತೆ …

Read More »

ಸರ್ವರ್ ಡೌನ್ – ಪಡಿತರ ಸಿಗದೆ ಬೆಳಗಾವಿ ಜಿಲ್ಲೆಯಾದ್ಯಂತ ಕಾರ್ಡುದಾರರ ಪರದಾಟ

ಬೆಳಗಾವಿ: ಜಿಲ್ಲೆಯಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಸರ್ವರ್ ವೈಫಲ್ಯ ತಲೆದೋರಿದ್ದು, ನ್ಯಾಯಬೆಲೆ ಅಂಗಡಿಗಳ ಮುಂದೆ ಸಾರ್ವಜನಿಕರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಪಡಿತರಪಡೆಯಲು ಇಂದು ಕೊನೆಯ ದಿನವಾಗಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಹಾಗೂ ಯರಗಟ್ಟಿ ತಾಲೂಕಿನ ಮುಗಳಿಹಾಳ ಸೇರಿದಂತೆ ಹಲವೆಡೆ ಕಾರ್ಡುದಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಿದೆ. ಆದರೆ, ತಾಂತ್ರಿಕ ಅಡಚಣೆಯಿಂದಾಗಿ ಸರ್ವರ್(Server) ಸಂಪರ್ಕ ಅತ್ಯಂತ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯಂತ್ರದಲ್ಲಿ ಹೆಬ್ಬೆರಳಿನ …

Read More »

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು, ಯುವಕನ ಸ್ಥಿತಿ ಗಂಭೀರ

ಬೆಂಗಳೂರು: 7ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿ, ಯುವಕ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ  ನಡೆದಿದೆ. ಜನನಿ ಮೃತ ಯುವತಿ, ಈಕೆ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಳು ಎಂದು ತಿಳಿದುಬಂದಿದೆ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡ ಯುವಕ. ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Read More »

ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ‌

ಶಿವಮೊಗ್ಗ: ಇಲ್ಲಿನ  ವಿದ್ಯಾನಗರದಲ್ಲಿ ವಾಸವಾಗಿದ್ದ ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ  ಕಳ್ಳತನವಾಗಿದೆ. ವಿದ್ಯಾನಗರದ 4ಎ ಕ್ರಾಸ್‌ನಲ್ಲಿ ಬಾಡಿಗೆ ಮನೆಯಲ್ಲಿ ಪಿಡಿಒ ದಂಪತಿ ವಾಸವಾಗಿದ್ದರು. ಎಂದಿನಂತೆ ದಂಪತಿ ಕರ್ತವ್ಯಕ್ಕೆ ತೆರಳಿದ್ದಾಗ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಮನೆ ಬೀಗ ಮುರಿದು, ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಮನೆ ಕಳ್ಳತನ ಹಾಗೂ ಕಳ್ಳ ಪರಾರಿಯಾದ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೇವಲ 30 ನಿಮಿಷದಲ್ಲಿ 943 ಗ್ರಾಂ …

Read More »

ದೌರ್ಜನ್ಯದ ರೂಪದಲ್ಲಿ ನನ್ನ ರಾಜೀನಾಮೆ ಪಡೆದಿದ್ದು ಬಹಳ ನೋವು ತಂದಿದೆ: ಬಸವರಾಜ ಹೊರಟ್ಟಿ

ಗದಗ: ನನ್ನ ರಾಜೀನಾಮೆ ಪಡೆಯಲು ಸ್ವತಃ ಸಿಎಂ ಅವರೇ ಸ್ಪೀಕರ್ ಕಚೇರಿಗೆ ಬಂದು ಬಾಗಿಲು ಹಾಕಿಕೊಂಡು ಒಂದೂವರೆ ಗಂಟೆ ಕುಳಿತು, ದೌರ್ಜನ್ಯದ ರೀತಿಯಲ್ಲಿ ರಾಜೀನಾಮೆ ಪಡೆದರು. ಇದು ನನಗೆ ಬಹಳ ನೋವು ತಂದಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಕಾರ್ಯಕರ್ತರ ಜೊತೆ ಮಾತನಾಡಿದ ಹೊರಟ್ಟಿ, ಸಿಎಂ ಡಿ.ಕೆ. ಶಿವಕುಮಾರ್ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. …

Read More »

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಹಜ್ ಯಾತ್ರೆಗೆ ಹೋಗುವ ಆಸೆಯಿದೆ: ಬಸವರಾಜ ರಾಯರೆಡ್ಡಿ

ಕೊಪ್ಪಳ: ಜಗತ್ತಿನಲ್ಲಿ ಇಸ್ಲಾಂ ಅತ್ಯಂತ ಶ್ರೇಷ್ಠ ಹಾಗೂ ವೈಜ್ಞಾನಿಕವಾದ ಧರ್ಮವಾಗಿದ್ದು, ನನಗೆ ಮಕ್ಕಾ-ಮದೀನಾದ ಹಜ್ ಯಾತ್ರೆಗೆ ಹೋಗುವ ತೀವ್ರ ಆಸೆಯಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಹೇಳಿದ್ದಾರೆ. ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಧರ್ಮ ಹಾಗೂ ಧಾರ್ಮಿಕ ಆಚರಣೆಗಳ ಕುರಿತು ಹಲವು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಇಸ್ಲಾಂ ಧರ್ಮದ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆಗಳನ್ನು ಹರಡಲಾಗುತ್ತಿದೆ. ಆದರೆ ಇಸ್ಲಾಂ ಅತ್ಯಂತ …

Read More »