ಕೃಷಿ ಸುಧಾರಣೆ ಕಾನೂನಿನ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಜಿಯೋ ಕಂಪನಿ ವಿರುದ್ಧ ಏರ್‌ಟೆಲ್ ಮತ್ತು ವೋಡಾಫೋನ್ ಐಡಿಯಾ ಸುಳ್ಳು ಗಾಳಿಸುದ್ದಿ ಹಬ್ಬಿಸುತ್ತಿದೆ ಎಂದು ರಿಲಾಯನ್ಸ್ ಜಿಯೋ ಇನ್ಫೋಕಾಮ್ (ಆರ್ಜಿಯೋ) ಆರೋಪಿಸಿದೆ. ಹೊಸದಾಗಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಸುಧಾರಣೆ ಕಾನೂನಿನಿಂದ ರಿಲಾಯನ್ಸ್ ಲಾಭ ಮಾಡಿಕೊಳ್ಳಲು ಮುಂದಾಗಿದೆ ಎಂದು ಈ ಎರಡು ಸಂಸ್ಥೆಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಈ ಎರಡು ಕಂಪನಿಗಳ ವಿರುದ್ಧ ಭಾರತೀಯ ಟೆಲಿಕಾಂ ರೆಗ್ಯುಲೆಟರ್ ಆಥಾರಿಟಿ …
Read More »ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು: ವಾಟಾಳ್ ನಾಗರಾಜ್
ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು ಬಂದ್ ಚಳವಳಿ ನಡೆಸಲಾಗುವುದು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ ಅವರು ಜಿಲ್ಲಾಡಳಿತ ಭವನದ ಮುಂದೆ ತಮ್ಮ ಬೆಂಬಲಿಗರೊಂದಿಗೆ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮರಾಠ ಅಭಿವೃದ್ಧಿ ನಿಗಮ …
Read More »ಮೇಲ್ಮನೆ ಕಲಾಪದತ್ತ ಎಲ್ಲರ ಚಿತ್ತ, ಕೋಲಾಹಲ ನಿಶ್ಚಿತ
ಬೆಂಗಳೂರು, ಡಿ.15- ಗೋ ಹತ್ಯೆ ನಿಷೇಧ ವಿಧೇಯಕ, ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಯ ಉದ್ದೇಶದಿಂದ ನಾಳೆ ಕರೆಯಲಾಗಿರುವ ಒಂದು ದಿನದ ವಿಧಾನಪರಿಷತ್‍ನ ಅಧಿವೇಶನ ರಣಾಂಗಣವಾಗುವ ಪರಿಸ್ಥಿತಿ ಎದುರಾಗಿದೆ. ಸಭಾಪತಿ ಚುನಾವಣೆ ವಿಷಯದಲ್ಲಿ ಬಿಜೆಪಿ, ಜೆಡಿಎಸ್‍ನದು ಒಂದು ನಿಲುವಾದರೆ, ಕಾಂಗ್ರೆಸ್ ಪಕ್ಷದ್ದು ಪ್ರತ್ಯೇಕ ನಿಲುವಾಗಿದೆ. ಬಿಜೆಪಿ ರಾಜ್ಯಪಾಲರ ಮೊರೆ ಹೋಗಿ ಅಧಿವೇಶನಕ್ಕೆ ಸಮಯ ನಿಗದಿ ಮಾಡಿರುವುದು ಪ್ರಮುಖವಾಗಿ ಸಭಾಪತಿ ವಿರುದ್ಧದ ಅವಿಶ್ವಾಸ ಗೊತ್ತುವಳಿಯನ್ನು ಅಂಗೀಕಾರ ಮಾಡಲಿಕ್ಕಾಗಿ. ಆದರೆ, ಬಿಜೆಪಿಯ …
Read More »ಬುಧವಾರ ಜೆಡಿಎಸ್ ಪ್ರಮುಖರ ಸಭೆ,ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ
ಬೆಂಗಳೂರು,ಡಿ.- ಗ್ರಾಮಪಂಚಾಯ್ತಿ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ ಮತ್ತು ಬುಧವಾರ ಜೆಡಿಎಸ್ ಪ್ರಮುಖರ ಸಭೆ ನಡೆಸಲು ಉದ್ದೇಶಿಸಲಾಗಿದೆ. ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಕೆಲವು ಗೊಂದಲಗಳನ್ನು ತಿಳಿಗೊಳಿಸುವ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಮುಖರ ಸಭೆ ನಡೆಸಲಾಗುತ್ತದೆ. ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿರುವ ಕೆಲವೊಂದು ಗೊಂದಲಗಳನ್ನು ನಿವಾರಿಸುವ ಹಾಗೂ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ …
Read More »90 ಸಾವಿರ ಕೋಟಿ ರೂ. ನಷ್ಟದ ಸುಳಿಯಲ್ಲಿ ಸಿಲುಕಿರುವ ಏರ್ ಇಂಡಿಯಾ ಖರೀದಿಗೆ ಆಸಕ್ತಿ ತೋರಿಸಿದೆ ಟಾಟಾ ಗ್ರೂಪ್,
ನವದೆಹಲಿ: 90 ಸಾವಿರ ಕೋಟಿ ರೂ. ನಷ್ಟದ ಸುಳಿಯಲ್ಲಿ ಸಿಲುಕಿರುವ ʼಮಹಾರಾಜʼನನ್ನು ಖರೀದಿಸಲು ಟಾಟಾ ಕಂಪನಿ ಆಸಕ್ತಿ ತೋರಿಸಿದೆ.ʼಮಹಾರಾಜ’ ಲಾಂಛನದಿಂದ ಗುರುತಿಸಿಕೊಂಡಿರುವ ಏರ್ ಇಂಡಿಯಾ ಕಂಪನಿಯನ್ನು ಮಾರಾಟ ಮಾಡುವ ಸಂಬಂಧ ಕೇಂದ್ರ ಸರ್ಕಾರ ಬಿಡ್ಡಿಂಗ್ ಆಹ್ವಾನಿಸಿದ್ದು ಇಂದು ಸಂಜೆ 5 ಗಂಟೆಗೆ ಅವಧಿ ಮುಕ್ತಾಯವಾಗಿದೆ. ಏರ್ ಇಂಡಿಯಾ ಮಾರಾಟ ಮಾಡುವ ಕೇಂದ್ರ ಸರ್ಕಾರದ ಮೊದಲ ಪ್ರಯತ್ನ ವಿಫಲವಾಗಿತ್ತು. 2018ರಲ್ಲಿ ಕೇಂದ್ರ ಸರ್ಕಾರ ಬಿಡ್ ಆಹ್ವಾನಿಸಿತ್ತು. ಆದರೆ ಯಾರೂ ಖರೀದಿಗೆ ಆಸಕ್ತಿ …
Read More »ಎಲ್ಲರ ಚಿತ್ತ ಟೆಸ್ಟ್ ಸರಣಿಯತ್ತ,ಆಸ್ಟ್ರೇಲಿಯಾ ತಂಡವು ಗಾಯಾಳುಗಳ ಸಮಸ್ಯೆಯನ್ನು ಎದುರಿಸುತ್ತಿದೆ.
ಮೆಲ್ಬೋರ್ನ್, ಡಿ.14- ಭಾರತ ಹಾಗೂ ಆಸ್ಟ್ರೇಲಿಯಾ ಸರಣಿಗಳನ್ನು ಹೈವೋಲ್ಟೇಜ್ ಸರಣಿಯೆಂದೇ ಬಿಂಬಿಸಲಾಗಿದ್ದು ಈಗಾಗಲೇ ಏಕದಿನ ಹಾಗೂ ಚುಟುಕು ಸರಣಿಯಲ್ಲಿ ಕ್ರಮವಾಗಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಜಯಿಸಿರುವುದರಿಂದ ಈಗ ಎಲ್ಲರ ಚಿತ್ತ ಟೆಸ್ಟ್ ಸರಣಿಯತ್ತ ನೆಟ್ಟಿದೆ. ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದ್ದು ಡಿಸೆಂಬರ್ 17 ರಿಂದ ಮೊದಲ ಟೆಸ್ಟ್ ಆರಂಭವಾಗಲಿರುವ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡವು ಗಾಯಾಳುಗಳ ಸಮಸ್ಯೆಯನ್ನು ಎದುರಿಸುತ್ತಿದೆ. ಆಸೀಸ್ ತಂಡದ ಪ್ರಮುಖ ವೇಗಿ ಆಗಿರುವ ಮಿಚಲ್ ಸ್ಟ್ರಾಕ್ ಅವರು …
Read More »ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
:ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ. ಸಾಮಾನ್ಯ ವರ್ಗ ಮಹಿಳಾ ಮೀಸಲು ಕ್ಷೇತ್ರದ.ವಾರ್ಡ ನಂ.3 ಸುನಂದಾ ಪ್ರಕಾಶ್ ವಡ್ಡರ. ವಾರ್ಡ್ ನಂ 5. ಮಂಜುಳಾ ಲಕ್ಷ್ಮಣ ಪಾಟೀಲ್. ಹಿಂದುಳಿದ (ಅ) ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಎರಡು ಮಹಿಳಾ ಅವಿರೋಧವಾಗಿ ಆಯ್ಕೆಯಾಗಿದೆ ಹೀಗಾಗಿ ಈ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ …
Read More »ಶಿಂದಿಕುರಬೇಟ ಗ್ರಾಮ ಪಂಚಾಯಿತಿಯ 8ವಾಡಿ೯ನ ಅವಗ೯ ಪುರುಷ ಸದಸ್ಯ ರಾಗಿ
ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮಪಂಚಾಯತಿಯ 8 ನೇ ವಾರ್ಡಿನಲ್ಲಿ ಅವರ್ಗ ವಾಗಿ ಆಯ್ಕೆಯಾದ ಭೀಮಶಿ ಯಲ್ಲಪ್ಪ ಬಿರನಾಳಿ ಹಾಗು ಸಾಮಾನ್ಯ ಮಹಿಳಾ ಸದಸ್ಯ ರಾಗಿ ಮಂಜುಳಾ ವಿಠ್ಠಲ ಕರೋಶಿ ಅವಿರೋಧ ಆಯ್ಕೆಯಾಗಿ ದ್ದಾರೆ ಇವರು ಊರಿಗೆ ಮಾಡಿದ ಸಹಾಯವನ್ನು ಮೆಚ್ಚಿ ಶಿಂದಿಕುರಬೇಟ ಜನರು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳು ಊರಿಗೆ ನಾವು ಚಿರಋಣಿಯಾಗಿರುತ್ತೇವೆ. ಮತ್ತು ಜನರ ಕಷ್ಟಗಳಿಗೆ ನಾವು ಬಾಗಿ ಆಗಿರುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ …
Read More »ಹತ್ತರಗಿ ಗ್ರಾಪಂಗೆ ಪತಿ-ಪತ್ನಿ ಅವಿರೋಧ ಆಯ್ಕೆ: ಖಾತೆ ತೆರೆದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು!!
ಯಮಕನಮರಡಿ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹತ್ತರಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 2 ನೇ ವಾರ್ಡ್‍ನ ಎಸ್‍ಸಿ ಪುರುಷ ಮೀಸಲು ಕ್ಷೇತ್ರದಿಂದ ಉಮೇಶ ನಾಗಪ್ಪಾ ಭೀಮಗೋಳ, 1 ನೇ ವಾರ್ಡ್‍ನ ಎಸ್‍ಸಿ ಮಹಿಳಾ ಮೀಸಲು ಕ್ಷೇತ್ರದಿಂದ ಅಕ್ಷತಾ ಉಮೇಶ ಭೀಮಗೋಳ ಅವರ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿವೆ. ಹೀಗಾಗಿ ಈ ದಂಪತಿಯ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ …
Read More »ರಾಜ್ಯಾದ್ಯಂತ ಬಸ್ ಸಂಚಾರ ಆರಂಭ
ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯಗೊಳಿಸಿದ್ದು, ಸಂಜೆ ಗಂಟೆ ನಂತರ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿವೆ. ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿ ಜತೆಗಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರ 9 ಪ್ರಮುಖ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರಿಗೆ ಸಿಬ್ಬಂದಿ 10 ಪ್ರಮುಖ ಬೇಡಿಕೆಗಳಿದ್ದು, ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಗೆ ಹೊರತು ಪಡಿಸಿ 9 ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದ್ದು, …
Read More »
Laxmi News 24×7