Breaking News

ನಾನು ಗಂಡು ಆದ್ರೆ ಅಷ್ಟೇನು ಕೆಟ್ಟದಾಗಿ ಕಾಣಲ್ಲ – ‘ರಣಧೀರ’ ನಟಿ

ಹೈದರಾಬಾದ್: ನಟಿ ಖುಷ್ಬೂ ನಟನೆ ಜೊತೆಗೆ ರಾಜಕೀಯದಲ್ಲಿಯೂ ಬ್ಯುಸಿಯಾಗಿದ್ದಾರೆ. ಅಲ್ಲದೇ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಇದೀಗ ಖುಷ್ಬೂ ರೂಪಾಂತರದ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರೀಯರಾಗಿರುವ ಖುಷ್ಬೂ ಇತ್ತೀಚಿಗೆ ಒಂದು ಫೋಟೋವನ್ನು ಹಂಚಿಕೊಂಡಿದ್ದಾರೆ. ಆ ಫೋಟೋ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಯಾಕೆಂದರೆ ಆ ಫೋಟೋದಲ್ಲಿ ನಟಿ ಖುಷ್ಬೂ ಪುರುಷ ಅವತಾರತಾಳಿದ್ದಾರೆ. ಹೌದು..ಫೇಸ್ ಆಪ್ ಮೂಲಕ ನಟಿ ಖುಷ್ಬೂ ತಮ್ಮ ಫೋಟೋವನ್ನು ಎಡಿಟ್ ಮಾಡಿ ಟ್ವಿಟ್ಟರಿನಲ್ಲಿ …

Read More »

ವಿದೇಶಗಳಿಂದ ದೆಹಲಿಗೆ ಬರುವವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್ ಕಡ್ಡಾಯ ..

ನವದೆಹಲಿ,ಜು.22- ಕೊರೊನಾ ಸೋಂಕು ಹರಡುವಿಕೆ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರಿಗಾಗಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಗಾಗಬೇಕು. ಈ ಸಾಂಸ್ಥಿಕ ಕ್ವಾರೆಂಟೈನ್ ವೆಚ್ಚವನ್ನು ಆ ವ್ಯಕ್ತಿಗಳೇ ಪಾವತಿಸಬೇಕಿದೆ. ಏಳು ದಿನಗಳ ಮಟ್ಟಿಗೆ ಸಾಂಸ್ಥಿಕ ಕ್ವಾರೆಂಟೈನ್ ಹಾಗೂ …

Read More »

4 ತಿಂಗಳ ನಂತರ ರಾಜ್ಯಪಾಲರನ್ನು ಭೇಟಿಮಾಡಿದ ಸಿಎಂ, ಮಹತ್ವದ ಮಾತುಕತೆ

ಬೆಂಗಳೂರು,ಜು.22- ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ, ಸರ್ಕಾರ ತೆಗೆದುಕೊಂಡಿರುವ ಕ್ರಮಗಳು, ಭೂ ಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಮೇಲ್ನೋಟಕ್ಕೆ ಇದೊಂದು ಸೌಹಾರ್ದಯುತವಾದ ಭೇಟಿ ಎಂದು ಹೇಳಲಾಗಿದೆ. ಸುಮಾರು ನಾಲ್ಕು ತಿಂಗಳ ನಂತರ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾದ ಸಿಎಂ ಯಡಿಯೂರಪ್ಪನವರು, ರಾಜ್ಯದ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ, ಆರ್ಥಿಕ ಪರಿಸ್ಥಿತಿ ಸೇರಿದಂತೆ ಹಲವು ಬೆಳವಣಿಗೆಗಳ …

Read More »

ಕೋವಿಡ್ 19- ಭಾರತೀಯ ಮೂಲದ ನರ್ಸ್ ಗೆ ರಾಷ್ಟ್ರಪತಿ ಗೌರವ

ಸಿಂಗಪುರ: ಕೋವಿಡ್-19 ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ನರ್ಸ್ ಕಲಾ ನಾರಾಯಣಸ್ವಾಮಿ ಅವರಿಗೆ ಸಿಂಗಪುರದಲ್ಲಿ ರಾಷ್ಟ್ರಪತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಒಟ್ಟು ಐವರು ನರ್ಸ್ ಗಳು ಈ ಗೌರವಕ್ಕೆ ಪಾತ್ರರಾಗಿದ್ದು, ಐವರಲ್ಲಿ ಕಲಾ ನಾರಾಯಣಸ್ವಾಮಿ ಸಹ ಒಬ್ಬರಾಗಿದ್ದಾರೆ. ಸಿಂಗಪುರದ ಆರೋಗ್ಯ ಸಚಿವಾಲಯ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದೆ. ರಾಷ್ಟ್ರಪತಿಗಳ ಪುರಸ್ಕಾರಕ್ಕೆ ಪಾತ್ರವಾಗಿರುವ ನರ್ಸ್ ಗಳಿಗೆ ಸಿಂಗಪುರ ರಾಷ್ಟ್ರಪತಿ ಹಲಿಮಾ ಯಾಕೂಬ್ ಅವರ …

Read More »

ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟ ಈಶ್ವರಪ್ಪ

ಶಿವಮೊಗ್ಗ: ಮಾಧ್ಯಮಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿನ ಅನೇಕ ಟಿವಿ ಚಾನಲ್ ನೋಡಿದರೆ, ಏನು ಪ್ರಪಂಚದಲ್ಲಿ ಇನ್ನೂ ಯಾರೂ ಬದುಕುವುದಿಲ್ಲವೇನೋ ಅನ್ನುವ ರೀತಿ ಹೈಲೈಟ್ ಮಾಡುತ್ತಿದ್ದಾರೆ. ಕೆಲವು ಶವ ಹೊತ್ತುಕೊಂಡು ಹೋಗುತ್ತಿರುವಂತಹ ರೂಪ ತೋರಿಸೋದನ್ನು ನೋಡಿದರೆ, ಯಾರೂ ಕೂಡ ಮೃತದೇಹಗಳಿಗೆ ಇಡೀ ರಾಜ್ಯದಲ್ಲಿ ಮಾಡುತ್ತಿರುವ ವ್ಯವಸ್ಥೆ ಅನಾಗರೀಕ ವ್ಯವಸ್ಥೆ ಎನ್ನುವ ಭಾವನೆ ತರುತ್ತಿದ್ದಾರೆ ಎಂದು ಮಾಧ್ಯಮಗಳ …

Read More »

ಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ರಾತ್ರೋ ರಾತ್ರಿ ಸಾಮಗ್ರಿಗಳ ಸಮೇತ ಮನೆ ಖಾಲಿ ಮಾಡಿಸಿದ ಆರೋಪ

ರಾಯಬಾಗ:  ವರ್ಗಾವಣೆಗೊಂಡಿರುವ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ರಾತ್ರೋ ರಾತ್ರಿ  ಸಾಮಗ್ರಿಗಳ ಸಮೇತ ಮನೆ ಖಾಲಿ ಮಾಡಿಸಿದ ಆರೋಪ ಕೇಳಿ ಬಂದಿದೆ. ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಗೈರಾಣ ಜಾಗ ಸಲುವಾಗಿ ಶಾಸಕ ದುರ್ಯೋಧನ ಐಹೊಳೆ ಹಾಗೂ ತಹಸೀಲ್ದಾರ್ ಚಂದ್ರಕಾಂತ ಅವರ ಮಧ್ಯೆ ಕಿತ್ತಾಟ ನಡೆದಿತ್ತು. ಶಾಸಕ ಐಹೊಳೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದು ತಹಸೀಲ್ದಾರ್ ಅವರ ವರ್ಗಾವಣೆ ಮಾಡಿಸಿದ್ದರು. ದಿಢೀರ್ ವರ್ಗಾವಣೆ ವಿರೋಧಿಸಿ ತಹಸೀಲ್ದಾರ್ ಕೆಇಟಿಯಲ್ಲಿ ಅರ್ಜಿ ಸಲ್ಲಿಸಿ …

Read More »

ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರುದ್ಧ ಹೋರಾಟ, ರೈತ ಸಂಘಟನೆಗಳ ಜೊತೆ ಸಮಾಲೋಚನೆ

ಬೆಂಗಳೂರು, ಜು.22- ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಸಂಘಟಿಸಲು ಮುಂದಾಗಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೊದಲ ಹಂತವಾಗಿ ಇಂದು ರೈತ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಭೂ ಸುಧಾರಣಾ ಕಾಯ್ದೆ 1971ರ ಸೆಕ್ಷನ್ 63, 79 ಎ, ಬಿ, ಸಿ ಮತ್ತು 80ನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ ಕೃಷಿಯೇತರ ಆದಾಯ ಇರುವವರು ಎಲ್ಲಿ, ಯಾವ ಭೂಮಿಯನ್ನಾದರೂ ಖರೀದಿಸಬಹುದು ಎಂದು ಕಾನೂನು …

Read More »

“ಪ್ರಜಾಪ್ರಭುತ್ವ ದಲ್ಲಿ ಎಲ್ಲಾ ಲೆಕ್ಕವನ್ನು ಜನರಿಗೆ ನೀಡಬೇಕು. ಜನಪ್ರತಿನಿಧಿಗಳು ಜನರಿಗೆ ಉತ್ತರ ಕೊಡಲೇಬೇಕು.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದ್ದು ಇಂದಿಗೆ ಮುಗಿದು ಹೋದ ಕಥೆ. ಈ ಕುರಿತು ಮಾತನಾಡಿ ಏನೂ ಪ್ರಯೋಜನವಿಲ್ಲ. ಆದರೆ, ಹೆಚ್‌.ಡಿ. ಕುಮಾರಸ್ವಾಮಿ ಅವರು ಈ ವಿಚಾರವನ್ನು ಯಾಕೆ ರೀಕಾಲ್ ಮಾಡಿಕೊಳ್ಳುತ್ತಿದ್ದಾರೋ? ನನಗಂತೂ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್‌ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಬಳಿಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದಾಗಿ ರಚಿಸಿದ್ದ ಮೈತ್ರಿ ಸರ್ಕಾರ ಪತನವಾಗಿ ನಾಳೆಗೆ ಒಂದು …

Read More »

ಖಾನಾಪುರ: ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿ 6 ಜನರಿಗೆ ಕೊರೊನಾ……..

ಖಾನಾಪುರ:  ತಾಲ್ಲೂಕಿನಲ್ಲಿ ಬುಧವಾರ ಆರು ಜನರಿಗೆ ಕೊರೊನಾ ಕೇಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಪ್ರತಿದಿನ ಜಿಲ್ಲೆಯಲ್ಲಿ ಕೊರೊನಾ ಕೇಸ್ ದಾಖಲಾಗುತ್ತಿವೆ‌. ಇಂದು ಸಹ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಬರುವ ಮೊದಲೇ ಖಾನಾಪುರ ತಾಲ್ಲೂಕಿನಲ್ಲಿ 6 ಜನರಗೆ ಕೊರೊನಾ ವಕ್ಕರಿಸಿದೆ. ಆರೋಗ್ಯ ಇಲಾಖೆ 5 ಜನ ಸಿಬ್ಬಂದಿ, ಒಬ್ಬ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಜಿಲ್ಲಾಡಳಿತ ಲಾಕ್ ಡೌನ್ …

Read More »

 ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ  ಕನ್ನಡದಲ್ಲಿಯೇ ಪ್ರಮಾಣ…

ಹೊಸದಿಲ್ಲಿ:   ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ  ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ ನಲ್ಲಿ ಕನ್ನಡಾಭಿಮಾನ ಮೆರೆದಿದ್ದಾರೆ. ಸಂಸತ್ ಭವನದಲ್ಲಿ   ಬುಧವಾರ  ನಡೆದ ಸರಳ ಸಮಾರಂಭದಲ್ಲಿ  ರಾಜ್ಯಸಭೆಗೆ ಹೊಸದಾಗಿ ಚುನಾಯಿತರಾದ   61 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಮಾಣ ವಚನ ಬೋಧಿಸಿದರು. 20 ರಾಜ್ಯದ 61 ಸದಸ್ಯರು ಇತ್ತೀಚಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಕಾಂಗ್ರೆಸ್ ಹಿರಿಯ ಮುಖಂಡ,  ಮಲ್ಲಿಕಾರ್ಜುನ ಖರ್ಗೆ, ಎಚ್ …

Read More »