ಬೆಂಗಳೂರು: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಸಿ.ಟಿ.ರವಿ ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದಾರೆ. ಡಿ.19ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ …
Read More »ಜೈನ ಸಮುದಾಯದ ಅದ್ಧೂರಿ ಶೋಭಾಯಾತ್ರೆಗೆ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು.
ತುಮಕೂರು: ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಪೀಠಾಧ್ಯಕ್ಷ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇದೇ ಮೊದಲ ಬಾರಿ ತುಮಕೂರು ನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶೋಭಾಯಾತ್ರೆಗೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು. ನಗರದ ಮಹಾವೀರ ಭವನದ ಬಳಿಯಿಂದ ಹೊರಟ ಶೋಭಾಯಾತ್ರೆಯಲ್ಲಿ ಅಭಿನವ ಶ್ರೀಗಳನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಲಾಯಿತು. ಅವರೊಂದಿಗೆ ಮಹಿಳೆಯರು ಪೂರ್ಣ ಕುಂಭ ಕಳಸ ಹೊತ್ತು ಸಾಗಿದರೆ, ವಾದ್ಯ ವೃಂದ ಹಾಗೂ ಜೈನ ಸಮುದಾಯದವರು ಶೋಭಾಯಾತ್ರೆಯಲ್ಲಿ …
Read More »ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ:ರಾಬಿನ್ ಉತ್ತಪ್ಪ
ಬೆಂಗಳೂರು : ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಹಾಗೂ ಆರೋಪ ಎದುರಿಸುತ್ತಿರುವ ಕಂಪನಿಯಲ್ಲಿ ತಮ್ಮ ಸ್ಥಾನಕ್ಕೆ ಸಾಕಷ್ಟು ವರ್ಷಗಳ ಹಿಂದೆಯೇ ರಾಜೀನಾಮೆ ನೀಡಿರುವುದಾಗಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ. ಇಪಿಎಫ್ ಹಣ ಪಾವತಿಸದೆ ವಂಚಿಸಿದ ಪ್ರಕರಣದಲ್ಲಿ ವಾರೆಂಟ್ ಜಾರಿಯಾದ ಬೆನ್ನಲ್ಲೇ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಅವರು ಸ್ಪಷ್ಟನೆ ನೀಡಿದ್ದಾರೆ. “2018 -19ರಲ್ಲಿ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ …
Read More »ಬೆಳಗಾವಿಯಲ್ಲಿ ಡಿ. 27ರಂದು ಆಯೋಜಿಸಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ
ಡಿ .27 ರಂದು ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಚಿಕ್ಕೋಡಿ: ಬೆಳಗಾವಿಯಲ್ಲಿ ಡಿ. 27ರಂದು ಆಯೋಜಿಸಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ತಿಳಿಸಿದರು. ಪಟ್ಟಣದ ಲೋಕಸಭೆ ಸದಸ್ಯರ ಕಚೇರಿ ಆವರಣದಲ್ಲಿ ಶನಿವಾರ ಕರೆದಿದ್ದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರ ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹಾತ್ಮಾ ಗಾಂಧಿಜಿ ಅವರು ಕಳೆದ …
Read More »ಲಾಠಿ ಏಟಿನ ವಿರುದ್ಧ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ ಜಯಮೃತ್ಯುಂಜಯ ಸ್ವಾಮೀಜಿ…ಸರ್ಕಾರ, ಗೃಹ ಇಲಾಖೆ, ಪೊಲೀಸ್ ಇಲಾಖೆಗೆ ನೋಟಿಸ್ ಜಾರಿಯಾಗಿದೆ- ಜಯ ಮೃತ್ಯುಂಜಯ ಶ್ರೀ
ಲಾಠಿ ಏಟಿನ ವಿರುದ್ಧ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ ಜಯಮೃತ್ಯುಂಜಯ ಸ್ವಾಮೀಜಿ…ಸರ್ಕಾರ, ಗೃಹ ಇಲಾಖೆ, ಪೊಲೀಸ್ ಇಲಾಖೆಗೆ ನೋಟಿಸ್ ಜಾರಿಯಾಗಿದೆ- ಜಯ ಮೃತ್ಯುಂಜಯ ಶ್ರೀ ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ನಡೆದಿದ್ದ ಹೋರಾಟದ ವೇಳೆ, ಪೊಲೀಸ್ ಇಲಾಖೆಯಿಂದ ನಡೆದಿದ್ದ ಲಾಠಿ ಚಾರ್ಜ್ ಪ್ರಶ್ನಿಸಿ ಇದೀಗ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೇ ವಿಚಾರಕ್ಕೆ ಈಗ ಸರ್ಕಾರ, ಗೃಹ ಇಲಾಖೆ, ಪೊಲೀಸ್ …
Read More »ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್ ಜಾರಕಿಹೊಳಿ
ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ …
Read More »ಬಿಎನ್ಎಸ್ ಪಠ್ಯದಡಿ ಪರೀಕ್ಷೆ ಬರೆಯುವಂತೆ ರಾಜ್ಯ ಕಾನೂನು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಐಪಿಸಿ ಕಾಯ್ದೆ ಪಠ್ಯದಲ್ಲೇ ಪರೀಕ್ಷೆ ನಡೆಸುವಂತೆ ಸೂಚಿಸಿದೆ.
ಬೆಂಗಳೂರು: ಭಾರತೀಯ ದಂಡ ಸಂಹಿತೆ (ಐಪಿಸಿ) ಅಧ್ಯಯನ ಮಾಡಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ಕಾನೂನು ಪದವಿ ವಿದ್ಯಾರ್ಥಿಗಳಿಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಪಠ್ಯ ಕ್ರಮದಲ್ಲಿ ಪರೀಕ್ಷೆ ನಡೆಸಲು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಜೊತೆಗೆ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಐಪಿಸಿ ಪಠ್ಯಕ್ರಮದಡಿಯಲ್ಲಿ ಪರೀಕ್ಷೆ ನಡೆಸಲು ಸೂಚನೆ ನೀಡಿದೆ. ಐಪಿಸಿ (ಕ್ರಿಮಿನಲ್ ಲಾ-1) ಅಧ್ಯಯನ ಮಾಡಿ ಅನುತ್ತೀರ್ಣರಾದ ಕಾನೂನು ವಿದ್ಯಾರ್ಥಿಗಳಿಗೂ ಬಿಎನ್ಎಸ್ ಪಠ್ಯ ಕ್ರಮದಲ್ಲಿ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ …
Read More »ನೆಲಮಂಗಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರದ ಜತ್ತ ತಾಲೂಕಿನ ಒಂದೇ ಕುಟುಂಬದ ಆರು ಜನರ ದುರಂತ ಅಂತ್ಯವಾಗಿದೆ.
ವಿಜಯಪುರ: ಸಾಮಾನ್ಯ ಕುಟುಂಬದ ಯುವಕ ಎಂಜಿನಿಯರಿಂಗ್ ಪದವಿ ಪಡೆದು ಬೆಂಗಳೂರಿಗೆ ಬಂದು ಹಂತ ಹಂತವಾಗಿ ಮೇಲಕ್ಕೇರಿದ್ದರು. ಅಷ್ಟೇ ಅಲ್ಲ, ಸ್ವಂತ ಕಂಪನಿಯನ್ನೂ ಕಟ್ಟಿ ನೂರಾರು ಜನಕ್ಕೆ ಉದ್ಯೋಗವನ್ನೂ ನೀಡಿ ಯಶಸ್ವಿಯಾಗಿದ್ದರು. ಹಳ್ಳಿಯಲ್ಲಿದ್ದ ಪೋಷಕರು, ಸಂಬಂಧಿಕರಿಗೆ ಆಸರೆ ಆಗಿದ್ದರು. ಆದರೆ ವಿಧಿಯಾಟಕ್ಕೆ ಉದ್ಯಮಿ ಮತ್ತು ಇಡೀ ಕುಟುಂಬವೇ ಬಲಿಯಾಗಿದೆ. ನೆಲಮಂಗಲ ಬಳಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಬಲಿಯಾದ ಉದ್ಯಮಿ ಚಂದ್ರು ಯಾಗಪ್ಪಗೋಳ ಮತ್ತು ಇಡೀ ಕುಟುಂಬದ ಕರುಣಾಜನಕ ಕಥೆ ಇದು. ಚಂದ್ರು …
Read More »ಮನುಷ್ಯನ ಬದುಕೇ ಹಲವು ತಿರುವುಗಳು, ಏರುಪೇರುಗಳ ಪ್ರಯಾಣ
ಕೊಪ್ಪಳ: ಮನುಷ್ಯನ ಬದುಕೇ ಹಲವು ತಿರುವುಗಳು, ಏರುಪೇರುಗಳ ಪ್ರಯಾಣ. ಕೆಲವೊಮ್ಮೆ ಆ ಏರುಪೇರುಗಳು, ತಿರುವುಗಳು ಜೀವನವನ್ನೇ ಬದಲಾಯಿಸಬಹುದು. ಹೀಗೆ ಜೀವನದಲ್ಲಿ ಎದುರಾದ ತಿರುವುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ ಬದುಕು ಕಟ್ಟಿಕೊಂಡವರು, ಮತ್ತೊಬ್ಬರಿಗೆ ಮಾದರಿಯಾಗುತ್ತಾರೆ, ಸ್ಫೂರ್ತಿಯಾಗುತ್ತಾರೆ ಅನ್ನೋದಕ್ಕೆ ಈ ದಿಟ್ಟ ಮಹಿಳೆ ಸಾಕ್ಷಿ ಆಗುತ್ತಾರೆ. ಹೌದು, ಜೀವನದಲ್ಲಿ ಎದುರಾದ ಸಂಕಷ್ಟಗಳಿಗೆ ಕುಗ್ಗದೆ ಧೈರ್ಯದಿಂದ ಮೆಟ್ಟಿನಿಂತು ಬದುಕು ಕಟ್ಟಿಕೊಂಡ ಸಾಹಸಿ ಮಹಿಳೆಯ ಕಥೆ ಇದು. ಈ ನೈಜ ಕಥೆಯ ನಾಯಕಿಯ ಹೆಸರು ಜಯಶ್ರೀ ಗುಳಗಣ್ಣವರ. ಕೊಪ್ಪಳ …
Read More »ಸಿ. ಟಿ ರವಿ ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ ಇಲ್ಲ”:ಸತೀಶ ಜಾರಕಿಹೊಳಿ
ಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿ. ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, “ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ ಇಲ್ಲ” ಎಂದು ಹೇಳಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ. ಸಂಸತ್ತು ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಅವು ಮುಗಿದು ಹೋಗಿವೆ. ಈಗಲೂ ಈ ಪ್ರಕರಣ …
Read More »