Breaking News

ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ. ಅನಾರೋಗ್ಯ ಹಿನ್ನೆಲೆ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅರವರಿದ್ದ ಪೀಠ, ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ …

Read More »

ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ ಸುರಿಯುತ್ತಿದೆ.ನಿವಾರ್ ಮತ್ತೆ ಬುರೇವಿ ಚಂಡ ಮಾರುತದ ಬಳಿಕ ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಮತ್ತೊಂದು ಚಂಡಮಾರುತ ಉಂಟಾಗಿದೆ. ಈ ಚಂಡಮಾರುತ ಭಾರತ ಸೇರಿದಂತೆ 13 ದೇಶಗಳ ಮೇಲೆ ಅಪ್ಪಳಿಸಲಿದೆ. ಅದರಲ್ಲೂ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ. ಬುರೇವಿ ಚಂಡ ಮಾರುತ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ವಾತಾವರಣ …

Read More »

ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ.

ಹಾವೇರಿ: ರಾಣೆಬೆನ್ನೂರು ನಗರದ ಪಿ.ಬಿ ರಸ್ತೆಯಲ್ಲಿ ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಸ್ಕೂಟಿ ಮೇಲೆ ಕಾರ್ ಹರಿದ ಪರಿಣಾಮ ದ್ವಿಚಕ್ರ ಅಪ್ಪಚ್ಚಿಯಾಗಿದೆ.52 ವರ್ಷದ ಶಂಕರಗೌಡ ಪಾಟೀಲ್ ಮೃತ ದ್ವಿಚಕ್ರ ಸವಾರ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಕೂಟಿಗೆ ಡಿಕ್ಕಿಯಾದ ಕಾರ್ ಡಿವೈಡರ್ ಮೇಲೆ ಬಂದು ನಿಂತಿದೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ …

Read More »

ಸೋದರಿಯರು. ಆತ್ಮಹತ್ಯೆ

ಕಲಬರುಗಿ: ಸೋದರಿಯರಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ(19) ಮತ್ತು ಸಾರಿಕಾ (17) ಆತ್ಮಹತ್ಯೆಗೆ ಶರಣಾದ ಸೋದರಿಯರು. ಐನಾಪುರ ಗ್ರಾಮದ ವಿಶ್ವನಾಥ್ ಎಂಬವರು ಮಕ್ಕಳು. ಮನೆಯಲ್ಲಿ ಯಾರು ಇಲ್ಲದಿದ್ದಾಗ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿರುವ ಡೆತ್ ನೋಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತ್ಮಹತ್ಯೆಗೆ …

Read More »

ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ

ಹುಬ್ಬಳ್ಳಿ: ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೋಹನ್ ಸಿಂಗ್ ಆತ್ಮಹತ್ಯೆಗೆ ಶರಣಾದ ಕಾರ್ಮಿಕನಾಗಿದ್ದು, ಪಶ್ಚಿಮಬಂಗಾಳ ಮೂಲದ ನಿವಾಸಿ. ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮೋಹನ್ ಸಿಂಗ್ ತಂದೆಯ ಸಾವಿನಿಂದ ಮನನೊಂದಿದ್ದರು.ಕಳೆದ ಎರಡು ತಿಂಗಳ ಹಿಂದೆ ಪಶ್ಚಿಮ ಬಂಗಾಳದಿಂದ ಕೆಲಸಕ್ಕೆಂದು ಬಂದು ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಫೇವರ್ಸ್ ಕಂಪನಿಯಲ್ಲಿ ಮೋಹನಸಿಂಗ್ ಕೆಲಸಕ್ಕೆ ಸೇರಿಕೊಂಡಿದ್ದರು. ತಂದೆಯ ಸಾವಿನ …

Read More »

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭಾನುವಾರ ಮನೆಯಲ್ಲಿ ಬಿದ್ದ ಪರಿಣಾಮ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದಿದೆ. ಈ ಹಿನ್ನೆಲೆ ವೃಕ್ಷ ಮಾತೆಯನ್ನ ಇಂದು ಅವರ ಮಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳವಾರ ಸಾಲುಮರದ ತಿಮ್ಮಕ್ಕ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸದ್ಯ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಲು ಮರದ ತಿಮ್ಮಕ್ಕನವರು ನೆಟ್ಟ …

Read More »

ಬಂದ್‌ಗೆ ಬೆಂಬಲ ನೀಡಿದವರು ಯಾರು?

ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳುಭಾರತ್ ಬಂದ್‍ಗೆ ಕರೆ ನೀಡಿದೆ. ಸಹಜವಾಗಿಯೇ ಕರ್ನಾಟಕದಲ್ಲಿಯೂ ಕೂಡ ಭಾರತ್ ಬಂದ್‍ಗೆ ರೈತ ನಾಯಕರು ಕರೆ ನೀಡಿದ್ದಾರೆ. ರೈತರ ಈ ಉದ್ದೇಶಿತ ಬಂದ್‍ಗೆ ಬೆಂಬಲ ಸೂಚಿಸುವ ವಿಚಾರದಲ್ಲಿ ಹಲವು ಸಂಘ ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆ. ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಬೆಂಬಲ ಘೋಷಿಸಿವೆ. ಆದರೆ ಕನ್ನಡ ಪರ ಸಂಘಟನೆಗಳಲ್ಲಿ ಈ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಕೆಲ ಸಂಘಟನೆಗಳು ಬಂದ್‍ನಲ್ಲಿ ಪಾಲ್ಗೊಳ್ಳುವುದಾಗಿ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ

ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …

Read More »

ಸಚಿವ ಆರ್.ಅಶೋಕ್ ವಿರುದ್ಧ ಸ್ಪೀಕರ್ ಗರಂ

ಬೆಂಗಳೂರು, ಡಿ.7- ಸಾಫ್ಟ್‍ವೇರ್‍ನಲ್ಲಿರುವ ದೋಷದಿಂದಾಗಿ ಪಹಣಿಯ ಬೆಳೆ ಕಾಲಂನಲ್ಲಿ ಕುಷ್ಕಿ ಎಂದು ಅಧಿಕಾರಿಗಳು ನಮೂನೆ ಮಾಡುತ್ತಿದ್ದು, ರೈತರಿಗೆ ಯಾವುದೇ ರೀತಿಯ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರ ಮೇಲೆ ವಿಧಾನಸಭೆ ಸ್ಪೀಕರ್ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಮುಗಿಬಿದ್ದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಡಿ.ಪಿ.ರಾಜೇಗೌಡ ಆವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಲು ಕಂದಾಯ ಸಚಿವ ಅಶೋಕ್ ಆವರು ಮುಂದಾಗುತ್ತಿದ್ದಂತೆ ಸ್ಪೀಕರ್ ಕಾಗೇರಿ …

Read More »

ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ..!

ಬೆಂಗಳೂರು, ಡಿ.7- ಚಳಿಗಾಲದ ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ ಹೊಡೆದಿತ್ತು. ಆಡಳಿತ ಮತ್ತು ಪ್ರತಿಪಕ್ಷಗಳ ಸಾಲಿನಲ್ಲಿ ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ಹಾಜರಿದ್ದರು. ಉಳಿದಂತೆ ಬಹುತೇಕ ಆಸನಗಳು ಖಾಲಿ ಖಾಲಿಯಾಗಿದ್ದವು. ಆಡಳಿತ ಪಕ್ಷದಿಂದ ಮುಖ್ಯಮಂತ್ರಿ ಸೇರಿದಂತೆ 12 ಸಚಿವರು, 26 ಶಾಸಕರು, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‍ನ 25 ಶಾಸಕರು ಹಾಗೂ ಜೆಡಿಎಸ್‍ನಿಂದ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಐವರು ಶಾಸಕರು ಮಾತ್ರ ಹಾಜರಾಗಿದ್ದರು. ಸದನದ …

Read More »