ಬೈಲಹೊಂಗಲ: ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪನೆ ತೀರ ಅಗತ್ಯವಾಗಿದ್ದು, ತಮ್ಮ ಕಿತ್ತೂರು ಮತಕ್ಷೇತ್ರದಲ್ಲಿ ಇದನ್ನು ತೆರೆಯುವಂತೆ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ರಫ್ತು ಪ್ರಮೋಷನ್ ಸಮಿತಿ ಸಭೆಯ ನಂತರ ಶಾಸಕರ ಕಾರ್ಯಾಲಯದಿಂದ ಈ ಕುರಿತು ಹೇಳಿಕೆ ನೀಡಿರುವ ಶಾಸಕರು ತಮ್ಮ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಪ್ರದೇಶದಲ್ಲಿ ಕೈಗಾರಿಕಾ ರಫ್ತು ವಲಯ …
Read More »ಪತ್ನಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ರಾಜಕೀಯ ಮುಖಂಡ ಸಾವು
ಕನಕಗಿರಿ : ಆರು ದಶಕಗಳಿಂದ ಜತೆಗಿದ್ದ ಜೀವನಸಂಗಾತಿ ಬುಧವಾರ ತಡರಾತ್ರಿ ಏಕಾಏಕಿ ಹೃದಯಾಘಾತದಿಂದ ಮರಣ ಹೊಂದಿದ ಸುದ್ದಿ ಕೇಳಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪತಿಯೂ ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಘಟನೆ ಪಟ್ಟಣದಲ್ಲಿ ನಡೆದಿದೆ. ಬಾಡಿಗೆಗೆ ಲೋಡ್ ಕೊಡದ್ದಕ್ಕೆ ಚೂರಿಯಿಂದ ಇರಿದು ಹತ್ಯೆ… ಪಟ್ಟಣದ ಹಿರಿಯ ರಾಜಕಾರಣಿ, ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಮಹಾಬಳೇಶ್ವರ ಸ್ವಾಮಿ ಕಲುಬಾಗಿಲಮಠ (83), ಪತ್ನಿ ಪ್ರಭಾವತಿ (78) ಮೃತರು. ಬುಧವಾರ ತಡರಾತ್ರಿ 12.15ಕ್ಕೆ ಪ್ರಭಾವತಿ ಹೃದಯಾಘಾತದಿಂದ …
Read More »ಆರೋಗ್ಯಾಧಿಕಾರಿ ಆತ್ಮಹತ್ಯೆ: ಜಿಪಂ ಸಿಇಓ ಅಮಾನತಿಗೆ ಆಗ್ರಹಿಸಿ ವೈದ್ಯರ ಪ್ರತಿಭಟನೆ
ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಕರ್ತವ್ಯದಿಂದ ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ವೈದ್ಯರ ಪ್ರತಿಭಟನೆ ಮುಂದುವರಿದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮೃತರ ಕುಟುಂಬಕ್ಕೆ 50 ಲಕ್ಷ ರು ಪರಿಹಾರ ನೀಡಿ ತನಿಖೆಗೆ ಆದೇಶಿಸಿದ್ದಾರೆ. ಆದರೆ ಇದಕ್ಕೆ ವೈದ್ಯರ ಸಂಘ ತೃಪ್ತಿಯಾಗಿಲ್ಲ, ಕೂಡಲೇ ಸಿಇಓ ಮಿಶ್ರಾ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯ ಮತ್ತು ಚಾಮರಾಜನಗರ ಮತ್ತು ಮೈಸೂರು …
Read More »ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ
ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಬೆಂಗಳೂರು: ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.22ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕೊಡಗಿನಲ್ಲಿ ಉತ್ತಮ ಮಳೆ ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಮುಂಜಾನೆ …
Read More »ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್, 7 ಜನರ ವಿರುದ್ಧ FIR
ಚಾಮರಾಜನಗರ: ಸಾಮಾಜಿಕ ಜಾಲ ತಾಣದಲ್ಲಿ ಶಾಸಕ ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ 7 ಜನರ ವಿರುದ್ಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಶ್ರೀಕಾಂತ್ ಅಪ್ಪಗೆರೆ, ಪ್ರಜ್ವಲ್, ಮುರುಳೀಧರ ಮೌರ್ಯ, ರವಿಕುಮಾರ್, ಮೋಹನ್ ಮೂಕನಾಯಕ, ಸದಾಶಿವ ರಾವಣ್ ಸೇರಿದಂತೆ 7 ಜನರ ವಿರುದ್ಧ ಕೋರ್ಟ್ ಅನುಮತಿಯನ್ನು ಪಡೆದು ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ವಾಟ್ಸ್ ಆಯಪ್, ಫೇಸ್ಬುಕ್ಗಳಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಲಾಗುತ್ತಿತ್ತು. …
Read More »ಚಿನ್ನಕ್ಕಾಗಿ ಭೂಮಿ ನೀಡಿ, ನಿತ್ಯ ಮನೆಗಳನ್ನು ಕಳೆದುಕೊಳ್ಳುತ್ತಿರುವ ಗ್ರಾಮಸ್ಥರು
ರಾಯಚೂರು : ಆಭರಣಕ್ಕಾಗಿ ಚಿನ್ನವನ್ನು ಗಣಿಯಿಂದ ತೆಗೆಯಬೇಕು, ಈ ಚಿನ್ನವನ್ನು ತೆಗೆಯುವುದರಿಂದಾಗಿ ಈ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ ಇವರ ಮನೆಗಳು ಸಂಪೂರ್ಣವಾಗಿ ಬಿರುಕು ಬಿಟ್ಟಿವೆ. ಇವರ ಭೂಮಿಯಲ್ಲಿಯ ನೀರು ವಿಷವಾಗಿದೆ, ಈ ಮಧ್ಯೆ ಚಿನ್ನಕ್ಕಾಗಿ ಭೂಮಿ ನೀಡಿದ ಗ್ರಾಮದ ಎಲ್ಲರಿಗೂ ಉದ್ಯೋಗ ನೀಡಿ ಎಂದು ಆಗ್ರಹಿಸಿ ಕಳೆದ ಆರು ದಿನಗಳಿಂದ ಧರಣಿ ಆರಂಭಿಸಿದ್ದಾರೆ. ರಾಜ್ಯದಲ್ಲಿ ಚಿನ್ನವನ್ನು ಹೊರತೆಗೆಯುವ ಗಣಿಗಾರಿಕೆ ಇರುವುದು ಈಗ ಕೇವಲ ಹಟ್ಟಿ ಚಿನ್ನದ ಗಣಿಯಲ್ಲಿ ಮಾತ್ರ, ಹಟ್ಟಿ …
Read More »ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ
ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಉಡುಪಿ ನಗರದ ಮಿಷನ್ ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ(26) ಮೃತ ಮಹಿಳೆ. ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ ತಲೆನೋವೆಂದು ಮಿಷನ್ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ವೈದ್ಯರು ಅಸ್ವಸ್ಥ ಮಹಿಳೆಗೆ ಇಂಜೆಕ್ಷನ್ ಕೊಟ್ಟು ಕಳುಹಿಸಿದ್ದರು. ಮನೆಗೆ ತೆರಳುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಶ್ರೀರಕ್ಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡ, ಪತಿ …
Read More »ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಬೆಳಗಾವಿ ಜಿಲ್ಲೆಯ ನಾಲ್ಕು ಸಚಿವರಿಗೆ ಇಲ್ಲ ಕಾಳಜಿ…!
ಬೆಳಗಾವಿ : ಮಹಾರಾಷ್ಟ್ರ ಪಶ್ಚಿಮ ಘಟಗಳ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಸಂಕಷ್ಟ ಎದುರಾಗಿದೆ. ಕಷ್ಟು ಪಟ್ಟ ಬೆಳೆದ ಬೆಳೆ ಹಾನಿಯಾಗಿದ್ದು, ಇನ್ನೂ ಅನೇಕರು ಮನೆಯಗಳನ್ನು ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಜಿಲ್ಲೆಯ ನಾಲ್ವರು ಸಚಿವರ ಪೈಕಿ ಒಬ್ಬರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎನ್ನವುದು ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ರಾಜ್ಯದಲ್ಲಿಯೇ ಬೆಳಗಾವಿ ರಾಜಕಾರಣ ಅತ್ಯಂತ ಪ್ರಖ್ಯಾತಿಯನ್ನು ಗಳಿಸಿದೆ. ಸರ್ಕಾರವನ್ನು ಬಿಳಿಸುವ ಶಕ್ತಿಯನ್ನು …
Read More »ಸಚಿವರು ರಮೇಶ್ ಜಾರಕಿಹೊಳಿ ಬಗ್ಗೆ ಸಿಎಂ ಬಿಎಸ್ವೈ ಹರ್ಷ
ಶ್ರೀರಂಗಪಟ್ಟಣ : ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ …
Read More »ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ
ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. …
Read More »