Breaking News

ಬೆಂಗಳೂರು ಲಾಕ್‌ಡೌನ್ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಏನುರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು-ರಾಜ್ಯವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸಂಪೂರ್ಣವಾಗಿ ಸ್ತಬ್ಧಗೊಳ್ಳಲಿದ್ದು, ಅದಕ್ಕಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಗೊಂಡಿವೆ. ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದು ಭಾಗಗಳಲ್ಲಿ ಕೆಲವು ವಿನಾಯ್ತಿಗಳನ್ನು ಸರ್ಕಾರ ನೀಡಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದೆ. ಈ ಒಂದು …

Read More »

ಬಳ್ಳಾರಿ ಜಿಲ್ಲೆಯಲ್ಲಿಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕ ಪ್ರವೇಶ ಬಂದ್

ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗಿ ಹಬ್ಬುತ್ತಿದೆ. ಲಾಕ್‍ಡೌನ್ ಮಾಡಬೇಕೆ, ಬೇಡವೆ ಎಂಬ ಚರ್ಚೆಗಳೂ ನಡೆಯುತ್ತಿವೆ. ಇದರ ಮಧ್ಯೆ ಇದೀಗ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕ ಪ್ರವೇಶ ಬಂದ್ ಮಾಡಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಯಾಗುವಂತೆ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಕಾರ್ಯಾಲಯ ಸಂಪರ್ಕಿಸುವ ಕಚೇರಿಯನ್ನು ಸಾರ್ವಜನಿಕ ಪ್ರವೇಶದಿಂದ ಹೊರಗಿಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ಬಹುತೇಕ ಸಿಬ್ಬಂದಿ ಕೋವಿಡ್-19 ನಿರ್ವಹಣೆಯ ಒಂದಿಲ್ಲೊಂದು ತಂಡಗಳಲ್ಲಿ ನೇರವಾಗಿ ಕಾರ್ಯ …

Read More »

ರಾಯಚೂರು, ಸಿಂಧನೂರು ಒಂದು ವಾರ ಸಂಪೂರ್ಣ ಲಾಕ್‍ಡೌನ್……….

ರಾಯಚೂರು: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 250 ಪಾಸಿಟಿವ್ ಪ್ರಕರಣ ದಾಖಲಾದ ಹಿನ್ನೆಲೆ ಒಂದು ವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಯಚೂರು ಹಾಗೂ ಸಿಂಧನೂರು ನಗರಗಳನ್ನ ಮಾತ್ರ ಜುಲೈ 15 ರಿಂದ 22 ರವರೆಗೆ ಸಂಪೂರ್ಣ ಲಾಕ್‍ಡೌನ್ ಮಾಡಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ. ಇನ್ನುಳಿದ ತಾಲೂಕು ಪ್ರದೇಶಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಬಳಿಕ …

Read More »

ಕೊರೊನಾ ಪಾಸಿಟಿವ್ ಬಂದ್ರೂ ಸಾರ್ವಜನಿಕವಾಗಿ ಟೀ ಕುಡಿದು ಹರಟೆ ಹೊಡೆದ ಪೊಲೀಸ್ ಸಿಬ್ಬಂದಿ

ಯಾದಗಿರಿ: ಕೊರೊನಾ ಪಾಸಿಟಿವ್ ಬಂದು, ಕೊವಿಡ್ ಆಸ್ಪತ್ರೆಗೂ ಹೋಗುವ ಮುನ್ನ ಪೊಲೀಸ್ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಘಟನೆ ನಡೆದಿದೆ. ಇಂದು ಗುರುಮಠಕಲ್ ಪಿಎಸ್ ಐ ಸೇರಿದಂತೆ 16 ಪೊಲೀಸ್ ಸಿಬ್ಬಂದಿಗೆ ಕೊರೊನಾ ಧೃಡಪಟ್ಟಿದೆ. ಈಗಾಗಲೇ ಠಾಣೆಯನ್ನು ಸೀಲ್ ಡೌನ್ ಸಹ ಮಾಡಲಾಗಿದೆ. ಹೀಗಾಗಿ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ಕರೆತರಲು ಸರ್ಕಾರಿ ಬಸ್ ಗುರುಮಿಠಕಲ್ ಪಟ್ಟಣಕ್ಕೆ ಹೋಗಿತ್ತು. ಪಟ್ಟಣ ಸರ್ಕಲ್ ಇನ್ಸ್‍ಪೆಕ್ಟರ್ ಕಚೇರಿ ಎದುರು ಬಸ್ ನಿಂತಿದ್ದ ವೇಳೆ ಅದರಿಂದ ಕೆಳಗಿಳಿದ …

Read More »

ಲಾಕ್‍ಡೌನ್ ಮಾರ್ಗಸೂಚಿ ಮಾರ್ಪಾಡು- ಮದ್ಯ ಮಾರಾಟಕ್ಕಿಲ್ಲ ಅವಕಾಶ

ಬೆಂಗಳೂರು: ಲಾಕ್‍ಡೌನ್ ಮಾರ್ಗಸೂಚಿಯನ್ನು ಸರ್ಕಾರ ಮಾರ್ಪಾಡು ಮಾಡಿದ್ದು, ಮದ್ಯ ಮಾರಾಟಕ್ಕೆ ನೀಡಿದ ಅನುಮತಿಯನ್ನು ಹಿಂಪಡೆದಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರು ಲಾಕ್ ಆಗಲಿದೆ. ಈ ಸಂಬಂಧ ಸರ್ಕಾರ ಪ್ರಕಟಿಸಿದ ಮೊದಲ ಮಾರ್ಗಸೂಚಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಬೆಳಗ್ಗೆ 10 ರಿಂದ ಸಂಜೆ 5ರವೆರೆಗೆ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿತ್ತು. ಕೇವಲ ಪಾರ್ಸೆಲ್ ನೀಡಬೇಕೆಂದು ಮಾರ್ಗಸೂಚಿಯಲ್ಲಿ ಹೇಳಿತ್ತು.ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತ ಸರ್ಕಾರ …

Read More »

ಬೆಂಗಳೂರು ಸೇರಿ ಯಾವ ಯಾವ ಜಿಲ್ಲೆಗಳಲ್ಲಿ ಲಾಕ್‍ಡೌನ್?

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ನಾಳೆ ರಾತ್ರಿಯಿಂದ ಒಂದು ವಾರದ ಮಟ್ಟಿಗೆ ಬೆಂಗಳೂರು ಅರ್ಧಂಬಂಧ ಲಾಕ್‍ಡೌನ್ ಆಗುತ್ತಿದೆ. ಆದರೆ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡೋ ವಿಚಾರವಾಗಿ ಸರ್ಕಾರ ದೊಡ್ಡ ಗೊಂದಲ ಸೃಷ್ಟಿಸಿದೆ. ಹೈರಿಸ್ಕ್ ಜಿಲ್ಲೆಗಳಲ್ಲಿ ಲಾಕ್‍ಡೌನ್ ಜಾರಿ ಮಾಡೋ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಹಿಂದೇಟು ಹಾಕಿದ್ರಾ ಎನ್ನುವ ಪ್ರಶ್ನೆ ಎದ್ದಿದೆ. ಬೆಂಗಳೂರು ಲಾಕ್‍ಡೌನ್ ವಿಚಾರದಲ್ಲಿ ಖಡಕ್ ನಿರ್ಣಯ ತೆಗೆದುಕೊಂಡ ಸಿಎಂ, ಜಿಲ್ಲೆಗಳ ಹೊಣೆಯನ್ನು ಉಸ್ತುವಾರಿ …

Read More »

ಬಿಗ್ ಬ್ರೇಕಿಂಗ್: ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ದಿಗ್ಗಜ ಇನ್ನಿಲ್ಲ.! ಶೋಕದಲ್ಲಿ ಮುಳುಗಿದ ಬಾಲಿವುಡ್

ಕಳೆದ ನಾಲ್ಕು ತಿಂಗಳಿನಿಂದಲೂ ಕೊರೊನಾ ವೈರಸ್‌ ಕಾಟ ಕೊಡುತ್ತಲೇ ಇದೆ. ಬಡವ ಶ್ರೀಮಂತ, ಸೆಲೆಬ್ರಿಟಿ ಅಥವಾ ಜನಸಾಮಾನ್ಯ ಎಂಬ ಯಾವ ಭೇದವೂ ಇಲ್ಲದೆ ಈ ಮ’ಹಾಮಾರಿ ತನ್ನ ಅ’ಟ್ಟಹಾಸ ಮುಂದುವರಿಸುತ್ತಿದೆ. ಅದರಲ್ಲೂ ಬಾಲಿವುಡ್‌ ಕಲಾವಿದರು ಇತ್ತೀಚೆಗೆ ಹೆಚ್ಚು ಆತಂಕಕ್ಕೆ ಒಳಗಾಗಿದ್ದರು. ಅಮಿತಾಭ್ ಬಚ್ಚನ್, ಐಶ್ವರ್ಯ ರೈ, ಅನುಪಮ್ ಖೇರ್ ಮುಂತಾದವರಿಗೆ ಕೊರೊನಾ ರೋ’ಗ ಲ’ಕ್ಷಣಗಳು ಕಾಣಿಸಿಕೊಂಡಿತ್ತು. ಈ ವರ್ಷ 2020 ಬಾಲಿವುಡ್‌ಗೆ ಸಂಕಟ ಎಂದೇ ಹೇಳಬಹದು ಹೌದು ಈ ವರ್ಷ …

Read More »

ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಸಿಪಿಎಂ ಶಾಸಕ ಅನುಮಾನಾಸ್ಪದ ಸಾವು..!

ಕೋಲ್ಕತ್ತಾ, ಜು.13- ಸಿಪಿಎಂನಿಂದ ಶಾಸಕನಾಗಿ ಆರಿಸಿ ಬಂದು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ದೀನಜ್‍ಪುರ್‍ನಲ್ಲಿ ನಡೆದಿದೆ. ಹೆಮ್ತಾಬಾದ್‍ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡ ದೇಬೇಂದ್ರನಾಥ್ ರೇ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ದುರುದ್ದೇಶಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬವರ್ಗದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಹೆಮ್ತಾಬಾದ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿದ್ದ …

Read More »

ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ

ಹಾವೇರಿ: ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಧಿಕಾರಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಸಲಹೆ ಮೇರೆಗೆ ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಗುತ್ತೂರ ಇಂದು ಈ ನಿರ್ಧಾರ ಪ್ರಕಟಿಸಿದ್ದಾರೆ. ಲಾಕ್‍ಡೌನ್ ವೇಳೆ ಹಾಲು, ದಿನಪತ್ರಿಕೆ ಮತ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿದ್ದು, ಉಳಿದಂತೆ ಎಲ್ಲವೂ ಲಾಕ್‍ಡೌನ್ ಆಗಲಿದೆ. ಯಾರೂ ಮನೆಯಿಂದ ಹೊರಬರದೆ …

Read More »

ನಟ ದರ್ಶನ್ ಮೇಕಪ್ ಮ್ಯಾನ್ ಹೃದಯಾಘಾತದಿಂದ ಸಾವು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸ್ವತಃ ನಟ ದರ್ಶನ್ ಅವರೇ ಟ್ವೀಟ್ ಮಾಡಿದ್ದು, ಎರಡು ದಶಕಗಳಿಂದ ನನ್ನ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸೀನ ಅಲಿಯಾಸ್ ಶ್ರೀನಿವಾಸ್ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಬರೆದುಕೊಂಡು ಸಂತಾಪ …

Read More »