Breaking News

ಸತೀಶ್ ಸೈಲ್ ಅರ್ಜಿ ಇತ್ಯರ್ಥವಾಗುವ ತನಕ ಕಾರವಾರ ಉಪಚುನಾವಣೆಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಸತೀಶ್ ಸೈಲ್‌ಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿರುವ ಹೈಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ಆದೇಶ ಹೊರ ಬೀಳುವವರೆಗೂ ಕಾರವಾರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸದಂತೆ ನಿರ್ದೇಶನ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸತೀಶ್ ಸೈಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ …

Read More »

ಸಿಲಿಕಾನ್​ ಸಿಟಿಯಲ್ಲಿ ಪಾನಮತ್ತ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪೊಲೀಸರು 769 ಪ್ರಕರಣ ದಾಖಲು ಮಾಡಿದ್ದಾರೆ.

ಬೆಂಗಳೂರು: ಪಾನಮತ್ತರಾಗಿ ವಾಹನ ಚಾಲನೆ ಮಾಡುವವರು ಹಾಗೂ ಅತಿವೇಗದ ಚಾಲನೆ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 60,903 ವಾಹನ ಚಾಲಕರನ್ನು ತಪಾಸಣೆ ನಡೆಸಿ ಒಟ್ಟೂ 769 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆರೋಪಿತ ಚಾಲಕರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುವುದು. ಅದೇ ರೀತಿ ನಗರದಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2.41 ಲಕ್ಷ …

Read More »

ವಿದ್ಯಾರ್ಥಿನಿಯರ ಸಾವಿನ ಬಳಿಕ ಎಚ್ಚೆತ್ತ ಉತ್ತರ ಕನ್ನಡ ಜಿಲ್ಲಾಡಳಿತ

ಉತ್ತರ ಕನ್ನಡ, ಡಿಸೆಂಬರ್ 22: ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಮಾತಿದೆ. ಕಡಲ ತೀರದ ಅಸುರಕ್ಷತೆ ಬಗ್ಗೆ ಮಾಧ್ಯಮದವರು ಎಷ್ಟೇ ಸುದ್ದಿ ಮಾಡಿದರೂ ಜಿಲ್ಲಾಡಳಿತ ಎಚ್ಚೆತ್ಕೊಂಡಿರಲಿಲ್ಲ. ಇತ್ತೀಚೆಗೆ ಕೊಲಾರ ಜಿಲ್ಲೆಯ ಅಮಾಯಕ ನಾಲ್ವರು ವಿದ್ಯಾರ್ಥಿನಿಯರು ಸಾವನಪ್ಪಿದಾಗ, ಜಿಲ್ಲಾ ಮಂತ್ರಿ ಸೇರಿದಂತೆ ಎಲ್ಲರನ್ನೂ ಕೋಲಾರ ಶಾಸಕ ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ವಿದ್ಯಾರ್ಥಿನಿಯರ ಸಾವಿನ ಬಳಿಕ ಎಚ್ಚೆತ್ತ ಜಿಲ್ಲಾಡಳಿತ …

Read More »

ರಗಡ್ ಲುಕ್​ನಲ್ಲಿ ಮಾಸ್ ಆಗಿ ಕಾಣಿಸಿಕೊಂಡ ಕಿಚ್ಚ

ಮ್ಯಾಕ್ಸ್’ ಸಿನಿಮಾ ಮೇಲೆ ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದರಲ್ಲೂ ಆ್ಯಕ್ಷನ್​ ಇಷ್ಟಪಡುವ ಪ್ರೇಕ್ಷಕರಿಗೆ ಈ ಸಿನಿಮಾದ ಮೇಲೆ ಭಾರಿ ಭರವಸೆ ಇದೆ. ಈ ಚಿತ್ರದ ಟ್ರೇಲರ್​ ಇಂದು (ಡಿಸೆಂಬರ್​ 22) ಬಿಡುಗಡೆ ಆಗಿದೆ. ಮ್ಯಾಕ್ಸಿಮಮ್ ಮಾಸ್​ ಆಗಿ ಸುದೀಪ್ ಅವರು ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಡಿ.25ರಂದು ಈ ಸಿನಿಮಾ ತೆರೆಕಾಣಲಿದೆ. ಕಿಚ್ಚ ಸುದೀಪ್ ಅವರ ಮ್ಯಾಕ್ಸಿಮಮ್ ಮಾಸ್​ ಅವತಾರವನ್ನು ನೋಡಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿದ್ದಾರೆ. ಡಿಸೆಂಬರ್​ …

Read More »

ಮಂಡ್ಯದಲ್ಲಿ ಮೂರು ದಿನಗಳವರೆಗೆ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯ

ಮಂಡ್ಯ : ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಇಂದು ಸಂಪನ್ನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ಒಗ್ಗಟ್ಟಿನಿಂದ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಿದ್ದೇವೆ. ಪಕ್ಷಾತೀತವಾಗಿ ಈ ಕೆಲಸವಾಗಿದೆ. ಯಶಸ್ವಿಯಾಗಿ ಸಾಹಿತ್ಯ ಸಮ್ಮೇಳನ ನಡೆದಿದೆ. 6 ಲಕ್ಷಕ್ಕೂ ಹೆಚ್ಚು ಜನ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಿತ್ಯ 2 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ನಾಡೋಜ ಮಹೇಶ್ ಜೋಷಿ ಅವರು ಶ್ರಮಿಸಿದ್ದಾರೆ. …

Read More »

ಅಧಿಕ ಹಣ ಕೊಡಲು ನಿರಾಕರಿಸಿದ ಗ್ರಾಹಕರನ್ನು ಉದ್ದೇಶಿಸಿ ಕ್ಯಾಬ್​ ಚಾಲಕನ ಆವಾಜ್

ಬೆಂಗಳೂರು: ಅಧಿಕ ಹಣ ಪಾವತಿಸುವಂತೆ ಒತ್ತಾಯಿಸಿ ಕ್ಯಾಬ್​​​ ​ಚಾಲಕನೋರ್ವ ಗ್ರಾಹಕನನ್ನು ಅವಾಚ್ಯವಾಗಿ ನಿಂದಿಸಿ ನಡು ರಸ್ತೆಯಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ಪದ್ಮನಾಭನಗರದ ಆರ್​. ಕೆ. ಲೇಔಟ್​ನಲ್ಲಿ ಘಟನೆ ನಡೆದಿದ್ದು, ಕ್ಯಾಬ್​​​ ಚಾಲಕ ಕಾಂತರಾಜು ಎಂಬಾತನ ದುರ್ವರ್ತನೆಯಿಂದ ಬೇಸತ್ತ ಗ್ರಾಹಕ ಶುಭಂ ಎಕ್ಸ್​​​ ಆ್ಯಪ್​ನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಬೆಳಗ್ಗೆ ತಮ್ಮ ಸಂಬಂಧಿಯೊಬ್ಬರಿಗಾಗಿ ಆರ್​. ಕೆ. ಲೇಔಟ್‌ನಿಂದ ಶುಭಂ ಅವರು ಓಲಾ ಕ್ಯಾಬ್​ ಬುಕ್​ ಮಾಡಿದ್ದರು. …

Read More »

ಬಸ್​ನಲ್ಲಿ ಆಭರಣ ಕಳೆದುಕೊಂಡ ಮಹಿಳೆ : ಪೊಲೀಸರ ತಪಾಸಣೆಯ ಬಳಿಕವು ಸಿಗಲಿಲ್ಲ ಬಂಗಾರ !

ವಿಜಯನಗರ : ಬಸ್ ಪ್ರಯಾಣದ ವೇಳೆ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಆಭರಣ ಕಳ್ಳತನ ಮಾಡಿದ ಆರೋಪದ ಹಿನ್ನೆಲೆ ಸಾರಿಗೆ ಬಸ್‌ನಲ್ಲಿ ಭಾರಿ ಹೈಡ್ರಾಮ ನಡೆಯಿತು. 80 ಪ್ರಯಾಣಿಕರಿದ್ದ ಸಾರಿಗೆ ಬಸ್ ಅನ್ನು ಚಾಲಕ ಮತ್ತು ನಿರ್ವಾಹಕ ಪೊಲೀಸ್ ಠಾಣೆಗೆ ತಂದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ಮೂಲದ ಅಂಬಮ್ಮ ಎನ್ನುವ ಮಹಿಳೆ ಹೊಸಪೇಟೆಯಿಂದ ಕೊಪ್ಪಳಕ್ಕೆ ಸಾರಿಗೆ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಮುನಿರಾಬಾದ್‌ನಲ್ಲಿ ತಮ್ಮ ವ್ಯಾನಿಟಿ …

Read More »

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬಡಿಸಲು ಬಂದ ಪ್ರಗತಿಪರರು : ಬಾಡೂಟವನ್ನು ವಶಕ್ಕೆ ಪಡೆದ ಪೊಲೀಸರು

ಮಂಡ್ಯ : ಕಳೆದ ಎರಡು ದಿನಗಳಿಂದ ಯಶಸ್ವಿಯಾಗಿ ನಡೆಯುತ್ತಿದ್ದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ಗೊಂದಲ ಏರ್ಪಟ್ಟಿದ್ದು. ಪ್ರಗತಿಪರರು ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದ ಸ್ಥಳದಲ್ಲಿ ಬಾಡೂಟ ಬಡಿಸಲು ಬಂದ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಬಾಡೂಟವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಸಾಹಿತ್ಯ ಸಮ್ಮೇಳನಕ್ಕೂ ಮೊದಲೆ ಜಿಲ್ಲೆಯಲ್ಲಿ ಪ್ರಗತಿಪರರು ಬಾಡೂಟಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಇವರ ಬೇಡಿಕೆಯನ್ನು ಜಿಲ್ಲಾಡಳಿತ ತಿರಸ್ಕರಿಸಿದ ಹಿನ್ನಲೆಯಲ್ಲಿ ಪ್ರಗತಿಪರರು ಜನರಿಂದಲೇ ಕುರಿ, ಕೋಳಿ ಸಂಗ್ರಹ ಮಾಡಿ …

Read More »

ಅಲ್ಲು ಅರ್ಜುನ್​ ಮನೆ ಮೇಲೆ ಕಲ್ಲೂ ತೂರಾಟ : ಪುಷ್ಪ ಹೀರೋಗೆ ಇದೆಂತಾ ಸಂಕಷ್ಟ !

ಹೈದರಾಬಾದ್ : ಪುಷ್ಪ 2 ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಘಟನೆ ಭಾರೀ ನೂಕುನುಗ್ಗಲಿಗೆ ತಿರುಗಿದ್ದು ಗೊತ್ತೇ ಇದೆ. ಆದರೆ ಈ ಘಟನೆ ಈಗಾಗಲೇ ರಾಜಕೀಯ ತಿರುವು ಪಡೆದುಕೊಂಡಿದೆ ಎನ್ನಬಹುದು. ಆದರೆ ಇಂದು ಒಂದಷ್ಟು ಜನ ಅಲ್ಲು ಅರ್ಜುನ್​ ಮನೆ ಮೇಲೆ ಕಲ್ಲೂತೂರಾಟ ನಡೆಸಿದ್ದು. ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಅಲ್ಲು ಅರ್ಜುನ್ ಕೂಡ ರಾತ್ರಿ ಪ್ರೆಸ್ ಮೀಟ್ ನಡೆಸಿ ತಮ್ಮದೇ ಶೈಲಿಯಲ್ಲಿ ವಿವರಣೆ ನೀಡಿದ್ದಾರೆ. ತೆಲಂಗಾಣ ಡಿಜಿಪಿ …

Read More »

ಜಿಲ್ಲೆಯಲ್ಲಿ ಅತ್ತೆ -ಸೊಸೆ ತಮಗೆ ಬಂದ ಗೃಹಲಕ್ಷ್ಮಿ ಹಣದಿಂದ ಕೃಷಿಗೆ ಉಪಯೋಗವಾಗುವ ರೋಟವೇಟರ್ ಖರೀದಿ ಮಾಡಿದ್ದಾರೆ.

ಹಾವೇರಿ : ಜಿಲ್ಲೆಯಲ್ಲಿ ಅತ್ತೆ -ಸೊಸೆ ತಮಗೆ ಬಂದ ಗೃಹಲಕ್ಷ್ಮಿ ಹಣದಿಂದ ಕೃಷಿಗೆ ಉಪಯೋಗವಾಗುವ ರೋಟವೇಟರ್ ಖರೀದಿ ಮಾಡಿದ್ದಾರೆ. ಜಿಲ್ಲೆ ಸವಣೂರು ತಾಲೂಕು ಮಂಟಗಣಿ ಗ್ರಾಮದ ಶಾರದಾ ಮತ್ತು ಲಕ್ಷ್ಮಿ ರೋಟವೇಟರ್ ಖರೀದಿಸಿದ ಅತ್ತೆ- ಸೊಸೆ. ಇಬ್ಬರು ತಮಗೆ ಬಂದ 14 ತಿಂಗಳುಗಳ ತಲಾ 28 ಸಾವಿರ ರೂಪಾಯಿಗಳನ್ನು ಕೂಡಿಸಿ ಒಟ್ಟು 48 ಸಾವಿರ ರೂ.ಗಳನ್ನ ತಮ್ಮ ಪುತ್ರ ಅಜೀತ್​ಗೆ ನೀಡಿದ್ದಾರೆ. ಅಲ್ಲದೆ ಉಳಿದ ಹಣವನ್ನ ಸ್ವಸಹಾಯ ಸಂಘದಿಂದ ಸಾಲ ಪಡೆದು …

Read More »