Breaking News

ಭಾರತದಲ್ಲಿ 75 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದೆ ಗೂಗಲ್‌

ಬೆಂಗಳೂರು: ಮುಂದಿನ ದಿನಗಳಲ್ಲಿ ಡಿಜಿಟಲ್‌ ಕ್ಷೇತ್ರದಲ್ಲಿ ಅದರಲ್ಲೂ ಭಾರತದಲ್ಲಿ ಭಾರೀ ಬೆಳವಣಿಗೆ ಆಗಲಿದೆ ಎಂಬುದನ್ನು ಊಹಿಸಿರುವ ಬಹುರಾಷ್ಟ್ರೀಯ ಕಂಪನಿಗಳು ಈಗ ದೇಶದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದು, ಗೂಗಲ್‌ ಒಟ್ಟು 10 ಶತಕೋಟಿ ಡಾಲರ್‌(75 ಸಾವಿರ ಕೋಟಿ ರೂ.) ಹೂಡಿಕೆ ಮಾಡುವುದಾಗಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಿದ ಬಳಿಕ ಗೂಗಲ್‌ ಕಂಪನಿಯ ಸಿಇಒ ಸುಂದರ್‌ ಪಿಚೈ 10 ಶತಕೋಟಿ ಡಾಲರ್‌ …

Read More »

ಉಡುಪಿ ಲಾಕ್‍ಡೌನ್ ಆಗಲ್ಲ, ಗಡಿ ಸೀಲ್ ಮಾಡುವ ಚಿಂತನೆ ಇದೆ: ಡಿಸಿ ಜಿ.ಜಗದೀಶ್

ಉಡುಪಿ: ಜಿಲ್ಲೆಯನ್ನು ಲಾಕ್‍ಡೌನ್ ಮಾಡುವ ಸಾಧ್ಯತೆ ಇಲ್ಲ. ನಾಳೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ಕರೆದು ಲಾಕ್‍ಡೌನ್ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಗೆ ಮುಕ್ತ ಪ್ರವೇಶ ಇರುವುದಿಲ್ಲ. ಜಿಲ್ಲೆಯ ಗಡಿಯನ್ನು ಸೀಲ್‍ಡೌನ್ ಮಾಡಿ, ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸುತ್ತೇವೆ. ಈ ನಿರ್ಧಾರಕ್ಕೆ ಮೊದಲು ಉಡುಪಿ ಜಿಲ್ಲೆಯಿಂದ ಹೊರಗಡೆ ಹೋಗಲು ಹಾಗೂ ಜಿಲ್ಲೆಯ ಒಳಗೆ ಬರಲು ಸಮಯ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ. ಕೋವಿಡ್-19 ಸೋಂಕಿನ …

Read More »

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಸಿಎಂಗೆ ಡಿಸಿಎಂ ಸಲಹೆ

ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು‌‌ ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ …

Read More »

ಬೆಳಗ್ಗೆಯಿಂದಲೇ ಗಂಟೆಗಟ್ಟಲೇ ಟ್ರಾಫಿಕ್ ಜಾಮ್

ಬೆಂಗಳೂರು,ಜು.13- ನಾಳೆ ರಾತ್ರಿಯಿಂದ ಜಾರಿಯಾಗುತ್ತಿರುವ ಎರಡನೆ ಹಂತದ ಲಾಕ್‍ಡೌನ್ ಘೋಷಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಹೋಗುತ್ತಿರುವವರು ಮತ್ತು ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಟೋಲ್‍ಗಳ ಬಳಿ ಇಂದು ಬೆಳಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಸರ್ಕಾರ ಉಚಿತವಾಗಿ ವಾಹನಗಳನ್ನು ಬಿಡಲು ಸೂಚಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ನಾಳೆ ರಾತ್ರಿ 8 ಗಂಟೆಯಿಂದ 8 ದಿನ ಲಾಕ್‍ಡೌನ್ ಘೋಷಣೆ ಮಾಡಿದ್ದು, ಊರುಗಳಿಗೆ ತೆರಳುವವರು ಮತ್ತು ಬೆಂಗಳೂರಿಗೆ ಬರುವವರಿಗೆ ಅವಕಾಶವನ್ನು ನೀಡಿದ …

Read More »

ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟ

ಬೆಂಗಳೂರು: ಮಾರ್ಚ್ 18ರ ಸುಮಾರಿಗೆ ಫಲಿತಾಂಶ ಬರಬಹುದೆಂದು ನಿರೀಕ್ಷಿಸಲಾಗಿದ್ದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್​ಬುಕ್ ಲೈವ್​ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ …

Read More »

ಮೈಸೂರಿನಲ್ಲಿ ಲಾಕ್‍ಡೌನ್ ಇಲ್ಲ, : ಡಿಸಿ ಅಭಿರಾಮ್ ಜಿ.ಶಂಕರ್

ಮೈಸೂರು: ಕೊರೊನಾ ತಡೆಗಾಗಿ ಮೈಸೂರಿನಲ್ಲಿ ಲಾಕ್‍ಡೌನ್ ಮಾಡಲ್ಲ. ಬದಲಾಗಿ ಮುಂಬೈನ ಧಾರಾವಿ ಸ್ಲಂ ಮಾಡೆಲ್ ಜಾರಿಗೆ ತರಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದ್ದಾರೆ. ಇಡೀ ಮೈಸೂರು ಲಾಕ್ ಆಗಲ್ಲ. ಬದಲಾಗಿ ಸೋಂಕು ಹೆಚ್ಚಿರುವ ಎನ್.ಆರ್. ಕ್ಷೇತ್ರದ ಕೆಲವು ಭಾಗಗಳು ಲಾಕ್‍ಡೌನ್ ಆಗಲಿವೆ. ಲಾಕ್‍ಡೌನ್ ಮಾಡೋದರಿಂದ ಕೊರೊನಾ ಪ್ರಕರಣಗಳು ಕಡಿಮೆ ಆಗಲ್ಲ. ಕೊರೊನಾದಿಂದ ಆಗುತ್ತಿರುವ ಸಾವುಗಳ ಸಂಖ್ಯೆ ಕಡಿಮೆ ಮಾಡೋದು ನಮ್ಮ ಉದ್ದೇಶ. ಲಾಕ್‍ಡೌನ್ ಮಾಡಿ ಹಾಟ್‍ಸ್ಪಾಟ್ ಗಳ ಸರ್ವೇ …

Read More »

ಗುರುವಾರದಿಂದ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‍ಡೌನ್

ಮಂಗಳೂರು: ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಗುರುವಾರದಿಂದ ಒಂದು ವಾರಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ಹೊರಡಿಸಿದ್ದಾರೆ. ಬುಧವಾರದ ತನಕ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ನಂತರ ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್‍ಡೌನ್ ಆರಂಭವಾಗಲಿದೆ. ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ 11 …

Read More »

ಬೆಂಗಳೂರು ಲಾಕ್‍ಡೌನ್-800 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ

ಬೆಂಗಳೂರು: ಮಂಗಳವಾರ ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಈ ಹಿನ್ನೆಲೆ ಬೆಂಗಳೂರಿನಿಂದ ಹೊರ ಹೋಗುತ್ತಿರುವ ಜನ ಅನಕೂಲಕ್ಕಾಗಿ 800 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ …

Read More »

ಹಾಸನ ಜಿಲ್ಲೆಯನ್ನೂ ಲಾಕ್‍ಡೌನ್ ಮಾಡಿ: ಎಂಎಲ್‍ಸಿ ಗೋಪಾಲಸ್ವಾಮಿ

ಹಾಸನ: ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಯನ್ನು ಲಾಕ್‍ಡೌನ್ ಮಾಡಿ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜಿಲ್ಲೆಯನ್ನು ಈಗಾಗಲೇ ಜನರೇ ಸ್ವಯಂಪ್ರೇರಿತವಾಗಿ ಭಾಗಶಃ ಲಾಕ್‍ಡೌನ್ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲೂಕನ್ನು 14 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಸಂಪೂರ್ಣ ಲಾಕ್‍ಡೌನ್ ಮಾಡಿ ಈಗಾಗಲೇ ಒಂದು ವಾರ ಕಳೆದಿದೆ. ಅಂದಿನಿಂದ ತಾಲೂಕಿನಲ್ಲಿ ಸೋಂಕು ಹರಡುತ್ತಿರುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಚನ್ನರಾಯಪಟ್ಟಣದಂತೆಯೇ ಜಿಲ್ಲೆಯ ಅರಸೀಕೆರೆ, ಸಕಲೇಶಪುರ, ಹಾಸನ, ಹೊಳೆನರಸೀಪುರ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ …

Read More »

ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿ

ಮಡಿಕೇರಿ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಷಯ ಮುನ್ನೆಲೆಗೆ ಬಂದಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಮಡಿಕೇರಿಯಲ್ಲಿ ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದು ವೇಳೆ ಇಡೀ ರಾಜ್ಯ ಅಥವಾ ಆಯ್ದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸಿದರೆ ಎಂಬ ಮುಂದಾಲೋಚನೆಯಿಂದ ಮದ್ಯ ಪ್ರಿಯರು ತಮ್ಮಿಷ್ಟದ ಮದ್ಯದ ಬ್ರ್ಯಾಂಡ್‍ಗಳನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಹಲವರು ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯ …

Read More »