Breaking News

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ 23 ಮಂದಿಗೆ ಕೊರೊನಾ…..

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ 23 ಮಂದಿಗೆ ಕೊರೊನಾ ಕೊರೊನಾ ಸೋಂಕು ದೃಢವಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 1102 ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಂಗಳವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು, ಇಂದು ಮೃತರಾದ ನಾಲ್ವರು ಬೆಳಗಾವಿ ತಾಲೂಕಿಗೆ ಸೇರಿದವರಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಮೃತರ ಸಂಖ್ಯೆ 30 ಕ್ಕೆ ತಲುಪಿದೆ. ಜಿಲ್ಲೆಯ 1102 ಸೋಂಕಿತರ ಪೈಕಿ 461 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 611 ಪ್ರಕರಣ …

Read More »

, ಕೃಷ್ಣಾದಲ್ಲಿ ಧೂಳು ತಿನ್ನುತ್ತಿವೆ ಪ್ರಮುಖ ಕಡತಗಳು.. ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

ಬೆಂಗಳೂರು, ಜು.21- ಸಕಾಲಕ್ಕೆ ಸರಿಯಾಗಿ ಕಡತಗಳನ್ನು ವಿಲೇವಾರಿ ಮಾಡಲೇಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಟ್ಟ ಸೂಚನೆಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ. ಕಾರಣ, ಮುಖ್ಯಮಂತ್ರಿಗಳ ಅಕೃತ ಕಚೇರಿ ಕೃಷ್ಣಾದಲ್ಲೇ ಪ್ರಮುಖ ಇಲಾಖೆಗಳ ಸಾವಿರಾರು ಕಡತಗಳು ಎರಡರಿಂದ ಮೂರು ತಿಂಗಳಾದರೂ ವಿಲೇವಾರಿಯಾಗದೆ ಬಾಕಿ ಉಳಿದಿವೆ. ಪ್ರಮುಖವಾಗಿ ಆರ್ಥಿಕ, ಕಂದಾಯ, ಲೋಕೋಪಯೋಗಿ, ನಗರಾಭಿವೃದ್ಧಿಘಿ, ಪೌರಾಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಲಸಂಪನ್ಮೂಲ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಉನ್ನತ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, …

Read More »

ಜುಬ್ಲಿಯಂಟ್, ಜಿಂದಾಲ್ ಆಯ್ತು ಈಗ ಟಾಟಾ ಮಾರ್ಕೋಪೊಲೊ ಕಂಪನಿಗೂ ಕೊರೊನಾ ಕಂಟಕ

ಧಾರವಾಡ: ಮೈಸೂರಿನ ಜುಬ್ಲಿಯಂಟ್, ಬಳ್ಳಾರಿಯ ಜಿಂದಾಲ್ ಆಯ್ತು. ಈಗ ಧಾರವಾಡದ  ಟಾಟಾ ಮಾರ್ಕೋಪೊಲೊ ಕಂಪನಿಗೂ ಕೊರೊನಾ ಕಂಟಕ ಆರಂಭವಾಗಿದೆ. ಜಿಲ್ಲೆಯ ಬೇಲೂರು ಕೈಗಾರಿಕಾ ಪ್ರದೇಶದ 3500 ಕಾರ್ಮಿಕರು ಕೆಲಸ ಮಾಡುವ ಮಾರ್ಕೋಪೊಲೊ ಕಂಪನಿಯ 8 ಕಾರ್ಮಿಕರಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ ಈಗ ಉಳಿದ ಕಾರ್ಮಿಕರಿಗೂ ಕೊರೊನಾ ಆತಂಕ ಎದುರಾಗಿದೆ. ಇಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹಬ್ಬಿದ್ದರಿಂದ ಜಿಲ್ಲಾಡಳಿತ 10 ದಿನಗಳ ಕಾಲ ಜಿಲ್ಲೆಯಲ್ಲಿ ಲಾಕಡೌನ್ ಮಾಡಿ …

Read More »

ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ: ಕೋಡಿಶ್ರೀ ಭವಿಷ್ಯ

ಹಾಸನ: ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಕೊರೊನಾ ಹೆಚ್ಚಾಗಲಿದ್ದು ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದಲ್ಲಿ ಮಾತನಾಡಿದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ, ಹಳ್ಳಿಗಳ ಜನರು ಎಚ್ಚರದಿಂದ ಇರಬೇಕು. ಜನರು ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.ಸ್ವಚ್ಛತೆ, ಸಾಮಾಜಿಕ ಅಂತರದ ಕಡೆ ಗಮನ ಕೊಡಬೇಕು. ಇನ್ನೂ ಕೆಲ ತಿಂಗಳು ಕೊರೊನಾ ಅಟ್ಟಹಾಸ …

Read More »

ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿರುವುದು ಸತ್ಯಕ್ಕೆ ದೂರವಾದುದು: ಮುರುಗೇಶ್ ನಿರಾಣಿ

ಬೆಂಗಳೂರು, ಜು.21- ನಾನು ಎಂಥದ್ದೇ ಸಂಧರ್ಭದಲ್ಲೂ ಹಿಂದೂ ದೇವರಿಗೆ ಅವಮಾನ ಮಾಡುವಂತಹ ಕೆಟ್ಟ ಕೆಲಸವನ್ನು ಮಾಡುವುದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿರುವುದು ಸತ್ಯಕ್ಕೆ ದೂರವಾದುದು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ನಾನು ಹಿಂದೂ ದೇವರುಗಳ ಬಗ್ಗೆ ಅವಹೇಳನ ಮಾಡಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ. ನನ್ನ ಶುಗರ್ಸ್ ಕಂಪೆನಿ …

Read More »

ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ……….

ಬಳ್ಳಾರಿ: ತಮ್ಮ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇದೀಗ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಹೌದು. ಎಸ್.ಎಸ್ ನಕುಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಒಬ್ಬರಲ್ಲಿ ಕರೋನಾ ಸೋಂಕು ಇರುವುದು ದೃಢವಾಗಿದೆ. ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಜಿಲ್ಲಾಧಿಕಾರಿ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ. ಡಿಸಿಯವರ ನಿವಾಸದ ಎದುರು ಅಧಿಕಾರಿಗಳು ಹೋಂ ಕ್ವಾರಂಟೈನ್ ಬೋರ್ಡ್ ಹಾಕಿದ್ದಾರೆ. ಮಂಗಳವಾರದಿಂದ ಶನಿವಾರದವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇರಲಿದ್ದು, ಮನೆಯಿಂದಲೇ …

Read More »

ಬೆಂಗಳೂರು ಅಲ್ಲ, ರಾಜ್ಯದಲ್ಲಿ ಎಲ್ಲೂ ಲಾಕ್‌ಡೌನ್‌ ಇರಲ್ಲ: ಸಿಎಂ .B.S.Y.

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್‌ಡೌನ್‌ ಒಂದೇ ಪರಿಹಾರವಲ್ಲ, ಸಾಮಾಜಿಕ ಅಂತರ ಮತ್ತು ಮಾಸ್ಕ್‌ ಧರಿಸುವ ಮೂಲಕ ಕೊರೊನಾ ನಿಯಂತ್ರಿಸಲು ಜನರು ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರುವುದಿಲ್ಲ. ಜನರ ರಕ್ಷಣೆಯ ಜೊತೆ ಸರ್ಕಾರಕ್ಕೆ ಆರ್ಥಿಕ ಸಂಪನ್ಮೂಲ ಅಗತ್ಯವಿದೆ. ಹೀಗಾಗಿ ಬೆಂಗಳೂರು ಮಾತ್ರ ಅಲ್ಲ ರಾಜ್ಯದ ಎಲ್ಲೂ ಲಾಕ್‌ಡೌನ್‌ ಮಾಡುವುದಿಲ್ಲ. ಆದರೆ ಕಂಟೈನ್ಮೆಂಟ್‌ ವಲಯದಲ್ಲಿ ನಿಯಮ ಬಿಗಿ ಇರುತ್ತದೆ …

Read More »

ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಕಾರವಾರ: ಕೊರೊನಾ ಸೋಂಕಿಗೆ ಒಳಗಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನ ಕೋವಿಡ್-19 ವಾರ್ಡ್ ನಲ್ಲಿ ಶಿರಸಿ ತಾಲೂಕಿನ 76 ವರ್ಷದ ವೃದ್ಧ ಹಾಗೂ ಭಟ್ಕಳದ 65 ವರ್ಷದ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಶಿರಸಿ ತಾಲೂಕಿನ 76 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕೊರೊನಾ ದೃಢಪಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಯಿಂದ ಕ್ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು ಆದರೆ …

Read More »

ಸಿದ್ದರಾಮ್ಯ ಅವರು ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ

ಬೆಂಗಳೂರು: ಕೊರೊನಾ ಎಂಬ ಚೀನಿ ವೈರಸ್ ರಾಜ್ಯಕ್ಕೆ ಕಾಲಿಟ್ಟ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ಕಾಲೆಳೆಯುತ್ತಲೇ ಇವೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ವಿರೋಧ ಪಕ್ಷದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಸಿದ್ದು ಮಾಡಿದ ಸರಣಿ ಟ್ವೀಟ್: ಟ್ವೀಟ್ 1: ಅಂತಾರಾಷ್ಟ್ರೀಯ ಪ್ರದರ್ಶನ …

Read More »

ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚ. ಸಾಲಾಗಿ ಹಬ್ಬಗಳು,ಕೊರೊನಾ ಸಂದರ್ಭದಲ್ಲಿ ಹೊಸ ಸವಾಲು ಎದುರಾಗಲಿದೆ.

ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಒಂದು ವಾರಗಳ ಕಾಲ ಘೋಷಣೆ ಮಾಡಿದ್ದ ಲಾಕ್‍ಡೌನ್ ಇಂದು ಮುಗಿಯಲಿದೆ. ಇದೀಗ ಸಿಲಿಕಾನ್ ಸಿಟಿಗೆ ಕೊರೊನಾ ಸಂದರ್ಭದಲ್ಲಿ ಹೊಸ ಸವಾಲು ಎದುರಾಗಲಿದೆ. ಶ್ರಾವಣ ಮಾಸ ಆರಂಭದ ಬೆನ್ನಲ್ಲೆ ಹಬ್ಬಗಳ ಸೀಸನ್ ಆರಂಭವಾಗಲಿದೆ. ಈ ಹಬ್ಬಗಳ ಸೀಸನ್ ಬೆಂಗಳೂರಿಗೆ ಟೆನ್ಶನ್ ಆಗಿದೆ. ಈ ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಸಾಲಾಗಿ ಹಬ್ಬಗಳು ಶುರುವಾಗುತ್ತವೆ. ಇದರಿಂದ ಜನರ ವಲಸೆ ಹೆಚ್ಚಾಗುವ ಸಾಧ್ಯತೆ ಇದೆ. …

Read More »