Breaking News

ನನ್ನ ವಿರುದ್ಧ ಇಡೀ ಗ್ಯಾಂಗ್ ಕೆಲಸ ಮಾಡ್ತಿದೆ: ಎ.ಆರ್.ರೆಹಮಾನ್

ಮುಂಬೈ: ಮ್ಯೂಸಿಕ್ ಮಾಂತ್ರಿಕ ಎ.ಆರ್. ರಹಮಾನ್ ಮೊದಲ ಬಾರಿಗೆ ಬಾಲಿವುಡ್ ನಲ್ಲಿಯ ಸ್ವಜನಪಕ್ಷಪಾತದ ಬಗ್ಗೆ ಮಾತನಾಡಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ರೆಹಮಾನ್ ಅವರನ್ನ ಸಹ ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತವನ್ನು ಎದುರಿಸಿದ್ದಾರೆ. ಇಡೀ ಗ್ಯಾಂಗ್ ನನ್ನ ವಿರುದ್ಧ ಕೆಲಸ ಮಾಡುತ್ತಿತ್ತು. ಹಾಗಾಗಿ ನಾನು ಹಿಂದಿ ಸಿನಿಮಾಗಳಲ್ಲಿ ಹೆಚ್ಚು ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದಿದ್ದಾರೆ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕೇಳುಗರೊಂದಿಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಾನು ಸಂಗೀತ ನೀಡಿರುವ ಸಿನಿಮಾಗಳು ಚೆನ್ನಾಗಿಲ್ಲ ಎಂದು …

Read More »

ಕೋವಿಡ್ ವಾರ್ಡ್ ನಿಂದಲೇ ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿಯಾಗೋದು ಬೇಡ’ ಎಂದು ಕೈ ಮುಗಿಯುತ್ತ ಕಾಮೇಗೌಡರು

ಮಂಡ್ಯ: ಕರೊನಾ ಸೋಂಕಿನಿಂದ ಬಳಲುತ್ತಿರುವ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ತಮ್ಮ ಆರೋಗ್ಯ ಪರಿಸ್ಥಿತಿ ಕುರಿತು ಅವರೇ ಮಾತನಾಡಿದ್ದಾರೆ. ‘ಆಸ್ಪತ್ರೆಯಲ್ಲಿ ನನ್ನನ್ನು ಚೆನ್ನಾಗಿ ನೋಡ್ಕೋತ್ತಿದ್ದಾರೆ. ಟೈಂ ಟೈಂಗೆ ವೈದ್ಯರು ಬಂದು ತಪಾಸಣೆ ನಡೆಸ್ತಿದ್ದಾರೆ. ಊಟ ತಿಂಡಿಯ ವ್ಯವಸ್ಥೆಯೂ ಚೆನ್ನಾಗಿದೆ. ನಾನು ಶೌಚಗೃಹಕ್ಕೆ ಹೋಗಿ ಬರಲು ಒಬ್ಬರನ್ನ ನಿಯೋಜಿಸ್ತೀನಿ ಎಂದು ಹೇಳಿದ್ದಾರೆ. ನನಗೆ ಸ್ವಲ್ಪ ಕಾಲು ನೋವು ಇರೋದು ಬಿಟ್ರೆ ಬೇರೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾನು ಆರೋಗ್ಯವಾಗಿದ್ದು, ಯಾರೂ …

Read More »

ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ.

ಬೆಂಗಳೂರು: ಸಂಡೇ ಲಾಕ್‍ಡೌನ್ ಆದರೂ ನಗರದಲ್ಲಿ ಜನರು ಸುಮ್ಮನೇ ಓಡಾಡುತ್ತಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ. ಕೆಂಗೇರಿ ಪೊಲೀಸರು ಅನಗತ್ಯವಾಗಿ ಓಡಾಟ ಮಾಡುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಈ ಮೂಲಕ ಕೆಂಗೇರಿ ಚೆಕ್‍ಪೋಸ್ಟ್ ನಲ್ಲಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನ ಪೊಲೀಸರು ಸೀಜ್ ಮಾಡುತ್ತಿದ್ದಾರೆ. ಪೊಲೀಸರು ರಸ್ತೆಯ ಎರಡು ಬದಿಯಲ್ಲಿ ಓಡಾಡುತ್ತಿರುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ತಪಾಸಣೆ ವೇಳೆ ಅನಗತ್ಯವಾಗಿ ಓಡಾಟ ಮಾಡುತ್ತಿರುವುದು ಕಂಡು ಬಂದರೆ ಅಂತಹ …

Read More »

ಕಾರ್ಗಿಲ್ ಹುತಾತ್ಮರಿಗೆ ಸಿಎಂ ನಮನ

ಬೆಂಗಳೂರು: ಇಡೀ ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾಥೆ ಯುವ ಪೀಳಿಗೆಗೆ ಎಂದಿಗೂ ಸ್ಪೂರ್ತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಗಿಲ್ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ. ಇಂದು ಕಾರ್ಗಿಲ್ ವಿಜಯ್ ದಿವಸ್. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಗಿಲ್ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ ಅವರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ …

Read More »

ನೆನಪಿರಲಿ ಪ್ರೇಮ್‌ ಅವರ ತಾಯಿಗೆ ಕೊರೊನಾ ಪಾಸಿಟಿವ್ :ಆಸ್ಪತ್ರೆಯಿಂದ ಸದ್ಯ ಅವರು ಗುಣಮುಖರಾಗಿ ಮನೆಗೆ ಮರಳಿದ್ದಾರೆ

ಬೆಂಗಳೂರು: ನೆನಪಿರಲಿ ಪ್ರೇಮ್‌ ಅವರ ತಾಯಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಅವರು ಗುಣಮುಖರಾಗಿ ಮನೆಗೆ ಮರಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಡುವುದರ ಮೂಲಕ ಈ ಖುಷಿಯನ್ನ ಪ್ರೇಮ್‌ ಹಂಚಿಕೊಂಡಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ವಿಡಿಯೋವನ್ನು ಶೇರ್ ಮಾಡಿದ ಪ್ರೇಮ್‌, “ನನ್ನ ತಾಯಿ ಮೊದಲಿಗಿಂತಲೂ ಹೆಚ್ಚು ಆರೋಗ್ಯವಂತರಾಗಿ ಮತ್ತೆ ಮನೆಗೆ ಮರಳಿದ್ದಾರೆ. ಇದಕ್ಕೆ ಕಾರಣರಾದ ಆರೈಕೆ ಮಾಡಿ, ಔಷಧ ನೀಡಿ ಗುಣಪಡಿಸಿದ ವೈದ್ಯರಿಗೆ ಧನ್ಯವಾದಗಳು. ಜೊತೆಗೆ ನಮ್ಮ ತಾಯಿ ಆರೋಗ್ಯವಂತರಾಗಿ …

Read More »

ರಾಯಚೂರಿನಲ್ಲಿ ಸಂಡೇ ಲಾಕ್‍ಡೌನ್‍ಗೆ ಎಲ್ಲಾ ಬಂದ್: ಹೊರಬಂದವರಿಗೆ ಲಾಠಿ ಏಟು

ರಾಯಚೂರು: ಸಂಡೇ ಲಾಕ್‍ಡೌನ್ ಉಲ್ಲಂಘಿಸಿ ಓಡಾಡುವವರಿಗೆ ರಾಯಚೂರು ಪೊಲೀಸರು ಲಾಠಿ ರುಚಿ ತೋರಿಸಿ ವಾಪಸ್ ಕಳುಹಿಸುತ್ತಿದ್ದಾರೆ. ಭಾನುವಾರ ಲಾಕ್ ಡೌನ್ ಇರುವುದು ತಿಳಿದಿದ್ದರೂ ಜನ ಅನಾವಶ್ಯಕವಾಗಿ ರಸ್ತೆಗೆ ಇಳಿಯುವುದನ್ನ ಮುಂದುವರಿಸಿದ್ದಾರೆ. ಹೀಗಾಗಿ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ.ಬೈಕ್, ಕಾರ್ ಗಳನ್ನ ಜಪ್ತಿಮಾಡಿ ದಂಡ ವಸೂಲಿ ಮಾಡುತ್ತಿದ್ದಾರೆ. ಇನ್ನೂ ಬೀದಿ ಬದಿಯಲ್ಲಿ ಟೀ, ತರಕಾರಿ ಮಾರುವವರು ಸಾಮಾಜಿಕ ಅಂತರವಿಲ್ಲದೆ ಮಾಸ್ಕ್ ಇಲ್ಲದೆ ವ್ಯಾಪಾರ ಮಾಡುತ್ತಿದ್ದಾರೆ. ರಸ್ತೆ ಬದಿಯ ವ್ಯಾಪಾರಿಗಳನ್ನ ಪೊಲೀಸರು ಚದುರಿಸಿ ಕಳುಹಿಸುತ್ತಿದ್ದಾರೆ. …

Read More »

ಭಾರತದ ಹೆಬ್ಬುಲಿಗಳ ಅಟ್ಟಹಾಸಕ್ಕೆ ಪತರುಗುಟ್ಟಿದ ಪಾಕಿಸ್ತಾನ ಕಾರ್ಗಿಲ್ ಬಿಟ್ಟು ಓಡಿಹೋಗಿ 21 ವರ್ಷಗಳು ಕಳೆದಿವೆ.

ಮಂಗಳೂರು: ಭಾರತದ ಹೆಬ್ಬುಲಿಗಳ ಅಟ್ಟಹಾಸಕ್ಕೆ ಪತರುಗುಟ್ಟಿದ ಪಾಕಿಸ್ತಾನ ಕಾರ್ಗಿಲ್ ಬಿಟ್ಟು ಓಡಿಹೋಗಿ 21 ವರ್ಷಗಳು ಕಳೆದಿವೆ. ಭಾರತೀಯ ಯೋಧರ ಧೈರ್ಯ, ಸಾಹಸ, ದೇಶಪ್ರೇಮದ ಪ್ರತೀಕವಾಗಿ ಕಾರ್ಗಿಲ್ ಭಾರತದಲ್ಲೇ ಉಳಿದಿದೆ. ತ್ರಿವರ್ಣ ಧ್ವಜ ಸ್ವಚ್ಛಂದವಾಗಿ ಹಾರುತ್ತಿದೆ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹುತಾತ್ಮರಾದವರ ಕಥೆಯೇ ರೋಮಾಂಚನಕಾರಿ ಯಾದರೆ, ಯುದ್ಧದಲ್ಲಿ ಗೆದ್ದು, ಭಾರತಮಾತೆಗೆ ವಿಜಯದ ತಿಲಕವಿಟ್ಟ ವೀರ ಸೇನಾನಿಗಳ ಹೋರಾಟ ಅದೊಂದು ಇತಿಹಾಸ. ಇಂತಹ ವೀರ ಸೇನಾನಿಗಳ ಪೈಕಿ ಕರಾವಳಿಯಲ್ಲಿ ಹೆಮ್ಮೆಯ ಯೋಧ ಪ್ರವೀಣ್ …

Read More »

ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್‍ಗೆ ಕೊರೊನಾ ಸೋಂಕು ದೃಢವಾಗಿದೆ.

ಬಳ್ಳಾರಿ: ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್‍ಗೆ ಕೊರೊನಾ ಸೋಂಕು ದೃಢವಾಗಿದೆ. ಸಚಿವ ಆನಂದ್ ಸಿಂಗ್ ಶುಕ್ರವಾರ ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಅದರ ವರದಿ ಶನಿವಾರ ರಾತ್ರಿ ಬಂದಿದ್ದು, ವರದಿಯಲ್ಲಿ ಆನಂದ್ ಸಿಂಗ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಯಾವುದೇ ರೋಗ ಲಕ್ಷಣಗಳಿಲ್ಲದೇ ಆನಂದ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಎ ಸಿಂಪ್ಟಮ್ಯಾಟಿಕ್ ಕೇಸ್ ಆಗಿರುವುದರಿಂದ ಆನಂದ್ ಸಿಂಗ್ ಮನೆಯಲ್ಲೇ ಚಿಕಿತ್ಸೆ …

Read More »

50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರ ನಡುವೆಯೂ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಬಿಬಿಎಂಪಿ ಅನೇಕ ಸವಲತ್ತುಗಳನ್ನು ಪ್ರಕಟಿಸಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವವರಲ್ಲಿ 50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ ನೀಡುವುದಕ್ಕೆ ಆಯಾ ವಲಯದ ಮುಖ್ಯ ಎಂಜಿನಿಯರ್‌ಗಳು ಹಾಗೂ ಜಂಟಿ ಆಯುಕ್ತರ ಮೂಲಕ ಕೇಂದ್ರ ಕಚೇರಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ವಿಶೇಷ ಆಯುಕ್ತ ಡಿ.ರಂದೀಪ್‌ (ಆರೋಗ್ಯ) ಸುತ್ತೋಲೆ ಹೊರಡಿಸಿದ್ದಾರೆ. ಪೌರಕಾರ್ಮಿಕರಿಗೆ, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ …

Read More »

ಬಿಜೆಪಿ ಮುಖಂಡನಿಂದ ಎರಡನೇ ಪತ್ನಿ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ

ಹುಬ್ಬಳ್ಳಿ: ಬಿಜೆಪಿ ಮುಖಂಡನೊಬ್ಬ ಗುಟ್ಟಾಗಿ ಎರಡನೇ ಮದುವೆಯಾಗಿದ್ದು, ಪಡೆದುಕೊಂಡ ಹಣವನ್ನು ವಾಪಸ್ ಕೇಳಿದ್ದಕ್ಕೆ ಪತ್ನಿಯನ್ನೇ ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಿಜೆಪಿ ಮುಖಂಡ, ಆತನ ಮೊದಲ ಪತ್ನಿ ಮತ್ತು ಮಕ್ಕಳು ಸೇರಿಕೊಂಡು ಎರಡನೇ ಪತ್ನಿ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಮೊದಲ ಪತ್ನಿ ಇದ್ದರೂ ಆಕೆ ಮೃತಪಟ್ಟಿರುವುದಾಗಿ ನಂಬಿಸಿದ್ದ ಬಿಜೆಪಿ ಮುಖಂಡ 2012 ರಲ್ಲಿ ಎರಡನೇ ಮದುವೆಯಾಗಿದ್ದಾನೆ. …

Read More »