ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದೆ ಮಾತನಾಡಿದೆ. ಈಗಾಗಲೇ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್ ನಿಂದ ರಾಣಿ ಸರ್ಕಲ್ ವರೆಗೆ 3.5 ಕಿ.ಮೀ ನಷ್ಟು 4 ಪಥದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 25 ಕೋಟಿ ನೀಡಿದ್ದಾರೆ. ಅದರ ಗುದ್ದಲಿಪೂಜೆ ಇಂದು ನೆರವೇರಿಸಲಾಗಿದೆ. ವಿಜಯಪುರ ಪಟ್ಟಣದಲ್ಲಿ ಕೋಲಾರ ಜಿಲ್ಲೆಗೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರುವ 5.2 ಕಿ.ಮೀ ರಸ್ತೆಗೆ 25 ಕೋಟಿ ಮಂಜೂರು ಮಾಡಲಾಗಿದ್ದು ಕಾಮಗಾರಿ ನಡೆಯುತ್ತಿದೆ. …
Read More »ನೂತನ ಜಯದೇವ ಆಸ್ಪತ್ರೆ ಕಲಬುರಗಿಯಲ್ಲಿ ಉದ್ಘಾಟನೆ ನಡೆಸಿದ ಸಿದ್ದರಾಮಯ್ಯ !
ಕಲಬುರಗಿ : ನಗರದ ಡಾ. ಎಸ್.ಎಂ ಪಂಡಿತ್ ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಙನ ಮತ್ತು ಸಂಶೋಧನ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್ ಖರ್ಗೆ ಉದ್ಘಾಟಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ,ಕೆ ಶಿವಕುಮಾರ್ ಗೈರಾಗಿದ್ದರು. ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವಿಕ್ಷೀಸದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು. …
Read More »ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್ ಖರ್ಗೆ
ಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ ಸಾವಿರ ಕಿ,ಮೀ ದೂರದಲ್ಲಿದೆ. ಈ ಸ್ಥಳಗಳನ್ನು ಅಭಿವೃದ್ದಿ ಮಾಡಲು ಶಾಸಕರಿಗೆ ಕಿವಿ ಮಾತು ಹೇಳಿ ಎಂದು ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟರು. ಕಲಬುರಗಿಯಿಂದ ಏಳು ಜನ ಶಾಸಕರು, ಕಲ್ಯಾಣ ಕರ್ನಾಟಕದಿಂದ ಐದು ಜನ ಎಮ್.ಪಿ ಗಳನ್ನ ಕಳುಹಿಸಿದ್ದೆವೆ. ಈಗ ಜಯದೇವ ಆಸ್ಪತ್ರೆಯಾಗಿದೆ. ಇದರ ಜೊತೆಗೆ ನಿಮಾನ್ಸ್ ಆಸ್ಪತ್ರೆಯ ಬ್ರ್ಯಾಂಚ್ ಇಲ್ಲಿ ನಿರ್ಮಾಣ ಆಗಬೇಕು, …
Read More »ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ
ಬೆಂಗಳೂರು: ಪ್ರಸ್ತುತ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಗದು ಬಹುಮಾನ ಘೋಷಿಸಲಾಗಿದೆ. ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ ಘೋಷಿಸಿ ಡಿ.ಜಿ. ಮತ್ತು ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ಮ ಕರ್ತವ್ಯ ನಿರ್ವಹಣೆಗಾಗಿ ನಗದು ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
Read More »ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ… ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಿ- ಸಿಎಂ ಸಿದ್ಧರಾಮಯ್ಯ
ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ… ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಿ- ಸಿಎಂ ಸಿದ್ಧರಾಮಯ್ಯ ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ… ಡಿ.26 ಮತ್ತು 27 ರಂದು ಆಯೋಜನೆ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಿ ಪೂರ್ವಭಾವಿ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಸೂಚನೆ ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮವನ್ನು ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅರಿತು ಯಶಸ್ವಿಗೊಳಿಸಬೇಕೆಂದು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದರು. …
Read More »ವಿಧಾನ ಪರಿಷತ್ತಿನಲ್ಲಿ ‘ಈ’ ರೀತಿ ಘಟನೆ ನಡೆಯಬಾರದಿತ್ತು… ತಪ್ಪು ಕಂಡು ಬಂದಲ್ಲಿ ಕ್ರಮ – ಸಭಾಧ್ಯಕ್ಷ ಹೊರಟ್ಟಿ…
ವಿಧಾನ ಪರಿಷತ್ತಿನಲ್ಲಿ ‘ಈ’ ರೀತಿ ಘಟನೆ ನಡೆಯಬಾರದಿತ್ತು… ತಪ್ಪು ಕಂಡು ಬಂದಲ್ಲಿ ಕ್ರಮ – ಸಭಾಧ್ಯಕ್ಷ ಹೊರಟ್ಟಿ… ವಿಧಾನ ಪರಿಷತ್ತಿನಲ್ಲಿ ಈ ರೀತಿ ಘಟನೆ ನಡೆಯಬಾರದಿತ್ತು… ಬೇರೆ ವಾಹಿನಿಗಳಲ್ಲಿ ಪರಿಶೀಲನೆ ನಡೆಸುತ್ತೇವೆ ತಪ್ಪು ಕಂಡು ಬಂದಲ್ಲಿ ಕ್ರಮ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ ಹೇಳಿಕೆ ಸದನಕ್ಕೆ ಸಂಬಂಧಿಸಿದ ವಾಹಿನಿಯಲ್ಲಿ ಸಿ.ಟಿ. ರವಿ ಆಕ್ಷೇಪಾರ್ಹ ಪದ ಬಳಕೆ ಕುರಿತು ಎಲ್ಲಿಯೂ ರಿಕಾರ್ಡ್ ಆಗಿಲ್ಲ. ಬೇರೆ ವಾಹಿನಿಗಳನ್ನು ಪರಿಶೀಲಿಸಿ ಒಂದು ವೇಳೆ ಅಂತಹದ್ದೇನಾದರೂ ಕಂಡು …
Read More »ಸಿಟಿ ರವಿಯನ್ನ ಫೇಕ್ ಎನ್ಕೌಂಟರ್ ಮಾಡುವ ವಿಚಾರ ಪೊಲೀಸರಿಗಿತ್ತು ಅನಿಸುತ್ತೆ: ಪ್ರಲ್ಹಾದ್ ಜೋಶಿ ಆರೋಪ
ಬಾಗಲಕೋಟೆ, ಡಿಸೆಂಬರ್ 21: ಸಿಟಿ ರವಿ ಅವರನ್ನ ಫೇಕ್ಎನ್ಕೌಂಟರ್ ಮಾಡುವ ವಿಚಾರ ಪೊಲೀಸರಿಗೆ ಇತ್ತು ಅನಿಸುತ್ತೆ. ನಾವು ಏನು ಮಾಡಬೇಕು ಅದನ್ನ ನಾವು ಮಾಡುತ್ತೇವೆ. ಈ ಬಗ್ಗೆ ನಾವು ಸುಮ್ಮನೆ ಕೂರುವುದಿಲ್ಲ, ಹೋರಾಟ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಕಾಶ ಸಿಕ್ಕರೆ ಸಿ.ಟಿ.ರವಿ ಮುಗಿಸಬೇಕೆಂಬ ಉದ್ದೇಶವಿತ್ತು ಅನಿಸುತ್ತೆ. ಆದರೆ, ಸರಿಯಾದ ಅವಕಾಶ ಸಿಕ್ಕಿಲ್ಲ. ನಮ್ಮ ಎಂಎಲ್ಸಿ ಕೇಶವಪ್ರಸಾದ್ ಕೂಡ ಅವರ …
Read More »ಲಂಚದ ಹಣ ನುಂಗಿ ಭಂಡತನ ಮೆರೆದೆ ಅಧಿಕಾರಿ,ವಾಂತಿ ಮಾಡಿಸಿ ಕಕ್ಕಿಸಿದ ಲೋಕಾಯುಕ್ತ ಪೊಲೀಸ್
ಕೊಪ್ಪಳ, : ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ (Lokayukta) ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ. ಲಂಚದ ಹಣ ನುಂಗಿದ ಅಧಿಕಾರಿ ದಸ್ತಗಿರ್ ಅಲಿಗೆ ವಾಂತಿ ಮಾಡಿಸಿ ಲೋಕಾಯುಕ್ತ ಅಧಿಕಾರಿಗಳು ಕಕ್ಕಿಸಿದ್ದಾರೆ. ಎನ್ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ದಸ್ತಗಿರ್ ಅಲಿ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಭೀಮನಗೌಡ ಅವರು ಲೋಕಾಯುಕ್ತ …
Read More »ಸಾರಿಗೆ ಇಲಾಖೆಗೆ ನೀಡಬೇಕಿರುವ 414 ಕೋಟಿ ರೂ. ಅನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ.
ಹುಬ್ಬಳ್ಳಿ, ಡಿಸೆಂಬರ್ 22: ಬಾಕಿ ಇರುವ 414 ಕೋಟಿ ರೂ. ಬಿಡುಗಡೆ ಮಾಡುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKSRTC)ದ ವ್ಯವಸ್ಥಾಪಕ ನಿರ್ದೇಶಕಿ ಎಮ್. ಪ್ರಿಯಾಂಗಾ ಅವರು ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಎಮ್. ಪ್ರಿಯಾಂಗಾ ಮಾತನಾಡಿ, ನಾಲ್ಕು ವಿಭಾಗದ ನಿರ್ದೇಶಕ ಮಂಡಳಿಯಲ್ಲೂ ಈ ವಿಚಾರ ಚರ್ಚೆಯಾಗಿದೆ. ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದೇವೆ. ಹಣ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು. ಎನ್ಡಬ್ಲೂಕೆಎಸ್ಆರ್ಟಿಸಿಯಲ್ಲಿ …
Read More »ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ದಾವಣಗೆರೆ: ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 2022ರ ಡಿಸೆಂಬರ್ 3ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು 80 ವರ್ಷದ ವೃದ್ಧೆಯೊಬ್ಬರು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವೃದ್ಧೆ ಮನೆಯಲ್ಲಿ ಇರುವಾಗ ಬೆಳಗಿನ ಜಾವ ಅದೇ ಗ್ರಾಮದ ನಿವಾಸಿ …
Read More »