ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಮಚ್ಚು ಲಾಂಗ್ ಗಳ ಸದ್ದು ಮಾಡಿದ್ದು ಹಾಡಹಗಲೇ ರೌಡಿಶೀಟರ್ ಸಿಡಿ ರಮೇಶ್ (30)ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬಳಿಯ ಟಿಬಿ ಸ್ಯಾನಿಟೆರಿಯಂ ಬಳಿ ಕೊಚ್ವಿ ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಹಿಂಭಾಗದಲ್ಲಿ ಸಿಡಿ ರಮೇಶ್ ಇರುವುದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಆಟೋದಲ್ಲಿ ಬಂದ …
Read More »ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು……..
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು ಮೊಳಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಲ್ಲಪ್ಪ ಕರಿ ಎಂಬಾತ ಅದೇ ಗ್ರಾಮದ ಶರಣಪ್ಪ ಕಾಳೆ ಎಂಬಾತನ ಮೇಲೆ ಗುಂಡು ಹಾರಿಸಿದ್ದಾನೆ. ಇಬ್ಬರ ಮಧ್ಯೆ ಹಣದ ವಿಚಾರವಾಗಿ ಜಗಳ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಮಲ್ಲಪ್ಪ ಗುಂಡು ಹಾರಿಸಿದ್ದಾನೆ. ಶರಣಪ್ಪನ ಹೊಟ್ಟೆ ಮತ್ತು ಕೈಗೆ ಗುಂಡು ತಗುಲಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ …
Read More »ಅಂತ್ಯ ಸಂಸ್ಕಾರವಾದ ವಾರದ ಬಳಿಕ ಕೊರೊನಾ ವರದಿ- ಜನರ ಆಕ್ರೋಶ
ಚಿಕ್ಕಮಗಳೂರು: ಕೊರೊನಾ ಸೋಂಕಿತ ವ್ಯಕ್ತಿಗಳು ಸಾವನ್ನಪ್ಪಿ ಅವರ ಅಂತ್ಯ ಸಂಸ್ಕಾರವಾದ ವಾರದ ಬಳಿಕ ವರದಿಗಳು ಬರುತ್ತಿರುವುದರಿಂದ ಜಿಲ್ಲೆಯ ಜನ ಆತಂಕಕ್ಕೀಡಾಗಿ ಆರೋಗ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಎಂಟು ಹಾಗೂ ಆರು ದಿನಗಳ ಹಿಂದೆ ಸಾವನ್ನಪ್ಪಿದ ವ್ಯಕ್ತಿಗಳ ವರದಿ ತಡವಾಗಿ ಬಂದಿದ್ದು ಆರೋಗ್ಯ ಇಲಾಖೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಜುಲೈ 14ರಂದು ಕೊಪ್ಪ ಆಸ್ವತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಪಟ್ಟಣದ ಮೇಲಿನ ಪೇಟೆಯ 60 ವರ್ಷದ ವೃದ್ಧ …
Read More »ಸಿದ್ದರಾಮಯ್ಯಗೆ ಲೀಗಲ್ ನೋಟಿಸ್ ಕೊಡಲು ಸಿಎಂ ತಯಾರಿ: ರಮೇಶ್ ಜಾರಕಿಹೊಳಿ
ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೀಗಲ್ ನೋಟಿಸ್ ನೀಡಲು ಸಿಎಂ ಯಡಿಯೂರಪ್ಪ ಅವರು ತಯಾರಿ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಕೊರೊನಾ ವಿಚಾರದಲ್ಲಿ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಲೀಗಲ್ ನೋಟಿಸ್ ನೀಡಲು ಸರ್ಕಾರದ ಮಟ್ಟದಲ್ಲಿ ತಯಾರಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಸಿದ್ದರಾಮಯ್ಯ ಆರೋಪ ಬಗ್ಗೆ ಈಗಾಗಲೇ ನಮ್ಮ …
Read More »ವೃದ್ಧ ಬ್ರಾಹ್ಮಣರೊಬ್ಬರು ಮೃತರಾದಾಗ ಅವರ ಅಂತಿಮ ಸಂಸ್ಕಾರವನ್ನು ಮುಸ್ಲಿಂ ಯುವಕನೊಬ್ಬ ನಡೆಸಿದ್ದಾರೆ.
ಉಡುಪಿ: ವೃದ್ಧ ಬ್ರಾಹ್ಮಣರೊಬ್ಬರು ಮೃತರಾದಾಗ ಅವರ ಅಂತಿಮ ಸಂಸ್ಕಾರವನ್ನು ಮುಸ್ಲಿಂ ಯುವಕನೊಬ್ಬ ನಡೆಸಿದ್ದಾರೆ. ಈ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎರಡು ವರ್ಷಗಳ ಹಿಂದೆ ದೇವಸ್ಥಾನವೊಂದರ ಆವರಣದಲ್ಲಿ ಸಿಕ್ಕ ವೇಣುಗೋಪಾಲ್ ರಾವ್ ಅವರನ್ನು ಆಸಿಫ್ ತನ್ನ ಆಶ್ರಮದಲ್ಲಿ ಸಾಕಿ ಸಲಹಿದರು. ವೃದ್ಧರ ಮನೆಯವರನ್ನು ಸಂಪರ್ಕಿಸಿದಾಗ ಇವರನ್ನು ನೋಡಿಕೊಳ್ಳಲು ಯಾರೂ ಆಸಕ್ತಿ ತೋರಿರಲಿಲ್ಲ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯಲ್ಲಿರುವ ತನ್ನ ಆಪದ್ಬಾಂಧವ ಆಶ್ರಮದಲ್ಲಿ ಇವರನ್ನು ಆಸಿಫ್ ನೋಡಿಕೊಳ್ಳುತ್ತಿದ್ದರು. ಎರಡು ವರ್ಷಗಳ ನಂತರ …
Read More »ಜುಲೈ 26 ರಂದು ಸಂಜೆ 4 ಗಂಟೆಗೆ ಝೂಮ್ ವೆಬಿನಾರ್ ,ಶೇ 10 EWS ಮೀಸಲಾತಿ ಚಿಂತನ ಮಂಥನ: ವೆಬಿನಾರ್ ಮೂಲಕ ಗಣ್ಯರಿಂದ ಚರ್ಚೆ
ಬೆಳಗಾವಿ: ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10 ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದ್ದು, ಎಸ್ ಸಿ/ ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಇದರಿಂದಾಗುವ ಪರೆಣಾಮಗಳ ಕುರಿತಾಗಿ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಸಹಯೋಗದಲ್ಲಿ ಇದೇ ಜುಲೈ 26 ರಂದು ಸಂಜೆ 4 ಗಂಟೆಗೆ ಝೂಮ್ ವೆಬಿನಾರ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ. ಕಲಬುರಗಿ ಕನಕಗುರಪೀಠ …
Read More »ಬೆಳಗಾವಿ | 30ರಿಂದ ಸಿಇಟಿ ಪರೀಕ್ಷೆ: ಸಿದ್ಧತೆಗೆ ಸೂಚನೆ
ಬೆಳಗಾವಿ: ‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 30ರಿಂದ ಮೂರು ದಿನಗಳವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಒಳಗಡೆ ಹಾಗೂ ಸುತ್ತಲೂ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು. …
Read More »ಬೆಳಗಾವಿ| ಬ್ರಾಹ್ಮಣರಿಗೆ ಮೀಸಲಾತಿ: ವೆಬಿನಾರ್ ನಾಳೆ.
ಬೆಳಗಾವಿ: ‘ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಆಗುವ ಪರಿಣಾಮಗಳ ಕುರಿತು ಜುಲೈ 26ರಂದು ಸಂಜೆ 4ಕ್ಕೆ ವೆಬಿನಾರ್ ಮೂಲಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ವಿದ್ಯಾರ್ಥಿ ಬಂಧುತ್ವ ವೇದಿಕೆ ಮತ್ತು ಮಾನವ ಬಂಧುತ್ವ ವೇದಿಕೆ ತಿಳಿಸಿವೆ. ‘ಕಲಬುರ್ಗಿಯ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಚಾಲನೆ ನೀಡುವರು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ …
Read More »ಬೆಳಗಾವಿ | 116 ಮಂದಿಗೆ ಕೋವಿಡ್ ದೃಢ…
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 116 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಬ್ಬರು ಮೃತರಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿ ಸಂಖ್ಯೆ 48,135 ಆದ 47 ವರ್ಷದ ವ್ಯಕ್ತಿ ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರು 20ರಂದು ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. ಅವರು ಬೆಳಗಾವಿ ತಾಲ್ಲೂಕಿನವರು ಎಂದು ಮಾಹಿತಿ ನೀಡಿದೆ. ಸವದತ್ತಿ ವರದಿ: ತಾಲ್ಲೂಕಿನಲ್ಲಿ 19 ಮಂದಿಗೆ ಕೋವಿಡ್ …
Read More »ರಾಜ್ಯದಲ್ಲಿ ಇಂದು ಕೊರೋನಾಗೆ 72 ಬಲಿ, ಬೆಂಗಳೂರಿನಲ್ಲಿ 2036 ಸೇರಿ 5072 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90 ಸಾವಿರ ತಲುಪಿದೆ. ಇಂದು ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೇರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2403 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ …
Read More »